ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೀನು ಸಾಗಾಟದ ಸೋಗಿನಲ್ಲಿ ಅಕ್ರಮ ದನದ ಮಾಂಸ ಸಾಗಾಟಕ್ಕೆ ಯತ್ನ ➤ ಓರ್ವ ಅರೆಸ್ಟ್, ಉಳಿದವರಿಗೆ ಶೋಧ

(ನ್ಯೂಸ್ ಕಡಬ) newskadaba.com ಹಾಸನ, ಜ. 25. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಪೋಲಿಸರು, ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ಬರೋಬ್ಬರಿ ನಾಲ್ಕು ಟನ್ ಮಾಂಸ ಪತ್ತೆಯಾಗಿದ್ದು, ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು ಎನ್ನಲಾಗಿದೆ. ಇದರ ಖಚಿತ ಮಾಹಿತಿಯ ಆಧಾರದಲ್ಲಿ ಆಲೂರಿನ ಪ್ರಕೃತಿ ನಗರದ ಶೆಡ್ ಒಂದಕ್ಕೆ ದಾಳಿ ನಡೆಸಿದ್ದು ಈ […]

ಮಂಗಳೂರು: ಮೀನು ಸಾಗಾಟದ ಸೋಗಿನಲ್ಲಿ ಅಕ್ರಮ ದನದ ಮಾಂಸ ಸಾಗಾಟಕ್ಕೆ ಯತ್ನ ➤ ಓರ್ವ ಅರೆಸ್ಟ್, ಉಳಿದವರಿಗೆ ಶೋಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 25. ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಟ್ಟು ಐದು ಮಂದಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕಾಶಿಮಠ ಎಂಬಲ್ಲಿ ನಡೆದಿದೆ. ಕೇಪು ಕಡೆಯಿಂದ ವಿಟ್ಲ ಪೇಟೆಗೆ ಬಂದು ತನ್ನ ಸ್ನೇಹಿತನನ್ನು ಬೆಂಗಳೂರು ಬಸ್ ಗೆ ಬಿಡಲೆಂದು ಡಿಯೋ ವಾಹನದಲ್ಲಿ ಬರುತ್ತಿದ್ದ ವೇಳೆ ವಿಟ್ಲ ಕಡೆಯಿಂದ ಕನ್ಯಾನದ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡೂ ವಾಹನದಲ್ಲಿದ್ದ ಒಟ್ಟು ಐದು ಮಂದಿ ಗಾಯಗೊಂಡಿದ್ದಾರೆ

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಐವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಮುದ್ರದಲ್ಲಿ ಮುಳುಗುತ್ತಿದ್ದ ಬೋಟ್ ರಕ್ಷಣೆ ➤ 8 ಮಂದಿಯನ್ನು ರಕ್ಷಿಸಿದ ಕೋಸ್ಟ್ ಗಾರ್ಡ್

(ನ್ಯೂಸ್ ಕಡಬ) newskadaba.com ಕಾರವಾರ, ಜ. 25. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿದ್ದ 8 ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ವರದಿಯಾಗಿದೆ. ಉಡುಪಿಯ ಶ್ರೀ ಸೌಪರ್ಣಿಕಾ ಎಂಬ ಬೋಟ್ ಕಾರವಾರ ಭಾಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಬೋಟ್ ತಳಭಾಗದ ಫೈಬರ್ ಒಡೆದು ಹೋಗಿದ್ದು, ಬೋಟ್ ಸಂಪೂರ್ಣವಾಗಿ ಮುಳುಗುವ ಹಂತಕ್ಕೆ ತಲುಪಿತ್ತು. ಈ ವೇಳೆಯಲ್ಲಿ ಬೋಟ್ ನಲ್ಲಿದ್ದ ಮೀನುಗಾರರು ರಕ್ಷಣೆ

