ಬ್ರೇಕಿಂಗ್ ನ್ಯೂಸ್

ಕಡಬ: ಬೈಕ್ – ಮಹೀಂದ್ರಾ ಜೀತೋ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜು.13. ಬೈಕ್ ಹಾಗೂ ಮಹೀಂದ್ರಾ ಜೀತೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ. ಗಾಯಾಳು ಸವಾರನನ್ನು ಕಡಬ ಸಮೀಪದ ಮುಳಿಮಜಲು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಫಯಾಝ್ ಎಂದು ಗುರುತಿಸಲಾಗಿದೆ. ಮರ್ಧಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಪಂಜದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಮಹೀಂದ್ರಾ ದೋಸ್ತ್ ನಡುವೆ ಢಿಕ್ಕಿ ಸಂಭವಿಸಿದೆ. ಗಾಯಾಳು ಯುವಕನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ […]

ಕಡಬ: ಬೈಕ್ – ಮಹೀಂದ್ರಾ ಜೀತೋ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪಾಣೆಮಂಗಳೂರು ಸೇತುವೆಯಿಂದ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 13, ಶನಿವಾರದಂದು ಬೆಳಗ್ಗಿನಿಂದ ನಾಪತ್ತೆಯಾಗಿದ್ದ ಮೂಡ ಗ್ರಾಮದ ಮಹಿಳೆಯೋರ್ವರ ಮರಥದೇಹವು ತುಂಬೆ ಸಮೀಪದ ನೇತ್ರಾವತಿ ನದಿಯಲ್ಲಿ ಇಂದು ಪತ್ತೆಯಾಗಿದೆ. ಮೃತರನ್ನು ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಚಿಕ್ಕಯ್ಯಮಠ ಎಂಬಲ್ಲಿ ತನ್ನ ಸಹೋದರಿಯ ಮನೆಗೆ ಕಳೆದ ಕೆಲ ದಿನಗಳ ಹಿಂದೆ ಬಂದಿದ್ದು, ಜೂ.10 ರ ಶುಕ್ರವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಇವರು ಶನಿವಾರ ಮುಂಜಾನೆ ಕಾಣೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಿಕರು ಹುಡುಕಾಟ ನಡೆಸಿದಾಗ ಪಾಣೆಮಂಗಳೂರು ನೂತನ ಸೇತುವೆ ಬಳಿ

ಪಾಣೆಮಂಗಳೂರು ಸೇತುವೆಯಿಂದ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಬೀಡಿ ಕೊಡಲೆಂದು ತೆರಳಿದ್ದ ಮಹಿಳೆ ನಾಪತ್ತೆ ➤ ಪಕ್ಕದ ಮನೆಯ ಯುವಕನೊಂದಿಗೆ ಪರಾರಿ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಜು.13. ಬೀಡಿ ಬ್ರ್ಯಾಂಚ್ ಗೆಂದು ತೆರಳಿದ ವಿವಾಹಿತ ಮಹಿಳೆಯೋರ್ವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದಾಸರಗುಡ್ಡೆ ನಿವಾಸಿ ಬಾಬು ಎಂಬವರ ಪತ್ನಿ ಸುಮತಿ ಎಂದು ಗುರುತಿಸಲಾಗಿದೆ. ಶನಿವಾರದಂದು ಬೀಡಿ ಕೊಡಲೆಂದು ತೆರಳಿದ್ದ ಸುಮತಿ ನಾಪತ್ತೆಯಾಗಿದ್ದು, ರಾತ್ರಿಯಾದರೂ ಮನೆಗೆ ಹಿಂತಿರುಗದೆ ಇದ್ದುದರಿಂದ ಹುಡುಕಾಡಿದ ಆಕೆಯ ಮನೆಯವರು ಪಕ್ಕದ ಮನೆಯ ವಿನಯ್ ಎಂಬಾತನ ಜೊತೆ ತೆರಳಿರುವ ಶಂಕೆ ವ್ಯಕ್ತಪಡಿಸಿ ಕಡಬ

ಕಡಬ: ಬೀಡಿ ಕೊಡಲೆಂದು ತೆರಳಿದ್ದ ಮಹಿಳೆ ನಾಪತ್ತೆ ➤ ಪಕ್ಕದ ಮನೆಯ ಯುವಕನೊಂದಿಗೆ ಪರಾರಿ ಶಂಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ!

