ಬ್ರೇಕಿಂಗ್ ನ್ಯೂಸ್

ಕೊರೋನ ವೈರಸ್‌ಗೆ ಅಮೆರಿಕಾದಲ್ಲಿ ಒಂದೇ ದಿನ 1400 ಕ್ಕೂ ಅಧಿಕ ಸಾವು

ವಾಶಿಂಗ್ಟನ್, ಎ.4:  ಕೊರೋನ ವೈರಸ್ ಗೆ ಅಮೆರಿಕಾ ಸಂಪೂರ್ಣ ತತ್ತರಿಸಿ ಹೋಗಿದ್ದು, ಅಮೆರಿಕಾದಲ್ಲಿ 24 ಗಂಟೆಯಲ್ಲಿ 1,400ಕ್ಕೂ ಅಧಿಕ ಮಂದಿ ಸಾವನ್ನಪಿರುವ ಬಗ್ಗೆ ವರದಿಯಾಗಿದೆ. ಚೀನಾದ ವುಹಾನ್‌ನಿಂದ ಪ್ರಾರಂಭವಾದ ಕೊರೋನ ವೈರಸ್ ಅಮೆರಿಕದಲ್ಲಿ ಹಾನಿಯನ್ನುಂಟು ಮಾಡುತ್ತಿದೆ. ಅಮೆರಿಕಾದಲ್ಲಿ ಕೊರೋನ ವೈರಸ್‌ ಸೋಂಕಿತರ ಸಂಖ್ಯೆ 3 ಲಕ್ಷಕ್ಕೇರಿದೆ. ವಿಶ್ವದಲ್ಲೇ ಸೋಂಕಿತರ ಸಂಖ್ಯೆ ಅಮೆರಿಕಾದಲ್ಲಿ ಹೆಚ್ಚಾಗ್ತಿದೆ. 24 ಗಂಟೆಗಳಲ್ಲಿ ಕೊರೋನ ವೈರಸ್‌ನಿಂದಾದ ಸಾವಿನಲ್ಲೂ ಅಮೆರಿಕಾ ದಾಖಲೆ ಬರೆದಿದೆ. ಅಮೆರಿಕದಲ್ಲಿ ಕೊರೋನ ವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 7406 ಕ್ಕೆ ತಲುಪಿದೆ. ಅಮೆರಿಕದಲ್ಲಿ […]

ಕೊರೋನ ವೈರಸ್‌ಗೆ ಅಮೆರಿಕಾದಲ್ಲಿ ಒಂದೇ ದಿನ 1400 ಕ್ಕೂ ಅಧಿಕ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೀಟ್​ ಪಠ್ಯಕ್ರಮದಲ್ಲಿ ಬದಲಾವಣೆಯಿಲ್ಲ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸ್ಪಷ್ಟನೆ

ಹೊಸದಿಲ್ಲಿ, ಎ.4: ವೈದ್ಯಕೀಯ ಪದವಿ ಕೋರ್ಸ್​ಗಳಿಗೆ ಪ್ರವೇಶ ಬಯಸುವ ಆಕಾಂಕ್ಷಿಗಳು ಬರೆಯಬೇಕಾದ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್​) ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಪರೀಕ್ಷೆಗಳನ್ನು ಸಂಘಟಿಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್​ಟಿಎ) ಸ್ಪಷ್ಟಪಡಿಸಿದೆ. ಪಠ್ಯಕ್ರಮ ಬದಲಾಗಿದೆ ಎಂದು ಸುದ್ದಿ ಹರಿದಾಡುತ್ತಿರುವುದು ಏಜೆನ್ಸಿ ಗಮನಕ್ಕೆ ಬಂದಿದೆ. ಇಂಥ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಎಜೆನ್ಸಿ ಮನವಿ ಮಾಡಿದೆ. ಇಷ್ಟಕ್ಕೂ ಎನ್​ಟಿಎ ಪಠ್ಯಕ್ರಮವನ್ನು ನಿರ್ಧರಿಸುವ ಸಂಸ್ಥೆಯಲ್ಲ. ಭಾರತೀಯ ವೈದ್ಯಕೀಯ ಮಂಡಳಿ ರೂಪಿಸುವ ಪಠ್ಯಕ್ರಮದ ಲಿಂಕ್​ಅನ್ನು ಮಾತ್ರ ಎನ್​ಟಿಎ

