ಬ್ರೇಕಿಂಗ್ ನ್ಯೂಸ್

ಕೊರೋನ ಸೋಂಕು ಸಂಪೂರ್ಣ ನಿರ್ನಾಮಕ್ಕೆ ಡಿಸೆಂಬರ್‌ ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ

ಬೆಂಗಳೂರು, ಎ.9: ಕೊರೋನ ವೈರಸ್‌ ಸಂಪೂರ್ಣ ನಿರ್ನಾಮ ಆಗುವವರೆಗೂ ಅಂದರೆ ಕನಿಷ್ಠ ಮುಂದಿನ 7-8 ತಿಂಗಳು ಮುನ್ನೆಚ್ಚರಿಕೆ ವಹಿಸಿ ಸಹಕರಿಸುವಂತೆ ಉಪ ಮುಖ್ಯಮಂತ್ರಿ ಡಾ. ಸಿ ಎನ್‌ ಅಶ್ವತ್ಥನಾರಾಯಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಬಿಬಿಎಂಪಿಯ ಪೌರ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಮಲ್ಲೇಶ್ವರದಲ್ಲಿ ಪಡಿತರ ವಿತರಣೆ ಮಾಡಿದ ಡಾ. ಅಶ್ವತ್ಥನಾರಯಣ ಅವರು ಸುದ್ದಿಗಾರರ ಜತೆ ಮಾತನಾಡಿದರು. “ಪ್ರಸ್ತುತ ಸಭೆ, ಸಮಾರಂಭಗಳನ್ನು ಆಯೋಜಿಸದೆ ನಾಗರಿಕರೂ ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ. ಆದರೆ ವೈರಸ್‌ ಸಂಪೂರ್ಣವಾಗಿ ನಿರ್ಮೂಲನೆ ಆಗುವವರೆಗೂ ಅಂದರೆ ಮುಂದಿನ […]

ಕೊರೋನ ಸೋಂಕು ಸಂಪೂರ್ಣ ನಿರ್ನಾಮಕ್ಕೆ ಡಿಸೆಂಬರ್‌ ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಡಿನಿಂದ ಬಂದು ಮನೆಯ ಶೆಡ್ ನಲ್ಲಿ ಅವಿತ ಕಾಳಿಂಗ ➤ ಅರಣ್ಯಾಧಿಕಾರಿಗಳ ಸಹಕಾರದಲ್ಲಿ ಮತ್ತೆ ಕಾಡಿಗೆ

(ನ್ಯೂಸ್ ಕಡಬ) newskadaba.com ಕಡಬ, ಎ.07. ಇಲ್ಲಿನ ಬಂಟ್ರ ಗ್ರಾಮದ ಕೋಡಂದೂರು ಸಮೀಪದ ಮನೆಯೊಂದರ ಶೆಡ್ ನಲ್ಲಿ ಅವಿತು ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಅರಣ್ಯ ಅಧಿಕಾರಿಗಳ ಸಹಕಾರದಿಂದ ಹಿಡಿದು ಕಾಡಿಗೆ ಬಿಡಲಾಯಿತು. ಮಂಗಳವಾರ ಸಂಜೆ ಕೋಡಂದೂರು ನಿವಾಸಿ ಲತೀಫ್ ಎಂಬವರ ಮನೆಯ ಸಮೀಪದ ಶೆಡ್ ಗೆ ಕಾಳಿಂಗ ಸರ್ಪವೊಂದು ನುಗ್ಗಿದೆ. ತಕ್ಷಣವೇ ಅರಣ್ಯ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹಾವನ್ನು ಹಿಡಿದು ಅರಣ್ಯಕ್ಕೆ ಬಿಡುವ ಕಾರ್ಯಾಚರಣೆ ಕೈಗೊಂಡರು. ಹಾವು ಹಿಡಿಯುವಲ್ಲಿ

ಕಾಡಿನಿಂದ ಬಂದು ಮನೆಯ ಶೆಡ್ ನಲ್ಲಿ ಅವಿತ ಕಾಳಿಂಗ ➤ ಅರಣ್ಯಾಧಿಕಾರಿಗಳ ಸಹಕಾರದಲ್ಲಿ ಮತ್ತೆ ಕಾಡಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೆನ್ಲಾಕ್‌ನಲ್ಲಿ ಕೊರೋನ ಪರೀಕ್ಷೆ ಪ್ರಯೋಗಾಲಯ ಅಧಿಕೃತ ಆರಂಭ

