ಬ್ರೇಕಿಂಗ್ ನ್ಯೂಸ್

ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸತ್ತರೂ ಹಿಂದಿರುಗುವುದಿಲ್ಲ ➤ ಪ್ರತಿಭಟನಾ ನಿರತ ರೈತರು

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಮಸೂದೆಯ ವಿರುದ್ಧ ದೆಹಲಿ ಗಡಿಯಲ್ಲಿ ಮೈಕೊರೆಯುವ ಚಳಿಯ ನಡುವೆಯೂ ರೈತರ ಪ್ರತಿಭಟನೆ ಮುಂದುವರಿದಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಸತ್ತರೂ ಸರಿ ನಾವು ಇಲ್ಲಿಂದ ಹಿಂದಿರುಗುವುದಿಲ್ಲ ಎಂದು ಪ್ರತಿಭಟನಾನಿರತ ರೈತರು ಹೇಳಿದ್ದಾರೆ. ಸುಮಾರು ನಾಲ್ಕು ವಾರಗಳಿಂದ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನಗಳ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದರಲ್ಲಿ ಸುಮಾರು 30 ಮಂದಿ ಈವರೆಗೆ ಚಳಿ ಸೇರಿದಂತೆ ವಿವಿಧ ಕಾರಣಗಳಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. […]

ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸತ್ತರೂ ಹಿಂದಿರುಗುವುದಿಲ್ಲ ➤ ಪ್ರತಿಭಟನಾ ನಿರತ ರೈತರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಅಜೆಕಾರು, ಡಿ. 21. ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳದ ಕೆರ್ವಾಶೆಯ ಸಮೀಪದ ಅರ್ಬಿ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಣ್ (21) ಎಂದು ಗುರುತಿಸಲಾಗಿದೆ. ಐದು ಮಂದಿ ಗೆಳೆಯರ ತಂಡವು ಭಾನುವಾರದಂದು ಅರ್ಬಿ ಫಾಲ್ಸಿಗೆ ಭೇಟಿ ನೀಡಿದ್ದರು. ಈ ವೇಳೆ ಗೆಳೆಯರೆಲ್ಲ ನೀರಿನಲ್ಲಿ ಸ್ನಾನ ಮಾಡುತ್ತಿದ್ದ ಸಂದರ್ಭ ತಾನು ಟಾಯ್ಲೆಟ್ ಹೋಗಿ ಬರುವುದಾಗಿ ಹೇಳಿ ನೀರಿನ ಇನ್ನೊಂದು ಬದಿಗೆ ಹೋಗಿದ್ದು, ಸುಮಾರು ಹೊತ್ತಾದರೂ ಹಿಂದಿರುಗದೇ ಇದ್ದುದ್ದರಿಂದ ಗೆಳೆಯರು ಎಲ್ಲಾ

ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಂಜ: ಬೈಕ್ ಹಾಗೂ ಕಾರು ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪಂಜ, ಡಿ. 21. ಬೈಕ್ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಕರಿಕ್ಕಳ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎನ್ನಲಾಗಿದೆ.  

ಪಂಜ: ಬೈಕ್ ಹಾಗೂ ಕಾರು ನಡುವೆ ಢಿಕ್ಕಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನೇತ್ರಾವತಿ ನದಿಗೆ ಹಾರಿ ವೃದ್ದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಮಹಿಳೆಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ಕೋಟೆಕಾರಿನ ಮಾಡೂರು ನಿವಾಸಿ ಶಾರದಾ ಗಟ್ಟಿ ಎಂದು ಗುರುತಿಸಲಾಗಿದೆ. ಇವರು ಮೂಲತಃ ಉಚ್ಚಿಲದ ಸಂಕೋಳಿ ನಿವಾಸಿಯಾಗಿದ್ದು, ಸದ್ಯ ಮಾಡೂರಿನಲ್ಲಿರುವ ಮಗಳ ಮನೆಯಲ್ಲಿ ವಾಸವಾಗಿದ್ದರು. ಕಳೆದ ಡಿ. 15ರಂದು ಉಚ್ಚಿಲ ಸಂಕೋಳಿಗೆಯ ತರವಾಡಿನ ಮನೆಗೆ ಸಂಕ್ರಾಂತಿ ಪೂಜೆಗೆ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ.  ಮನೆ ಮಂದಿಯೆಲ್ಲ ಶಾರದಾ ಅವರು ಬೇರೆ ಮಕ್ಕಳ ಮನೆಗೆ ತೆರಳಿರಬಹುದು ಎಂದು ಸುಮ್ಮನಿದ್ದು, ಇಂದು ಕೂಡಾ

