ಬ್ರೇಕಿಂಗ್ ನ್ಯೂಸ್

ಕೊರೋನ ಭೀತಿ ಹಿನ್ನೆಲೆ: ಮನಪಾ ವ್ಯಾಪ್ತಿಯ ಎಲ್ಲ ಸೆಲೂನ್, ಬ್ಯೂಟಿ ಪಾರ್ಲರ್ ನಾಳೆಯಿಂದ ಬಂದ್

ಮಂಗಳೂರು, ಮಾ.20: ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಮಾರಣಾಂತಿಕ ಸೋಂಕು ವೈರಾಣು ರಾಜ್ಯದಲ್ಲಿಯೂ ಕಾಣಿಸಿಕೊಂಡಿರುವುದರಿಂದ ಈ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯೊಳಗೆ ಕಾರ್ಯಚರಿಸುವ ಎಲ್ಲಾ ಸೆಲೂನ್, ಬ್ಯೂಟಿ ಪಾರ್ಲರ್‌ಗಳನ್ನು ಮಾ.21ರಿಂದ ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ಮುಚ್ಚುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ತಿಳಿಸಿದ್ದಾರೆ. ಈ ಕುರಿತು ಎಲ್ಲಾ ಸೆಲೂನ್, ಬ್ಯೂಟಿ ಪಾರ್ಲರ್ ಅಸೋಸಿಯೇಷನ್‌ಗಳು ಗಮನಹರಿಸಿ ಮಾ.21ರಿಂದ ಸೆಲೂನ್, ಬ್ಯೂಟಿ ಪಾರ್ಲರ್‌ಗಳನ್ನು ಮುಚ್ಚಿ ಪಾಲಿಕೆಯೊಂದಿಗೆ ಸಹಕರಿಸಬೇಕೆಂದು […]

ಕೊರೋನ ಭೀತಿ ಹಿನ್ನೆಲೆ: ಮನಪಾ ವ್ಯಾಪ್ತಿಯ ಎಲ್ಲ ಸೆಲೂನ್, ಬ್ಯೂಟಿ ಪಾರ್ಲರ್ ನಾಳೆಯಿಂದ ಬಂದ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.20. ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತಡ್ಕ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾವತ್ತಡ್ಕದಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದು, ಅಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಗಳೂರಿನಿಂದ ಅಧಿಕಾರಿಗಳು ಆಗಮಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಟ್ಯಾಂಕರ್ ಅನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು,

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿಯಲ್ಲಿ 50 ಅಡಿ ಕಂದಕಕ್ಕೆ ಬಿದ್ದ ಕಾರು: ಅಪಾಯದಿಂದ ಪಾರು

ಉಪ್ಪಿನಂಗಡಿ, ಮಾ.20: ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದ ಘಟನೆ ಇಲ್ಲಿಗೆ ಸಮೀಪ ಪಂಜಾಳದಲ್ಲಿ ಶುಕ್ರವಾರ ನಡೆದಿದೆ. ಬೆಂಗಳೂರಿನಿಂದ ಉಡುಪಿ ಬರುತ್ತಿದ್ದ ಕಾರು ಉಪ್ಪಿನಂಗಡಿಯ ಪಂಜಾಳ ಸಮೀಪ ತಲುಪುತ್ತಿದ್ದಂತೆ 50 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಉಡುಪಿಯ ಶಿರ್ವ ಮೂಲದ ನವೀನ್ ಮತ್ತವರ ಕುಟುಂಬ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು. ನವೀನ್, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಕಾರಿನಲ್ಲಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇವರನ್ನು

ಉಪ್ಪಿನಂಗಡಿಯಲ್ಲಿ 50 ಅಡಿ ಕಂದಕಕ್ಕೆ ಬಿದ್ದ ಕಾರು: ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ಕೊಲೆಗೆ ಯತ್ನಿಸಿ ಕಡಬದಲ್ಲಿ ಆಶ್ರಯ ➤ ಊರವರ ಸಹಕಾರದಲ್ಲಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.20. ಕೇರಳದಲ್ಲಿ ಕೊಲೆಯತ್ನ ನಡೆಸಿ ಕಡಬದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಊರವರ ಸಹಕಾರದೊಂದಿಗೆ ಕೇರಳ ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕೊಲ್ಲಂ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಗು ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಲ್ಲಂ ಠಾಣಾ ವ್ಯಾಪ್ತಿಯಲ್ಲಿ 307 ಕೇಸು ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಮಡುಪು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ. ಶುಕ್ರವಾರದಂದು ಕಡಬಕ್ಕೆ ಆಗಮಿಸಿದ ಕೊಲ್ಲಂ ಠಾಣಾ ಎಸ್ಐ

