ಬ್ರೇಕಿಂಗ್ ನ್ಯೂಸ್

ಜುಗಾರಿ ಅಡ್ಡೆಗೆ ದಾಳಿ ➤ ಹನ್ನೊಂದು ಆರೋಪಿಗಳ ಸಹಿತ ಆರು ವಾಹನಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 11 ಮಂದಿ ಆರೋಪಿಗಳ ಸಹಿತ 6 ವಾಹನಗಳನ್ನು ವಶಕ್ಕೆ ಪಡೆದ ಘಟನೆ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ ಜುಗಾರಿ ನಡೆಯುತ್ತಿದ್ದ ಸಂದರ್ಭ ದಾಳಿ ನಡೆಸಿದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ವು ಜೂಜಾಟದಲ್ಲಿ ನಿರತರಾಗಿದ್ದ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಲ್ಲದೇ, ಜೂಜಾಟಕ್ಕೆ ಬಳಸಿದ್ದ 18,800 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ ಹಾಗೂ ಸ್ಥಳದಲ್ಲಿದ್ದ […]

ಜುಗಾರಿ ಅಡ್ಡೆಗೆ ದಾಳಿ ➤ ಹನ್ನೊಂದು ಆರೋಪಿಗಳ ಸಹಿತ ಆರು ವಾಹನಗಳು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಟೀಲು, ಸೆ. 17. ವ್ಯಕ್ತಿಯೋರ್ವರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಮುದೆಯ ತೆಂಕ ಎಕ್ಕಾರು ಪದವು ಸಮೀಪ ನಡೆದಿದೆ. ಮೃತರನ್ನು ವಸಂತ(39) ಎಂದು ಗುರುತಿಸಲಾಗಿದೆ. ಮೃತರು ವಿಪರೀತ ಮದ್ಯದ ಚಟವನ್ನು ಹೊಂದಿದ್ದು, ಘಟನಾ ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಸ್ಕೂಟರ್ ಹಾಗೂ ಮಹೀಂದ್ರಾ ಟೆಂಪೋ ನಡುವೆ ಢಿಕ್ಕಿ ➤ ಸವಾನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 17. ಸ್ಕೂಟಿ ಮತ್ತು ಮಹೀಂದ್ರಾ ಟೆಂಪೋ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಎಂಬಲ್ಲಿ ಇಂದು ನಡೆದಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಮುಕ್ವೆ ನಿವಾಸಿ ಮಹಮ್ಮದ್ ಅಕ್ಷಮ್ ಎಂದು ಗುರುತಿಸಲಾಗಿದೆ. ಈ ಸಂದರ್ಭ ಅಲ್ಲೇ ಪಕ್ಕದ ಕಛೇರಿಯಲ್ಲಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳುವನ್ನು ತನ್ನ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಪುತ್ತೂರು: ಸ್ಕೂಟರ್ ಹಾಗೂ ಮಹೀಂದ್ರಾ ಟೆಂಪೋ ನಡುವೆ ಢಿಕ್ಕಿ ➤ ಸವಾನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೇಬಿನಲ್ಲಿಟ್ಟಿದ್ದ ಮೊಬೈಲ್ ಸ್ಫೋಟ- ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸೊರಬ, ಸೆ. 17. ಬೈಕ್ ಚಲಾಯಿಸುತ್ತಿದ್ದ ವೇಳೆ ಪ್ಯಾಂಟ್ ಕಿಸೆಯಲ್ಲಿದ್ದ ಮೊಬೈಲ್ ಬ್ಲಾಸ್ಟ್ ಆದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಸೊರಬ ತಾಲೂಕಿನ ಕುಪ್ಪಗುಡ್ಡೆ ಗ್ರಾಮದ ಕೆರೆ ಬಳಿ ನಡೆದಿದೆ. ಗಾಯಗೊಂಡವರನ್ನು ತವನಂದಿ ಗ್ರಾಮದ ಶರತ್(22) ಎಂದು ಗುರುತಿಸಲಾಗಿದೆ. ಈತ ತವನಂದಿ ಗ್ರಾಮದಿಂದ ಕುಪ್ಪಗುಡ್ಡೆಗೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಇದರಿಂದಾಗಿ ಗಾಬರಿಗೊಂಡ ಯುವಕ ನಿಯಂತ್ರಣ ಕಳೆದುಕೊಂಡು ಕೆರೆಗೆ ಬಿದ್ದಿದ್ದನ್ನು ಕಂಡ ತಕ್ಷಣ ಹಿಂಬದಿಯಲ್ಲಿದ್ದ ಬೈಕ್ ಸವಾರರು ಶರತ್ ನನ್ನು