ಮಂಗಳೂರು: ಸಮುದ್ರದಲ್ಲಿ ಮುಳುಗುತ್ತಿದ್ದ ಬೋಟ್ ರಕ್ಷಣೆ ➤ 8 ಮಂದಿಯನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 24. ತಾಂಟ್ ರೇ ಬಾ ತಾಂಟ್ ಎಂಬ ಡೈಲಾಗ್ ಹೊಡೆದು , ಜಗಳವಾಡಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ್ ಮತ್ತು ನವೀನ‌ ಎಂದು ಗುರುತಿಸಲಾಗಿದೆ. ಅಲ್ತಾಫ್ ಎಂಬಾತ ಉಜಿರೆಯ ಎಂಪಾಯರ್ ಹೋಟೆಲ್ ವೊಂದರಲ್ಲಿ ಜ್ಯೂಸ್ ಮೇಕರ್ ಆಗಿದ್ದು, ಒಂದು ವಾರದ ಹಿಂದೆ ಹೋಟೆಲ್ ಗೆ ಬಂದ

ಬೆಳ್ತಂಗಡಿ: ‘ತಾಂಟ್ ರೆ ಬಾ ತಾಂಟ್’ ಡೈಲಾಗ್ ಹೊಡೆದು ಯುವಕರಿಬ್ಬರಿಗೆ ಹಲ್ಲೆ ಪ್ರಕರಣ ➤ ಆರು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅಪಘಾತ ಗಾಯಾಳುವನ್ನು ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದ ಸರ್ಕಲ್ ಇನ್ಸ್‌ಪೆಕ್ಟರ್ ➤ ಉಮೇಶ್ ಉಪ್ಪಳಿಕೆಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಜ.24. ಅಪಘಾತದ ಗಾಯಾಳುವನ್ನು ತನ್ನದೇ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರು ಮಾನವೀಯತೆ ಮೆರೆದಿದ್ದಾರೆ. ಕಡಬದಲ್ಲಿ ಸಚಿವ ಅಂಗಾರರಿಗೆ ಅಭಿನಂದನಾ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಪದವು ಎಂಬಲ್ಲಿ ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿದ್ದರು. ಮೂವರನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಉಳಿದ ಓರ್ವ ಮಹಿಳೆಯನ್ನು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆಯವರು ಪೊಲೀಸ್ ವಾಹನದಲ್ಲಿ

ಕಡಬ: ಅಪಘಾತ ಗಾಯಾಳುವನ್ನು ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದ ಸರ್ಕಲ್ ಇನ್ಸ್‌ಪೆಕ್ಟರ್ ➤ ಉಮೇಶ್ ಉಪ್ಪಳಿಕೆಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪದವು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.24. ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ನಡೆದಿದೆ. ರಿಟ್ಝ್ ಕಾರು ಉಪ್ಪಿನಂಗಡಿ ಕಡೆಯಿಂದ ಹೊಸ್ಮಠ ಕಡೆಗೆ ಬರುತ್ತಿದ್ದು, ಪದವು – ಬಲ್ಯ ನಡುವೆ ತಿರುವಿನಲ್ಲಿ ಢಿಕ್ಕಿ ನಡೆದಿದೆ. ಘಟನೆಯಲ್ಲಿ ಹೊಸ್ಮಠ ಹಲ್ಲಂಗೇರಿ ನಿವಾಸಿ ನಿಕೋಲಸ್ ಮಾರ್ಟಿಸ್ ಎಂಬವರ ಪುತ್ರ ನವೀನ್ ಮಾರ್ಟಿಸ್(30) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ

ಪದವು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿಗೆ ಒಳಗಾಗಿ ಉಪನ್ಯಾಸಕಿ ಮೃತ್ಯು

(ನ್ಯೂಸ್ ಕಡಬ) newskadaba.com ವಯನಾಡ್‌, ಜ. 24. ಆನೆ ದಾಳಿಗೊಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೇರಳದ ವಯನಾಡ್‌ ಜಿಲ್ಲೆಯ ಮೆಪ್ಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಕಣ್ಣೂರು ಮೂಲದ ಸಹನಾ ಎಂದು ಗುರುತಿಸಲಾಗಿದೆ. ಇವರು ಶನಿವಾರದಂದು ತಮ್ಮ ಕುಟುಂಬದ ಇಬ್ಬರು ಸದಸ್ಯರೊಂದಿಗೆ ಮೆಪ್ಪಾಡಿಯ ‘ರೈನ್‌ ಫಾರೆಸ್ಟ್‌ ರೆಸಾರ್ಟ್‌’ ಗೆ ಬಂದಿದ್ದು, ಈ ವೇಳೆ ಅವರು ಟೆಂಟ್‌ ವೊಂದರಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಆನೆಯ ಶಬ್ಧ ಕೇಳಿ ಸಹಾನಾ ಮತ್ತು ಅವರ ಕುಟುಂಬದ ಸದಸ್ಯರಿಬ್ಬರು ಟೆಂಟ್‌ ನಿಂದ ಹೊರ ಬಂದಿದ್ದು,

