ಬ್ರೇಕಿಂಗ್ ನ್ಯೂಸ್

ಅಡುಗೆ ಅನಿಲ ಬಳಕೆದಾರರಿಗೆ ಮತ್ತೆ ಶಾಕ್ ➤ ಗಾಯದ ಮೇಲೆ ಬರೆ ಎಳೆಯಲಿದ್ಯಾ ಬೆಲೆ ಹೆಚ್ಚಳ..?

(ನ್ಯೂಸ್ ಕಡಬ) newskadaba.com  ನವದೆಹಲಿ, ಡಿ.28. ಪೆಟ್ರೋಲ್ ಬೆಲೆ ದಿನೇ ದಿನೇ ಪರಿಷ್ಕರಣೆ ಮಾಡುವ ರೀತಿಯಲ್ಲಿಯೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಗಳನ್ನು ಪರಿಷ್ಕರಣೆ ಮಾಡಲು ಯೋಚಿಸುತ್ತಿದ್ದು, ತೈಲ ಕಂಪನಿಗಳಿಗೆ ಆಗುವ ನಷ್ಟವನ್ನು ಕಡಿಮೆ ಮಾಡಲು ಈ ಯೋಜನೆ ರೂಪಿಸಿರುವುದಾಗಿ ತಿಳಿದುಬಂದಿದೆ. ಅಡುಗೆ ಅನಿಲಕ್ಕೆ ಕೊಡಲಾಗುತ್ತಿದ್ದ ಸಬ್ಸಿಡಿಯನ್ನು ಸರ್ಕಾರವು ಈ ವರ್ಷದ ಸೆಪ್ಟೆಂಬರ್ ನಲ್ಲಿ ತೆಗೆದುಹಾಕಿತ್ತು. ತಜ್ಞರ ಪ್ರಕಾರ, ಪೆಟ್ರೋಲಿಯಂ ಕಂಪನಿಗಳು ಕೂಡ ಬೆಲೆ ಏರಿಕೆ ಮಾಡುವ ಹೊಸ […]

ಅಡುಗೆ ಅನಿಲ ಬಳಕೆದಾರರಿಗೆ ಮತ್ತೆ ಶಾಕ್ ➤ ಗಾಯದ ಮೇಲೆ ಬರೆ ಎಳೆಯಲಿದ್ಯಾ ಬೆಲೆ ಹೆಚ್ಚಳ..? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದ ಮೊದಲ ಸ್ವಯಂಚಾಲಿತ ರೈಲು ಸೇವೆಗೆ ಚಾಲನೆ ➤ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com  ನವದೆಹಲಿ, ಡಿ.28. ದೇಶದ ಮೊದಲ ಸಂಪೂರ್ಣ ಸ್ವಯಂ ಚಾಲಿತ ಚಾಲಕ ರಹಿತ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ದಿಲ್ಲಿ ಮೆಟ್ರೋದ ಮೆಜೆಂಟಾ ಮಾರ್ಗದಲ್ಲಿ ಸೋಮವಾರದಂದು ಚಾಲನೆ ನೀಡಿದರು. ದಿಲ್ಲಿ ಮೆಟ್ರೊವನ್ನು ಈಗ ನ್ಯಾಶನಲ್ ಕಾಮನ್ ಮೊಬಿಲಿಟಿ ಕಾರ್ಡ್(ಎನ್‌ಸಿಎಂಸಿ)ಮೂಲಕ ಸಂಪರ್ಕಿಸಲಾಗಿದ್ದು, ಈ ಹೊಸ ತಲೆಮಾರಿನ ರೈಲುಗಳ ಪ್ರಾರಂಭದೊಂದಿಗೆ ದಿಲ್ಲಿ ಮೆಟ್ರೋ ರೈಲು ನಿಗಮವು ವಿಶ್ವದ ಏಳು ಶೇಕಡಾ ಮೆಟ್ರೊ ನೆಟ್‌ವರ್ಕ್‌ಗಳ ಎಲೈಟ್ ಲೀಗ್‌ಗೆ ಪ್ರವೇಶಿಸಿದೆ ಎಂದು ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ

ದೇಶದ ಮೊದಲ ಸ್ವಯಂಚಾಲಿತ ರೈಲು ಸೇವೆಗೆ ಚಾಲನೆ ➤ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಾಯಿಯ ಜೊತೆ ಮಲಗಿದ್ದ 11 ತಿಂಗಳ ಕಂದಮ್ಮ ನಾಪತ್ತೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 28. ಶ್ವೇತಾ ಮತ್ತು ಶ್ರೀನಿವಾಸ್ ಎಂಬ ದಂಪತಿಗಳ 11 ತಿಂಗಳ ಹೆಣ್ಣು ಮಗು ಅನಿಶಾಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ತಂದೆ-ತಾಯಿಯ ಜೊತೆ ಮಲಗಿದ್ದ ಕಂದಮ್ಮನನ್ನು ಕದ್ದು ಪರಾರಿಯಾಗಿದ್ದಾರೆ. 2 ವರ್ಷದ ಹಿಂದೆ ಶ್ವೇತಾ ಮತ್ತು ಶ್ರೀನಿವಾಸ್ ವಿವಾಹವಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಗಳಿಗೆ ಒಬ್ಬಳೇ ಮಗಳಿದ್ದು, ಅತ್ಯಂತ ಪ್ರೀತಿಯಿಂದ ಸಾಕಿದ್ದರು. ಅಲ್ಲದೇ ಶ್ವೇತಾ ಮತ್ತು ಶ್ರೀನಿವಾಸ್ ದಂಪತಿ ಇತ್ತೀಚೆಗೆ ಹೊಸಮನೆಯೊಂದನ್ನು

