ಕುಕ್ಕೇ ಸುಬ್ರಹ್ಮಣ್ಯದಲ್ಲಿ ಸರಳ ಚಂಪಾ ಷಷ್ಠಿ ಹಿನ್ನೆಲೆ ➤ ಡಿಸೆಂಬರ್ 17 ರಿಂದ 20 ರ ವರೆಗೆ ಭಕ್ತರಿಗೆ ದೇವಳ ಪ್ರವೇಶ ಸಂಪೂರ್ಣ ನಿಷೇಧ
(ನ್ಯೂಸ್ ಕಡಬ) newskadaba.com ಕುಕ್ಕೇ ಸುಬ್ರಹ್ಮಣ್ಯ, ಡಿ.13. ಚಂಪಾಷಷ್ಠಿ ಜಾತ್ರೆ ಆರಂಭಗೊಂಡಿದ್ದು, ಸಾವಿರಾರು ಭಕ್ತರು ಸೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಗಡ ನೋಂದಾಯಿಸಿರುವ ಭಕ್ತಾದಿಗಳನ್ನು ಹೊರತುಪಡಿಸಿ ಡಿಸೆಂಬರ್ 17 ರಿಂದ ಡಿಸೆಂಬರ್ 20ರ ವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ರಥಬೀದಿಗೆ ಭಕ್ತರ ಪ್ರವೇಶ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಥೋತ್ಸವ ಸೇವೆಗಳಿಗೆ ಮುಂಗಡ ನೋಂದಾಯಿಸಿರುವ ಭಕ್ತಾದಿಗಳನ್ನು ಹೊರತುಪಡಿಸಿ, ಷಷ್ಠಿ ಮಹೋತ್ಸವದ ಪ್ರಯುಕ್ತ ಚೌತಿ, ಪಂಚಮಿ […]








