ಬ್ರೇಕಿಂಗ್ ನ್ಯೂಸ್

ಸಂಪುಟ ವಿಸ್ತರಣೆಯ ಕುರಿತು ಅಸಮಾಧಾನ ಇದ್ದವರು ವರಿಷ್ಠರಿಗೆ ದೂರು ನೀಡಲಿ ➤ ಸಿಎಂ ಬಿಎಸ್.ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ‌. 14. ಸಚಿವ ಸಂಪುಟ ರಚನೆಯ ಬಗ್ಗೆ ಯಾವ ಶಾಸಕರಿಗೆ ಅಸಮಾಧಾನ ಇದೆಯೋ ಅಂತವರು ದೆಹಲಿಗೆ ಹೋಗಿ ಪಕ್ಷದ ವರಿಷ್ಠರಿಗೆ ದೂರು ನೀಡಲಿ, ನನಗೆ ಅಭ್ಯಂತವಿಲ್ಲ ಎಂದು ಮುಖ್ಯಮಂತ್ರಿ ಬಿಎಸ್.ವೈ ತಿಳಿಸಿದ್ದಾರೆ‌. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಮಾಧಾನ ಇದ್ದವರು ವರಿಷ್ಠರಿಗೆ ದೂರು ನೀಡಲಿ ನನ್ನ ಅಭ್ಮತರವಿಲ್ಲ. ಸಚಿವ ಸ್ಥಾನ ವಂಚಿತರು ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡೋದು ಬೇಡ, ಯಾವುದೇ ಶಾಸಕರು ಇದ್ದರೆ ದೆಹಲಿಗೆ ತೆರಳಿ ದೂರು […]

ಸಂಪುಟ ವಿಸ್ತರಣೆಯ ಕುರಿತು ಅಸಮಾಧಾನ ಇದ್ದವರು ವರಿಷ್ಠರಿಗೆ ದೂರು ನೀಡಲಿ ➤ ಸಿಎಂ ಬಿಎಸ್.ವೈ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾ ಹಿನ್ನೆಲೆ ಸ್ಥಗಿತಗೊಂಡಿದ್ದ ಅಂಗನವಾಡಿ ಕೇಂದ್ರಗಳನ್ನು ಮತ್ತೆ ತೆರೆಯುವಂತೆ ಸುಪ್ರೀಂ ಕೋರ್ಟ್ ಸೂಚನೆ…!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 14. ಜ. 31ರ ಹೊತ್ತಿಗೆ ದೇಶದಾದ್ಯಂತ ವಿವಿಧ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಸೂಚನೆಯನ್ನು ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ತೀರ್ಮಾನ ಕೈಗೊಳ್ಳುವಂತೆ ಆದೇಶ ನೀಡಿದೆ. ಕೊರೋನಾ ಹಿನ್ನೆಲೆ ಸ್ಥಗಿತಗೊಂಡಿದ್ದ ಅಂಗನವಾಡಿಗಳು ಇನ್ನೂ ಆರಂಭಗೊಳ್ಳದ ಕಾರಣ ಅಂಗನವಾಡಿ ಕೇಂದ್ರಗಳನ್ನು ಮತ್ತೆ ತೆರೆದು ಮಕ್ಕಳನ್ನು ಚಟುವಟಿಕೆಗಳಲ್ಲಿ ತೊಡಗಿಸುವ ಅವಶ್ಯಕತೆ ಇದೆ ಎಂದು ಹೇಳಿದೆ.

ಕೊರೋನಾ ಹಿನ್ನೆಲೆ ಸ್ಥಗಿತಗೊಂಡಿದ್ದ ಅಂಗನವಾಡಿ ಕೇಂದ್ರಗಳನ್ನು ಮತ್ತೆ ತೆರೆಯುವಂತೆ ಸುಪ್ರೀಂ ಕೋರ್ಟ್ ಸೂಚನೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಾಂಧಿ ಪ್ರತಿಮೆಯಲ್ಲಿ ಬಿಜೆಪಿ ಧ್ವಜ ಹಾರಾಟದ ಹಿನ್ನೆಲೆ ➤ ಆರೋಪಿಯು ಮಾನಸಿಕ ಅಸ್ವಸ್ಥನೆಂದ ಪೊಲೀಸರು

