ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಛಾವಣಿಯ ಶೀಟ್‌ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಗುರುವಾರ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಆಚಾರ್ಯ ಅವರ ಪುತ್ರ ಶೌರ್ಯ ಆಚಾರ್ಯ ಎಂದು ಗುರುತಿಸಲಾಗಿದೆ. ಶೌರ್ಯ ಎರಡನೇ ಪದವಿ ಪೂರ್ವ (ಪಿಯು) ವಿದ್ಯಾರ್ಥಿಯಾಗಿದ್ದು, ಕಾಲೇಜು ರಜಾದಿನಗಳಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ಕಡೆಪಲ್ಲದ ಗಾಂಧಿನಗರದಲ್ಲಿರುವ ‘ರಾಯಲ್ ಪ್ಯಾರಡೈಸ್’ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಶೌರ್ಯ ನಾಲ್ಕನೇ ಮಹಡಿಯಲ್ಲಿ ಛಾವಣಿಯ ಹಾಳೆಗಳನ್ನು ಅಳವಡಿಸುವ […]

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ನೂತನ ಸಚಿವರ ಖಾತೆ ಹಂಚಿಕೆ ಪ್ರಕಟ; ಸಿಎಂ ಬಳಿಯೇ ಹಣಕಾಸು, ಪರಮೇಶ್ವರ್‌ಗೆ ಕಂದಾಯ!

(ನ್ಯೂಸ್‌ ಕಡಬ) com,  ಜೂ.05: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆಶಿ, ಡಿಸಿಎಂ ಡಾ.ಜಿ ಪರಮೇಶ್ವರ್, ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ. ಈ ಮೂಲಕ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿಎಂ ಡಿಕೆ ಶಿವಕುಮಾರ್‌ ಹಣಕಾಸು ಖಾತೆಯನ್ನ

ಕರ್ನಾಟಕ ನೂತನ ಸಚಿವರ ಖಾತೆ ಹಂಚಿಕೆ ಪ್ರಕಟ; ಸಿಎಂ ಬಳಿಯೇ ಹಣಕಾಸು, ಪರಮೇಶ್ವರ್‌ಗೆ ಕಂದಾಯ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ. ನಷ್ಟ ಆತಂಕ..

(ನ್ಯೂಸ್‌ ಕಡಬ) newskadaba.com,  ಜೂ.05: ರಾಜ್ಯದ ಎಲ್ಲಾ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಾಗಲಿದ್ದರೂ, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಆದಾಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.ಪ್ರಸ್ತುತ ರಾಜ್ಯದ 4ಸಾರಿಗೆ ನಿಗಮಗಳು ಪ್ರತಿವರ್ಷ ಸುಮಾರು ಏಳು ಲಕ್ಷ ವಿದ್ಯಾರ್ಥಿಗಳಿಂದ ಬಸ್ ಪಾಸ್ ಶುಲ್ಕ ರೂಪದಲ್ಲಿ ಆದಾಯ ಗಳಿಸುತ್ತಿವೆ. ಹೊಸ ಯೋಜನೆ ಜಾರಿಗೆ ಬಂದರೆ ಈ ಆದಾಯ ಸಂಪೂರ್ಣವಾಗಿ ನಿಲ್ಲಲಿದೆ ಎಂದು ಅಧಿಕಾರಿಗಳು

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ. ನಷ್ಟ ಆತಂಕ.. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಹನ ಸವಾರರಿಗೆ ಗುಡ್ ನ್ಯೂಸ್ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ಜೂ.05: ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಗುರುವಾರ ಆದೇಶಿಸಿದೆ. ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದ್ದು, ಜೂನ್ 21 ರಿಂದ ಜುಲೈ 10ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು

ವಾಹನ ಸವಾರರಿಗೆ ಗುಡ್ ನ್ಯೂಸ್ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಜೂನ್ 15 ರಿಂದ ವಿಶೇಷ ಮಾನ್ಸೂನ್ ವೇಳಾಪಟ್ಟಿ ಪ್ರಕಟಿಸಿದ ಕೊಂಕಣ ರೈಲ್ವೆ