ಕೇರಳದಲ್ಲಿ ಕೊಲೆಗೆ ಯತ್ನಿಸಿ ಕಡಬದಲ್ಲಿ ಆಶ್ರಯ ➤ ಊರವರ ಸಹಕಾರದಲ್ಲಿ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಧ್ಯಪ್ರದೇಶ ಮುಖ್ಯಮಂತ್ರಿ ಕಾಮಲ್ ನಾಥ್ ರಾಜೀನಾಮೆ

ಹೊಸದಿಲ್ಲಿ, ಮಾ.20: ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ ಮಧ್ಯಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಕಾಮಲ್ ನಾಥ್ ಶುಕ್ರವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದ 15ತಿಂಗಳ ಕಾಂಗ್ರೆಸ್ ನೇತೃತ್ವದ ಸರಕಾರ ಪತನದ ಅಂಚಿನಲ್ಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಮಲ್ ನಾಥ್ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು 22 ಶಾಸಕರು ರಾಜೀನಾಮೆ ನೀಡಿದ್ದರಿಂದ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಏತನ್ಮಧ್ಯೆ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಕಮಲ್ ನಾಥ್ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ ಬಜೆಟ್

ಮಧ್ಯಪ್ರದೇಶ ಮುಖ್ಯಮಂತ್ರಿ ಕಾಮಲ್ ನಾಥ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊನೆಗು ನೇಣುಕಂಬವೇರಿದ ನಿರ್ಭಯಾ ಅಪರಾಧಿಗಳು

ಹೊಸದಿಲ್ಲಿ, ಮಾ.20: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳನ್ನು ಇಂದು ಮುಂಜಾವ ಗಲ್ಲಿಗೇರಿಸಲಾಯಿತು. ಅಕ್ಷಯ್ ಠಾಕೂರ್ (31), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಮುಖೇಶ್ ಸಿಂಗ್ (32) ಮರಣದಂಡನೆಗೆ ಕೊರಳೊಡ್ಡುವವರೆಗೂ ಕಾನೂನು ಹೋರಾಟ ನಡೆಸಿ ವಿಫಲರಾಗಿದ್ದರು. ಗಲ್ಲುಶಿಕ್ಷೆಗೆ ಎರಡು ಗಂಟೆ ಬಾಕಿ ಇರುವಾಗ ಸುಪ್ರೀಂಕೋರ್ಟ್ ಕದತಟ್ಟಿದ್ದು, ಅರ್ಜಿಯನ್ನು ವಜಾಗೊಳಿಸಿತ್ತು. ನಾಲ್ವರು ದೋಷಿಗಳು ಕೊನೆಯ ಯಾವ ಆಸೆಯನ್ನೂ ವ್ಯಕ್ತಪಡಿಸಿಲ್ಲವಾಗಿತ್ತು ಎಂದು ಜೈಲು ಅಧಿಕಾರಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ನಸುಕಿನಲ್ಲಿ ಅರ್ಜಿ ವಜಾಗೊಳಿಸಿದ ನಂತರ

ಕೊನೆಗು ನೇಣುಕಂಬವೇರಿದ ನಿರ್ಭಯಾ ಅಪರಾಧಿಗಳು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನ ವೈರಸ್ ಹಿನ್ನೆಲೆ ಮಸೀದಿಗಳಲ್ಲಿ ಶುಕ್ರವಾರದ ನಮಾಝ್ ಸಮಯ ಮಾರ್ಪಾಡು

ಮಂಗಳೂರು, ಮಾ.20: ಕೊರೋನ ವೈರಸ್ ಭೀತಿಯಿಂದ ಸರಕಾರವು ನಿರ್ಬಂಧಕಾಜ್ಞೆ ವಿಧಿಸಿದ ಹಿನ್ನೆಲೆಯಲ್ಲಿ ಕರಾವಳಿಯ ಮಸೀದಿಗಳಲ್ಲಿ ಶುಕ್ರವಾರದ ನಮಾಝ್‌ನ ಸಮಯದಲ್ಲಿ ಮಾರ್ಪಾಡು ಮಾಡಲಾಗಿದೆ. ಆರೋಗ್ಯ ಸುರಕ್ಷತೆಯ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ಹೊರವಲಯದ ಕೆಲವು ಮಸೀದಿಗಳಲ್ಲಿ ಶುಕ್ರವಾರದ ಜುಮಾ ನಮಾಝ್‌ನ ಸಮಯದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಶುಕ್ರವಾರ ನಡೆಯುವ ನಮಾಜಝ್ 15 ನಿಮಿಷದಲ್ಲಿ ಮುಗಿಸಲು ಉಭಯ ಜಿಲ್ಲೆಯ ಖಾಝಿಗಳು ಈಗಾಗಲೆ ಮನವಿ ಮಾಡಿದ್ದಾರೆ. ಮಂಗಳೂರಿನ ಮಸೀದಿಗಳಲ್ಲಿ ಲುಹರ್ ಅಝಾನ್ ಮುಳಗಿದ ತಕ್ಷಣವೇ ಖುತುಬಾ 12:55ಕ್ಕೆ

