ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.10. ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗೆ 625 ರಲ್ಲಿ 625 ಅಂಕ ಲಭಿಸಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 625 ಅಂಕಗಳಲ್ಲಿ 625 ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್??ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.10. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲು ಕ್ಷಣಗಣನೆ ಆರಂಭವಾಗಿದೆ. ಇಂದು ಅಪರಾಹ್ನ 3 ಗಂಟೆಯ ಸುಮಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದ್ದು, ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್??ಮಾಡಿ. kseeb.kar.nic.in ಅಥವಾ karresults.nic.in

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್??ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಬೊಲೇರೋ – ಪಿಕಪ್ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಗಂಭೀರ, ಬೊಲೇರೋ ಇಂಜಿನ್ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.09. ಬೊಲೆರೋ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೊಲೆರೋ ವಾಹನವು ಬೆಂಕಿಗೆ ಆಹುತಿಯಾದ ಘಟನೆ ಭಾನುವಾರ ಸಂಜೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಆಸ್ಪತ್ರೆಗೆ ಆಕ್ಸಿಜನ್ ಸಾಗಾಟ ಮಾಡುತ್ತಿದ್ದ ಪಿಕಪ್ ಹಾಗೂ ಶಿಬಾಜೆ ನಿವಾಸಿ ರಮೇಶ್ ಎಂಬವರಿಗೆ ಸೇರಿದ ಬೊಲೇರೋ ನಡುವೆ ಲಾವತ್ತಡ್ಕದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ರಮೇಶ್ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲ್ಯಾಡಿ: ಬೊಲೇರೋ – ಪಿಕಪ್ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಗಂಭೀರ, ಬೊಲೇರೋ ಇಂಜಿನ್ ಬೆಂಕಿಗಾಹುತಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ತೆಕ್ಕಾರು: ಮನೆಯ ಹಿಂಬದಿಯ ಗೋಡೆ ಕುಸಿತ ➤ ಅಪಾಯದಂಚಿನಲ್ಲಿ ಮನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.09, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತೆಕ್ಕಾರಿನಲ್ಲಿ ಮನೆಯೊಂದರ ಸಮೀಪದ ಗುಡ್ಡವೊಂದು ಕುಸಿದಿದೆ. ಭಾನುವಾರದಂದು ತೆಕ್ಕಾರು ನಿವಾಸಿ ಸಿದ್ದೀಕ್ ಎಂಬವರ ಮನೆಯ ಅಂಗಳದಿಂದ ಗುಡ್ಡ ಜರಿದು, ಕೆಳಗಡೆಯಿದ್ದ ಅಕ್ಬರ್ ಎಂಬವರ ಮನೆಯ ಗೋಡೆಗೆ ಬಿದ್ದಿದೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ತೆಕ್ಕಾರು ಎಸ್ಸೆಸ್ಸೆಫ್ ಮತ್ತು ಎಸ್ ವೈಎಸ್ ಶಾಖಾ ಸದಸ್ಯರು ತುರ್ತು ಕಾರ್ಯಚರಣೆ ನಡೆಸಿ ಅಗತ್ಯ ವಸ್ತುಗಳ ಸ್ಥಳಾಂತರಿಸಿದರು. ಇನ್ನು ಗುಡ್ಡ ಕುಸಿಯುತ್ತಲೇ ಇದ್ದು, ಸಿದ್ದೀಕ್ ರವರ ಮನೆ ಅಪಾಯದಂಚಿನಲ್ಲಿದೆ.

ತೆಕ್ಕಾರು: ಮನೆಯ ಹಿಂಬದಿಯ ಗೋಡೆ ಕುಸಿತ ➤ ಅಪಾಯದಂಚಿನಲ್ಲಿ ಮನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಬಿರುಸುಗೊಂಡ ಮಳೆರಾಯ ➤ ನೆಲ್ಯಾಡಿಯಲ್ಲಿ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಆ.9, ವರುಣನ ಅಬ್ಬರವು ದಿನೇ ದಿನೇ ಹೆಚ್ಚುತ್ತಿದ್ದು, ಹಲವೆಡೆ ಪ್ರಾಣ ಹಾನಿ ಸಂಭವಿಸುತ್ತಿವೆ. ಇದರ ನಡುವೆ ತಾಲೂಕಿನ ನೆಲ್ಯಾಡಿ ಸಮೀಪ ಮನೆಯ ಮೇಲ್ಛಾವಣಿಗೆ ಹಾನಿಯಾಗಿದೆ. ತಾಲೂಕಿನ ನೆಲ್ಯಾಡಿ ಗ್ರಾಮದ ಪಡುಬೆಟ್ಟು ನಿವಾಸಿ ವಿನೋದ ಮರಿಯ ಎಂಬವರ ಮನೆಯ ಮೇಲ್ಛಾವಣಿ ಹಾಗೂ ಶೌಚಾಲಯದ ಕಟ್ಟಡವು ಭಾರೀ ಗಾಳಿ ಮಳೆಗೆ ಭಾಗಶಃ ಹಾನಿಗೊಳಗಾಗಿದ್ದು, ಸುಮಾರು 30 ಸಾವಿರ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಕರಾವಳಿಯಲ್ಲಿ ಬಿರುಸುಗೊಂಡ ಮಳೆರಾಯ ➤ ನೆಲ್ಯಾಡಿಯಲ್ಲಿ ಮನೆಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುಂಚತ್ತಾರು: ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 09, ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಚತ್ತಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪುಂಚತ್ತಾರು ರಾಮಣ್ಣ ಗೌಡ ಎಂಬವರ ಪುತ್ರಿ ನಳಿನಾಕ್ಷಿ (30) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಿಗ್ಗೆ ಮನೆಯವರು ಹುಡುಕಾಡಿದಾಗ ನೇಣು ಬಿಗಿದುಕೊಂಡಿದ್ದು ತಿಳಿದು ಬಂದಿದೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುಂಚತ್ತಾರು: ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಹೊಂಡಕ್ಕೆ ಬಿದ್ದ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ‌.8, ಹೆದ್ದಾರಿಯ ಅಗಲೀಕರಣದ ನೆಪದಲ್ಲಿ ರಸ್ತೆಯ ಬದಿಯಲ್ಲಿ ನಿರ್ಮಿಸಲಾದ ಆಳವಾದ ಹೊಂಡಕ್ಕೆ ಕಾರೊಂದು ಬಿದ್ದು, ಸ್ಥಳೀಯರ ಯತ್ನದಿಂದಾಗಿ ಕಾರು ಚಾಲಕನೋರ್ವ ಅಪಾಯದಿಂದ ಘಟನೆ ಘಟನೆ ನಡೆದಿದೆ. ಪೆರ್ನೆಯಿಂದ ಮಡಂತ್ಯಾರಿಗೆ ಕಾರಿನಲ್ಲಿ ಚಲಿಸುತ್ತಿದ್ದ ಅಫ್ಝಲ್ ಎಂಬವರು ರಸ್ತೆಗೆ ಅಡ್ಡಲಾಗಿ ಬಂದ ನಾಯಿಯನ್ನು ತಪ್ಪಿಸಲು ಯತ್ನಿಸಿದಾಗ ಬದಿಯಲ್ಲಿದ್ದ ನೀರು ತುಂಬಿದ ಹೊಂಡಕ್ಕೆ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿದ್ದ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಕರ್ವೇಲು ನಿವಾಸ್ ಶರೀಫ್ ಹಾಗೂ ಸಹಚರರು ಹೊಂಡಕ್ಕೆ ಧುಮುಕಿ ಕಾರಿನ