(ನ್ಯೂಸ್ ಕಡಬ) newskadaba.com ಪುತ್ತೂರು,ಜು.12: ಪುತ್ತೂರು ತಾಲೂಕಿನಲ್ಲಿ ಭಾನುವಾರ ನಾಲ್ಕು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ವೃದ್ಧ ಮೃತಪಟ್ಟಿದ್ದಾರೆ. ಶಾಂತಿಗೋಡಿನ 15 ವರ್ಷದ ಬಾಲಕಿ, ಇಚ್ಲಾಂಪಾಡಿಯ 27 ವರ್ಷದ ಯುವಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿದ್ದ ಬಲ್ಯ ಹೊಸ್ಮಠದ 22 ವರ್ಷದ ಯುವತಿ, ಕ್ಯಾಂಫ್ಕೊ ವಸತಿ ಗೃಹದಲ್ಲಿನ 35 ವರ್ಷದ ಗೃಹಿಣಿಗೆ ಇಂದು ಕೋರೋನಾ ಪಾಸಿಟಿವ್ ವರದಿಯಾಗಿದೆ.   ಇಚ್ಲಾಂಪಾಡಿಯ ಸೋಂಕಿತ ಯುವಕ ಜುಲೈ 12ರಂದು ವಿದೇಶದಿಂದ ಬಂದು ಮಂಗಳೂರಿನ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದರು.

ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ಮತ್ತೆ ಕೊರೋನಾ‼️ ➤ ಬಲ್ಯದ ನರ್ಸ್ ಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜು.12. ಕಡಬದಲ್ಲಿ ಮತ್ತೆ ಕೊರೋನಾ ಕಾಣಿಸಿಕೊಂಡಿದ್ದು, ಬಲ್ಯದ ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಡಬ ತಾಲೂಕಿನ ಬಲ್ಯ ಸಂಪಡ್ಕದ ನರ್ಸ್ ಓರ್ವರ ಗಂಟಲು ದ್ರವ ಮಾದರಿ ಪರೀಕ್ಷಿಸಿದಾಗ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಿದ್ದಾರೆ.

ಕಡಬದಲ್ಲಿ ಮತ್ತೆ ಕೊರೋನಾ‼️ ➤ ಬಲ್ಯದ ನರ್ಸ್ ಗೆ ಪಾಸಿಟಿವ್ Read More »

ಬ್ರೇಕಿಂಗ್ ನ್ಯೂಸ್

ನೇತ್ರಾವತಿ ಸೇತುವೆಯಿಂದ ಹಾರಿದ ಮಹಿಳೆ ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 11, ತಾಲೂಕಿನ ಸಜಿಪಮೂಡ ಗ್ರಾಮದ ಮಹಿಳೆಯೋರ್ವರು ಪಾಣೆಮಂಗಳೂರಿನ ನೂತನ ಸೇತುವೆ ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಸಂಶಯ ವ್ಯಕ್ತವಾದ ಹಿನ್ನೆಲೆ ಶನಿವಾರ ಬೆಳಗ್ಗಿನಿಂದ ಮುಳುಗು ತಜ್ಞರು ಮಹಿಳೆಗಾಗಿ ಹುಡುಕಾಟ ಆರಂಭಿಸಿದ್ದಾರೆ. ಮೂಡ ಗ್ರಾಮದ ನಿವಾಸಿಯಾಗಿದ್ದ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಇವರು ಬಿ. ಸಿರೋಡಿನ ಚಿಕ್ಕಯ್ಯಮಠ ಎಂಬಲ್ಲಿ ತನ್ನ ಸಹೋದರಿಯ ಮನೆಗೆ ಕಳೆದ ಕೆಲ ದಿನಗಳ ಹಿಂದೆ ಬಂದಿದ್ದರು. ನಿನ್ನೆ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದ ಮಹಿಳೆ ಇಂದು

ನೇತ್ರಾವತಿ ಸೇತುವೆಯಿಂದ ಹಾರಿದ ಮಹಿಳೆ ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾವಿಗೆ ಬಿದ್ದ ಕಾಡುಕೋಣ ; ರಕ್ಷಣೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.11, ತಾಲೂಕಿನ ಉಳ್ಳೂರು 74 ಗ್ರಾಮದ ಶಿವರಾಮ ಶೆಟ್ಟಿಯವರ ಮನೆಯ ಬಾವಿಗೆ ಕಾಡುಕೋಣವೊಂದು ಬಿದ್ದಿದ್ದು, ಸ್ಥಳೀಯರು, ಅರಣ್ಯ ಇಲಾಖಾ ಸಿಬ್ಬಂದಿಗಳ ಸಹಕಾರದಿಂದ ಕಾಡುಕೋಣವನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ ಅರಣ್ಯಕ್ಕೆ ಬಿಡಲಾಗಿದೆ. 12 ವರ್ಷದ ಕಾಡೆಮ್ಮೆ ಆಳವಾದ ಬಾವಿಗೆ ಬಿದ್ದಿದ್ದು, ಬಾವಿ ಆಳವಿದ್ದುದರಿಂದ ಕಾಡೆಮ್ಮೆಗೆ ಮೇಲೆ ಬರಲು ಸಾಧ್ಯವಾಗಲಿಲ್ಲ. ಇದನ್ನು ಕಂಡ ಸ್ಥಳೀಯರು ಹಾಗೂ ಆರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಕಾಡುಕೋಣವನ್ನು ಮೇಲೆತ್ತಿದರು. ಜೆಸಿಬಿ ಮೂಲಕ ಸಾಕಷ್ಟು ಅಗಲದ ಕಾಲುವೆ ಕೊರೆದು, ಕಾಡುಕೋಣಕ್ಕೆ