ಇನ್ಮುಂದೆ ಕೆಲವೇ ಗಂಟೆಗಳಲ್ಲಿ ವರದಿ ಲಭ್ಯ ಮಂಗಳೂರು, ಎ.7: ಇಲ್ಲಿನ ಜಿಲ್ಲಾಸ್ಪತ್ರೆ ವೆನ್ಲಾಕ್‌ನಲ್ಲಿ ಕೊರೋನ ಪರೀಕ್ಷಾ ಪ್ರಯೋಗಾಲಯ ಅಧಿಕೃತವಾಗಿ ಆರಂಭಗೊಂಡಿದೆ. ವೆನ್ಲಾಕ್‌ನಲ್ಲಿ ಆರಂಭಿಸಲಾಗಿರುವ ವೈರಾಣು ಸಂಶೋಧನಾ ಮತ್ತು ರೋಗ ಪರೀಕ್ಷಾ ಪ್ರಯೋಗಾಲಯವು ಸರಕಾರದಿಂದ ಎಲ್ಲ ರೀತಿಯ ಪರಿಶೀಲನೆಗೆ ಒಳಪಟ್ಟು ಸುಸೂತ್ರ ಕಾರ್ಯಾರಂಭಕ್ಕೆ ಅನುಮತಿ ದೊರಕಿದೆ. ಹೀಗಾಗಿ ಮಹಾಮಾರಿ ಕೊರೋನ ಸೊಂಕಿನ ಪರೀಕ್ಷಾ ವರದಿ ಬೆಂಗಳೂರು, ಶಿವಮೊಗ್ಗದಿಂದ ಬರುವಿಕೆಗಾಗಿ ಕಾಯುವುದಕ್ಕೆ ಇನ್ಮುಂದೆ ಬ್ರೇಕ್ ಬೀಳಲಿದ್ದು, ತತ್‌ಕ್ಷಣವೇ ವರದಿ ಲಭ್ಯವಾಗಲಿದೆ. ಮಂಗಳೂರಿನಲ್ಲಿ ಕೊರೋನ ಸಹಿತ ವೈರಾಣು ಪತ್ತೆ ಪ್ರಯೋಗಾಲಯ ಆರಂಭಕ್ಕೆ

ವೆನ್ಲಾಕ್‌ನಲ್ಲಿ ಕೊರೋನ ಪರೀಕ್ಷೆ ಪ್ರಯೋಗಾಲಯ ಅಧಿಕೃತ ಆರಂಭ Read More »

ಬ್ರೇಕಿಂಗ್ ನ್ಯೂಸ್

ಮಲಯಾಳಂ ಹಾಸ್ಯ ನಟ ಶಶಿ ಕಳಿಂಗ ನಿಧನ

ಕೋಝಿಕ್ಕೋಡ್, ಎ.7: ರಂಗಭೂಮಿಯ ಜನಪ್ರಿಯ ನಟ, ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ನಟ ಶಶಿ ಕಳಿಂಗ ಅಲಿಯಾಸ್ ವಿ. ಚಂದ್ರಕುಮಾರ್ (59) ಮಂಗಳವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. 2009ರಲ್ಲಿ ಬಿಡುಗಡೆಯಾದ ಕೇರಳ ಕೆಫೆ ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ್ದರು. ಈ ವರೆಗೆ ಸುಮಾರು 30 ಮಲಯಾಳಂ ಸಿನಿಮಾದಲ್ಲಿ ನಟಿಸಿದ್ದರು. 2010ರಲ್ಲಿ ಬಿಡುಗಡೆಯಾಗಿದ್ದ ‘‘ಪ್ರಾಂಚಿಯೆಟ್ಟನ್ ಆ್ಯಂಡ್ ದ ಸೈಂಟ್’’ ಸಿನಿಮಾದಲ್ಲಿ ಕಾಳಿಂಗ ನಟನೆ ಅತ್ಯುತ್ತಮವಾಗಿತ್ತು. ಈ ಸಿನಿಮಾದಲ್ಲಿ ಸೂಪರ್