ಉಪ್ಪಿನಂಗಡಿ: ಹೊಂಡಕ್ಕೆ ಬಿದ್ದ ಕಾರು ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದುಬೈ – ಕ್ಯಾಲಿಕಟ್ ವಿಮಾನ ಪತನ ➤ ಕೇರಳದ ಏರ್‌ಪೋರ್ಟ್ ನಲ್ಲಿ ದುರ್ಘಟನೆ

(ನ್ಯೂಸ್ ಕಡಬ) newskadaba.com ಕೇರಳ, ಆ.07.  ದುಬೈನಿಂದ ಕ್ಯಾಲಿಕಟ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಪತನಗೊಂಡ ಘಟನೆ ಕೇರಳದಲ್ಲಿ ನಡೆದಿದೆ. ಮೂಲಗಳ ಪ್ರಕಾರ, ವಿಮಾನದಲ್ಲಿ 178 ಕ್ಕಿಂತಲೂ ಹೆಚ್ಚು ಪ್ರಯಾಣಿಕರು ಇದ್ದರೆಂಬ ಮಾಹಿತಿ ಬರುತ್ತಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಳಗೊಳ್ಳುವ ಸಂಭವವಿದೆ ಎನ್ನಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದಾರೆ. ವಿಮಾನವು ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದು ಲ್ಯಾಂಡ್ ಆಗುತ್ತಿದ್ದ

ದುಬೈ – ಕ್ಯಾಲಿಕಟ್ ವಿಮಾನ ಪತನ ➤ ಕೇರಳದ ಏರ್‌ಪೋರ್ಟ್ ನಲ್ಲಿ ದುರ್ಘಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿ ➤ ಎರಡು ಪಿಸ್ತೂಲ್, ರಂಜಕ, ಪೊಟ್ಯಾಸಿಯಂ ಸಹಿತ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ.05. ಯಾವುದೇ ಪರವಾನಗಿ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿರುವ ಕಡಬ ಪೊಲೀಸರು, ಎರಡು ಪಿಸ್ತೂಲು ಹಾಗೂ 02 ಖಾಲಿ ತೋಟೆ ಹಾಗೂ ರಂಜಕ, ಪೊಟ್ಯಾಶಿಯಂನ್ನು ವಶಪಡಿಸಿಕೊಂಡಿದ್ದಾರೆ‌. ಬಂಧಿತ ಆರೋಪಿಯನ್ನು ಕಡಬ ತಾಲೂಕು ಕಡಬ ಗ್ರಾಮದ ಪಾಲೋಳಿ ನಿವಾಸಿ ಜನಾರ್ಧನ್ ಗೌಡ ಎಂದು ಗುರುತಿಸಲಾಗಿದೆ. ಆರೋಪಿಯು ಯಾವುದೇ ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಆರೋಪಿಯ ಮನೆಯ ಮೇಲೆ ದಾಳಿ ಮಾಡಿ 02 ನಕಲಿ

ಕಡಬ: ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿ ➤ ಎರಡು ಪಿಸ್ತೂಲ್, ರಂಜಕ, ಪೊಟ್ಯಾಸಿಯಂ ಸಹಿತ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತುಂಬಿ ತುಳುಕುತ್ತಿರುವ ಕುಮಾರಧಾರ ➤ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.05. ಘಟ್ಟದ ತಪ್ಪಲಿನಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸುಬ್ರಹ್ಮಣ್ಯ – ಪಂಜ ರಸ್ತೆಯನ್ನು ನೀರು ಆವರಿಸಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ತಡರಾತ್ರಿ 2 ಗಂಟೆಯಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ತಿಳಿಸಿದ್ದಾರೆ.

ತುಂಬಿ ತುಳುಕುತ್ತಿರುವ ಕುಮಾರಧಾರ ➤ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top