ಕೊರೋನ ವೈರಸ್ ಹಿನ್ನೆಲೆ ಮಸೀದಿಗಳಲ್ಲಿ ಶುಕ್ರವಾರದ ನಮಾಝ್ ಸಮಯ ಮಾರ್ಪಾಡು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನ ಸೋಂಕಿಗೆ ಮತ್ತೊಂದು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಜೈಪುರ, ಮಾ.20: ಕೊರೋನ ವೈರಸ್‌ ಸೋಂಕಿಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಆ ಮೂಲಕ ಕೋವಿಡ್‌–19ಗೆ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 5 ಕ್ಕೆ ಏರಿದೆ. ಭಾರತದ ಪ್ರವಾಸಕ್ಕೆ ಬಂದಿದ್ದ ಇಟಲಿಯ 69 ವರ್ಷದ ವ್ಯಕ್ತಿ ಕೊರೋನ ಸೋಂಕಿನಿಂದ ಮೃತಪಟ್ಟಿರುವುದು ದೃಢವಾಗಿದೆ. ರಾಜಸ್ತಾನದ ಜೈಪುರದಲ್ಲಿ ಕೊರೋನ ಸೋಂಕಿತ ಇಟಲಿಯ ನಾಗರಿಕ ಸಾವನ್ನಪ್ಪಿದ್ದಾನೆ.

ಕೊರೋನ ಸೋಂಕಿಗೆ ಮತ್ತೊಂದು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬುಲೆಟ್ – ಲಾರಿ ನಡುವೆ ಢಿಕ್ಕಿ ➤ ಪುತ್ತೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಲಾರಿ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬುಲ್ಲೆಟ್ ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ‌ ಸವಾರನನ್ನು ಪುತ್ತೂರು ತಾಲೂಕಿನ ಬಡಗನ್ನೂರು ಪೇರಾಲ್ ನಿವಾಸಿ ಚಂದ್ರಶೇಖರ್ ಆಳ್ವರ ಪುತ್ರ ಪ್ರಣ್ವಿತ್ ಆಳ್ವ (21) ಎಂದು ಗುರುತಿಸಲಾಗಿದೆ. ಮೂಡಬಿದಿರೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರಣ್ವಿತ್ ಚಲಯಿಸುತ್ತಿದ್ದ ಹಿಮಾಲಯ ಬುಲ್ಲೆಟ್ ಮಂಗಳೂರಿನ ಮರೋಳಿ ಎಂಬಲ್ಲಿ ಲಾರಿಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಮಂಗಳೂರು: ಬುಲೆಟ್ – ಲಾರಿ ನಡುವೆ ಢಿಕ್ಕಿ ➤ ಪುತ್ತೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಗಳ ಸಾವಿಗೆ ಏಳು ವರ್ಷಗಳ ಬಳಿಕ ನ್ಯಾಯ ಸಿಕ್ಕಿದೆ ➤ ನಿರ್ಭಯಾ ತಾಯಿ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.20. ನನ್ನ ಮಗಳ ಸಾವಿಗೆ 7 ವರ್ಷಗಳ ಬಳಿಕವಾದರೂ ನ್ಯಾಯ ಸಿಕ್ಕಿತಲ್ಲ. ಈ ದಿನಕ್ಕಾಗಿ ನಾನು ಕಾಯುತ್ತಿದ್ದೆ. ಈ ದಿನವನ್ನು ನನ್ನ ಮಗಳಿಗೆ ಅರ್ಪಿಸುತ್ತಿದ್ದೇನೆ ಎಂದು ನಿರ್ಭಯಾ ತಾಯಿ ಪ್ರತಿಕ್ರಿಯಿಸಿದ್ದಾರೆ. ತನ್ನ ಮಗಳನ್ನು ಅತ್ಯಾಚಾರಗೈದು ಚಿತ್ರಹಿಂಸೆ ನೀಡಿ ಕೊಂದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ ನಂತರ ಅವರು ಈ ರೀತಿ ಪ್ರತಿಕ್ರಿಯಿಸಿದರು. 2012ರಿಂದಲೂ ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡುತ್ತಲೇ ಬಂದಿದ್ದೆವು. ಕೊನೆಗೂ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಿದೆ. ಇಂದು

ಮಗಳ ಸಾವಿಗೆ ಏಳು ವರ್ಷಗಳ ಬಳಿಕ ನ್ಯಾಯ ಸಿಕ್ಕಿದೆ ➤ ನಿರ್ಭಯಾ ತಾಯಿ ಪ್ರತಿಕ್ರಿಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top