(ನ್ಯೂಸ್ ಕಡಬ) newskadaba.com ಪಾಲಕ್ಕಾಡ್, ಜ. 14. ಗಾಂಧಿ ಪ್ರತಿಮೆಯ ಮೇಲೆ ಬಿಜೆಪಿ ಧ್ವಜವನ್ನು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೊಪಿಯನ್ನು ಪಾಲಕ್ಕಾಡ್‌ ನ ತಿರುನೆಲ್ಲೈ ಮೂಲದ ಬಿನೀಶ್‌ ಎಮದು ಗುರುತಿಸಲಾಗಿದೆ. ಆರೊಪಿಯು ಶನಿವಾರದಂದು  ಬೆಳಿಗ್ಗೆ 8 ಗಂಟೆ ಸುಮಾರಿಗೆ ನಗರ ಸಭೆ ಗೋಡೆಯ ಮೂಲಕ ಏರಿ ಗಾಂಧಿ ಪ್ರತಿಮೆಯ ಮೇಲೆ ಬಿಜೆಪಿ ಧ್ವಜವನ್ನು ಹಾರಿಸುತ್ತಿರುವುದು ಹತ್ತಿರದ ಸಿಸಿಟಿವಿಯಲ್ಲಿ ಸ್ಪಷ್ಟವಾಗಿತ್ತು. ಈ ಕುರಿತಂತೆ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನಿಗೆ ಮಾನಸಿಕ ಸಮಸ್ಯೆಗಳಿವೆ ಎಂದು

ಗಾಂಧಿ ಪ್ರತಿಮೆಯಲ್ಲಿ ಬಿಜೆಪಿ ಧ್ವಜ ಹಾರಾಟದ ಹಿನ್ನೆಲೆ ➤ ಆರೋಪಿಯು ಮಾನಸಿಕ ಅಸ್ವಸ್ಥನೆಂದ ಪೊಲೀಸರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬೈನಿಂದ ಸುಮಾರು 85 ಲಕ್ಷ ರೂ ಮೌಲ್ಯದ ಅಕ್ರಮ ಚಿನ್ನ ಹಾಗೂ ಸರಕು ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಚೆನ್ನೈ, ಜ. 14. ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿ ಅವರಿಂದ ಸುಮಾರು 85 ಲಕ್ಷ ರೂ. ಮೌಲ್ಯದ ಸರಕುಗಳನ್ನು ವಶಕ್ಕೆ ಪಡೆದ ಘಟನೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದುಬೈನಿಂದ ಆಗಮಿಸಿದ ಇಬ್ಬರು ಪ್ಯಾಣಿಕರಿಂದ ಈ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವರಿಬ್ಬರೂ ಕೂಡಾ ಗುದನಾಳದಲ್ಲಿ ಗೋಲ್ಡ್ ಪೇಸ್ಟ್ ಸಾಗಿಸುತ್ತಿರುವುದು ಪತ್ತೆಯಾಗಿದೆ. ಹಾಗೂ ಲಗೇಜ್ ತಪಾಸಣೆಯ ವೇಳೆ 72.6 ಲಕ್ಷ ರೂ ಮೌಲ್ಯದ 1.42 ಕೆಜಿ ಚಿನ್ನ, 12.4 ಲಕ್ಷದ ಸಿಗರೇಟ್, ಸ್ಮಾರ್ಟ್

