ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಕೆಎಸ್ಸಾರ್ಟಿಸಿ ಬಸ್ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ನೆಲ್ಯಾಡಿ ಹೊರಠಾಣಾ ಪೊಲೀಸರು ಗುಂಡ್ಯದಲ್ಲಿ ವಶಪಡಿಸಿಕೊಂಡಿದ್ದಾರೆ. ಸಕಲೇಶಪುರದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ಸಂಜೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಸಕಲೇಶಪುರ ತಾಲೂಕಿನ ಕೆಂಚಮ್ಮನ ಹೊಸಕೋಟೆ ನಿವಾಸಿ ಮೋಹನ್ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅಪರಿಚಿತ ವಾಹನವನ್ನು ಬೆನ್ನಟ್ಟಿದ ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ […]

ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಕೆಎಸ್ಸಾರ್ಟಿಸಿ ಬಸ್ ಪೊಲೀಸರ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ವಿರುದ್ಧ ದಿಕ್ಕಿನಿಂದ ಆಗಮಿಸಿದ ಅಪರಿಚಿತ ವಾಹನವು ಲಾವತ್ತಡ್ಕ ಸಮೀಪ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯ ಪರಿಚಯ ಇನ್ನಷ್ಟೇ ದೊರೆಯಬೇಕಿದೆ. ಗಂಭೀರ ಗಾಯಗೊಂಡಿರುವ ಸಕಲೇಶಪುರ ತಾಲೂಕಿನ

ನೆಲ್ಯಾಡಿ: ಹಿಟ್ ಆ್ಯಂಡ್ ರನ್ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೆಂಡತಿಯ ನಗ್ನ ಫೋಟೋ ವಾಟ್ಸ್ಅಪ್ ನಲ್ಲಿ ನೋಡಿದ ಗಂಡ ➤ ಮುಂದೆ ಆಗಿದ್ದೇ ಬೇರೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ಕಡಬದ ಯುವತಿಯ ದಾಂಪತ್ಯಕ್ಕೆ ಯುವಕನೋರ್ವ ಹುಳಿ ಹಿಂಡಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಇದೀಗ ಯುವತಿಯ ಗಂಡ ವಿಚ್ಚೇದನಕ್ಕೆ ಮುಂದಾದ ಬಗ್ಗೆ ವರದಿಯಾಗಿದೆ. ಸುಬ್ರಹ್ಮಣ್ಯದ ಯುವಕ ವಿಜೇಶ್ ಹಾಗೂ ಕಡಬದ 26 ವರ್ಷದ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದು, 2016 ರಲ್ಲಿ ಆಕೆಯನ್ನು ಸುರತ್ಕಲ್ ನ ಲಾಡ್ಜ್ ಗೆ ಕರೆದೊಯ್ದು ದೈಹಿಕ ಸಂಪರ್ಕ ಮಾಡಿದ್ದಲ್ಲದೆ, ಆಕೆಯ ನಗ್ನ ಫೋಟೊ ಹಾಗೂ ವೀಡಿಯೋವನ್ನು ರೆಕಾರ್ಡ್ ಮಾಡಿದ್ದಾನೆ ಎನ್ನಲಾಗಿದೆ. ಯುವತಿಗೆ ಎರಡು ತಿಂಗಳ ಹಿಂದೆ ಬೇರೆ

ಹೆಂಡತಿಯ ನಗ್ನ ಫೋಟೋ ವಾಟ್ಸ್ಅಪ್ ನಲ್ಲಿ ನೋಡಿದ ಗಂಡ ➤ ಮುಂದೆ ಆಗಿದ್ದೇ ಬೇರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಜೀಪ್ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ ➤ ಜೀಪ್ ಸಂಪೂರ್ಣ ಜಖಂ