ಜೇಬಿನಲ್ಲಿಟ್ಟಿದ್ದ ಮೊಬೈಲ್ ಸ್ಫೋಟ- ಯುವಕನಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರೆನ್ಸಿಗೆಂದು ಬರುತ್ತಿದ್ದ ಯುವತಿಯರಿಗೆ ಅಶ್ಲೀಲ ಸಂದೇಶ ➤ ಯುವತಿಯಿಂದ ಚಪ್ಪಲಿಯೇಟು- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 17. ಉಪಾಯದಿಂದ ಯುವತಿಯರ ಮೊಬೈಲ್ ನಂಬರ್ ಪಡೆದು ಬಳಿಕ ಅವರ ಜೊತೆ ಅಶ್ಲೀಲವಾಗಿ ಚಾಟ್ ಮಾಡುತ್ತಿದ್ದ ಯುವಕನೋರ್ವನಿಗೆ ಯುವತಿ ಹಾಗೂ ರಕ್ಷಣಾ ವೇದಿಕೆಯ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಜಿನ ನಗರಿ ಮಡಿಕೇರಿಯಲ್ಲಿ ನಡೆದಿದೆ. ಸಾರ್ವಜನಿಕರಿಂದ ಹೊಡೆಸಿಕೊಂಡ ಯುವಕನನ್ನು ಮುದ್ದಸಿರ್ ಎಂದು ಗುರುತಿಸಲಾಗಿದೆ. ಈತ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸದಲ್ಲಿದ್ದು, ಅಲ್ಲಿಗೆ ಕರೆನ್ಸಿಗೆಂದು ಬರುವ ಯುವತಿಯರ ನಂಬರನ್ನು ಸಂಗ್ರಹಿಸಿ, ಬಳಿಕ ಅವರೊಂದಿಗೆ ಪೇಸ್ ಬುಕ್ ನಲ್ಲೂ ನಕಲಿ ಖಾತೆ ತೆರೆದು ಯುವತಿಯರಿಗೆ

ಕರೆನ್ಸಿಗೆಂದು ಬರುತ್ತಿದ್ದ ಯುವತಿಯರಿಗೆ ಅಶ್ಲೀಲ ಸಂದೇಶ ➤ ಯುವತಿಯಿಂದ ಚಪ್ಪಲಿಯೇಟು- ವಿಡಿಯೋ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಮೂಲದ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ *➤ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ತುರ್ತು ಹಣದ ಬೇಡಿಕೆಯಿಟ್ಟ ವಂಚಕರು ➤ ಅಶೋಕ್ ಎಂಬವರ ಸಮಯಪ್ರಜ್ಞೆಯಿಂದ ವಂಚನಾ ಜಾಲ ಬೆಳಕಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ.17. ಪೊಲೀಸ್ ಅಧಿಕಾರಿಯೋರ್ವರ ಹೆಸರಿನಲ್ಲಿ‌ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಕಡಬದ ವ್ಯಕ್ತಿಗೆ ಸಂದೇಶ ರವಾನಿಸಿ ಹಣದ ಅವಶ್ಯಕತೆ ತೋಡಿಕೊಂಡ ಘಟನೆ ಸೆಪ್ಟೆಂಬರ್ 17 ರಂದು ಬೆಳಗ್ಗೆ ನಡೆದಿದೆ‌. ಕಡಬದ ಕೋಡಿಬೈಲು ನಿವಾಸಿ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿರುವ ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಕಡಬದ ಅಶೋಕ್ ಎಂಬವರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗಿತ್ತು. ನಂತರ ಮೆಸೆಂಜರ್ ಮೂಲಕ 30 ಸಾವಿರ ತುರ್ತು ಹಣದ

ಕಡಬ ಮೂಲದ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ *➤ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ತುರ್ತು ಹಣದ ಬೇಡಿಕೆಯಿಟ್ಟ ವಂಚಕರು ➤ ಅಶೋಕ್ ಎಂಬವರ ಸಮಯಪ್ರಜ್ಞೆಯಿಂದ ವಂಚನಾ ಜಾಲ ಬೆಳಕಿಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಡುಹಗಲೇ ಅಂಗಡಿಗೆ ನುಗ್ಗಿ ನಗದು ದೋಚಿದ ಪ್ರಕರಣ ➤ 48 ಗಂಟೆಯೊಳಗೆ ಹಣದ ಜೊತೆ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 16.ರಬ್ಬರ್ ಅಂಗಡಿಯೊಂದರ ಡ್ರಾವರ್ ನಿಂದ ಒಂದು ಲಕ್ಷ ರೂಪಾಯಿ ಕಳವುಗೈದ ಪ್ರಕರಣವನ್ನು ಕೇವಲ 48 ಗಂಟೆಯಲ್ಲಿ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಅಂಬೊಟ್ಟು ಮನೆ ನೇಜಿಕಾರು ನಿವಾಸಿ ಮೊಹಮ್ಮದ್ ಶಾಫಿ ಎಂದು ಗುರುತಿಸಲಾಗಿದೆ. ಕಳವುಗೈದ ಆರೋಪಿ ಪರಾರಿಯಾಗಿದ್ದು, ಈತನನ್ನು ಬಂಧಿಸಿ ಕಳವುಗೆಯ್ಯಲಾದ ಒಂದು ಲಕ್ಷ ರೂಪಾಯಿ ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 60,000/- ರೂಪಾಯಿ ಮೌಲ್ಯದ KA21 U 6006 ನೇ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.

