ಬ್ರೇಕಿಂಗ್ ನ್ಯೂಸ್

ಲಾಕ್‌ಡೌ‌ನ್ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು

ಬೆಂಗಳೂರು , ಮಾ.25: ದೇಶಾದ್ಯಂತ ಕೊರೋನ ವೈರಸ್‌ ನಿಯಂತ್ರಣಕ್ಕೆ ಲಾಕ್‌ ಡೌನ್‌ ಘೋಷಿಸಿದ್ದರೂ, ಲಾಕ್‌ ಡೌನ್‌ ಉಲ್ಲಂಘಿಸಿ ಜನರು ಅನಗತ್ಯವಾಗಿ ಓಡಾಡುತ್ತಿರುವ ಹಿನ್ನೆಲೆ ಪೊಲೀಸರು ಕೆಲವೆಡೆ ಲಾಠಿ ಚಾರ್ಜ್ ಮಾಡಿದ್ದಾರೆ.   ವಾಹನಗಳು ಲಾಕ್‌ ಡೌನ್‌ ಸಂದರ್ಭ ಅನಗತ್ಯವಾಗಿ ರಸ್ತೆಗಿಳಿದರೆ ಅಂತವರ ಲೈಸೆನ್ಸ್‌ ರದ್ದು ಮಾಡಲು ಉತ್ತರ ಕನ್ನಡ ಡಿಸಿ ಸೂಚಿಸಿದ್ದಾರೆ. ವಾಹನ ಸವಾರರ ಲೈಸೆನ್ಸ್ ರದ್ದು ಮಾಡಲು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಸೂಚನೆ ನೀಡಿದ್ದಾರೆ. ದಿನದಿಂದ ದಿನಕ್ಕೆ ಕೊರೋನ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಕೇಂದ್ರ […]

ಲಾಕ್‌ಡೌ‌ನ್ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಪ್ರಥಮ ಕೊರೋನ ಪಾಸಿಟಿವ್ ಪತ್ತೆ

ದುಬೈಯಿಂದ ಬಂದ ವ್ಯಕ್ತಿಗೆ ಕೊರೋನ ಸೋಂಕು ದೃಢ ಉಡುಪಿ, ಮಾ.25: ಕೊರೋನ ವೈರಸ್ ಸೋಂಕು ಉಡುಪಿಗೂ ಕಾಲಿಟ್ಟಿದೆ. 34 ವರ್ಷದ ವ್ಯಕ್ತಿ ಮಾರ್ಚ್ 18 ರಂದು ದುಬೈನಿಂದ ಉಡುಪಿಗೆ ಬಂದಿದ್ದು ಜ್ವರದ ಕಾರಣ ಮಾರ್ಚ್ 23 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ವರದಿಯಲ್ಲಿ ಕೊರೋನ ಇರುವುದು ತಿಳಿದು ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.  

ಉಡುಪಿ: ಪ್ರಥಮ ಕೊರೋನ ಪಾಸಿಟಿವ್ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Nalin Kumar kateel

ಮಂಗಳೂರು: ನಾಳೆಯಿಂದ ಎಲ್ಲವೂ ಬಂದ್, ಅಗತ್ಯ ವಸ್ತುಗಳ ಪೊರೈಕೆ ನಾವೇ ಮಾಡುತ್ತೇವೆ; ಸಂಸದ ನಳಿನ್

ಮಂಗಳೂರು, ಮಾ.25: ಕೊರೋನ ವೈರಸ್ ಹರಡದಂತೆ ತಡೆಕಟ್ಟಲು ದ.ಕ. ಜಿಲ್ಲಾದ್ಯಂತ ಸೆಕ್ಷನ್ 144ವಿಧಿಸಿದ್ದು, ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇದೇ ನೆಪದಲ್ಲಿ ಮಾರ್ಕೆಟ್‌ನಲ್ಲಿ ಗುಂಪು ಗುಂಪಾಗಿ ಬಂದು ವಸ್ತುಗಳನ್ನು ಖರೀಸುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನಾಳೆಯಿಂದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುವುದು. ಅಗತ್ಯ ವಸ್ತುಗಳನ್ನು ತಮ್ಮ ಮನೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಕೊರೋನ ವೈರಸ್ ಹರಡುವುದನ್ನು

