ಬ್ರೇಕಿಂಗ್ ನ್ಯೂಸ್

ನಿರ್ಭಯಾ ಅಪರಾಧಿ ಪವನ್ ಸಲ್ಲಿಸಿದ ಕ್ಷಮದಾನ ಅರ್ಜಿ ತಿರಸ್ಕಾರಗೊಳಿಸಿದ ರಾಷ್ಟ್ರಪತಿ

ಹೊಸದಿಲ್ಲಿ, ಮಾ.5: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಪವನ್ ಗುಪ್ತಾ ಕ್ಷಮದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಬುಧವಾರ ತಿರಸ್ಕಾರ ಮಾಡಿದ್ದಾರೆ. ಈ ಮೂಲಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ. ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ , ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ತಿರಸ್ಕಾರ ಮಾಡಿದೆ. ಆ ಬಳಿಕ ಆತ ಕ್ಷಮದಾನವನ್ನು ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದ. ಇಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ […]

ನಿರ್ಭಯಾ ಅಪರಾಧಿ ಪವನ್ ಸಲ್ಲಿಸಿದ ಕ್ಷಮದಾನ ಅರ್ಜಿ ತಿರಸ್ಕಾರಗೊಳಿಸಿದ ರಾಷ್ಟ್ರಪತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ಗೋಲಿಬಾರ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ಆಯುಕ್ತರಿಗೆ ನೋಟಿಸ್

ಮಂಗಳೂರು, ಮಾ.4: ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಮ್ಯಾಜಿಸ್ಟ್ರೀರಿಯಲ್ ವಿಚಾರಣೆಯು ನಗರದ ಎಸಿ ಕಚೇರಿ ಕೋರ್ಟ್‌ನಲ್ಲಿ ನಡೆಯಿತು. ತನಿಖಾಧಿಕಾರಿಯಾದ ಉಡುಪಿ ಜಿಲ್ಲಾಧಿಕಾರಿಯೂ ಆಗಿರುವ ಜಗದೀಶ್ ವಿಚಾರಣೆ ನಡೆಸಿದರು. ಬುಧವಾರ 176 ಸಾಕ್ಷಿಗಳ ಪೈಕಿ ಎಸಿಪಿಗಳ ಸಹಿತ 29 ಪೊಲೀಸರು ಬಂದು ಸಾಕ್ಷ್ಯ ಹೇಳಿದರು. ಮಾ.9ಕ್ಕೆ ಹಾಜರಾಗುವಂತೆ ಡಿಸಿಪಿ ಅರುಣಾಂಶುಗಿರಿ ಹಾಗೂ ಮಾ.12ರಂದು ವಿಚಾರಣೆಗೆ ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಹಾಗೂ ಗಲಭೆ

ಮಂಗಳೂರು ಗೋಲಿಬಾರ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ಆಯುಕ್ತರಿಗೆ ನೋಟಿಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣದಲ್ಲೂ ಮಾಜಿ ಬಿಜೆಪಿ ಶಾಸಕ ಸೆಂಗಾರ್ ದೋಷಿ

ಹೊಸದಿಲ್ಲಿ, ಮಾ.4: ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಂದೆಯ ಹತ್ಯೆ ಪ್ರಕರಣದಲ್ಲೂ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ದೋಷಿ ಎಂದು ದಿಲ್ಲಿಯ ತೀಸ್ ಹಜಾರಿ ನ್ಯಾಯಾಲಯ ತೀರ್ಪು ನೀಡಿದೆ. ಅತ್ಯಾಚಾರ ಪ್ರಕರಣದಲ್ಲಿ ಸೆಂಗಾರ್ ಈಗಾಗಲೇ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. 2018ರ ಎಪ್ರಿಲ್‌ನಲ್ಲಿ ಸಂತ್ರಸ್ತೆಯ ತಂದೆಗೆ ಸೆಂಗಾರ್ ಸಹೋದರ ಅಟುಲ್ ಸೆಂಗಾರ್ ಮತ್ತು ಸಹಚರರು ಮನಸೋ ಇಚ್ಛೆ ಥಳಿಸಲಾಗಿತ್ತು. ನಂತರ ಪೊಲೀಸರು ಅವರನ್ನು ಆಸ್ಪತ್ರೆಗೆ ಸಾಗಿಸುವ ಬದಲು ಠಾಣೆಗೆ ಕರೆದೊಯ್ದಿದ್ದರು. ಇದಾದ ಎರಡು ದಿನಗಳ ಬಳಿಕ ಅವರು ಠಾಣೆಯಲ್ಲಿ

