ಬ್ರೇಕಿಂಗ್ ನ್ಯೂಸ್

ಡಿ ಕೆ ಶಿವಕುಮಾರ್ ನೇತೃತ್ವ ಸರ್ಕಾರದಲ್ಲಿ ಮೊದಲ ಹಂತದ ಸಂಪುಟ ರಚನೆ: ಸಿದ್ದರಾಮಯ್ಯ ನಿಷ್ಠಾವಂತರಿಗೆ ಮಣೆ

(ನ್ಯೂಸ್‌ ಕಡಬ) newskadaba.com, ಜೂ.04: ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಿರಿಯ ಸಚಿವರಾದ ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್ ಹಾಗೂ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಈ ಬಾರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮೊದಲ ಹಂತದ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ. ಮೊದಲ ಹಂತದ ಸಚಿವ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಒಬ್ಬ ಮಹಿಳಾ ಶಾಸಕರಿಗೂ ಸಚಿವ ಸ್ಥಾನ ನೀಡಲು ವಿಫಲವಾಗಿದೆ. ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರ ಹೆಸರು ಸಂಭಾವ್ಯ […]

ಡಿ ಕೆ ಶಿವಕುಮಾರ್ ನೇತೃತ್ವ ಸರ್ಕಾರದಲ್ಲಿ ಮೊದಲ ಹಂತದ ಸಂಪುಟ ರಚನೆ: ಸಿದ್ದರಾಮಯ್ಯ ನಿಷ್ಠಾವಂತರಿಗೆ ಮಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಮತ್ತೆ ಇಳಿಕೆ- ಬೆಳ್ಳಿ ಬೆಲೆ ತಟಸ್ಥ

(ನ್ಯೂಸ್‌ ಕಡಬ) newskadaba.com, ಜೂ.04: ತೈಲ ಬೆಲೆಗಳು ಭಾರಿ ಏರಿಕೆಯಾಗಿವೆ. ಇದರಿಂದ ಡಾಲರ್ ಮೌಲ್ಯವೂ ಬಲಗೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗಳ ಈ ಬೆಳವಣಿಗೆಗಳು ಚಿನ್ನ ಬೆಳ್ಳಿ ಬೆಲೆ ಮೇಲೆ ಒತ್ತಡ ಸೃಷ್ಟಿಸಿದ್ದು ಬೆಲೆ ಇಳಿಕೆಗೆ ಕಾರಣವಾಗಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 4 2026 ಗುರುವಾರದಂದು, 24 ಕ್ಯಾರೆಟ್ 10 ಗ್ರಾಂ ಬೆಲೆ 1,56,110 ರೂಪಾಯಿ ದಾಖಲಾಗಿದೆ. 1 ಗ್ರಾಂ ಬೆಲೆ, 15,611 ರೂ ದಾಖಲಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನದ

ಚಿನ್ನದ ದರದಲ್ಲಿ ಮತ್ತೆ ಇಳಿಕೆ- ಬೆಳ್ಳಿ ಬೆಲೆ ತಟಸ್ಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನಾರೋಗ್ಯ ಪೀಡಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟು ಹೋದ ಪುತ್ರ!

(ನ್ಯೂಸ್‌ ಕಡಬ) newskadaba.com, ಜೂ.04: ಹೆತ್ತ ತಾಯಿಯನ್ನೇ ಕಾಡಿನಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ತಾಯಿಯನ್ನು ಪುತ್ರ ಕಾಡಿನ ಮಧ್ಯೆ ಬಿಟ್ಟು ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರ ಸಮಯೋಚಿತ ನೆರವಿನಿಂದ ಮಹಿಳೆ ರಕ್ಷಿಸಲ್ಪಟ್ಟಿದ್ದಾರೆ. ಮಾಹಿತಿಯ ಪ್ರಕಾರ, ಗೋಕಾಕ್ ಮೂಲದ ಸಂತೋಷ್ ಕಟ್ಟಿ ಎಂಬಾತ ಜೂನ್ 2ರಂದು ಸವದತ್ತಿ ತಾಲೂಕಿನ ಮುನವಳ್ಳಿ ಸಮೀಪದ ಅರಣ್ಯ ಪ್ರದೇಶಕ್ಕೆ ತನ್ನ ತಾಯಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿ ಅಲ್ಲಿಯೇ ಬಿಟ್ಟು ಬಂದಿದ್ದಾನೆ

ಅನಾರೋಗ್ಯ ಪೀಡಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟು ಹೋದ ಪುತ್ರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳಕ್ಕೆ ಮುಂಗಾರು ಪ್ರವೇಶ- ಕರ್ನಾಟಕಕ್ಕೂ ಭಾರೀ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com, ಜೂ.04: ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು ಗಾಳಿಯಯನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಇದರ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಯೆಲ್ಲೋ