ಮಂಗಳೂರು: ನಾಳೆಯಿಂದ ಎಲ್ಲವೂ ಬಂದ್, ಅಗತ್ಯ ವಸ್ತುಗಳ ಪೊರೈಕೆ ನಾವೇ ಮಾಡುತ್ತೇವೆ; ಸಂಸದ ನಳಿನ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನ: ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ

ಮಂಗಳೂರು, ಮಾ.24: ಕೊರೋನ ಶಂಕಿತರ ಹಾಗೂ ರೋಗಿಗಳ ಎಲ್ಲಾ ಮಾಹಿತಿ ಸಂಗ್ರಹಿಸಲು ಹಾಗೂ ಸಮನ್ವಯತೆ ಕಾಪಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಸಜ್ಜಿತ ಕಂಟ್ರೋಲ್ ರೂಂ ತೆರೆಯಲಾಗಿದೆ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರ ನಿರ್ದೇಶನದಂತೆ, ಕೆಎಎಸ್ ಅಧಿಕಾರಿಯಾಗಿರುವ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಅವರ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ಈ ಕಂಟ್ರೋಲ್ ರೂಂನಲ್ಲಿ ತರಭೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿದೇಶದಿಂದ ಬರುವ ಪ್ರಯಾಣಿಕರ ಮಾಹಿತಿ, ಬೇರೆ ವಿಮಾನ ನಿಲ್ದಾಣದಿಂದ ಜಿಲ್ಲೆಗೆ ಬಂದವರ ಮಾಹಿತಿ, ಅವರು ಸಂಪರ್ಕ ಹೊಂದಿದ ಪ್ರದೇಶಗಳು, ವ್ಯಕ್ತಿಗಳ ಮಾಹಿತಿಗಳನ್ನು

ಕೊರೋನ: ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವೆನ್ಲಾಕ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂಸದ ನಳಿನ್ ಕುಮಾರ್

ಮಂಗಳೂರು, ಮಾ.24: ದ.ಕ. ಜಿಲ್ಲಾಸ್ಪತ್ರೆ ವೆನ್ಲಾಕ್‌ಗೆ ಮಂಗಳವಾರ ಸಂಸದ ನಳಿನ್ ಕುಮಾರ್ ಕಟೀಲು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನ್ಲಾಕ್ ಬಗ್ಗೆ ಅಪಪ್ರಚಾರ ನಡೆಸಿರುವ ಹಿನ್ನೆಲೆಯಲ್ಲಿ ಸಂಸದರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನ್ಲಾಕ್ ಬಗ್ಗೆ ಅಪಪ್ರಚಾರ ನಡೆಸಿದ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಅಧಿವೇಶನದ ನಿಮಿತ್ತ ದಿಲ್ಲಿಯಲ್ಲಿ ಇದ್ದು ತಮ್ಮ ಲೋಕಸಭಾ

ವೆನ್ಲಾಕ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

BIG BREAKING NEWS ಮಂಗಳೂರಿನಲ್ಲಿ ಒಂದೇ ದಿನ ನಾಲ್ವರಿಗೆ ಕೊರೋನ ಪಾಸಿಟಿವ್

ಮಂಗಳೂರು, ಮಾ.24: ಮಾಹಮಾರಿ ಕೊರೋನ ಸೋಂಕು ದೇಶದ್ಯಾಂತ ತಲ್ಲಣ ಸೃಷ್ಟಿಸುತ್ತಿದ್ದು, ಮಂಗಳೂರಿನಲ್ಲಿ ಇಂದು ಒಂದೇ ದಿನ ನಾಲ್ವರಿಗೆ ಸೋಂಕು ದೃಢಪಟ್ಟಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸೋಂಕು ದೃಢಪಟ್ಟ ನಾಲ್ವರು ಕೇರಳದ ಕಾಸರಗೋಡು ಜಿಲ್ಲೆಯವರು ಎಂದು ತಿಳಿದು ಬಂದಿದೆ. ಈ ಪೈಕಿ ಮೂವರು ದುಬೈಯಿಂದ ಹಾಗೂ ಓರ್ವ ಸೌದಿಯಿಂದ ಬಂದಿದ್ದಾರೆ. ಮಾರ್ಚ್ 20ರಂದು ಮುಂಜಾನೆ 5:30ಕ್ಕೆ ಸ್ಪೈಸ್ ಜೆಟ್ ಮೂಲಕ ಮೂವರು ದುಬೈಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದರು. ಮೊನ್ನೆ ಕೊರೋನ