ತಾಯಿಯ ಜೊತೆ ಮಲಗಿದ್ದ 11 ತಿಂಗಳ ಕಂದಮ್ಮ ನಾಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾತ್ರಿ ಕರ್ಫ್ಯೂ ಕ್ಯಾನ್ಸೆಲ್ ➤ ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.24. ಕೊರೋನಾ 2ನೇ ಅಲೆಯ ಭೀತಿಯಿಂದ ರಾತ್ರಿ ಕರ್ಫ್ಯೂ ಹೇರಲು ತೀರ್ಮಾನಿಸಿದ್ದ ರಾಜ್ಯ ಸರಕಾರವು, ಆದೇಶದಲ್ಲಿ ಮಾರ್ಪಾಡು ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂದು ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ

ರಾತ್ರಿ ಕರ್ಫ್ಯೂ ಕ್ಯಾನ್ಸೆಲ್ ➤ ಆದೇಶ ಹೊರಡಿಸಿದ ರಾಜ್ಯ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕ ಯು.ಟಿ.ಖಾದರ್ ಕಾರನ್ನು ಹಿಂಬಾಲಿಸಿದ ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ಶಾಸಕ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಅಪರಿಚಿತ ಬೈಕೊಂದು ಹಿಂಬಾಲಿಸಿದ ಪ್ರಕರಣದಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಸಕ ಯು.ಟಿ.ಖಾದರ್ ರವರು ಬುಧವಾರದಂದು ದೇರಳಕಟ್ಟೆಯಲ್ಲಿ ನಡೆದ ಕಾರ್ಯಕ್ರಮವೊಂದನ್ನು ಮುಗಿಸಿ ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ನಡುವೆ ದೇರಳಕಟ್ಟೆಯಿಂದ ಬೈಕೊಂದರಲ್ಲಿ ಇಬ್ಬರು ಅಪರಿಚಿತರು ಶಾಸಕರ ಕಾರನ್ನು ಅನುಮಾನಾಸ್ಪದವಾಗಿ ಹಿಂಬಾಲಿಸಿಕೊಂಡು ಬರುತ್ತಿರುವುದು ಗಮನಕ್ಕೆ ಬಂದಿದೆ ಎನ್ನಲಾಗಿದೆ. ನಂತೂರು ತಲುಪುವ ವೇಳೆ ಶಾಸಕರ ಎಸ್ಕಾರ್ಟ್ ವಾಹನವು ಬೈಕ್ ಸವಾರರನ್ನು ತಡೆದಿದ್ದು, ಈ

ಶಾಸಕ ಯು.ಟಿ.ಖಾದರ್ ಕಾರನ್ನು ಹಿಂಬಾಲಿಸಿದ ಪ್ರಕರಣ ➤ ಓರ್ವನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Breaking News ಇಂದಿನಿಂದ ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರ ವರೆಗೆ ರಾತ್ರಿ ಕರ್ಫ್ಯೂ ಜಾರಿ…‼️ ➤ ಮುಖ್ಯಮಂತ್ರಿ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 23. ಕೊರೋನಾ ಎರಡನೇ ಅಲೆಯ ಆತಂಕದಲ್ಲಿರುವ ರಾಜ್ಯ ಸರಕಾರವು ಇಂದಿನಿಂದ ರಾಜ್ಯದಾದ್ಯಂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿಗೊಳಿಸಿ ಮಹತ್ವದ ಘೋಷಣೆಯನ್ನು ಹೊರಡಿಸಿದೆ. ಕೊರೋನಾ ತನ್ನ ಹೊಸ ರೂಪವನ್ನು ಹೊಂದಿದ ಹಿನ್ನೆಲೆ ಈ ಕ್ರಮವನ್ನು ಕೈಗೊಂಡು ಇಂದಿನಿಂದ ಜನವರಿ 2ರ ವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ವೈ ತಿಳಿಸಿದ್ದಾರೆ.

