ಬ್ರೇಕಿಂಗ್ ನ್ಯೂಸ್

ಶಿರ್ವ: ಗಾಂಜಾ ಮಾರಾಟ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಶಿರ್ವ, ಜ. 07. ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಬಂಧಿಸಿದ ಘಟನೆ ಶಿರ್ವದಲ್ಲಿ ನಡೆದಿದೆ. ಆರೋಪಿಯನ್ನು ಒರಿಸ್ಸಾ ಮೂಲದ ಬಡಾನಿಡಿಯೂರಿನ ಸಾಗರ್ (22) ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 32,000 ಸಾವಿರ ರೂ. ಮೌಲ್ಯದ ಒಂದು ಕೆ.ಜಿ 100 ಗ್ರಾಂ. ಗಾಂಜಾ, 7 ಪ್ಲಾಸ್ಟಿಕ್ ತೊಟ್ಟೆಗಳು, 1200 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಾಗಿದೆ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ಗಾಂಜಾ ಮಾರಾಟ ➤ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಭಿಮಾನಿಗಳ ಹೀರೋ ಸೋನು ಸೂದ್ ವಿರುದ್ದ ಬಿಎಂಸಿ ಪ್ರಕರಣ ದಾಖಲು…!

(ನ್ಯೂಸ್ ಕಡಬ) newskadaba.com ಮಂಬೈ, ಜ. 07. ಲಾಕ್ ಡೌನ್ ಸಮಯದಲ್ಲಿ ಮಾನವೀಯತೆ ಮೆರೆದು ಅಭಿಮಾನಿಗಳ ಪಾಲಿಗೆ ಹೀರೋ ಎನಿಸಿಕೊಂಡಿದ್ದ ಸೋನು ಸೂದ್ ಅವರ ವಿರುದ್ದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ದೂರು ದಾಖಲಿಸಿದೆ.   ಯಾವುದೇ ಅನುಮತಿಯಿಲ್ಲದೆ ಸೂದ್ ಅವರಿಗೆ ಸೇರಿದ ಶಕ್ತಿ ಸಾಗರ್ ಎಂಬ ಆರು ಅಂತಸ್ತಿನ ಕಟ್ಟಡವನ್ನು ಹೋಟೆಲ್ ಆಗಿ ಪರಿವರ್ತಿಸಿದಕ್ಕೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅಭಿಮಾನಿಗಳ ಹೀರೋ ಸೋನು ಸೂದ್ ವಿರುದ್ದ ಬಿಎಂಸಿ ಪ್ರಕರಣ ದಾಖಲು…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ➤ ಆರೋಪಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಗುದನಾಳದೊಳಗೆ ಅಂಟುವ ಫೇಸ್ಟ್ ಗುಳಿಗೆ ಹಾಗೂ ಒಳ ಉಡುಪಿನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ➤ ಆರೋಪಗಳಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಂಬೆಳಗ್ಗೆ ಅಂಡಮಾನ್, ನಿಕೋಬಾರ್ ದ್ವೀಪದಲ್ಲಿ ಭೂಕಂಪನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 07. ಬೆಳ್ಳಂಬೆಳಗ್ಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ದಿಗ್ಲಿಪುರ  ಎಂಬಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಇಂದು ಬೆಳಗ್ಗೆ 6.57 ರ ಸುಮಾರಿಗೆ ಭೂಕಂಪನ ಉಂಟಾಗಿದ್ದು, ಕ್ಯಾಂಪ್ ಬೆಲ್ ಕೊಲ್ಲಿಯ ಆಗ್ನೇಯಕ್ಕೆ 2 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಬೆಳ್ಳಂಬೆಳಗ್ಗೆ ಅಂಡಮಾನ್, ನಿಕೋಬಾರ್ ದ್ವೀಪದಲ್ಲಿ ಭೂಕಂಪನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೌಡಿ ಶೀಟರ್ ಬಂಧಿಸಲು ಪೊಲೀಸರಿಂದ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಹದನೈದಕ್ಕೂ ಅಧಿಕ ಪ್ರಕರಣಗಳ ಆರೋಪಿ ರೌಡಿ ಶೀಟರ್ ಓರ್ವನನ್ನು ಬಂಧಿಸಲು ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಆರೋಪಿ ಕಾರ್ತಿಕ್ ಎಂಬಾತನನ್ನು ಬಂಧಿಸಲೆಂದು ತೆರಳಿದ್ದ ವೇಳೆ ಆತ ಪೊಲೀಸರಿಗೆ ಹಲ್ಲೆ ನಡೆಸಿದ್ದು, ಪರಿಣಾಮ ಆತ್ಮರಕ್ಷಣೆಗೋಸ್ಕರ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಯ ಕಾಲಿಗೆ ಗುಂಡು ತಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ರೌಡಿ ಶೀಟರ್ ಬಂಧಿಸಲು ಪೊಲೀಸರಿಂದ ಗುಂಡಿನ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಡರಾತ್ರಿ ಹೆದ್ದಾರಿ ಬದಿ ಮದ್ಯ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್ ➤ ಪೊಲೀಸ್ ಆಯುಕ್ತರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರು ಮಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ಹೆದ್ದಾರಿ ಬದಿಯಲ್ಲಿ ತಡರಾತ್ರಿ ಪಾರ್ಟಿ ಮಾಡುತ್ತಿದ್ದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರು ನಾಲ್ಕು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿರುವ ಶಶಿ ಕುಮಾರ್ ಅವರು ತಡರಾತ್ರಿ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಡರಾತ್ರಿ ವಿನಾಃಕಾರಣ ಸುತ್ತಾಡುವವರ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದಾರೆ. ಬುಧವಾರ ತಡರಾತ್ರಿ ಅವರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ

ತಡರಾತ್ರಿ ಹೆದ್ದಾರಿ ಬದಿ ಮದ್ಯ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್ ➤ ಪೊಲೀಸ್ ಆಯುಕ್ತರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರು ಮಂದಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಗೆ ಮತ್ತೆ ಆಘಾತ ➤ ಪ್ರಭಾವಿ ಕಾಂಗ್ರೆಸ್ ನಾಯಕ ಜೆಡಿಎಸ್ ಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಕಾಂಗ್ರೆಸ್ ಪಕ್ಷಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು, ಕಾಂಗ್ರೆಸ್ ನಾಯಕ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದಾಗಿ ಘೋಷಿಸಿಕೊಂಡಿದ್ದಾರೆ. ಬುಧವಾರದಂದು ಬೆಂಗಳೂರಿನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಖಚಿತಪಡಿಸಿದ್ದ ಸಿ.ಎಂ.ಇಬ್ರಾಹಿಂ, ಇಂದು ಬೆಳಿಗ್ಗೆ ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ಮೊದಲು ಜನತಾ ದಳದಲ್ಲಿದ್ದ ಇಬ್ರಾಹಿಂ ತದನಂತರ ಕಾಂಗ್ರಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸಿದ್ಧರಾಮಯ್ಯರ ಆಪ್ತರಾಗಿದ್ದ ಇವರು ಕೆಲಕಾಲ ಕಾಂಗ್ರೆಸ್

ಕಾಂಗ್ರೆಸ್ ಗೆ ಮತ್ತೆ ಆಘಾತ ➤ ಪ್ರಭಾವಿ ಕಾಂಗ್ರೆಸ್ ನಾಯಕ ಜೆಡಿಎಸ್ ಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ ➤ ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 07. ನಿಯಂತ್ರಣ ತಪ್ಪಿದ ಪೊಲೀಸ್ ವಾಹನವೊಂದು ದಿನಸಿ ಅಂಗಡಿಗೆ ನುಗ್ಗಿದ ಘಟನೆ ತಾಲೂಕಿನ ನಾರಾವಿ ಕೆಳಗಿನಪೇಟೆಯಲ್ಲಿ ನಡೆದಿದೆ. ಬೆಂಗಳೂರಿಗೆ ತೆರಳುತ್ತಿದ್ದ ಕಾರ್ಕಳ ಆರಕ್ಷಕ ಠಾಣೆಯ ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ರಮೇಶ್ ಎಂಬವರ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆಯೋರ್ವರು ಗಾಯಗೊಂಡು, ಅಂಗಡಿ ಮಾಲಕ ಅಪಾಯದಿಂದ ಪಾರಾಗಿದ್ದಾರೆ.

ಬೆಳ್ತಂಗಡಿ: ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ ➤ ಮಹಿಳೆಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕಮರಿಗೆ ಬಿದ್ದ ಖಾಸಗಿ ಬಸ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.07. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಬದಿಯ ಕಮರಿಗೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾವತ್ತಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಬದಿಯ ಕಮರಿಗೆ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನೆಲ್ಯಾಡಿ: ಕಮರಿಗೆ ಬಿದ್ದ ಖಾಸಗಿ ಬಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಸ್ ನಿಲ್ದಾಣದಲ್ಲಿ ಯುವತಿಯರಿಗೆ ಕಿರುಕುಳ ಕೊಟ್ಟ ಪುಂಡರು ➤ ಸಾರ್ವಜನಿಕರಿಂದ ಹಿಗ್ಗಾಮುಗ್ಗ ಥಳಿತ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಜ. 06. ಬಸ್ ನಿಲ್ದಾಣದಲ್ಲಿ ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನಿಗೆ ಸ್ಥಳೀಯರು ಹಿಡಿದು ಧರ್ಮದೇಟು ಕೊಟ್ಟಿರುವ ಘಟನೆ ನಡೆದಿದೆ. ಮೂಲತಃ ಆಂಧ್ರ ದವರಾಗಿದ್ದ ಇವರು ಬಸ್ ನಿಲ್ದಾಣದಲ್ಲಿ ಆಂಧ್ರದ ಯುವತಿಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಯುವಕರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಸ್ ನಿಲ್ದಾಣದಲ್ಲಿ ಯುವತಿಯರಿಗೆ ಕಿರುಕುಳ ಕೊಟ್ಟ ಪುಂಡರು ➤ ಸಾರ್ವಜನಿಕರಿಂದ ಹಿಗ್ಗಾಮುಗ್ಗ ಥಳಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top