ನೀಟ್​ ಪಠ್ಯಕ್ರಮದಲ್ಲಿ ಬದಲಾವಣೆಯಿಲ್ಲ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸ್ಪಷ್ಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾಕ್‌ಡೌನ್ ಉಲ್ಲಂಘಿಸಿ ಸ್ನೇಹಿತರ ಜತೆ ಜಾಲಿರೈಡ್: ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ

ಬೆಂಗಳೂರು, ಎ.4: ಕನ್ನಡದ ನಟಿ ಶರ್ಮಿಳಾ ಮಾಂಡ್ರೆ ಅವರ ಕಾರು ಶನಿವಾರ ನಸುಕಿನಲ್ಲಿ ಅಪಘಾತಕ್ಕೀಡಾಗಿದೆ. ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಶರ್ಮಿಳಾ ಮಾಂಡ್ರೆ ಜಾಲಿ ರೈಡ್‌ಗೆ ಹೋಗುತ್ತಿದ್ದರು ಎನ್ನಲಾಗಿದೆ. ಲಾಕ್‌ಡೌನ್ ಕಾರಣದಿಂದ ಅನೇಕ ಕಡೆ ವಾಹನ ಓಡಾಡಕ್ಕೆ ನಿರ್ಬಂಧ ವಿಧಿಸಲಾಗಿದೆ. ತೀರಾ ಅನಿವಾರ್ಯ ಪರಿಸ್ಥಿತಿಯಲ್ಲದೆ ವಾಹನಗಳನ್ನು ಹೊರಗೆ ತೆಗೆಯಬೇಡಿ ಎಂದು ಸೂಚಿಸಲಾಗಿದೆ. ತರಕಾರಿ, ದಿನಸಿಗಳನ್ನು ಖರೀದಿ ಮಾಡಲು ನಡೆದುಕೊಂಡೇ ಹೋಗುವಂತೆ ಹೇಳಲಾಗಿದೆ. ಆದರೂ ಜನರು ಕಾರಣಗಳಿಲ್ಲದೆಯೂ ವಾಹನಗಳಲ್ಲಿ ಓಡಾಡುತ್ತಿರುವುದು ಮುಂದುವರಿದಿದೆ. ಆದರೆ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಟಿ

ಲಾಕ್‌ಡೌನ್ ಉಲ್ಲಂಘಿಸಿ ಸ್ನೇಹಿತರ ಜತೆ ಜಾಲಿರೈಡ್: ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಾಕ್ ಡೌನ್ ಉಲ್ಲಂಘಿಸಿದ ವಾಹನ ಮಾಲಿಕರಿಗೆ ಬಿಗ್ ಶಾಕ್ ➤ ಬೆಳ್ಳಂಬೆಳಗ್ಗೆ ಕಡಬ ಪೊಲೀಸರಿಂದ ಹಲವು ವಾಹನಗಳ ಸೀಝ್

(ನ್ಯೂಸ್ ಕಡಬ) newskadaba.com ಕಡಬ, ಎ.03. ಲಾಕ್ ಡೌನ್ ಉಲ್ಲಂಘನೆ ಮಾಡುತ್ತಿದ್ದ ಹಲವಯ ಖಾಸಗಿ ಕಾರುಗಳನ್ನು ವಶಪಡಿಸಿಕೊಂಡಿರುವ ಕಡಬ ಪೊಲೀಸರು ಅನಗತ್ಯ ತಿರುಗಾಡುವವರಿಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಲಾಕ್ ಡೌನ್ ವೇಳೆಯಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು ಎಂಬ ಸೂಚನೆಯಿದ್ದರೂ, ಸಾರ್ವಜನಿಕರು ಕಾನೂನನ್ನು ಉಲ್ಲಂಘಿಸುತ್ತಿದ್ದರು‌. ಅಂತಹವರಿಗೆ ಶಾಕ್ ನೀಡಿರುವ ಪೊಲೀಸರು ಹಲವು ಖಾಸಗಿ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಲಾಕ್ ಡೌನ್ ಉಲ್ಲಂಘಿಸಿದ ವಾಹನ ಮಾಲಿಕರಿಗೆ ಬಿಗ್ ಶಾಕ್ ➤ ಬೆಳ್ಳಂಬೆಳಗ್ಗೆ ಕಡಬ ಪೊಲೀಸರಿಂದ ಹಲವು ವಾಹನಗಳ ಸೀಝ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ

➤➤ ವೀಡಿಯೋ | Video ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ ➤ ಮಹಾಮಾರಿಗೆ ಸಡ್ಡುಹೊಡೆದ ಜನತೆ ವೀಡಿಯೋಗಾಗಿ??ಕ್ಲಿಕ್ ಮಾಡಿ

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ Read More »

ಬ್ರೇಕಿಂಗ್ ನ್ಯೂಸ್

ಕಡಬ: ಅನಗತ್ಯವಾಗಿ ತಿರುಗಾಡುತ್ತಿದ್ದ ಕಾರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.03. ಲಾಕ್ ಡೌನ್ ವೇಳೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತಾದರೂ ಈ ವೇಳೆ ಅನಗತ್ಯವಾಗಿ ತಿರುಗಾಡುತ್ತಿದ್ದ ಖಾಸಗಿ ವಾಹನವೊಂದನ್ನು ಕಡಬ ಪೊಲೀಸರು ಶುಕ್ರವಾರದಂದು ಮುಟ್ಟುಗೋಲು ಹಾಕಿಕೊಂಡಿದ್ದಾರೆ.   ಶುಕ್ರವಾರ ಮಧ್ಯಾಹ್ನದಿಂದ ಕಡಬ ಪರಿಸರದಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಹಲವೆಡೆ ನಾಕಾಬಂಧಿ ಹಾಕಲಾಗಿದೆ. ಈ‌ ನಡುವೆ ಅನಗತ್ಯವಾಗಿ ತಿರುಗಾಡುತ್ತಿದ್ದ ರಿಟ್ಝ್ ಕಾರನ್ನು ಕಡಬ ಪೊಲೀಸರು ಶುಕ್ರವಾರದಂದು ವಶಪಡಿಸಿಕೊಂಡಿದ್ದಾರೆ.

ಕಡಬ: ಅನಗತ್ಯವಾಗಿ ತಿರುಗಾಡುತ್ತಿದ್ದ ಕಾರು ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೇಂದ್ರ-ರಾಜ್ಯ ಸರಕಾರಗಳ ಯೋಜನೆ ಜಿಲ್ಲೆಗೆ ತಲುಪಿಲ್ಲ: ಐವನ್ ಡಿಸೋಜ ಆರೋಪ

ಮಂಗಳೂರು, ಎ.3: ಕೊರೋನ ವೈರಸ್ ಹರಡದಂತೆ ಲಾಕ್‌ಡೌನ್ ಮಾಡಿದ ನಂತರ ಕೇಂದ್ರ- ರಾಜ್ಯ ಸರಕಾರದಿಂದ ಯಾವುದೇ ಯೋಜನೆಗಳು ಫಲಾನುಭವಿಗಳಿಗೆ ತಲುಪಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದ್ದಾರೆ. ಪಡಿತರ ಅಂಗಡಿಗಳ ಮೂಲಕ 7 ಕೆಜಿ ಅಕ್ಕಿ, 7 ಕೆಜಿ ಗೋಧಿ, ಎರಡು ಕೆಜಿ ತೊಗರಿಬೇಳೆ ಕೊಡುವುದಾಗಿ ಸರಕಾರಗಳು ಘೋಷಣೆ ಮಾಡಿದ್ದವು. ಆದರೆ ಈಗ ಕೇವಲ 5 ಕೆಜಿ ಅಕ್ಕಿ ಮಾತ್ರ ನೀಡಲಾಗುತ್ತಿದೆ ಎಂದು ಹೇಳಿದರು. ಅಲ್ಲದೆ, ಪಿಂಚಣಿದಾರಿಗೆ ಮೂರು ತಿಂಗಳ ಪಿಂಚಣಿ ಹಣ, ರೈತರಿಗೆ

ಕೇಂದ್ರ-ರಾಜ್ಯ ಸರಕಾರಗಳ ಯೋಜನೆ ಜಿಲ್ಲೆಗೆ ತಲುಪಿಲ್ಲ: ಐವನ್ ಡಿಸೋಜ ಆರೋಪ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಲಕ್ಷಾಂತರ ರೂ. ಮೌಲ್ಯದ ಮದ್ಯ ಕಳವು