ಕಾಡಾನೆ ದಾಳಿಗೆ ಒಳಗಾಗಿ ಉಪನ್ಯಾಸಕಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರ್ಚ್-ಎಪ್ರಿಲ್ ವೇಳೆಗೆ ರೂ. ನೂರರ ಜೊತೆ ಹತ್ತು, ಐದರ ಹಳೆ ನೋಟು ಚಲಾವಣೆ ಸ್ಥಗಿತ…!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 24. ಆರ್.ಬಿ.ಐ ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದರ ಬೆನ್ನಲ್ಲೇ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ನಿರ್ಧರಿಸಿದೆ. ಈ ಕುರಿತು ಆರ್.ಬಿ.ಐ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆ ಸ್ಥಗಿತಗೊಳ್ಳಲಿದೆ ಹಾಗೂ ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಿಸಿದೆ ಎನ್ನುವ ಮಾಹಿತಿ ಕೇಳಿಬರುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು

ಮಾರ್ಚ್-ಎಪ್ರಿಲ್ ವೇಳೆಗೆ ರೂ. ನೂರರ ಜೊತೆ ಹತ್ತು, ಐದರ ಹಳೆ ನೋಟು ಚಲಾವಣೆ ಸ್ಥಗಿತ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಸೇಂದಿ ಮಾರಾಟ ➤ 20 ಲೀ. ಸೇಂದಿ ವಶ, ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕೊರಟಗೆರೆ, ಜ. 24. ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ ವೇಳೆ 20 ಲೀ. ಸೇಂದಿಯನ್ನು ವಶಪಡಿಸಿಕೊಂಡ ಘಟನೆ ಕೊರಟಗೆರೆ ತಾಲೂಕಿನ ಶಿಕಾರಿಪುರ ಕ್ರಾಸ್ಸಿನ ಬಳಿ ನಡೆದಿದೆ. ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ ಶನಿವಾರದಂದು ಅಕ್ರಮವಾಗಿ ಸೇಂದಿ ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿಯನ್ನು ಪಡೆದ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 42 ಸಾವಿರ ಮೌಲ್ಯದ ದ್ವಿಚಕ್ರ ವಾಹನ ಮತ್ತು 20 ಲೀ ಸೇಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಅಕ್ರಮ ಸೇಂದಿ ಮಾರಾಟ ➤ 20 ಲೀ. ಸೇಂದಿ ವಶ, ಆರೋಪಿಗಳು ಪರಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಕೊಲೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 24. ಹಾಡುಹಗಲೇ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ಕಾಸರಗೋಡು ನಗರದಲ್ಲಿ ನಡೆದಿದೆ. ಮೃತರನ್ನು ಚೆಮ್ನಾಡ್ ದೇಳಿಯ ಮುಹಮ್ಮದ್ ರಫೀಕ್ (48) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಆಸ್ಪತ್ರೆಯೊಂದರ ಸಮೀಪದ ಮೆಡಿಕಲ್ ಸ್ಟೋರ್ ನಲ್ಲಿ ಔಷಧಿ ಖರೀದಿಸುತ್ತಿದ್ದ ಸಂದರ್ಭ ಅಲ್ಲಿಗೆ ಆಗಮಿಸಿದ ಗುಂಪೊಂದು ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ರಫೀಕ್ ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಾಸರಗೋಡು ಡಿವೈ.ಎಸ್.ಪಿ. ಪಿ.ಬಾಲಕೃಷ್ಣನ್

ಕಾಸರಗೋಡು: ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top