ಬ್ರೇಕಿಂಗ್ ನ್ಯೂಸ್

ಸೋಮವಾರದಿಂದ 14 ದಿನಗಳ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ➤ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.07. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ‌ಕೈಗೊಂಡಿರುವ ರಾಜ್ಯ ಸರಕಾರವು ಮೇ 10 ಸೋಮವಾರದಿಂದ 14 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ತಿಳಿಸಿರುವ ಸಿಎಂ ಯಡಿಯೂರಪ್ಪ, ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಶಾಲೆ, ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ರೈಲು ಮತ್ತು ವಿಮಾನ ಯಾನ ಸೇವೆ ಯಥಾಸ್ಥಿತಿ ಇರಲಿದ್ದು, ಹೊಟೇಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ […]

ಸೋಮವಾರದಿಂದ 14 ದಿನಗಳ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ➤ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಕ್ಕೆ 1200 ಟನ್ ಆಕ್ಸಿಜನ್ ಪೂರೈಕೆ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ➤ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.07. ಕೇಂದ್ರ ಸರಕಾರವು ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಅಕ್ಸಿಜನ್ ನೀಡುವಂತೆ ಹೈಕೋರ್ಟ್ ಹೊರಡಿಸಿದ್ದ ಅದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗವಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಅಕ್ಸಿಜನ್ ಕೊರತೆ ನೀಗಿಸಲು ಕೇಂದ್ರ ಸರಕಾರವು 1,200 ಟನ್‌ ಆಕ್ಸಿಜನ್ನನ್ನು ಕರ್ನಾಟಕಕ್ಕೆ ಪೂರೈಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಅದೇಶ ನೀಡಿತ್ತು. ಈ ಆದೇಶಕ್ಕೆ ತಡೆ‌ ನೀಡಬೇಕೆಂದು ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್

ರಾಜ್ಯಕ್ಕೆ 1200 ಟನ್ ಆಕ್ಸಿಜನ್ ಪೂರೈಕೆ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ➤ ಕೇಂದ್ರ ಸರಕಾರಕ್ಕೆ ತೀವ್ರ ಮುಖಭಂಗ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ ತಾಲೂಕಿನಲ್ಲಿ ಒಂದೇ ದಿನ 101 ಮಂದಿಗೆ ಕೊರೋನಾ ಪಾಸಿಟಿವ್ ➤ ಪುತ್ತೂರು, ಸುಳ್ಯ ತಾಲೂಕುಗಳಲ್ಲಿ 188 ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.06. ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಗುರುವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 289 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 101 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 134 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 54 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮೊದಲು ಪೇಟೆಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಕೊರೋನಾ ಸೋಂಕು ಇದೀಗ ಗ್ರಾಮೀಣ ಭಾಗದಲ್ಲೂ ಹೆಚ್ಚುತ್ತಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ.  

ಕಡಬ ತಾಲೂಕಿನಲ್ಲಿ ಒಂದೇ ದಿನ 101 ಮಂದಿಗೆ ಕೊರೋನಾ ಪಾಸಿಟಿವ್ ➤ ಪುತ್ತೂರು, ಸುಳ್ಯ ತಾಲೂಕುಗಳಲ್ಲಿ 188 ಪ್ರಕರಣ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಒಂದೇ ದಿನ 50 ಸಾವಿರ ಮಂದಿಗೆ ಕೊರೋನಾ ದೃಢ | 346 ಮಂದಿ ಮೃತ್ಯು ➤ ಮನೆಯಿಂದ ಹೊರ ಬರುವವರೇ ಎಚ್ಚರ..‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.05. ರಾಜ್ಯದಲ್ಲಿ ದಾಖಲೆಯ ಪ್ರಮುಖ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕರ್ಫ್ಯೂ ಜಾರಿ ಮಾಡಿದ್ದರೂ ಸಹ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಆರೋಗ್ಯ ಇಲಾಖೆಯ ವರದಿಯಂತೆ ರಾಜ್ಯದಲ್ಲಿ ಒಂದು ದಿನದಲ್ಲಿ 50112 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ 346 ಮಂದಿ ಕೊರೋನಾ ಸೋಂಕಿನಿಂದ ಪ್ರಾಣವನ್ನು ಕಳೆದುಕೊಂಡಿದ್ದಾರೆ‌. ಕೊರೋನಾ ಎರಡನೇ ಅಲೆಯು ಭೀಕರವಾಗಿದ್ದು, ಮನೆಯಿಂದ ಹೊರಬರದೆ ಇದ್ದರೆ ಮಾತ್ರ ಸೋಂಕು ಮುಕ್ತರಾಗಿ ಇರಬಹುದಾಗಿದೆ.    

ರಾಜ್ಯದಲ್ಲಿ ಒಂದೇ ದಿನ 50 ಸಾವಿರ ಮಂದಿಗೆ ಕೊರೋನಾ ದೃಢ | 346 ಮಂದಿ ಮೃತ್ಯು ➤ ಮನೆಯಿಂದ ಹೊರ ಬರುವವರೇ ಎಚ್ಚರ..‼️ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಸದ್ದು ಮಾಡಿದ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ➤ ಸಿಡಿ ಲೇಡಿ ಹೇಳಿದ್ದಾದರೂ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮೇ.05. ಕೊರೋನಾದಿಂದಾ ತಣ್ಣಗಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವು ಇದೀಗ ಮತ್ತೆ ಸದ್ದು ಮಾಡಿದೆ. ಸಿಡಿ ಪ್ರಕರಣವನ್ನು ಹಿಂಪಡೆಯುವಂತೆ ತನ್ನ ಪರ ವಕೀಲರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಸಂತ್ರಸ್ಥ ಯುವತಿ ಆರೋಪಿಸಿದ್ದು, ಈ ಬಗ್ಗೆ ತನಿಖಾಧಿಕಾರಿಗೆ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಕೇಸ್ ಹಿಂಪಡೆದರೆ ಕೋಟ್ಯಾಂತರ ರೂ. ನೀಡುವುದಾಗಿ ಆಮಿಷ ಒಡ್ಡಿದ್ದಾರೆ ಎಂದು ಸಂತ್ರಸ್ಥ ಯುವತಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.      