ಉಳ್ಳಾಲ, ಎ.3: ಇಲ್ಲಿನ ಎಂಎಸ್ ಐಎಲ್ ನ ವೈನ್ಸ್ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು 1 ಲಕ್ಷ ರೂ. ಮೌಲ್ಯದ ಮದ್ಯವನ್ನು ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಬೆಳಕಿಗೆ ಬಂದಿದೆ. ಪುರುಷೋತ್ತಮ್ ಪಿಲಾರ್ ಎಂಬವರಿಗೆ ಸೇರಿದ ವೈನ್ಸ್ ಅಂಗಡಿಯಲ್ಲಿ ಕಳವು ನಡೆದಿದೆ. ಶಟರ್ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಡಿಮೆ ಬೆಲೆಯ ಮದ್ಯ ಸೇರಿದಂತೆ ಅಧಿಕ ಬೆಲೆಯ ಮದ್ಯದ ಬಾಟಲಿಗಳನ್ನು ದರೋಡೆಗೈದಿದ್ದಾರೆ. ವೈನ್ಸ್ ಅಂಗಡಿಯೊಳಕ್ಕೆ ಸಿಸಿಟಿವಿ ಅಳವಡಿಸಲಾಗಿದೆ. ಆದರೆ ಚಾಣಾಕ್ಷತನ ತೋರಿಸಿರುವ ಕಳ್ಳರು ಸಿಸಿಟಿವಿ ದಾಖಲೆ ಹೊಂದಿರುವ

ಉಳ್ಳಾಲ: ಲಕ್ಷಾಂತರ ರೂ. ಮೌಲ್ಯದ ಮದ್ಯ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಸ್ಲಿಂ ಮುಖಂಡರ ಜೊತೆ ಸಿಎಂ ಯಡಿಯೂರಪ್ಪ ಸಭೆ: ವೈದ್ಯಕೀಯ ಸಿಬ್ಬಂದಿಗೆ ಸಹಕರಿಸಲು ಮನವಿ

ಬೆಂಗಳೂರು, ಎ.3: ದಿಲ್ಲಿಯ ನಿಝಾಮುದ್ದೀನ್ ಪ್ರದೇಶದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೆಲವರಲ್ಲಿ ಕೊರೋನ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಪರೀಕ್ಷೆ ಮಾಡಲು ಹೋದ ವೈದ್ಯಕೀಯ ಸಿಬ್ಬಂದಿ ಮೇಲೆ ಗುಂಪಿನ ದಾಳಿ ನಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ರಾಜ್ಯದ ಮುಸ್ಲಿಂ ಮುಖಂಡರು ಹಾಗೂ ಶಾಸಕರೊಂದಿಗೆ ಸಮಾಲೋಚನಾ ಸಭೆ ನಡೆಸಿದರು. ಸಭೆಯಲ್ಲಿ ಕೊರೋನ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದವರ ಸಹಕಾರ ಕುರಿತಂತೆ ಯಡಿಯೂರಪ್ಪ ಮನವಿ ಮಾಡಿ, ಕೊರೋನ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯೊಂದೇ

ಮುಸ್ಲಿಂ ಮುಖಂಡರ ಜೊತೆ ಸಿಎಂ ಯಡಿಯೂರಪ್ಪ ಸಭೆ: ವೈದ್ಯಕೀಯ ಸಿಬ್ಬಂದಿಗೆ ಸಹಕರಿಸಲು ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾಕ್ ಡೌನ್ ವೇಳೆ ಯಾವೆಲ್ಲಾ ವಾಹನಗಳು ಸಂಚರಿಸಬಹುದು..? ➤ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಏನಂತಾರೆ ಗೊತ್ತೇ..?

➤➤ ವೀಡಿಯೋ | Video ಲಾಕ್ ಡೌನ್ ವೇಳೆ ಯಾವೆಲ್ಲಾ ವಾಹನಗಳು ಸಂಚರಿಸಬಹುದು..? ➤ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಏನಂತಾರೆ ಗೊತ್ತೇ..? ವೀಡಿಯೋಗಾಗಿ??ಕ್ಲಿಕ್ ಮಾಡಿ

ಲಾಕ್ ಡೌನ್ ವೇಳೆ ಯಾವೆಲ್ಲಾ ವಾಹನಗಳು ಸಂಚರಿಸಬಹುದು..? ➤ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಏನಂತಾರೆ ಗೊತ್ತೇ..? Read More »

ಬ್ರೇಕಿಂಗ್ ನ್ಯೂಸ್
Scroll to Top