ದುಬೈನಿಂದ ಸುಮಾರು 85 ಲಕ್ಷ ರೂ ಮೌಲ್ಯದ ಅಕ್ರಮ ಚಿನ್ನ ಹಾಗೂ ಸರಕು ಸಾಗಾಟ ➤ ಇಬ್ಬರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೈಕಾಲು ಕಟ್ಟಿಹಾಕಿ ಅತ್ಯಾಚಾರವೆಸಗಿದ ರೀತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಜ. 14. ಕೈಕಾಲು ಕಟ್ಟಿ ಹಾಕಿ ಅತ್ಯಾಚಾರ ನಡೆಸಿದ ಸ್ಥಿತಿಯಲ್ಲಿ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹವು ರಾಮಘಡ ಜಿಲ್ಲೆಯ ಪತ್ರಾತು ಅಣೆಕಟ್ಟೆ ನೀರಿನಲ್ಲಿ ಪತ್ತೆಯಾಗಿದೆ. ಈ ವಿದ್ಯಾರ್ಥಿನಿ ಗೊಡ್ಡಾ ಜಿಲ್ಲೆಯವರಾಗಿದ್ದು, ಇಲ್ಲಿನ  ಹಜಾರಿಬಾಗ್  ವೈದ್ಯಕೀಯ  ಕಾಲೇಜಿನಲ್ಲಿ  ವ್ಯಾಸಂಗ ಮಾಡುತ್ತಿದ್ದರು.  ಯುವತಿಯ ಮೃತದೇಹವನ್ನು ಕಂಡ ದಾರಿಹೋಕರು ಪೊಲಿಸರಿಗೆ ವಿಚಾರ ತಿಳಿಸಿದ್ದಾರೆ. ಪ್ರಕರಣವನ್ನು ದಾಖಲಿಸಿದ ಪೊಲೀಸರು ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡವನ್ನು ರಚಿಸಿದ್ದು ತನಿಖೆ ನಡೆಸುತ್ತಿರುವುದಾಗಿ ಡಿಐಜಿ ಎ.ವಿ ಓಂಕಾರ್‌ ತಿಳಿಸಿದ್ದಾರೆ.

ಕೈಕಾಲು ಕಟ್ಟಿಹಾಕಿ ಅತ್ಯಾಚಾರವೆಸಗಿದ ರೀತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿವಾಹಿತ ತಂಗಿಯನ್ನೇ ಅತ್ಯಾಚಾರಗೈದ ದುಷ್ಟ ಅಣ್ಣ…! ➤ ವೀಡಿಯೋ ಚಿತ್ರೀಕರಿಸಿ ಬೆದರಿಕೆ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜ. 14. ಒಡಹುಟ್ಟಿದ ಪಾಪಿ ಅಣ್ಣನೋರ್ವ ಸ್ವತಃ ವಿವಾಹಿತ ಸಹೋದರಿಯನ್ನೇ ಅತ್ಯಾಚಾರವೆಸಗಿ, ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿದ ಘಟನೆ ಉ.ಪ್ರ. ಮೊರಾದಾಬಾದ್ ಎಂಬಲ್ಲಿ ನಡೆದಿದೆ. ಪತಿ ಮನೆಯಲ್ಲಿ ಇಲ್ಲದ ವೇಳೆ ಆಕೆಯ ಅಣ್ಣ ಹಾಗೂ ಆತನ ಸ್ನೇಹಿತ ಪಾನಮತ್ತರಾಗಿ ಮನೆಗೆ ಬಂದಿದ್ದು, ಈ ವೇಳೆ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ದೃಶ್ಯವನ್ನು ಸ್ನೇಹಿತ ಚಿತ್ರೀಕರಿಸಿ, ವಿಚಾರವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಆತನ ಕಿರುಕುಳವನ್ನು ಸಹಿಸಲಾರದೇ ಪತಿಯಲ್ಲಿ

ವಿವಾಹಿತ ತಂಗಿಯನ್ನೇ ಅತ್ಯಾಚಾರಗೈದ ದುಷ್ಟ ಅಣ್ಣ…! ➤ ವೀಡಿಯೋ ಚಿತ್ರೀಕರಿಸಿ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