ಹಾಡುಹಗಲೇ ಅಂಗಡಿಗೆ ನುಗ್ಗಿ ನಗದು ದೋಚಿದ ಪ್ರಕರಣ ➤ 48 ಗಂಟೆಯೊಳಗೆ ಹಣದ ಜೊತೆ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲಾವಿದನ ಕಲ್ಪನೆಯಲ್ಲಿ ಮೂಡಿಬಂದ ಐರಾವತ ➤ ಫೋಮ್ ಶೀಟ್ ಬಳಸಿ ತಯಾರಿಸಿದ ಬಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 16. ಕಲಾವಿದನೋರ್ವ ಫೋಮ್ ಶೀಟ್ ನಿಂದ ತಯಾರಿಸಿದ ಕೆ.ಎಸ್.ಆರ್.ಟಿ.ಸಿ ಬಸ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟಯರ್, ಸ್ಟೇರಿಂಗ್, ಗೇರ್, ಹೆಡ್ ಲೈಟ್, ಲಾಕ್ ಗಳುಳ್ಳ ಬಾಗಿಲು, ಕಿಟಕಿ, ತುರ್ತು ನಿರ್ಗಮನ ಕಿಟಕಿ, ಮಿರರ್ ಸೇರಿದಂತೆ ಎಲ್ಲವೂ ಇವೆ. ಆದರೆ ಈ ಬಸ್ ನಲ್ಲಿ ಪ್ರಯಾಣ ಮಾತ್ರ ಅಸಾಧ್ಯ, ಕಾರಣ ಇದು ನಿಜವಾದ ಬಸ್ಸಲ್ಲ, ಸಣ್ಣ ಗಾತ್ರದ ಆಟಿಕೆಯ ಬಸ್. ಕಲಾವಿದನ ಕಲ್ಪನೆಯಲ್ಲಿ ಮೂಡಿಬಂದ ಕರ್ನಾಟಕ ಸಾರಿಗೆ ಸಂಸ್ಥೆಯ

ಕಲಾವಿದನ ಕಲ್ಪನೆಯಲ್ಲಿ ಮೂಡಿಬಂದ ಐರಾವತ ➤ ಫೋಮ್ ಶೀಟ್ ಬಳಸಿ ತಯಾರಿಸಿದ ಬಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುವೈಟ್ ಏರ್ ಪೋರ್ಟ್ ನಲ್ಲಿ ಕಾಣೆಯಾಗಿದ್ದ ಉಡುಪಿಯ ಮಹಿಳೆ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 16. ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಪತ್ತೆಯಾಗಿದ್ದ ಉಡುಪಿಯ ಮಹಿಳೆಯೋರ್ವರನ್ನು ಅಲ್ಲಿನ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಕುವೈತ್ನಲ್ಲಿ ಮನೆ ಕೆಲಸವನ್ನು ನಿರ್ವಹಿಸುತ್ತಿದ್ದ ಮಹಿಳೆಯು ಭಾರತಕ್ಕೆ ವಾಪಾಸ್ ಆಗಲೆಂದು ವಿಮಾನ ನಿಲ್ದಾಣಕ್ಕೆ ಬಂದಿದ್ದು, ಅಲ್ಲಿಂದ ನಾಪತ್ತೆಯಾಗಿದ್ದರು. ಮಹಿಳೆ ಟಿಕೆಟ್ ಪಡೆದಿದ್ದು, ವಿಮಾನ ನಿಲ್ದಾಣದ ಬೋರ್ಡಿಂಗ್ನಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ಎಮಿಗ್ರೆಷನ್ ಕ್ಲಿಯರೆನ್ಸ್ ವೇಳೆ ಅಲ್ಲಿನ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಎಮಿಗ್ರೆಷನ್ ಕ್ರಿಯರೆನ್ಸ್

ಕುವೈಟ್ ಏರ್ ಪೋರ್ಟ್ ನಲ್ಲಿ ಕಾಣೆಯಾಗಿದ್ದ ಉಡುಪಿಯ ಮಹಿಳೆ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.15. ಕಾರು ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಗಾಯಾಳು ಬೈಕ್ ಸವಾರನನ್ನು ಕಡಬ ತಾಲೂಕಿನ ಬಂಟ್ರ ಗ್ರಾಮದ ನೀರಾಜೆ ಬಸವಪಾಲ್ ನಿವಾಸಿ ರಾಜೇಶ್ ಎಂದು ಗುರುತಿಸಲಾಗಿದೆ. ಕಡಬದಿಂದ ಆಲಂಕಾರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಕಾರು ನಡುವೆ ಕುಂತೂರು ಸಮೀಪದ ಬುಡೇರಿಯಾ ತಿರುವಿನಲ್ಲಿ ಢಿಕ್ಕಿ ಸಂಭವಿಸಿದೆ.

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top