ಮಂಗಳೂರು: ನೇತ್ರಾವತಿ ನದಿಗೆ ಹಾರಿ ವೃದ್ದೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹಾಗೂ ಸಹೋದರನ ಹತ್ಯೆಗೆ ಸ್ಕೆಚ್ ➤ 7 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ರಾಬರ್ಟ್‌ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಎಂಬವರ ಹತ್ಯೆಗೆ ಸಂಚು ರೂಪಿಸಿದ್ದರೆನ್ನಲಾದ ಬಾಂಬೆ ರವಿ ತಂಡದಲ್ಲಿದ್ದ  ಏಳು ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.   ಆರೋಪಿಗಳನ್ನು ದರ್ಶನ್‌, ಗಿರೀಶ್‌, ಮೋಹನ್‌, ರಾಜನ್‌ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿಗಳಾದ ಬಾಂಬೆ ರವಿ ಮತ್ತು ನೀಲಸಂದ್ರದ ಮಂಜುನಾಥ್‌ ಎಂಬುವರು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಆರೋಪಿಗಳನ್ನು ವಶಕ್ಕೆ

ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹಾಗೂ ಸಹೋದರನ ಹತ್ಯೆಗೆ ಸ್ಕೆಚ್ ➤ 7 ಮಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಇಲ್ಲಿನ ರಥಬೀದಿ ಬಳಿಯ ನ್ಯೂ ಚಿತ್ರ ಟಾಕೀಸ್‌ ಮುಂಭಾಗದಲ್ಲಿ ಕರ್ತವ್ಯ ನಿರತರಾಗಿದ್ದ ಹೆಡ್ ಕಾನ್‌ ಸ್ಟೇಬಲ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುದ್ರೋಳಿ ನಿವಾಸಿ ಮಹಮ್ಮದ್‌‌ ನವಾಝ್‌ (30) ಹಾಗೂ ಇನ್ನೋರ್ವ 16 ವರ್ಷದ ಬಾಲಕ ಎಂದು ತಿಳಿದುಬಂದಿದೆ. ನವಾಝ್‌ ಗೆ ಡಿ.24ರ ತನಕ ನ್ಯಾಯಾಂಗ ಬಂಧನ ವಿಧಿಸಿ, ಬಾಲಕನನ್ನು ಉಡುಪಿಯ ನಿಟ್ಟೂರಿನ ಬಾಲಮಂದಿರಕ್ಕೆ ರವಾನಿಸಲಾಗಿದೆ. ಕಳೆದ 2019ರ

ಮಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ ಚಂಪಾ ಷಷ್ಠಿಗೆ ತೆರೆ ➤ ವಿಜೃಂಭಣೆಯಿಂದ ನೆರವೇರಿದ ಬ್ರಹ್ಮರಥೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.20. ಇತಿಹಾಸ ಪ್ರಸಿದ್ಧ ಕುಕ್ಕೇ ಸುಬ್ರಹ್ಮಣ್ಯ ಸ್ವಾಮಿಯ ಚಂಪಾಷ‌ಷ್ಠಿ ಬ್ರಹ್ಮ ರಥೋತ್ಸವವು ಬಹಳ ವಿಜೃಂಭಣೆಯಿಂದ ಭಾನುವಾರ ಬೆಳಗ್ಗೆ ಧನುಲಗ್ನದ ಶುಭ ಮೂಹೂರ್ತದಲ್ಲಿ ನೆರವೇರಿತು. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಕುಕ್ಕೇ ಸುಬ್ರಹ್ಮಣ್ಯದಲ್ಲಿ ವರ್ಷಕ್ಕೊಮ್ಮೆ ನಡೆಯುವ ಬ್ರಹ್ಮರಥೋತ್ಸವ ಸೇವೆಗೆ ಕೊರೋನಾ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಭಕ್ತರಿಗೆ ನಿಷೇಧ ಹೇರಲಾಗಿದ್ದು, ನಿರ್ದಿಷ್ಟ ಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಬ್ರಹ್ಮ ರಥೋತ್ಸವದ ಮೊದಲು ದೇವಸ್ಥಾನದಲ್ಲಿ ಕುಕ್ಕೇ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರಿಗೆ ವಿಶೇಷ ಪೂಜೆಗಳು

