ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್ ವುಡ್ ಡಂಪತಿಗಳಿಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ‌. 15. ನಟಿ ಐಂದ್ರಿತಾ ರೈ ಬುಧವಾರದಂದು ಸಿಸಿಬಿ ಕಛೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟೀಸ್ ಕಳುಹಿಸಿದೆ. ಇವರನ್ನು ರಾಗಿಣಿಯವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿದ್ದು, ಶೇಖ್ ಫಾಝಿಲ್ ಸಹಿತ ಹಲವರು ಏರ್ಪಡಿಸುತ್ತಿದ್ದ ಪಾರ್ಟಿಗಳಲ್ಲಿ ಇವರು ಕೂಡಾ ಭಾಗವಹಿಸುತ್ತಿದ್ದರು ಎನ್ನಲಾಗಿದೆ. ಸಾಕಷ್ಟು ಸಾಕ್ಷಿ ಆಧಾರಗಳು ಲಭ್ಯವಾಗಿದ್ದು, ಇದರಿಂದಾಗಿ ಸ್ಯಾಂಡಲ್ ವುಡ್ ದಂಪತಿ ದಿಗಂತ್ ಹಾಗೂ ಐಂದ್ರಿತಾ ರೇ ಗೆ ಸಿಸಿಬಿ ನೋಟಿಸ್ ಜಾರಿಗೊಳಿಸಿ, ವಿಚಾರಣೆಯ ಬಳಿಕ ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು […]

ಸ್ಯಾಂಡಲ್ ವುಡ್ ಡಂಪತಿಗಳಿಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಮಟ್ಟದ ಹಸಿರು ಕವಿಗೋಷ್ಠಿ ➤ ಕಡಬದ ಸಮ್ಯಕ್ತ್. ಜೈನ್ ಪ್ರಥಮ

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 15. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ರಾಯಚೂರು ಇದರ ವತಿಯಿಂದ ಚಿಣ್ಣರ ರವಿವಾರ ಮಕ್ಕಳ ಸಾಹಿತ್ಯ ಸಂಭ್ರಮ ಸರಣಿಯ ಅಂಗವಾಗಿ, ಪರಿಸರ ಮಹತ್ವವನ್ನು ಬಿತ್ತರಿಸುವ ಸಲುವಾಗಿ ರಾಜ್ಯ ಮಟ್ಟದ ಹಸಿರು ಕವಿಗೋಷ್ಠಿ ಸ್ಪರ್ಧೆಯನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು. ಇದರಲ್ಲಿ ಇದೀಗ ದಕ್ಷಿಣ ಕನ್ನಡದ ಕಡಬ ತಾಲೂಕು ನೂಜಿಬಾಳ್ತಿಲದ ಸಮ್ಯಕ್ತ್. ಹೆಚ್. ಜೈನ್ ರವರು ಸ್ಪರ್ಧಾ ಸ್ಫೂರ್ತಿಯಿಂದ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಸಂಸ್ಥೆಯಿಂದ ಕೊಡಲ್ಪಡುವ ಪ್ರಶಸ್ತಿಗೆ ಭಾಜನರಾಗಿರುತ್ತಾರೆ.

ರಾಜ್ಯಮಟ್ಟದ ಹಸಿರು ಕವಿಗೋಷ್ಠಿ ➤ ಕಡಬದ ಸಮ್ಯಕ್ತ್. ಜೈನ್ ಪ್ರಥಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

?? Big Breaking News‼ ಸೆ. 21ರಿಂದ ಶಾಲಾ- ಕಾಲೇಜುಗಳು ಆರಂಭ…‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 15. ಕೊರೋನಾ ಗೊಂದಲದ ನಡುವೆ ಶಾಲಾ- ಕಾಲೇಜುಗಳ ಆರಂಭಕ್ಕೆ ತಯಾರಿ ನಡೆಯುತ್ತಿದೆ. 9 ರಿಂದ 12ನೆ ತರಗತಿವರೆಗಿನ ವಿದ್ಯಾರ್ಥಿಗಳು ಸೆ. 21ರಿಂದ ಶಾಲಾ- ಕಾಲೇಜುಗಳಿಗೆ ತೆರಳುವಂತೆ ಅನುಮತಿ ನೀಡಿ ಶಾಲೆಗಳನ್ನು ಪುನರಾರಂಭಿಸಲು ಸಿದ್ಧತೆಗಳು ನಡೆದಿದೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ಆರಂಭಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲಾಗುತ್ತಿದ್ದು, ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ಶಾಲಾ-ಕಾಲೇಜು ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮಕ್ಕಳನ್ನು ಶಾಲೆಗೆ ಹೋಗುವಂತೆ ಒತ್ತಾಯ ಹೇರುವಂತಿಲ್ಲ, ಶಾಲೆಗೆ ಬರುವ ಪ್ರತೀ

