ಬ್ರೇಕಿಂಗ್ ನ್ಯೂಸ್

ಪುತ್ತೂರು: ಬೆಂಕಿ ಅವಘಡ ➤ ಮನೆ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 30. ಇಲ್ಲಿನ ಮಹಾಲಿಂಗೇಶ್ವರ ದೇವಾಸ್ಥಾನದ ಬಳಿಯ ದೇವಮಾರು ಗದ್ದೆಯ ಸಮೀಪ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಇಂದು ಪುತ್ತೂರಿನಲ್ಲಿ ನಡೆದಿದೆ. ದೇವಾಲಯದ ಗದ್ದೆಯ ಸಮೀಪದ ಸ್ಮಶಾನಕ್ಕೆ ಹೋಗುವ ದಾರಿಯ ಸಮೀಪ ಈ ಮನೆಯಿದ್ದು, ಇಂದು ಮದ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಈ ಮನೆಯಲ್ಕಿ ಪ್ಲಾಸ್ಟಿಕ್ ಬಕೆಟ್ ಹಾಗೂ ಇತರ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಗದಗ ಮೂಲದ ವ್ಯಕ್ತಿಗಳು ವಾಸವಾಗಿದ್ದರು ಎನ್ನಲಾಗಿದೆ. ಇಲ್ಲಿ […]

ಪುತ್ತೂರು: ಬೆಂಕಿ ಅವಘಡ ➤ ಮನೆ ಸಂಪೂರ್ಣ ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಆರೋಪಿಯೊಂದಿಗೆ ಸೇರಿ 8 ಸಿಸಿಬಿ ತಂಡದಿಂದ ಬಾರ್ ಪಾರ್ಟಿ- ವಿಡಿಯೋ ವೈರಲ್ ➤ ಸೂಕ್ತ ತನಿಖೆಗೆ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 30. ಇಲ್ಲಿನ ಸಿಸಿಬಿ ಪೊಲೀಸರು ಕರ್ತವ್ಯದ ವೇಳೆ ಕುತ್ತಾರಿನ ಬಾರ್ ಒಂದರಲ್ಲಿ ಪಾರ್ಟಿ ಮಾಡುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಲು ಮಂಗಳೂರು ಪೋಲೀಸ್ ಕಮೀಷನರ್ ಶಶಿಕುಮಾರ್ ಆದೇಶಿಸಿದ್ದಾರೆ. ಮಂಗಳೂರು ಹೊರವಲಯದ ಕುತ್ತಾರು ಸಾಗರ್ ಎಂಬ ಹೆಸರಿನ ಬಾರಲ್ಲಿ ಬುಧವಾರ ಮದ್ಯಾಹ್ನ ಮಂಗಳೂರು ಸಿಸಿಬಿಯ 8 ಜನರ ತಂಡವೊಂದು ಹತ್ತಿರದ ಬಸ್ಸು ನಿಲ್ದಾಣದ ಬಳಿ ತಮ್ಮ ಸರಕಾರಿ ಟಿ.ಟಿ ವಾಹನವನ್ನು ನಿಲ್ಲಿಸಿ

ಮಂಗಳೂರು: ಆರೋಪಿಯೊಂದಿಗೆ ಸೇರಿ 8 ಸಿಸಿಬಿ ತಂಡದಿಂದ ಬಾರ್ ಪಾರ್ಟಿ- ವಿಡಿಯೋ ವೈರಲ್ ➤ ಸೂಕ್ತ ತನಿಖೆಗೆ ಕಮಿಷನರ್ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಠೋಡ್ ಅವರು ಮೊಬೈಲ್‌ ನಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂದು ವಿಧಾನಪರಿಷತ್​ ಕಲಾಪ ನಡೆಯುತ್ತಿದ್ದ ವೇಳೆ ಕಾಂಗ್ರೆಸ್​ ಎಂ.ಎಲ್​.ಸಿ ಪ್ರಕಾಶ್ ರಾಥೋಡ್ ಅವರು ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ದೃಶ್ಯವು ಇದೀಗ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆಯ ಕುರಿತು ಮಾತನಾಡಿದ ಪ್ರಕಾಶ್ ರಾತೋಡ್, ನಾನು ಅಶ್ಲೀಲ ವಿಡಿಯೋ ನೋಡಿಲ್ಲ. ನೂರಾರು ಗ್ರೂಪ್​ಗಳಲ್ಲಿ ಇದ್ದೇನೆ

ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರ ಪ್ರತಿಭಟನೆಯನ್ನು ಬೆಂಬಲಿಸಿದ ಅಣ್ಣಾ ಹಜಾರೆ ನಾಳೆಯಿಂದ ಉಪವಾಸ ಸತ್ಯಾಗ್ರಹ..!

(ನ್ಯೂಸ್ ಕಡಬ) newskadaba.com ಅಹಮದ್ ನಗರ, ಜ. 29. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾಹಝಾರೆ ಅವರು ನಾಳೆಯಿಂದ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಅಲ್ಲದೇ ತಾವಿರುವ ಪ್ರದೇಶಗಳಿಂದಲೇ ರೈತರ ಪರವಾಗಿ ಪ್ರತಿಭಟನೆ ನಡೆಸುವಂತೆ ಅವರು ತಮ್ಮ ಬೆಂಬಲಿಗರಲ್ಲಿ ವಿನಂತಿಸಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿದ ಅಣ್ಣಾ ಹಜಾರೆ ನಾಳೆಯಿಂದ ಉಪವಾಸ ಸತ್ಯಾಗ್ರಹ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ. 29. ಹೋಟೆಲ್ ಮತ್ತು ಬೇಕರಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ತೂಮಿನಾಡು ಎಂಬಲ್ಲಿ ನಡೆದಿದ್ದು, ಇದರ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಇಲ್ಲಿನ ಮಾಸ್ಟರ್ ಮೈಂಡ್ ಜಂಕ್ಷನ್ ನಲ್ಲಿರುವ ಮೂಕಾಂಬಿಕಾ ಹೋಟೆಲ್ ಮತ್ತು ಹನಿ ಹೆಸರಿನ ಬೇಕರಿಗೆ ನುಗ್ಗಿ ಕಳ್ಳತನಕ್ಕೆತ್ನಿಸಿದ್ದಲ್ಲದೆ ಹೋಟೆಲ್ ನ ಗಾಜುಗಳನ್ನು ಪುಡಿಗೈದು ಬಳಿಕ ಹಣಕ್ಕಾಗಿ ತಡಕಾಡಿದ್ದಾನೆ. ಒಳಭಾಗದಿಂದಲೇ ನುಗ್ಗಿದ ಈತ ಕ್ಯಾಶ್ ಡ್ರವರನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾನೆ. ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

40 ಕಡೆ ಗೋಡಾನ್ ಗಳ ಮೇಲೆ ಸಿಬಿಐ ರೈಡ್..! ➤ ಅಕ್ಕಿ ಮತ್ತು ಗೋಧಿ ಮಾದರಿ ಸಂಗ್ರಹ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 29. ನೂತನ ಕೃಷಿ ನೀತಿಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದೆರಡು ತಿಂಗಳುಗಳಿಂದ ರೈತರು ದೆಹಲಿಯ ಗಡಿ ಭಾಗಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮುಂದುವರಿಸಿದ್ದು, ಈ ನಡುವೆಯೇ, ಕಳೆದ ರಾತ್ರಿ ಸಿಬಿಐ ಅಧಿಕಾರಿಗಳು ಪಂಜಾಬ್ ನಲ್ಲಿ ಸುಮಾರು 40 ದಾಸ್ತಾನು ಕೇಂದ್ರಗಳಿಗೆ ದಾಳಿ ನಡೆಸಿದ್ದಾರೆ. ಈ ದಾಸ್ತಾನು ಕೇಂದ್ರಗಳಲ್ಲಿ ದಾಸ್ತಾನಿರಿಸಲಾಗಿದ್ದ ಅಕ್ಕಿ ಮತ್ತು ಗೋಧಿ ಮಾದರಿಗಳನ್ನು ಸಿಬಿಐ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ಪಂಜಾಬ್ ಗ್ರೇನ್ಸ್ ಪ್ರೊಕ್ಯುರ್ ಮೆಂಟ್ ಕಾರ್ಪೊರೇಶನ್, ಪಂಜಾಬ್ ವೇರ್ ಹೌಸಿಂಗ್