ಬಾವಿಗೆ ಬಿದ್ದ ಕಾಡುಕೋಣ ; ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

?? ?ig Breaking News ಕರ್ತವ್ಯನಿರತ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ➤ ವ್ಯಕ್ತಿ ಪರಾರಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.9, ಕರ್ತವ್ಯ ನಿರತರಾಗಿದ್ದ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಗುರುವಾರ ಸಂಭವಿಸಿದೆ. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಮತಾ ಗಟ್ಟಿ ಅವರಿಗೆ ಇಲ್ಲಿಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬೆಳಗ್ಗೆ ಸುಮಾರು 10 ಗಂಟೆಗೆ ಮಮತಾ ರವರು ಕರ್ತವ್ಯದಲ್ಲಿರುವಾಗ ದೊಣ್ಣೆಯಿಂದ ಏಕಾ ಏಕಿ ಹಲ್ಲೆ ನಡೆಸಿದ್ದು, ತಲೆಗೆ

?? ?ig Breaking News ಕರ್ತವ್ಯನಿರತ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ➤ ವ್ಯಕ್ತಿ ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಹೆದ್ದಾರಿ-73ರ ಬಳಿ ರಸ್ತೆಗೆ ಉರುಳಿದ ಮರ ➤ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ: ಜು.9, ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು- ಚಿಕ್ಕಮಗಳೂರು ರಸ್ತೆಯ ಮುಂಡಾಜೆ ಸೋಮಂತಡ್ಕ ಸಮೀಪದ ಅಂಬಡ್ತ್ಯಾರು ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು,ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇಂದು ಮುಂಜಾನೆ ಸುಮಾರಿಗೆ 6.45ರ ಸುಮಾರಿಗೆ ಬೃಹದಾಕಾರದ ಮರ ರಸ್ತೆಗೆ ಉರುಳಿ ಬಿದ್ದಿದೆ. ಹಾಗಾಗಿ ಕೆಲವು ವಾಹನಗಳು ಬದಲಿ ಮಾರ್ಗದಲ್ಲಿ ಸಂಚಾರ ಮುಂದುವರಿಸಿದವು. ಮರ ರಸ್ತೆಗೆ ಉರುಳಿರುವುದರಿಂದ ವಿದ್ಯುತ್ ತಂತಿಗಳಿಗೆ ಹಾನಿಯಾಗಿದೆ. ಇದೇ ರಸ್ತೆಯ ಮೂಲಕ ಬೆಂಗಳೂರಿಗೆ ಸಂಚರಿಸುತ್ತಿದ್ದ ಕಾರ್ಕಳ‌ ಶಾಸಕ ಸುನೀಲ್ ಕುಮಾರ್ ಕೂಡಾ

ಬೆಳ್ತಂಗಡಿ: ಹೆದ್ದಾರಿ-73ರ ಬಳಿ ರಸ್ತೆಗೆ ಉರುಳಿದ ಮರ ➤ ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬಾವಿಗೆ ಬಿದ್ದ ಜಿಂಕೆ

(ನ್ಯೂಸ್ ಕಡಬ)newskadaba.com ಕಾವು: ಜು.9, ಮಾಡ್ನೂರು ಗ್ರಾಮದ ಕಾವು ಮದ್ಲ ಸಮೀಪದಲ್ಲಿ ಖಾಸಗಿ ಬಾವಿಯೊಂದಕ್ಕೆ ಜಿಂಕೆಯೊಂದು ಬಿದ್ದ ಘಟನೆ ತಿಳಿದು ಬಂದಿದೆ. ಮಳೆಗಾಲವಾದುದರಿಂದ ಬಾವಿಯಲ್ಲಿ ನೀರು ತುಂಬಿದ್ದು, ಜಿಂಕೆ ನೀರಿನಲ್ಲಿ ಒದ್ದಾಡುತ್ತಿದೆ. ವಿಷಯ ತಿಳಿದ ಮನೆಯವರು ಈಗಾಗಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಜಿಂಕೆಯನ್ನು ಮೇಲಕ್ಕೆತ್ತುವ ಕಾರ್ಯ ಮುಂದುವರಿದಿದೆ.

ಪುತ್ತೂರು: ಬಾವಿಗೆ ಬಿದ್ದ ಜಿಂಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top