ಬ್ರೇಕಿಂಗ್ ನ್ಯೂಸ್

ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದ ವೇಳೆ ಢಿಕ್ಕಿ ಹೊಡೆದ ಕಾರು ➤ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 01. ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯುತ್ತಿದ್ದ ವೇಳೆ ಎದುರಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ. ಕಾಜರಬೈಲು ರಾ.ಹೆದ್ದಾರಿಯಲ್ಲಿ ಮುದ್ದೇಬಿಹಾಳ ಮೂಲದ ಶರಣು, ಸಿದ್ದು, ತೌಸೀಫ್ ಹಾಗೂ ಬಸವರಾಜು ಎಂಬವರು ಬರೆಯುತ್ತಿದ್ದ ವೇಳೆ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು, ಇವರ ಪೈಕಿ ಶರಣು ಹಾಗೂ ಸಿದ್ದು ಮೃತಪಟ್ಟಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದ ವೇಳೆ ಢಿಕ್ಕಿ ಹೊಡೆದ ಕಾರು ➤ ಇಬ್ಬರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೋರಾಟ ಸಮಿತಿ ವತಿಯಿಂದ ಉ.ಕ ಧ್ವಜ ಹಾರಿಸುವ ಮೂಲಕ ಪ್ರತ್ಯೇಕ ರಾಜ್ಯ ಮಾಡುವಂತೆ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ.01. ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜ ಹಾರಿಸುವ ಮೂಲಕ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವಂತೆ ಒತ್ತಾಯಿಸಲಾಗಿದೆ.     ಗಡಿನಾಡು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪಟ್ಟಣದಲ್ಲಿ ಪೊಲೀಸರ ಕಣ್ಣು ತಪ್ಪಿಸಿ, ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಅಡಿವೇಶ್ ಇಟಗಿಯವರ ನೇತೃತ್ವದಲ್ಲಿ ಪ್ರತ್ಯೇಕ ಧ್ವಜಾರೋಹಣ ಮಾಡಲಾಗಿದೆ.

ಹೋರಾಟ ಸಮಿತಿ ವತಿಯಿಂದ ಉ.ಕ ಧ್ವಜ ಹಾರಿಸುವ ಮೂಲಕ ಪ್ರತ್ಯೇಕ ರಾಜ್ಯ ಮಾಡುವಂತೆ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗಡಿ ಕಳವಿಗೆಂದು ಶೀಟ್ ಮುರಿದ ಕಳ್ಳರು…! ➤ ನಗದು ಸಿಗದಿದ್ದಾಗ ಹತಾಶೆಗೊಂಡು ಅಂಗಡಿಗೆ ಬೆಂಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 01.  ಅಂಗಡಿ ಕಳವಿಗೆ ಬಂದ ಕಳ್ಳರು, ಅಂಗಡಿಯಲ್ಲಿ ಹುಡುಕಾಟ ನಡೆಸಿ ಏನೂ ಸಿಗದೇ ಇದ್ದಾಗ ಹತಾಶರಾಗಿ ಅಂಗಡಿಯಲ್ಲಿನ ಅಪಾರ ಪ್ರಮಾಣದ ಸೊತ್ತುಗಳಿಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ‌. ಕಲಬುರ್ಗಿಯ ಎ.ಪಿ.ಎಂ.ಸಿ. ಆವರಣದಲ್ಲಿನ ಅಂಗಡಿಯಲ್ಲಿ ಈ ದುರ್ಘಟನೆ ನಡೆದಿದ್ದು,  ಸುಮಾರು 80 ಲಕ್ಷ ರೂಪಾಯಿ ಮೌಲ್ಯದ ಕಿರಾಣಿ ಸಾಮಾನು ಸುಟ್ಟು ಕರಕಲಾಗಿದೆ.  ಲಕ್ಷಾಂತರ ರೂಪಾಯಿ ನಗದು ಸಿಗಬಹುದೆಂದು ಶೆಡ್ ಮುರಿದು ಅಂಗಡಿಗೆ ನುಗ್ಗಿದ ಕಳ್ಳರು ಯಾವುದೇ ಹಣ ಸಿಗದೇ

ಅಂಗಡಿ ಕಳವಿಗೆಂದು ಶೀಟ್ ಮುರಿದ ಕಳ್ಳರು…! ➤ ನಗದು ಸಿಗದಿದ್ದಾಗ ಹತಾಶೆಗೊಂಡು ಅಂಗಡಿಗೆ ಬೆಂಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ತಡೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜ.01. 17 ವರ್ಷದ ಬಾಲಕಿಯೋರ್ವಳ ವಿವಾಹ ನಡೆಸಲು ಮುಂದಾದ ಸಂದರ್ಭದಲ್ಲಿ  ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮದುವೆಯನ್ನು ತಡೆದ ಘಟನೆ ನಡೆದಿದೆ. ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿ ಗ್ರಾಮದ 17 ವರ್ಷದ ಬಾಲಕಿಯನ್ನು 28 ವರ್ಷದ ಹುಡುಗನೊಂದಿಗೆ ವಿವಾಹ ಮಾಡಲು ಎರಡೂ ಕಡೆಯ ಸಂಬಂಧಿಕರೂ ಕೂಡಾ ಒಪ್ಪಿದ್ದು, ಸಮಾರಂಭಕ್ಕೆ 200ಕ್ಕೂ ಅಧಿಕ ಮಂದಿ ಸೇರಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಜಿಲ್ಲಾ ಮಹಿಳಾ

ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊದಲ ವರ್ಷದ ಮೊದಲ ಅಪಘಾತ ➤ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ

(ನ್ಯೂಸ್ ಕಡಬ) newskadaba.com ಧಾರವಾಡ, ಜ.01. ಹೊಸ ವರ್ಷದ ಮೊದಲ ಅಪಘಾತ ಧಾರವಾಡದಲ್ಲಿ ನಡೆದಿದ್ದು, ಕುಡಿತದ ಮತ್ತಿನಲ್ಲಿ ಎರ್ರಾಬಿರ್ರಿಯಾಗಿ ಚಲಾಯಿಸುತ್ತಿದ್ದ ಕಾರೊಂದು ಬ್ಯಾರಿಕೇಡ್ ಗಳಿಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ವಾಹನ ತಪಾಸಣೆಗೆಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಬಳಿ ರಸ್ತೆಯ ಬದಿ ಹಾಕಲಾಗಿದ್ದ ಬ್ಯಾರಿಕೇಟ್ ಗೆ ಕಾರು ಢಿಕ್ಕಿ ಹೊಡೆದಿದ್ದು, ಪೊಲೀಸರು ನಿಲ್ಲಿಸುವಂತೆ ಸೂಚಿಸಿದರೂ ಕಾರನ್ನು ನಿಲ್ಲಿಸಿರಲಿಲ್ಲ. ಪೊಲೀಸರು ಬೆನ್ನಟ್ಟಿ ಕಾರನ್ನು ವಶಪಡಿಸಿಕೊಂಡಿದ್ದು, ನಿಷೇಧಾಜ್ಞೆ ಉಲ್ಲಂಘಿಸಿ ಪಾರ್ಟಿ ಮಾಡಿದ ಯುವಕರಿಗೆ ದಂಡ ವಿಧಿಸಿ ಕಳುಹಿಸಲಾಗಿದೆ.

ಮೊದಲ ವರ್ಷದ ಮೊದಲ ಅಪಘಾತ ➤ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸಿಪಿ ದಿಢೀರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಹೊರ ಬೀಳುತ್ತಲೇ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹಾಗೂ ಮಂಗಳೂರು ಎ.ಸಿ.ಪಿ ರಂಜಿತ್ ಕುಮಾರ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸಿಪಿ ದಿಢೀರ್ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಲ್ಕಿ: ನೀರಿನಲ್ಲಿ ಮುಳುಗಿ ಕಡಬದ ವ್ಯಕ್ತಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಡಿ.31. ನೀರಿನಲ್ಲಿ ಮುಳುಗಿ ಕಡಬದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮುಲ್ಕಿಯಲ್ಲಿ ಗುರುವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಆರ್ತಿಲ ನಿವಾಸಿ ಜಯರಾಮ ಗೌಡ(41) ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರೊಂದಿಗೆ ಗುರುವಾರದಂದು ಮಂಗಳೂರಿಗೆ ತೆರಳಿದ್ದು, ಮುಲ್ಕಿ ಸಮೀಪದ ಸಸಿಹಿತ್ಲು ಬೀಚ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರು ಸಾಮಾಜಿಕ, ಧಾರ್ಮಿಕ ರಂಗದಲ್ಲಿ ಗುರುತಿಸಿಕೊಂಡಿದ್ದು, ಜೇಸಿಐ ಕಡಬ ಕದಂಬ ಘಟಕದ ಪೂರ್ವಾಧ್ಯಕ್ಷರಾಗಿದ್ದರು‌.

ಮುಲ್ಕಿ: ನೀರಿನಲ್ಲಿ ಮುಳುಗಿ ಕಡಬದ ವ್ಯಕ್ತಿ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತ ಯುವಕನನ್ನು ಸಿಪಿಸಿ ಕಾಂಪೌಂಡ್ ನಿವಾಸಿ ಹಸನ್ ತೈಶೀರ್ (18) ಎಂದು ಗುರುತಿಸಲಾಗಿದೆ. ಕಾಲೇಜು ವಿದ್ಯಾರ್ಥಿಯಾಗಿದ್ದ ಈತ ಬೈಕ್ ನಲ್ಲಿ‌ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ➤ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.31. ರಾಜ್ಯದ ಜನತೆ ಹೊಸ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಆದರೆ ಕೊರೋನಾ ಇದೀಗ ಜನರ ಸಂಭ್ರಮಕ್ಕೆ ಬ್ರೇಕ್ ಹಾಕಿದೆ.   ಇದರ ನಡುವೆ ಬ್ರಿಟನ್ ಕೊರೊನಾ ಸೋಂಕು ರಾಜ್ಯದಲ್ಲಿ ತಾಂಡವವಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿ ಹಲವು ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ➤ ನಿಷೇಧಾಜ್ಞೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಜಿರೆಯಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಪ್ರಕರಣ ➤ ಆರು ಮಂದಿ ಕಾರ್ಯಕರ್ತರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 31. ‌ತಾಲೂಕಿನ ಉಜಿರೆ‌ ಎಂಬಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ‌ ಮತ‌ಎಣಿಕೆ ಸಂದರ್ಭದಲ್ಲಿ ಪಾಕಿಸ್ಥಾನ ಪರವಾಗಿ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಗುರುವಾಯನಕೆರೆ‌‌ ಸಮೀಪದ ಪಿಲಿಚಂಡಿಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22 ), ದಾವೂದ್ ( 36) ಹಾಗೂ ಇಸಾಕ್ (28) ಎಂಬವರನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನೂ ಕೂಡ ಕೆಲವರನ್ನು ಬಂಧಿಸುವ ಸಾಧ್ಯತೆ ಇದೆ. ಎಸ್ಪಿ ಬಿ.ಎಂ.

ಉಜಿರೆಯಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಪ್ರಕರಣ ➤ ಆರು ಮಂದಿ ಕಾರ್ಯಕರ್ತರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top