BIG BREAKING NEWS ಮಂಗಳೂರಿನಲ್ಲಿ ಒಂದೇ ದಿನ ನಾಲ್ವರಿಗೆ ಕೊರೋನ ಪಾಸಿಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

➤➤ Breaking news ಕಡಬದಲ್ಲಿ ಲಾಠಿ ಚಾರ್ಜ್ ➤ ಪೇಟೆಗೆ ಬಂದಿದ್ದವರಿಗೆ ಲಾಠಿಯ ಬಿಸಿ ಮುಟ್ಟಿದ ಕಡಬಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ. ಮಾ.24. ಕೊರೋನಾ ವಿರೋಧಿಸಿ ಲಾಕ್ ಡೌನ್ ಹಿನ್ನೆಲೆಯಲ್ಲಿ ದ.ಕ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಯಲ್ಲಿದ್ದು, ಮಧ್ಯಾಹ್ನ 12 ಗಂಟೆಯ ಒಳಗಡೆ ಅಂಗಡಿಗಳನ್ನು ಮುಚ್ವದೇ ಇರುವುದಕ್ಕೆ ಕಡಬ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಕಡಬ ತಾಲೂಕಿನ ಕುಂತೂರು, ಪದವು, ಹೊಸ್ಮಠ, ಕೋಡಿಂಬಾಳ ಮತ್ತು ಕಡಬ ಪೇಟೆಯಲ್ಲಿ ಲಾಠಿ ಬೀಸಿದ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ರುಕ್ಮ ನಾಯ್ಕ್ ಹಾಗೂ ಸಿಬ್ಬಂದಿಗಳು ಅಂಗಡಿಗಳನ್ನು ಮುಚ್ಚಿಸಿದ್ದಾರೆ.  

➤➤ Breaking news ಕಡಬದಲ್ಲಿ ಲಾಠಿ ಚಾರ್ಜ್ ➤ ಪೇಟೆಗೆ ಬಂದಿದ್ದವರಿಗೆ ಲಾಠಿಯ ಬಿಸಿ ಮುಟ್ಟಿದ ಕಡಬಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅನಗತ್ಯವಾಗಿ ಮಧ್ಯಾಹ್ನದ ಬಳಿಕ ಜನರು ಪೇಟೆಗೆ ಬಂದರೆ ಕಾನೂನು ಕ್ರಮ ➤ ಕಡಬ ಠಾಣಾ ಎಸ್ಐ ರುಕ್ಮ ನಾಯ್ಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.24. ಕೊರೋನಾ ಮುಂಜಾಗ್ರತಾ ಕ್ರಮಕ್ಕೆ ಒಂದು ಹೆಜ್ಜೆ ಮುಂದೆ ಇಟ್ಟ ಸರಕಾರ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದಿದ್ದರೆ ಕಾನೂನು ಕ್ರಮಕ್ಕೆ ಮುಂದಾದ ಬೆನ್ನಲ್ಲೆ ಜನರು ಪಾಲಿಸುವಲ್ಲಿ ಮುಂದಾದಂತೆ ಕಾಣುತ್ತಿದೆ. ಕಡಬದಾದ್ಯಂತ ದಿನಸಿ ಅಂಗಡಿ, ತರಕಾರಿ, ಮೆಡಿಕಲ್ ಶಾಪ್, ಆಸ್ಪತ್ರೆ, ಬ್ಯಾಂಕ್ ಹೊರತುಪಡಿಸಿದರೆ ಉಳಿದೆಲ್ಲಾ ಅಂಗಡಿಗಳು ಬಂದ್ ಆಗಿದೆ. ದಿನಸಿ ಅಂಗಡಿಗಳು ಮಧ್ಯಾಹ್ನದವರೆಗೆ ಮಾತ್ರ ತೆರೆಯಲಿದ್ದು ಬಳಿಕ ಬಂದ್ ಆಗಲಿದೆ. ಕಡಬದಾದ್ಯಂತ ಈಗಾಗಲೇ ಬಂದ್ ಆಗಿದ್ದು ಮಧ್ಯಾಹ್ನದ ವೇಳೆಗೆ ಎಲ್ಲಾ ಅಂಗಡಿಗಳು ಬಂದ್ ಆಗಲಿದೆ.