ಕುಕ್ಕೇ ಸುಬ್ರಹ್ಮಣ್ಯ ಚಂಪಾ ಷಷ್ಠಿಗೆ ತೆರೆ ➤ ವಿಜೃಂಭಣೆಯಿಂದ ನೆರವೇರಿದ ಬ್ರಹ್ಮರಥೋತ್ಸವ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಹಾರಿ ವೃದ್ಧ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.20. ಪುತ್ರನಿಂದ ಹಲ್ಲೆಗೊಳಗಾಗಿ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಆಸ್ಪತ್ರೆಯ 2ನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾಸರಗೋಡು ಬಂದಡ್ಕದ ಬಿಲ್ಲರಮಜಲು ನಿವಾಸಿ ಲಕ್ಷ್ಮಣ ಗೌಡ (69) ಎಂದು ಗುರುತಿಸಲಾಗಿದೆ. ಲಕ್ಷ್ಮಣ ಗೌಡರಿಗೂ ಅವರ ಮಗನಿಗೂ ಜಗಳವಾಗಿದ್ದು, ಮಗ ತಂದೆಗೆ ಅಡಿಕೆ ಸಲಾಕೆಯಿಂದ ಹೊಡೆದಿದ್ದನೆನ್ನಲಾಗಿದೆ. ಇದರಿಂದ ಗಾಯಗೊಂಡಿದ್ದ ಲಕ್ಷ್ಮಣ ಗೌಡರನ್ನು ಚಿಕಿತ್ಸೆಗಾಗಿ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತನ್ನ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಹಾರಿ ವೃದ್ಧ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 19. ಉಜಿರೆಯಲ್ಲಿ 8 ವರ್ಷದ ಬಾಲಕ ಅನುಭವ್ ಎಂಬಾತನನ್ನು ಕಿಡ್ನಾಪ್ ಮಾಡಿದ್ದ 7 ಮಂದಿಯನ್ನು ಕೋಲಾರ ಜಿಲ್ಲೆಯ ಮಾಸ್ತಿ ಎಂಬಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗುರುವಾರ ಸಂಜೆ ಉದ್ಯಮಿಯೋರ್ವರ ಪುತ್ರ 8 ವರ್ಷದ ಅನುಭವ್ ಎಂಬ ಬಾಲಕನನ್ನು ಅಪಹರಣ ಮಾಡಿದ್ದ ಆರೋಪಿಗಳು 17 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಪೊಲೀಸರ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಿ, ಇದೀಗ ಕೋಲಾರ ಜಿಲ್ಲೆ ಮಾಸ್ತಿಯಲ್ಲಿ ಆರೋಪಿಗಳನ್ನು

ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುದ್ದಿ ಬಿಡುಗಡೆಯ ಕಡಬ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಡಿ. 15. ಅನಾರೋಗ್ಯದಿಂದ ಬಳಲುತ್ತಿದ್ದ ಸುದ್ದಿ ಬಿಡುಗಡೆ ಕಡಬದ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ತಡರಾತ್ರಿ ಮೃತಪಟ್ಟಿದ್ದಾರೆ. ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ರಂಗದಲ್ಲಿ ಸೇವೆ ಸಲ್ಲಿಸಿದ್ದ ಇವರು ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ಅನಾರೋಗ್ಯಕ್ಕೊಳಗಾದ ಇವರು ಸೋಮವಾರ ರಾತ್ರಿ

ಸುದ್ದಿ ಬಿಡುಗಡೆಯ ಕಡಬ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top