6 ತಿಂಗಳ ಗರ್ಭಿಣಿಯ ಅಪಹರಿಸಿ ಅತ್ಯಾಚಾರ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕೊಲ್ಹಾಪುರ, ಜ. 14. 6 ತಿಂಗಳ ಗರ್ಭಿಣಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಬಲವಂತವಾಗಿ ಮದುವೆಯಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಆರು ತಿಂಗಳ ಗರ್ಭಿಣಿಯಾಗಿರುವ ಮಹಿಳೆಯನ್ನು ಮತ್ತು ಬರುವ ಮಾತ್ರೆ ಪಾನೀಯದಲ್ಲಿ ಬೆರೆಸಿ ಕುಡಿಸಿದ ಬಳಿಕ ಗರ್ಭಿಣಿಯನ್ನು ಹಾಗೂ ಆಕೆಯ ಮೂರು ವರ್ಷದ ಮಗಳೊಂದಿಗೆ ಅಪಹರಿಸಲಾಗಿತ್ತು. ಅಸ್ಸಾಂನಿಂದ ಮಹಿಳೆಯನ್ನು ಅಪಹರಿಸಿ ಆರೋಪಿಗಳು ಅತ್ಯಾಚಾರವೆಸಗಿದ್ದು, ನಂತರ ಆರೋಪಿಗಳಲ್ಲಿ ಓರ್ವ ಆಕೆಯನ್ನು ಮದುವೆಯಾಗಿದ್ದಾನೆ. ಅಲ್ಲದೇ, ಬೇರೆ ಪುರುಷರ ಜೊತೆಗೆ ಕೂಡ ದೈಹಿಕ ಸಂಬಂಧ ಹೊಂದುವಂತೆ ಒತ್ತಡ ಹಾಕಿದ್ದಾರೆ. ಮಹಿಳೆ

6 ತಿಂಗಳ ಗರ್ಭಿಣಿಯ ಅಪಹರಿಸಿ ಅತ್ಯಾಚಾರ ➤ ಆರೋಪಿಗಳ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿರಾಡಿ: ತುಳು ಚಿತ್ರನಟ ರೂಪೇಶ್ ಶೆಟ್ಟಿಯವರ ಕಾರು ಅಪಘಾತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.13. ತುಳು ಚಿತ್ರನಟ ರೂಪೇಶ್ ಶೆಟ್ಟಿಯವರ ಟೊಯೋಟಾ ಫಾರ್ಚ್ಯೂನರ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನಡುವೆ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಕಾರ್ಯಕ್ರಮದ ನಿಮಿತ್ತ ತನ್ನ ಗೆಳೆಯರ ಜೊತೆ ಬೆಂಗಳೂರಿಗೆ ತೆರಳುತ್ತಿದ್ದ ರೂಪೇಶ್‌ ಶೆಟ್ಟಿಯವರು ಸಂಚರಿಸುತ್ತಿದ್ದ ಕಾರು ಶಿರಾಡಿ ಘಾಟಿಯಲ್ಲಿ ಬುಧವಾರ ಸಂಜೆ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ರೂಪೇಶ್ ಶೆಟ್ಟಿ ಹಾಗೂ ಸ್ನೇಹಿತರು ಸಣ್ಣ ಪುಟ್ಟ ಗಾಯಗಳೊಂದಿಗೆ

ಶಿರಾಡಿ: ತುಳು ಚಿತ್ರನಟ ರೂಪೇಶ್ ಶೆಟ್ಟಿಯವರ ಕಾರು ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ‌. 13. ರಾಜ್ಯ ಸಂಪುಟದ ಅಬಕಾರಿ ಸಚಿವರಾಗಿ ಸುಳ್ಯ ಶಾಸಕ ಎಸ್.ಅಂಗಾರ ಅವರು ಇಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಈ ಸಮಾರಂಭದಲ್ಲಿ ರಾಜ್ಯಪಾಲ ವಾಜುಬಾಯ್ ವಾಲಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಆರು ಬಾರಿ ಶಾಸಕರಾಗಿ ಆಯ್ಕೆಯಾದ ಇವರು, ಪ್ರಥಮ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು, ಜೊತೆಗೆ ಉಳಿದ ಆರು ಮಂದಿ ಸಚಿವರು ಪ್ರಮಾಣವಚಬ ಸ್ವೀಕರಿಸಿದರು.

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜ. 17 ಕ್ಕೆ ನಿಗದಿಯಾಗಿದ್ದ ಫಲ್ಸ್ ಪೋಲಿಯೋ ಕಾರ್ಯಕ್ರಮ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 13. ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಈ ಕುರಿತಂತೆ ಮಾಹಿತಿ ನೀಡಿದ ಸಚಿವಾಲಯವು ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದೆ.

ಜ. 17 ಕ್ಕೆ ನಿಗದಿಯಾಗಿದ್ದ ಫಲ್ಸ್ ಪೋಲಿಯೋ ಕಾರ್ಯಕ್ರಮ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top