(ನ್ಯೂಸ್ ಕಡಬ) newskadaba.com ಕಡಬ, ಜು.15. ಭಾರೀ ಗಾಳಿ ಮಳೆಗೆ ನಿಲ್ಲಿಸಿದ್ದ ಜೀಪ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಜೀಪ್ ಸಂಪೂರ್ಣ ಜಖಂಗೊಂಡ ಘಟನೆ ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದೆ. ಕೊಂಬಾರು ನಿವಾಸಿ ಕಿರಣ್ ಎಂಬವರಿಗೆ ಸೇರಿದ ಟೂರಿಸ್ಟ್ ಜೀಪ್ ಮನೆ ಸಮೀಪ ನಿಲ್ಲಿಸಿದ್ದ ವೇಳೆ ಪಕ್ಕದ ಧರೆಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಬುಡದಿಂದ ಉರುಳಿ ಜೀಪ್ ಮೇಲೆ ಬಿದ್ದಿದೆ. ಘಟನೆಯಲ್ಲಿ ಜೀಪ್ ನಲ್ಲಿ ಯಾರೂ ಇಲ್ಲದೇ ಇದ್ದುದರಿಂದ ಯಾವುದೇ ಪ್ರಾಣಾಪಾಯ

ಕಡಬ: ಜೀಪ್ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ ➤ ಜೀಪ್ ಸಂಪೂರ್ಣ ಜಖಂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.15. ವಿಪರೀತ ರಕ್ತಸ್ರಾವದಿಂದಾಗಿ ಕಡಬದ ಬಾಣಂತಿ ಮಹಿಳೆಯೋರ್ವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕಡಬ ತಾಲೂಕು ಕೊಂಬಾರು ಗ್ರಾಮದ ಇಡ್ಯಡ್ಕ ಕಟ್ಟೆ ನಿವಾಸಿ ಚೇತನ್ ಎಂಬವರ ಪತ್ನಿ ವಿದ್ಯಾ(30) ಎಂದು ಗುರುತಿಸಲಾಗಿದೆ. ಮೃತರನ್ನು ಹೆರಿಗೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗಿನ ಜಾವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ‌.      

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಮ್ಮ ಮನೆಯಲ್ಲಿ ಗ್ಯಾಸ್ ಗೀಝರ್ ಇದ್ದರೆ ಈ ಸುದ್ದಿ ಓದಿ ನೋಡಿ ➤ ಬಂಟ್ವಾಳ: ಸ್ನಾನಕ್ಕೆ ತೆರಳಿದ ಯುವಕ ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.13. ಸ್ನಾನ ಮಾಡುತ್ತಿದ್ದ ವೇಳೆ ಗ್ಯಾಸ್ ಗೀಝರ್ ನಿಂದ ಹೊರಬಂದ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಾರಿಪಳ್ಳ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇಜಾಝ್ ಅಹ್ಮದ್ (23) ಎಂದು ಗುರುತಿಸಲಾಗಿದೆ. ಈತ ಸ್ನಾನದ ಕೊಠಡಿಯ ಒಳಗಿದ್ದ ಗ್ಯಾಸ್ ಗೀಝರ್ ಅನ್ನು ಆನ್ ಮಾಡಿ ಸ್ನಾನ ಮಾಡುತ್ತಿದ್ದ ವೇಳೆ ಗೀಝರ್ ನಿಂದ ಗೀಝರ್ ನಿಂದ ಹೊರ

ನಿಮ್ಮ ಮನೆಯಲ್ಲಿ ಗ್ಯಾಸ್ ಗೀಝರ್ ಇದ್ದರೆ ಈ ಸುದ್ದಿ ಓದಿ ನೋಡಿ ➤ ಬಂಟ್ವಾಳ: ಸ್ನಾನಕ್ಕೆ ತೆರಳಿದ ಯುವಕ ಉಸಿರುಗಟ್ಟಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್..? ➤ ದ.ಕ. ಸೇರಿದಂತೆ 10 ಜಿಲ್ಲೆಗಳಿಗೆ ಕೇಂದ್ರದಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಕೊರೋನಾ ಮೂರನೇ ಅಲೆಗೆ ಮಂಗಳೂರಿಗೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿ ಇರುವುದಾಗಿ ಕೇಂದ್ರ ಎಚ್ಚರಿಕೆ ನೀಡಿದೆ. ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವಂತೆ ಕೇಂದ್ರ ಎಚ್ಚರಿಸಿದೆ. ಹೀಗಾಗಿ ಈ 10 ಜಿಲ್ಲೆಗಳಲ್ಲಿ ಮತ್ತೆ ಲಾಕ್‍ಡೌನ್ ಆಗುವ ಭೀತಿ ಎದುರಾಗಿದೆ.        