ಅನಗತ್ಯವಾಗಿ ಮಧ್ಯಾಹ್ನದ ಬಳಿಕ ಜನರು ಪೇಟೆಗೆ ಬಂದರೆ ಕಾನೂನು ಕ್ರಮ ➤ ಕಡಬ ಠಾಣಾ ಎಸ್ಐ ರುಕ್ಮ ನಾಯ್ಕ್ ಎಚ್ಚರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಾಕ್ ಡೌನ್ ನಡುವೆಯೂ ಸಮಾಧಾನಕರ ಸುದ್ದಿ ➤ ಮಧ್ಯಾಹ್ನ 12ರ ವರೆಗೆ ದಿನಬಳಕೆಯ ಅಂಗಡಿ ತೆರೆಯಲು ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.24. ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನ ವೈರಸ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ಅವಶ್ಯಕ ಸೇವೆಗಳಾದ ಆಹಾರ, ಪಡಿತರ ಅಂಗಡಿ, ಹಾಲು, ತರಕಾರಿ, ದಿನಸಿ, ಮಾಂಸ, ಮೀನು, ಹಣ್ಣು ಹಂಪಲು, ಸಗಟು-ಚಿಲ್ಲರೆ ವ್ಯಾಪಾರದ ಅಂಗಡಿಗಳನ್ನು ತೆರೆಯಬಹುದಾಗಿದೆ. ಓಲಾ, ಉಬರ್, ಟ್ಯಾಕ್ಸಿ, ರಿಕ್ಷಾ ಮತ್ತಿತರ ಬಾಡಿಗೆ

ಲಾಕ್ ಡೌನ್ ನಡುವೆಯೂ ಸಮಾಧಾನಕರ ಸುದ್ದಿ ➤ ಮಧ್ಯಾಹ್ನ 12ರ ವರೆಗೆ ದಿನಬಳಕೆಯ ಅಂಗಡಿ ತೆರೆಯಲು ಅವಕಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಾ.31ರವರೆಗೆ ಕರ್ನಾಟಕ ಸಂಪೂರ್ಣ ಲಾಕ್‌ಡೌನ್

ಬೆಂಗಳೂರು, ಮಾ.24: ಕೊರೋನ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಾ.31ರವರೆಗೆ ಲಾಕ್‌ಡೌನ್ ಮಾಡಲು ರಾಜ್ಯ ಸರಕಾರ ಆದೇಶಿಸಿದೆ. ಪ್ರಾರಂಭದಲ್ಲಿ ಕೊರೋನ ಪೀಡಿತ 9 ಜಿಲ್ಲೆಗಳನ್ನು ಮಾತ್ರ ಲಾಕ್‌ಡೌನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ಬಳಿಕ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿರುವ ರಾಜ್ಯ ಸರಕಾರ ಇದೀಗ ಮಾರ್ಚ್ 23ರ ಮಧ್ಯರಾತ್ರಿಯಿಂದಲೇ ಈ ಲಾಕ್‌ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸುವ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತಾದ ಮಾಹಿತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ಮಾ.31ರವರೆಗೆ ಕರ್ನಾಟಕ ಸಂಪೂರ್ಣ ಲಾಕ್‌ಡೌನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top