ಮತ್ತೆ ಸದ್ದು ಮಾಡಿದ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ➤ ಸಿಡಿ ಲೇಡಿ ಹೇಳಿದ್ದಾದರೂ ಏನು ಗೊತ್ತೇ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊರೋನಾ ಆರ್ಭಟ ➤ ಒಂದೇ ದಿನ 149 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.05. ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಮಂಗಳವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 149 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ 98 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 51 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮೊದಲು ಪೇಟೆಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಕೊರೋನಾ ಸೋಂಕು ಇದೀಗ ಗ್ರಾಮೀಣ ಭಾಗದಲ್ಲೂ ಹೆಚ್ಚುತ್ತಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ.    

ಕಡಬ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊರೋನಾ ಆರ್ಭಟ ➤ ಒಂದೇ ದಿನ 149 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಕೊರೋನಾ ಮೇಳೈಸುತ್ತಿರುವ ಹಿನ್ನೆಲೆ ➤ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ | ಪ್ರಥಮ ಪಿಯು ಪರೀಕ್ಷೆ ರದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.03. ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪಬ್ಲಿಕ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಲ್ಲದೇ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.    

ರಾಜ್ಯದಲ್ಲಿ ಕೊರೋನಾ ಮೇಳೈಸುತ್ತಿರುವ ಹಿನ್ನೆಲೆ ➤ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ | ಪ್ರಥಮ ಪಿಯು ಪರೀಕ್ಷೆ ರದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಕೊರೋನಾ ಸೋಂಕಿಗೆ 32 ವರ್ಷದ ವ್ಯಕ್ತಿ ಬಲಿ

(ನ್ಯೂಸ್ ಕಡಬ) newskadaba.com ಕಡಬ, ಮೇ.04. ಕೊರೋನಾ ಸೋಂಕಿನಿಂದ ಕಡಬ ತಾಲೂಕಿನ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳವಾರದಂದು ನಡೆದಿದೆ. ತಾಲೂಕಿನ ಕಾಣಿಯೂರು ಸಮೀಪದ ಕಾಯಿಮಣ ನಿವಾಸಿ 32 ವರ್ಷ ಪ್ರಾಯದ ವ್ಯಕ್ತಿಯನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.    

ಕಡಬ: ಕೊರೋನಾ ಸೋಂಕಿಗೆ 32 ವರ್ಷದ ವ್ಯಕ್ತಿ ಬಲಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗಡಿಯಾರ: ಲಾರಿ – ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಾಣಿ, ಮೇ.03. ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸಿಮೆಂಟ್ ಸಾಗಾಟದ ಲಾರಿ ಮತ್ತು ಬುಡೋಳಿಯಿಂದ ಗಡಿಯಾರ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಗಡಿಯಾರ ಸಮೀಪದ ಜೋಗಿಬೆಟ್ಟು ಎಂಬಲ್ಲಿ ಢಿಕ್ಕಿಯಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಬುಡೋಳಿ ನಿವಾಸಿ ಶರೀಫ್(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ‌.

ಗಡಿಯಾರ: ಲಾರಿ – ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಚಿರತೆಯ ಹೆಜ್ಜೆಗುರುತು ಪತ್ತೆ ➤ ಆತಂಕದಲ್ಲಿ ಸ್ಥಳೀಯರು

(ನ್ಯೂಸ್ ಕಡಬ) newskadaba.com ಕಡಬ, ಮೇ.03. ಕಳೆದೆರಡು ತಿಂಗಳ ಹಿಂದೆ ಕಡಬ ತಾಲೂಕಿನ ರೆಂಜಿಲಾಡಿ ಪರಿಸರದಲ್ಲಿ ಕಂಡು ಬಂದಿದ್ದ ಚಿರತೆಯ ಹಾವಳಿ ಇದೀಗ ಕಡಬದಲ್ಲಿ ಮತ್ತೆ ಕಂಡುಬಂದಿದೆ. ಕಡಬದ ಮಾಲೇಶ್ವರ ದೇವಸ್ಥಾನದ ಪರಿಸರದಲ್ಲಿ ಭಾನುವಾರ ತಡರಾತ್ರಿ ವೇಳೆಗೆ ಚಿರತೆಯು ಅಡ್ಡಾಡಿದೆ ಎನ್ನಲಾಗಿದ್ದು, ಇದಕ್ಕೆ ಪುರಾವೆ ಎಂಬಂತೆ ಪರಿಸರದಲ್ಲಿ ಹೆಜ್ಜೆಗುರುತುಗಳು ಕಂಡುಬಂದಿವೆ. ಅಲ್ಲದೇ ಕಳೆದ ದಿನ ಪರಿಸರದ ಆಡು ಮತ್ತು ಕೋಳಿಯ ತಲೆ ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು, ಪರಿಸರದಲ್ಲಿ ಕೆಲವು ನಾಯಿಮರಿಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಪಂಜ ವಲಯ

ಕಡಬ: ಚಿರತೆಯ ಹೆಜ್ಜೆಗುರುತು ಪತ್ತೆ ➤ ಆತಂಕದಲ್ಲಿ ಸ್ಥಳೀಯರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top