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್..? ➤ ದ.ಕ. ಸೇರಿದಂತೆ 10 ಜಿಲ್ಲೆಗಳಿಗೆ ಕೇಂದ್ರದಿಂದ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಂಡತಿಯನ್ನು ತವರಿನಲ್ಲಿ ಬಿಟ್ಟ ಪತಿ ಮಹಾಶಯ ➤ ನಾದಿನಿಯೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.10. ಪತಿ ಮಹಾಶಯನೋರ್ವ ತನ್ನ ಹೆಂಡತಿಯನ್ನು ತವರಿನಲ್ಲಿ ಬಿಟ್ಟು ನಾದಿನಿಯೊಂದಿಗೆ ಪರಾರಿಯಾದ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಸಮೀಪದ ಕೈಕಂಬ ನಿವಾಸಿ ಮಹಮ್ಮದ್‌ ಎಂಬವರ ಪುತ್ರಿಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿದ್ದು, ಇತ್ತೀಚೆಗೆ ದಂಪತಿಯ ನಡುವೆ ಮನಸ್ತಾಪ ಉಂಟಾಗಿದೆ ಎನ್ನಲಾಗಿದೆ. ಈ ನಡುವೆ ತನ್ನ ಪತ್ನಿಯ ತಂಗಿಯ ಜೊತೆ ಸಲುಗೆಯಿಂದಿದ್ದ ಮುಸ್ತಫಾ, ಗುರುವಾರದಂದು ತನ್ನ ಪತ್ನಿಯನ್ನು ಬಿಟ್ಟು ನಾದಿನಿಯ ಜೊತೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ತನ್ನ

ಹೆಂಡತಿಯನ್ನು ತವರಿನಲ್ಲಿ ಬಿಟ್ಟ ಪತಿ ಮಹಾಶಯ ➤ ನಾದಿನಿಯೊಂದಿಗೆ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಮನೆಯಲ್ಲಿ ಅಕ್ರಮ ಜಿಂಕೆ ಮಾಂಸ ಪತ್ತೆ ➤ ಓರ್ವನ ಬಂಧನ

ಕಡಬ, ಜು.06: ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಬಿಳಿನೆಲೆ ಎಂಬಲ್ಲಿ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಅಧಿಕಾರಿಗಳು ಒರ್ವನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಬಿಳಿನೆಲೆಯ ವಾಲ್ತಾಜೆ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಮಂಗಳವಾರ ಅರಣ್ಯಾಧಿಕಾರಿಗಳಿಗೆ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಇರುವ ಬಗ್ಗೆ ಮಾಹಿತಿ ಬಂದಿತ್ತು. ಅದರಂತೆ ಅಲ್ಲಿಗೆ ದಾಳಿ ನಡೆಸಿದ ವೇಳೆ ಮನೆಯಲ್ಲಿ ಕಾಡುಪ್ರಾಣಿ ಮಾಂಸ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ವನ್ಯಜೀವಿ ಪ್ರಕರಣ ಅಡಿಯಲ್ಲಿ

ಕಡಬ: ಮನೆಯಲ್ಲಿ ಅಕ್ರಮ ಜಿಂಕೆ ಮಾಂಸ ಪತ್ತೆ ➤ ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆತೂರು: ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜು.03. ಇತ್ತೀಚೆಗೆ ಆತೂರು ಚೆಕ್ ಪೋಸ್ಟ್ ಧ್ವಂಸ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಡಬ ಪೋಲಿಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ರಾಮಕುಂಜ ಗ್ರಾಮದ ಹಲ್ಲಿ ಅರಮನೆ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಆಫೀಸ್ (28) ಹಾಗೂ ಕೊಯಿಲ ಗ್ರಾಮದ ಎಂತಾರು ಇಬ್ರಾಹಿಂ ಎಂಬವರ ಪುತ್ರ ಮೊಹಮ್ಮದ್ ನವಾಜ್ (27) ಎಂಬವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ಷರತ್ತು ಬದ್ಧ

ಆತೂರು: ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top