(ನ್ಯೂಸ್‌ ಕಡಬ) newskadaba.com, ಜೂ.04: ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ಮಳೆಯ ಅವಧಿಯಲ್ಲಿ ರೈಲುಗಳ ಸುರಕ್ಷಿತ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಮಹತ್ವದ ನಿರ್ಧಾರ ಕೈಗೊಂಡಿದೆ…….. ಈ ಮಾರ್ಗದಲ್ಲಿ ಚಲಿಸುವ ರೈಲುಗಳಿಗಾಗಿ ವಿಶೇಷ ಮುಂಗಾರು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಹೊಸ ವೇಳಾಪಟ್ಟಿಯು ಜೂನ್ 15, 2026 ರಿಂದ ಜಾರಿಗೆ ಬರಲಿದ್ದು, ಅಕ್ಟೋಬರ್ 20, 2026 ರವರೆಗೆ ಜಾರಿಯಲ್ಲಿರಲಿದೆ. ಪಶ್ಚಿಮ ಕರಾವಳಿ ಮತ್ತು ಕೊಂಕಣ ಭಾಗದಲ್ಲಿ ಮುಂಗಾರು ಮಳೆಯು ಅತ್ಯಂತ ಭೀಕರವಾಗಿರುತ್ತದೆ. ಈ ಅವಧಿಯಲ್ಲಿ ಗುಡ್ಡ

ಮಂಗಳೂರು: ಜೂನ್ 15 ರಿಂದ ವಿಶೇಷ ಮಾನ್ಸೂನ್ ವೇಳಾಪಟ್ಟಿ ಪ್ರಕಟಿಸಿದ ಕೊಂಕಣ ರೈಲ್ವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುಮಲದಲ್ಲಿ ದಾಖಲೆ ಬರೆದ ಶ್ರೀವಾರಿ ಪ್ರಸಾದ: ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ಲಡ್ಡು ಮಾರಾಟ!

(ನ್ಯೂಸ್‌ ಕಡಬ) newskadaba.com, ಜೂ.04: ಕಲಿಯುಗದ ಪ್ರತ್ಯಕ್ಷ ದೈವವೆಂದು ಆರಾಧಿಸಲ್ಪಡುವ ಶ್ರೀ ವೆಂಕಟೇಶ್ವರ ಸ್ವಾಮಿಯ ಪರಮ ಪವಿತ್ರ ಪ್ರಸಾದವಾದ ತಿರುಮಲ ತಿರುಪತಿ ಲಡ್ಡು ಮತ್ತೊಮ್ಮೆ ಹೊಸ ಇತಿಹಾಸ ನಿರ್ಮಿಸಿದೆ. ವಿಶ್ವದಾದ್ಯಂತದ ಕೋಟ್ಯಂತರ ಭಕ್ತರ ನಂಬಿಕೆ ಹಾಗೂ ಭಕ್ತಿಯ ಪ್ರತೀಕವಾಗಿರುವ ಶ್ರೀವಾರಿ ಲಡ್ಡು, 2026ರ ಮೇ ತಿಂಗಳಲ್ಲಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.   ತಿರುಮಲ ತಿರುಪತಿ ದೇವಸ್ಥಾನಂ (TTD) ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, 2024ರ ಮೇ ತಿಂಗಳಲ್ಲಿ 1.01 ಕೋಟಿ ಲಡ್ಡುಗಳು

ತಿರುಮಲದಲ್ಲಿ ದಾಖಲೆ ಬರೆದ ಶ್ರೀವಾರಿ ಪ್ರಸಾದ: ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ಲಡ್ಡು ಮಾರಾಟ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನ್‌ಲೈನ್ ಜೂಜಾಟ ನಿಯಂತ್ರಣಕ್ಕೆ ಸುಪ್ರೀಂ ಅಸ್ತು: ರಾಜ್ಯ ಸರ್ಕಾರಗಳ ನಿಷೇಧ ಕಾಯ್ದೆ ಸಿಂಧು

(ನ್ಯೂಸ್‌ ಕಡಬ) newskadaba.com, ಜೂ.04: ಆನ್‌ಲೈನ್ ಗೇಮಿಂಗ್ ಮತ್ತು ಜೂಜಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ನಿಂದ ಭಾರಿ ಜಯ ಸಿಕ್ಕಿದೆ. ಹಣ ಅಥವಾ ಪಣವನ್ನು ಒಡ್ಡಿ ಆಡುವ ಆನ್‌ಲೈನ್ ಕೌಶಲ್ಯದ ಆಟಗಳ ಮೇಲಿನ ಬೆಟ್ಟಿಂಗ್‌ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದರೊಂದಿಗೆ, ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸುವ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳ ಕಾನೂನುಗಳ ಸಿಂಧುತ್ವವನ್ನು ದೇಶದ ಅತ್ಯುನ್ನತ