?? Big Breaking News‼ ಸೆ. 21ರಿಂದ ಶಾಲಾ- ಕಾಲೇಜುಗಳು ಆರಂಭ…‼️ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಂಡ ಮನೆಗೇ ಕನ್ನ ಹಾಕಿದ ಭೂಪ ➤ ಮಾಲೀಕನಿಲ್ಲದ ವೇಳೆ ಹಣ ಎಗರಿಸಿ ಸಿಕ್ಕಿ ಬಿದ್ದ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ತಾನು ಕೆಲಸ ಮಾಡುತ್ತಿದ್ದ ಅಂಗಡಿಯಿಂದಲೇ ನಗದು ದೋಚಿದ ಘಟನೆ ತಾಲೂಕಿನ ಮುಖ್ಯ ರಸ್ತೆಯಲ್ಲಿರುವ ಸಂಗೀತಾ ಇಲೆಕ್ಟ್ರಾನಿಕ್ಸ್ ನಲ್ಲಿ ನಡೆದಿದೆ. ಆರೋಪಿಯನ್ನು ಚಂದ್ರ ಎಂದು ಗುರುತಿಸಲಾಗಿದೆ. ಈತ ಮಾಲೀಕನಿಲ್ಲದ ವೇಳೆ ಹಣವನ್ನು ದೋಚಿದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ದಿನದ ಪ್ರತೀ ಸಂಗ್ರಹಣೆಯಲ್ಲಿ ಏರುಪೇರು ಬರುತ್ತಿದ್ದ ಕಾರಣ ಅನುಮಾನಗೊಂಡ ಅಂಗಡಿ ಮಾಲಿಕ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದರ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಂಡ ಮನೆಗೇ ಕನ್ನ ಹಾಕಿದ ಭೂಪ ➤ ಮಾಲೀಕನಿಲ್ಲದ ವೇಳೆ ಹಣ ಎಗರಿಸಿ ಸಿಕ್ಕಿ ಬಿದ್ದ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾರಿ ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ..! ➤ ಸ್ಕೂಟಿ ಸವಾರ ಸ್ಥಳದಲ್ಲೇ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.05:  ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಬೀಕರವಾದ ಅಪಘಾತದಲ್ಲಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಇಂದು (ಸೆ. 13) ನಡೆದಿದೆ.   ಅಳದಂಗಡಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ ನಡೆದಿದ್ದು, ಈ ಸಮಯ ಸ್ಕೂಟಿ ಸವಾರ ಗರ್ಡಾಡಿ ಗ್ರಾಮದ ನಿವಾಸಿ ಗಿರೀಶ್ ಮೂಲ್ಯ ರಸ್ತೆಗೆ ಎಸಯಲ್ಪಟ್ಟ ಪರಿಣಾಮ, ಅವರ ತಲೆಯ ಮೇಲೆಯೇ ಲಾರಿ ಚಲಿಸಿದೆ ಪರಿಣಾಮ ಹೆಲ್ಮೆಟ್ ಪುಡಿ ಪುಡಿಯಾಗಿ,

ಲಾರಿ ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ..! ➤ ಸ್ಕೂಟಿ ಸವಾರ ಸ್ಥಳದಲ್ಲೇ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.13:  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಸ್ಟ್ 31 ರಂದು ಕೊರೊನಾ ವೈರಸ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.     ಆದರೆ ಅಮಿತ್ ಷಾ ಅವರಲ್ಲಿ ಮತ್ತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲೇ ಉಳಿದರೆ ನಿರಂತರ ಚಿಕಿತ್ಸೆಗೆ ಸಹಾಯವಾಗಲಿದೆ

ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಕಾರು ➤ ಯುವತಿ ಮೃತ್ಯು | ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ರಸ್ತೆ ವಿಭಜಕದ ಮೇಲಿನ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಯುವತಿ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಮೃತ ದುರ್ದೈವಿಯನ್ನು ಮಂಗಳೂರಿನ ಆಶ್ರಿತಾ ಸಲ್ಡಾನಾ(24) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಕಾಪುವಿನ ಹಳೆಯ ಮೆಸ್ಕಾಂ ಕಚೇರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ನ ಮೇಲಿನ ವಿದ್ಯುತ್‌

ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಕಾರು ➤ ಯುವತಿ ಮೃತ್ಯು | ಮೂವರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಗು ಹೆಣ್ಣೆಂದು ಏಳು ತಿಂಗಳ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ಪಾಪಿ ತಂದೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 11. ತಂದೆಯೇ ತನ್ನ ಏಳು ತಿಂಗಳ ಕಂದಮ್ಮನನ್ನು ನೀರು ತುಂಬಿಸಿಡಲಾಗಿದ್ದ ಬಕೆಟ್‌ ನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಕಡೂರು ತಾಲೂಕಿನ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದೆ. ಆರೋಪಿಯನ್ನು ವಕೀಲ ಉಮಾಶಂಕರ್‌ ಎಂದು ಗುರುತಿಸಲಾಗಿದೆ. ಈತ ಮೂರು ವರ್ಷಗಳ ಹಿಂದೆ ಮಂಜುಳಾ ಎಂಬಾಕೆಯನ್ನು ಪ್ರೀತಿಸಿ ಎರಡನೇ ವಿವಾಹವಾಗಿದ್ದು, ಆಕೆಗೆ ಏಳು ತಿಂಗಳ ಹಿಂದೆ ಹೆಣ್ಣು ಮಗು ಹುಟ್ಟಿತ್ತು. ಈ ಕಾರಣಕ್ಕೆ ಉಮಾಶಂಕರ್‌ ಪತ್ನಿಗೆ ಹಿಂಸೆ ನೀಡುತ್ತಿದ್ದ. ಎಂದಿನಂತೆ ಮಂಜುಳಾ ಕರ್ತವ್ಯಕ್ಕೆ ತೆರಳಿದ್ದ

ಮಗು ಹೆಣ್ಣೆಂದು ಏಳು ತಿಂಗಳ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ಪಾಪಿ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ *➤ ‘ನನ್ನನ್ನು ಹುಡುಕಬೇಡಿ, ಹುಡುಕಿದರೆ ಜೀವಂತ ಇರುವುದಿಲ್ಲ’ ಚೀಟಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಸೆ.09. ಕೆಲಸಕ್ಕೆಂದು ತೆರಳಿದ ಯುವಕನೋರ್ವ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಬಲ್ಯದಿಂದ ವರದಿಯಾಗಿದೆ. ಬಲ್ಯ ಗ್ರಾಮದ ದೇರಾಜೆ ಎಂಬಲ್ಲಿರುವ ಫರ್ನಿಚರ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ದೇರಾಜೆ ನಿವಾಸಿ ಚಂದ್ರಶೇಖರ್(23) ಎಂಬಾತ ಸೆಪ್ಟೆಂಬರ್ 04 ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿದೆ. ಮೊಬೈಲನ್ನು ಮನೆಯಲ್ಲೇ ಬಿಟ್ಟು ಬೈಕಿನಲ್ಲಿ ತೆರಳಿದ್ದು, ನನ್ನನ್ನು ಹುಡುಕಬೇಡಿ ಹುಡುಕಿದರೆ ಜೀವಂತವಾಗಿ ಇರುವುದಿಲ್ಲ ಎಂದು ಮೊಬೈಲ್‌ ಕೆಳಗಡೆ ಚೀಟಿ ಬರೆದಿಟ್ಟು ನಾಪತ್ತೆಯಾಗಿರುವುದಾಗಿ ಆತನ

ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ *➤ ‘ನನ್ನನ್ನು ಹುಡುಕಬೇಡಿ, ಹುಡುಕಿದರೆ ಜೀವಂತ ಇರುವುದಿಲ್ಲ’ ಚೀಟಿ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ➤ ಸಿಸಿಬಿಯಿಂದ ನಟಿ ಸಂಜನಾ ಮನೆ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 08. ಸ್ಯಾಂಡಲ್‌ವುಡ್‌ ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಮಂಗಳವಾರ ಬೆಳಿಗ್ಗೆ ನಟಿ ಸಂಜನಾ ಮನೆ ಮೇಲೆ ಸಿಸಿಬಿ ಪೋಲಿಸರು ದಾಳಿ ನಡೆಸಿದ್ದಾರೆ. ಇಂದಿರಾನಗರದಲ್ಲಿರುವ ನಟಿ ಸಂಜನಾ ಮನೆ ಮೇಲೆ ಇನ್ಸ್‌ಪೆಕ್ಟರ್‌ ಪುನೀತ್‌ ನೇತೃತ್ವದಲ್ಲಿ ಬೆಳ್ಳಂಬೆಳಗ್ಗೆ ಮೂರು ವಾಹನಗಳಲ್ಲಿ ಬಂದ 10ಕ್ಕೂ ಅಧಿಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಂಜನಾ ಅವರ ಮೊಬೈಲ್‌ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿರುವ ಪೊಲೀಸರು, ಬಿ.ಎಂ.ಡಬ್ಲ್ಯೂ ಕಾರನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾತೆ. ಕಾರು ಅರ್ಚನಾ ಗರ್ಲಾನಿ ಅವರ ಹೆಸರಿನಲ್ಲಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ➤ ಸಿಸಿಬಿಯಿಂದ ನಟಿ ಸಂಜನಾ ಮನೆ ಮೇಲೆ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top