Breaking News ಇಂದಿನಿಂದ ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರ ವರೆಗೆ ರಾತ್ರಿ ಕರ್ಫ್ಯೂ ಜಾರಿ…‼️ ➤ ಮುಖ್ಯಮಂತ್ರಿ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 23. ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡವು ದಾಳಿ ನಡೆಸಿ ಅಕ್ರಮ ಮರ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿ ಮರ ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಅಕ್ರಮ ಮರ ಸಾಗಾಟದ ಕುರಿತಂತೆ ದೊರೆತ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಅರಣ್ಯ ಇಲಾಖಾ ಅಧಿಕಾರಿಗಳ ತಂಡವು ದಾಳಿ ನಡೆಸಿ ಪೆರಿಯಡ್ಕ ಎಂಬಲ್ಲಿ ಮರ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಇದರ ಒಟ್ಟು ಮೌಲ್ಯ 10 ಲಕ್ಷ ರೂ. ಎಂದು

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ರಿಟನ್‌ನಿಂದ ಮಂಗಳೂರಿನ 56 ಮಂದಿಯ ಆಗಮನ ➤ ಕೊರೋನಾ 2ನೇ ಅಲೆಯ ಭೀತಿಯಲ್ಲಿ ಕರಾವಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22. ಬ್ರಿಟನ್ ನಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಅಬ್ಬರಿಸುತ್ತಿದ್ದು, ಈ ನಡುವೆ ಬ್ರಿಟನ್‌ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿರುವುದು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಬ್ರಿಟನ್ ಸೇರಿದಂತೆ ಹಲವು ದೇಶಗಳಿಂದ ಭಾರತೀಯರು ತಾಯ್ನಾಡಿಗೆ ವಾಪಸಾಗುತ್ತಿದ್ದು, 56 ಮಂದಿ ಮಂಗಳೂರಿಗೆ ಬಂದಿದ್ದಾರೆ. ಇವರೆಲ್ಲರೂ ತಾವು ವಾಸಿಸುತ್ತಿದ್ದ ದೇಶದಲ್ಲೇ ಕೊರೋನಾ ಪರೀಕ್ಷೆ ನಡೆಸಿ ಕೋವಿಡ್ ನೆಗೆಟಿವ್ ದೃಢೀಕರಣದೊಂದಿಗೆ ಆಗಮಿಸಿದ್ದು, ಬ್ರಿಟನ್ ನಲ್ಲಿ ಕೊರೋನಾ ಆರ್ಭಟ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲರನ್ನೂ ಮತ್ತೊಮ್ಮೆ ಪರೀಕ್ಷೆಗೆ

ಬ್ರಿಟನ್‌ನಿಂದ ಮಂಗಳೂರಿನ 56 ಮಂದಿಯ ಆಗಮನ ➤ ಕೊರೋನಾ 2ನೇ ಅಲೆಯ ಭೀತಿಯಲ್ಲಿ ಕರಾವಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಬ್ರೇಕಿಂಗ್ ನ್ಯೂಸ್

ಕ್ಲಬ್ ಮೇಲೆ ದಾಳಿ ➤ ಕ್ರಿಕೆಟಿಗ ಸುರೇಶ್ ರೈನಾ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 22. ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ 34 ಜನರನ್ನು ಮುಂಬೈ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಮುಂಬೈ ಡ್ರಾಗನ್ ಫ್ಲೈ ಕ್ಲಬ್ ಮೇಲೆ ರೈಡ್ ಮಾಡಿದ ಪೊಲೀಸರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವಾರನ್ನೂ ವಶಕ್ಕೆ ಪಡೆದಿದ್ದು, ನಂತರ ಇಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಕೋವಿಡ್ 19 ನಿಯಮಗಳ ಹಿನ್ನೆಲೆಯಲ್ಲಿ ರಾತ್ರಿ 11 ಗಂಟೆಯ ನಂತರ

ಕ್ಲಬ್ ಮೇಲೆ ದಾಳಿ ➤ ಕ್ರಿಕೆಟಿಗ ಸುರೇಶ್ ರೈನಾ ಬಂಧನ Read More »

ಬ್ರೇಕಿಂಗ್ ನ್ಯೂಸ್

ಕೊಣಾಜೆ: ಮತದಾನದ ವೇಳೆ ಕಾಂಗ್ರೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ ಪೊಲೀಸರಿಂದ ಲಘು ಲಾಠಿ ಚಾರ್ಜ್

(ನ್ಯೂಸ್ ಕಡಬ) newskadaba.com ಕೊಣಾಜೆ, ಡಿ. 22. ಇಲ್ಲಿನ ಹರೇಕಳ ಮತಗಟ್ಟೆಯಲ್ಲಿ ಎಸ್ಡಿಪಿಐ ಮತ್ರು ಕಾಂಗ್ರೆಸ್ ಕಾರ್ಯಕರ್ತರ ನಡುವರ ಘರ್ಷಣೆ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನೋರ್ವ ಪದೇ ಪದೇ ಮತಗಟ್ಟೆಯೊಳಗೆ ಹೋಗುವುದನ್ನು ಎಸ್ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿದ್ದು, ಈ ವೇಳೆ ಉಭಯ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಝಕರಿಯಾ ಮಲಾರ್ ಎಂಬವರಿಗೆ ಎಸ್ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಲಘು ಲಾಠಿ

ಕೊಣಾಜೆ: ಮತದಾನದ ವೇಳೆ ಕಾಂಗ್ರೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ ಪೊಲೀಸರಿಂದ ಲಘು ಲಾಠಿ ಚಾರ್ಜ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top