ಕೇರಳಕ್ಕೆ ಮುಂಗಾರು ಪ್ರವೇಶ- ಕರ್ನಾಟಕಕ್ಕೂ ಭಾರೀ ಮಳೆಯ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಕೆ ಶಿವಕುಮಾರ್ ಸಂಪುಟದಲ್ಲಿ ಯುಟಿ ಖಾದರ್, ಕೆಜೆ ಜಾರ್ಜ್ ಸೇರಿದಂತೆ 14 ಮಂದಿ ಪ್ರಮಾಣವಚನ

(ನ್ಯೂಸ್‌ ಕಡಬ) newskadaba.com,  ಜೂ.03: ಕರ್ನಾಟಕದ ಹೊಸ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆಗೆ ವೇದಿಕೆ ಸಜ್ಜಾಗಿದ್ದು, ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಯಕತ್ವ ಪರಿವರ್ತನೆಯ ಜೊತೆಗೆ, ಕಾಂಗ್ರೆಸ್ ಪಕ್ಷವು ಸಚಿವರ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಹೊಸ ಮುಖ್ಯಮಂತ್ರಿಯೊಂದಿಗೆ  14 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೇಶಾದ್ಯಂತದ ಹಿರಿಯ ಕಾಂಗ್ರೆಸ್ ನಾಯಕರು ಪ್ರಮುಖ ರಾಜಕೀಯ ಕಾರ್ಯಕ್ರಮಕ್ಕಾಗಿ ಬರುವ ನಿರೀಕ್ಷೆಯಿರುವ ಲೋಕ ಭವನದಲ್ಲಿ ನಿಗದಿಯಾಗಿರುವ ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಈ ಅನುಮೋದನೆಗಳು

ಡಿಕೆ ಶಿವಕುಮಾರ್ ಸಂಪುಟದಲ್ಲಿ ಯುಟಿ ಖಾದರ್, ಕೆಜೆ ಜಾರ್ಜ್ ಸೇರಿದಂತೆ 14 ಮಂದಿ ಪ್ರಮಾಣವಚನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ!

(ನ್ಯೂಸ್‌ ಕಡಬ) newskadaba.com,  ಜೂ.03 ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ. ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ

ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

CWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

(ನ್ಯೂಸ್‌ ಕಡಬ) newskadaba.com,  ಜೂ.03 ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ನೇಮಕ ಮಾಡಿದೆ. CWC ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಮಿತಿ. ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಿತಿ ಇದಾಗಿದೆ. ದೇಶದ್ಯಾಂತ ಇರುವ ಪ್ರಮುಖ ನಾಯಕರನ್ನು ಈ ಸಮಿತಿಯಲ್ಲಿ ಸದಸ್ಯರಾಗಿಸಿದೆ. ಈ ಸಮಿತಿಯಲ್ಲಿ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವ ಮೂಲಕ ಕಾಂಗ್ರೆಸ್‌ ಪ್ರಮೋಷನ್ ನೀಡಿದೆ.

CWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇರಾನ್-ಅಮೆರಿಕ ಸಂಘರ್ಷ ತೀವ್ರ: ಯುಎಸ್ ನೆಲೆಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ ಆರೋಪ

(ನ್ಯೂಸ್‌ ಕಡಬ) newskadaba.com,  ಜೂ.03 ತೆಹ್ರಾನ್/ಕುವೈತ್,:ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಇರಾನ್ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿದೆ ಎಂಬ ವರದಿಗಳು ಹೊರಬಿದ್ದಿವೆ. ಕೆಶ್ಮ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಅಮೆರಿಕ ಸೇನೆ ಈ ವರದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ತನ್ನ ನೆಲೆಗಳ ಮೇಲೆ ಯಾವುದೇ ಯಶಸ್ವಿ ದಾಳಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ಮತ್ತೊಂದೆಡೆ, ಕುವೈತ್‌ನ ಹಲವು ಪ್ರದೇಶಗಳಲ್ಲಿ ಭಾರಿ

ಇರಾನ್-ಅಮೆರಿಕ ಸಂಘರ್ಷ ತೀವ್ರ: ಯುಎಸ್ ನೆಲೆಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಜೂ.03 ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಖಚಿತವಾದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್‌ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಲೋಕಭವನಕ್ಕೆ ತೆರಳಿ ಗವರ್ನರ್ ಥಾವರ್‌ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾದ ಯು.ಟಿ. ಖಾದರ್, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ. ಜೊತೆಗೆ ಸ್ಪೀಕರ್ ಆಗಿ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಇಂದು ಪದಗ್ರಹಣ; ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ

(ನ್ಯೂಸ್‌ ಕಡಬ) newskadaba.com,  ಜೂ.03 :  ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಇಂದು ಪದಗ್ರಹಣ; ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ ಸುಬ್ರಹ್ಮಣ್ಯ, ಜೂ. 3: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರ ಯಶಸ್ವಿ ಆಡಳಿತ ಹಾಗೂ ರಾಜ್ಯದ ಸಮೃದ್ಧಿಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ನೆರವೇರಿಸಲಾಯಿತು.   ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಅರವಿಂದ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಇಂದು ಪದಗ್ರಹಣ; ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top