40 ಕಡೆ ಗೋಡಾನ್ ಗಳ ಮೇಲೆ ಸಿಬಿಐ ರೈಡ್..! ➤ ಅಕ್ಕಿ ಮತ್ತು ಗೋಧಿ ಮಾದರಿ ಸಂಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಷಪೂರಿತ ಮದ್ಯ ಸೇವನೆ- ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಜ. 29. ವಿಷಪೂರಿತ ಮದ್ಯ ಸೇವಿಸಿದ ಪರಿಣಾಮ ನಾಲ್ವರು ಮೃತಪಟ್ಟು, ಐವರ ಸ್ಥಿತಿ ಗಂಭೀರವಾದ ಘಟನೆ ಭಿಲ್ವಾರ ಎಂಬಲ್ಲಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ವಿಷಪೂರಿತ ಮದ್ಯ ಸೇವನೆ- ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಣೆಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 29. ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಯೊಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಶಂಭೂರು ನಿವಾಸಿ ಸಂಜೀವ (70) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟಲೆಂದು ನಿಂತಿದ್ದ ಸಂದರ್ಭ ಕಾರೊಂದು‌ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದರು. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಣೆಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಓವರ್‌ಟೇಕ್ ಭರದಲ್ಲಿ ಬೈಕ್ ಗಳ‌ ನಡುವೆ ಮುಖಾಮುಖಿ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಜ.28. ಬೈಕುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರನೋರ್ವ ರಸ್ತೆಗೆ ಎಸೆಯಲ್ಪಟ್ಟು ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ನಡೆದಿದೆ. ಮೃತ ಯುವಕನನ್ನು ಮೂಡುಬಿದ್ರೆ ನಿವಾಸಿ ಮೋಕ್ಷಿತ್ (19) ಎಂದು ಗುರುತಿಸಲಾಗಿದೆ. ಹಳೆಯಂಗಡಿಯಿಂದ ಕಿನ್ನಿಗೋಳಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಓವರ್‌ಟೇಕ್ ಭರದಲ್ಲಿ ಬೈಕ್ ಗಳ‌ ನಡುವೆ ಮುಖಾಮುಖಿ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಮೀನುಗಾರಿಕೆಯಲ್ಲಿ ತೊಡಗಿದ್ದ ದೋಣಿ ಸಮುದ್ರಪಾಲು ➤ ನಾಲ್ವರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ಜ. 28. ಸಮುದ್ರದ ಅಲೆಗಳ ಅಬ್ಬರಕ್ಕೆ ದೋಣಿಯೊಂದು ಮಗುಚಿ ಬಿದ್ದಿದ್ದು, ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರಿನಿಂದ ‘ಸೌಮ್ಯ’ ಎಂಬ ಹೆಸರಿನ ನಾಡ ದೋಣಿಯೊಂದು ಗುರುವಾರ ಬೆಳಗ್ಗೆ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಸಮುದ್ರದಲ್ಲಿ ಸುಮಾರು ಏಳು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಈ ಸಮದರ್ಭದಲ್ಲಿ ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ನೀರಿಗೆ ಹಾರಿ ಈಜಿ

ಉಡುಪಿ: ಮೀನುಗಾರಿಕೆಯಲ್ಲಿ ತೊಡಗಿದ್ದ ದೋಣಿ ಸಮುದ್ರಪಾಲು ➤ ನಾಲ್ವರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top