ಮಲಯಾಳಂ ಹಾಸ್ಯ ನಟ ಶಶಿ ಕಳಿಂಗ ನಿಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾಕ್ ಡೌನ್ ಉಲ್ಲಂಘಿಸುವವರಿಗೆ ಕಾದಿದೆ ಲಾಠಿಯೇಟಿನ ಶಿಕ್ಷೆ ➤ ಮತ್ತೆ ಲಾಠಿ ಬಳಸಲು ಪೊಲೀಸರಿಗೆ ಸರಕಾರದಿಂದ ಫುಲ್‌ ಪರ್ಮಿಷನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.07. ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳಿಗಾಗಿ ಹೊರ ಬರುವ ಸಾರ್ವಜನಿಕರಿಗೆ ಪೊಲೀಸರು ಲಾಠಿಯೇಟು ನೀಡುತ್ತಿದ್ದಾರೆಂಬ ಆರೋಪ ವ್ಯಕ್ತವಾಗಿದ್ದರಿಂದ ಲಾಠಿ ದೂರ ಇಟ್ಟು ಮನವಿಯ ಮೂಲಕ ಕರ್ತವ್ಯ ನಿರ್ವಹಿಸುವಂತೆ ಪೊಲೀಸರಿಗೆ ರಾಜ್ಯ ಸರಕಾರವು ಈ ಹಿಂದೆ ನಿರ್ದೇಶನ ನೀಡಿತ್ತು. ಆದರೆ ಪೊಲೀಸರ ಮನವಿಯನ್ನು ಕ್ಯಾರೇ ಅನ್ನದ ಸಾರ್ವಜನಿಕರು ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿ ಅನಗತ್ಯವಾಗಿ ಮನೆಯಿಂದ ಹೊರಬರುವುದನ್ನು ಮನಗಂಡ ರಾಜ್ಯ ಸರಕಾರವು ಸರ್ವ ಪಕ್ಷಗಳ ಸಭೆಯಲ್ಲಿ ಚರ್ಚೆ ನಡೆಸಿ ಪೊಲೀಸರಿಗೆ ಫುಲ್

ಲಾಕ್ ಡೌನ್ ಉಲ್ಲಂಘಿಸುವವರಿಗೆ ಕಾದಿದೆ ಲಾಠಿಯೇಟಿನ ಶಿಕ್ಷೆ ➤ ಮತ್ತೆ ಲಾಠಿ ಬಳಸಲು ಪೊಲೀಸರಿಗೆ ಸರಕಾರದಿಂದ ಫುಲ್‌ ಪರ್ಮಿಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಪರಿಸರದಲ್ಲಿ ಉತ್ತಮ ಮಳೆ ➤ ಇಳೆಗೆ ತಂಪೆರೆದ ಮಳೆರಾಯ

(ನ್ಯೂಸ್ ಕಡಬ) newskadaba.com ಕಡಬ, ಎ.07. ಕಡಬ ಪರಿಸರದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಉತ್ತಮ ಮಳೆಯಾಗಿದ್ದು, ಬಿಸಿಲಿನ ಬೇಗೆಗೆ ಬೆಂದು ಕೆಂಡವಾಗಿದ್ದ ಭೂಮಿಯನ್ನು ತಂಪಾಗಿಸಿದೆ. ಕಳೆದೆರಡು ದಿನಗಳಿಂದ ಕಡಬ ಪರಿಸರದ ಕುಕ್ಕೇ ಸುಬ್ರಹ್ಮಣ್ಯ, ಬಿಳಿನೆಲೆ, ಪಂಜ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಸ್ವಲ್ಪ ಮಟ್ಟಿಗೆ ಶೆಖೆಯು ಕಡಿಮೆಯಾಗಿದೆ. ಮಂಗಳವಾರ ಬೆಳಗಿನ ಜಾವ ಮತ್ತೆ ಉತ್ತಮ ಮಳೆಯಾಗಿದ್ದು, ಹವಾಮಾನ ಇಲಾಖೆಯು ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಕಡಬ ಪರಿಸರದಲ್ಲಿ ಉತ್ತಮ ಮಳೆ ➤ ಇಳೆಗೆ ತಂಪೆರೆದ ಮಳೆರಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ

ಬೆಂಗಳೂರು, ಎ.6: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂಧಿಸದೆ ಅವರು ಸೋಮವಾರ ಸಂಜೆ ನಿಧರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬುಲೆಟ್ ಪ್ರಕಾಶ್ ಅವರು ಬಳಲುತ್ತಿದ್ದರು. ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಬುಲೆಟ್ ಪ್ರಕಾಶ್ ನಟಿಸಿದ್ದಾರೆ. ಸ್ವಲ್ಪ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಅವರು

breaking news ಕನ್ನಡ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೋಮವಾರ 12 ಮಂದಿಗೆ ಕೊರೋನ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೇರಿಕೆ

ಮೈಸೂರು, ಎ.6: ರಾಜ್ಯದಲ್ಲಿ ಸೋಮವಾರ ಹೊಸದಾಗಿ 12 ಮಂದಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 163ಕ್ಕೇರಿದೆ. ಈ ಪೈಕಿ ಮೈಸೂರು ಜಿಲ್ಲೆಯಲ್ಲಿ 7 ಸೋಂಕಿತರು ಪತ್ತೆಯಾಗಿದ್ದರೆ, ಬಾಗಲಕೋಟೆಯಲ್ಲಿ ಇಬ್ಬರಿಗೆ ಕೊರೋನ ಪಾಸಿಟಿವ್ ಆಗಿದೆ. ಹಾಗೆಯೇ ಬೆಂಗಳೂರು ನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯ ಹಾಗೂ ಕೇರಳ ಮೂಲದ ತಲಾ ಒಬ್ಬರಲ್ಲಿ ಕೊರೋನ ಸೋಂಕು ಹರಡಿರುವುದು ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ163ಕ್ಕೆ ಏರಿದೆ.

ಸೋಮವಾರ 12 ಮಂದಿಗೆ ಕೊರೋನ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೋನ ಹೆಸರಲ್ಲಿ ಪ್ರಚೋದನಕಾರಿ, ಸುಳ್ಳು ಸುದ್ದಿ ಹರಡಿದಲ್ಲಿ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ

ಮಂಗಳೂರು, ಎ.6: ಇತ್ತೀಚಿನ ದಿನಗಳಲ್ಲಿ ದ.ಕ. ಜಿಲ್ಲೆಯಾದ್ಯಂತ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಮತ್ತು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಈಗಾಗಲೇ ಕೋಮು ಭಾವನೆ ಕೆರಳಿಸುವ ಮೂಲಕ ಒಂದು ಕೋಮಿನ ವಿರುದ್ಧ ಅಪಪ್ರಚಾರ ಮತ್ತು ಸುಳ್ಳು ಸುದ್ದಿಗಳನ್ನು ಹರಿದಾಡುತ್ತಿರುವ ಆರೋಪದ ಮೇಲೆ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ

ಕೊರೋನ ಹೆಸರಲ್ಲಿ ಪ್ರಚೋದನಕಾರಿ, ಸುಳ್ಳು ಸುದ್ದಿ ಹರಡಿದಲ್ಲಿ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಾಕ್ ಡೌನ್ ‌ಉಲ್ಲಂಘಿಸುವವರ ವಿರುದ್ಧ ಮುಂದುವರಿದ ಕಾರ್ಯಾಚರಣೆ ➤ ಕಡಬದಲ್ಲಿ ಬೆಳ್ಳಂಬೆಳಗ್ಗೆ ಹಲವು ಕಾರುಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.06. ಕಳೆದೆರಡು ದಿನಗಳಿಂದ ಲಾಕ್ ಡೌನ್ ಉಲ್ಲಂಘನೆ ಮಾಡುತ್ತಿದ್ದ ಹಲವು ಖಾಸಗಿ ಕಾರುಗಳನ್ನು ವಶಪಡಿಸಿಕೊಂಡಿದ್ದ ಕಡಬ ಪೊಲೀಸರು, ಸೋಮವಾರ ಬೆಳಗ್ಗಿನಿಂದ ಮತ್ತೆ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಲಾಕ್ ಡೌನ್ ವೇಳೆಯಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು ಎಂಬ ಸೂಚನೆಯಿದ್ದರೂ, ಜಿಲ್ಲಾಧಿಕಾರಿಯವರ ಆದೇಶವನ್ನು ಮೀರಿ ಸಾರ್ವಜನಿಕರು ಖಾಸಗಿ ವಾಹನಗಳಲ್ಲಿ ಆಗಮಿಸುತ್ತಿದ್ದರು. ಅಂತಹವರಿಗೆ ಶಾಕ್ ನೀಡಿರುವ ಪೊಲೀಸರು ಕಾನೂನು ಉಲ್ಲಂಘಿಸಿದ ಹಲವು ಖಾಸಗಿ ವಾಹನಗಳನ್ನು ಈಗಾಗಲೇ ಮುಟ್ಟುಗೋಲು ಹಾಕಿಕೊಂಡಿದ್ದರು. ಸೋಮವಾರ ಕೂಡಾ ಕಾರ್ಯಾಚರಣೆ ಮುಂದುವರಿದಿದ್ದು, ಮತ್ತೆ ಹಲವರಿಗೆ

ಲಾಕ್ ಡೌನ್ ‌ಉಲ್ಲಂಘಿಸುವವರ ವಿರುದ್ಧ ಮುಂದುವರಿದ ಕಾರ್ಯಾಚರಣೆ ➤ ಕಡಬದಲ್ಲಿ ಬೆಳ್ಳಂಬೆಳಗ್ಗೆ ಹಲವು ಕಾರುಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top