ಆನ್‌ಲೈನ್ ಜೂಜಾಟ ನಿಯಂತ್ರಣಕ್ಕೆ ಸುಪ್ರೀಂ ಅಸ್ತು: ರಾಜ್ಯ ಸರ್ಕಾರಗಳ ನಿಷೇಧ ಕಾಯ್ದೆ ಸಿಂಧು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಅರಣ್ಯ ಅಧಿಕಾರಿ ಜೀಪ್‌ ಕಳವು – ಆರೋಪಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com, ಜೂ.04: ಪಡೀಲ್‌ನ ಅರಣ್ಯ ಇಲಾಖೆಯ ವಸತಿ ಗೃಹದ ಬಳಿ ನಿಲ್ಲಿಸಿದ್ದ ಅರಣ್ಯ ಸಂಚಾರಿದಳದ RFO ಜೀಪನ್ನು ಕದ್ದು ಕುಂದಾಪುರದತ್ತ ತೆಗೆದು ಕೊಂಡು ಹೋಗಿದ್ದ ವಿದೇಶದಲ್ಲಿ ಉದ್ಯೋದಲ್ಲಿದ್ದ ಆರೋಪಿಯನ್ನು ಕುಂದಾಪುರ ಅರಣ್ಯ ಇಲಾಖೆ ಅಧಿಕಾರಿಗಳು ಕೋಟೇಶ್ವರ ಸಮೀಪದ ಮೂಡುಗೋಪಾಡಿಯಲ್ಲಿ ಬಂಧಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯ ನದೀಮ್ (23) ಬಂಧಿತ ಆರೋಪಿ. ಘಟನೆ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು : ಅರಣ್ಯ ಅಧಿಕಾರಿ ಜೀಪ್‌ ಕಳವು – ಆರೋಪಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಬಾಂಡ್‌ಗಳ ಮೇಲಿನ ಬಂಡವಾಳ ಲಾಭ ತೆರಿಗೆ ರದ್ದು ವಿದೇಶಿ ಹೂಡಿಕೆ ಆಕರ್ಷಿಸಲು ಕೇಂದ್ರದ ಮಾಸ್ಟರ್ ಪ್ಲಾನ್

(ನ್ಯೂಸ್‌ ಕಡಬ) newskadaba.com, ಜೂ.04: ವಿದೇಶಿ ಹೂಡಿಕೆ ಆಕರ್ಷಿಸಲು ಕೇಂದ್ರದ ಮಾಸ್ಟರ್ ಪ್ಲಾನ್: ಸರ್ಕಾರಿ ಬಾಂಡ್‌ಗಳ ಮೇಲಿನ ಬಂಡವಾಳ ಲಾಭ ತೆರಿಗೆ ಸಂಪೂರ್ಣ ರದ್ದು!   ನವದೆಹಲಿ: ದೇಶದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ವಿದೇಶಿ ಬಂಡವಾಳವನ್ನು ದೊಡ್ಡ ಪ್ರಮಾಣದಲ್ಲಿ ಆಕರ್ಷಿಸಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಂಡಿದೆ. ಭಾರತೀಯ ಸರ್ಕಾರಿ ಬಾಂಡ್‌ಗಳಲ್ಲಿ (Government Securities – G-Secs) ಹೂಡಿಕೆ ಮಾಡುವ ವಿದೇಶಿ ಹೂಡಿಕೆದಾರರ ಮೇಲಿನ ಬಂಡವಾಳ ಲಾಭ ತೆರಿಗೆಯನ್ನು (Capital Gains Tax)

ಭಾರತೀಯ ಬಾಂಡ್‌ಗಳ ಮೇಲಿನ ಬಂಡವಾಳ ಲಾಭ ತೆರಿಗೆ ರದ್ದು ವಿದೇಶಿ ಹೂಡಿಕೆ ಆಕರ್ಷಿಸಲು ಕೇಂದ್ರದ ಮಾಸ್ಟರ್ ಪ್ಲಾನ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂ.28 ರಿಂದ ಜು. 01ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ

(ನ್ಯೂಸ್‌ ಕಡಬ) newskadaba.com, ಜೂ.04: ಜಿಲ್ಲೆಯಲ್ಲಿ ಜೂನ್‌ 28 ರಿಂದ ಜುಲೈ 01 ರವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪೋಷಕರು ತಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್‌.ಅನುರಾಧ ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಟಾಸ್ಕ್‌ ಪೋರ್ಸ್‌ ಸಮಿತಿ ಸಭೆಯ

ಜೂ.28 ರಿಂದ ಜು. 01ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top