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣದಲ್ಲೂ ಮಾಜಿ ಬಿಜೆಪಿ ಶಾಸಕ ಸೆಂಗಾರ್ ದೋಷಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ➤ 23 ಲಕ್ಷದ ಗಾಂಜಾ ಸಹಿತ 6 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು. ಮಾ. 04, ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು 23 ಲಕ್ಷ ರೂ. ವೌಲ್ಯದ 43 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಸಹಿತ ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗದ್ದಾರೆ. ಬಂಧಿತರನ್ನು ಇಂದಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆಂಧ್ರಪ್ರದೇಶ ಮೂಲದವರಾದ ಕವಿತಾ(23), ಕಿಲ್ಲೊ ಧನುರಾಜೈ (25), ಪಂಗೈ ಮತ್ಯರಾಜು (26) ಮತ್ತು ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಲಪಟ್ಟಿ ಸುಬ್ಬಾರೆಡ್ಡಿ (42),

ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ➤ 23 ಲಕ್ಷದ ಗಾಂಜಾ ಸಹಿತ 6 ಮಂದಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಶಂಕಿತ ಎಚ್1ಎನ್1 ಜ್ವರಕ್ಕೆ ಆಟೋ ಚಾಲಕ ಬಲಿ ➤ ಎಚ್1ಎನ್1 ಭೀತಿಯಲ್ಲಿ ಕಡಬದ ಜನತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.04. ಶಂಕಿತ ಎಚ್1ಎನ್1 ಜ್ವರಕ್ಕೆ ಆಟೋ ಚಾಲಕರೋರ್ವರು‌ ಬಲಿಯಾದ ಘಟನೆ ಕಡಬದಲ್ಲಿ ನಡೆದಿದೆ. ಮಂಗಳೂರಿನಲ್ಲಿ ಖಾಸಗಿ ಬಸ್‌ ಚಾಲಕರಾಗಿದ್ದು, ಪ್ರಸ್ತುತ ಕಡಬದಲ್ಲಿ ಆಟೋ ಓಡಿಸುತ್ತಿದ್ದ ಕಡಬ ತಾಲೂಕು 102ನೇ ನೆಕ್ಕಿಲಾಡಿ ಗ್ರಾಮದ ಕಲ್ಪುರೆ ನಿವಾಸಿ ಕುಶಾಲಪ್ಪ ಗೌಡ (50) ಅವರು ಶಂಕಿತ ಎಚ್‌1ಎನ್‌1 ಜ್ವರದಿಂದಾಗಿ ಮಂಗಳವಾರದಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಪ್ಪತ್ತು ದಿನಗಳಿಂದ ಜ್ವರ ಪೀಡಿತರಾಗಿದ್ದ ಅವರು ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಹೆಚ್ಚಿನ

ಕಡಬ: ಶಂಕಿತ ಎಚ್1ಎನ್1 ಜ್ವರಕ್ಕೆ ಆಟೋ ಚಾಲಕ ಬಲಿ ➤ ಎಚ್1ಎನ್1 ಭೀತಿಯಲ್ಲಿ ಕಡಬದ ಜನತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: 33 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸರು

ಉಡುಪಿ, ಮಾ.4: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಪಡುಬಿದ್ರೆ ನಂದಿಕೂರಿನ ಕೈಗಾರಿಕಾ ವಲಯದಲ್ಲಿರುವ ಆಯುಷ್ ಎನ್‌ವೈರ್‌ಟೆಕ್ ಪ್ರೈ.ಲಿಮಿಟೆಡ್‌ನಲ್ಲಿ ನ್ಯಾಯಾಲಯದ ಆದೇಶದಂತೆ ನಾಶಪಡಿಸಲಾಯಿತು. ಜಿಲ್ಲೆಯ ಸೆನ್ ಅಪರಾಧ ಠಾಣೆಯ 11 ಪ್ರಕರಣಗಳಲ್ಲಿ 31.84 ಕೆ.ಜಿ., ಮಣಿಪಾಲ ಠಾಣೆಯ ನಾಲ್ಕು ಪ್ರಕರಣಗಳಲ್ಲಿ 1.56 ಕೆ.ಜಿ. ಹಾಗೂ ಉಡುಪಿ ನಗರ ಠಾಣೆಯ ಎರಡು ಪ್ರಕರಣಗಳಲ್ಲಿ 1.67 ಕೆ.ಜಿ. ಸೇರಿದಂತೆ ಒಟ್ಟು 17 ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡ ಒಟ್ಟು 32 ಕೆಜಿ 883 ಗ್ರಾಂ ಗಾಂಜಾವನ್ನು ನಾಶಪಡಿಸಲಾಯಿತು. ಈ ಪ್ರಕ್ರಿಯೆಯಲ್ಲಿ

ಉಡುಪಿ: 33 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

3 ಸಾವಿರ ಗಡಿ ದಾಟಿದ ಕೊರೋನಾ ಸಾವಿನ ಸಂಖ್ಯೆ

60 ದೇಶಗಳಿಗೆ ವ್ಯಾಪಿಸಿರುವ ಡೆಡ್ಲಿ ವೈರಸ್ ಬೀಜಿಂಗ್, ಮಾ.4: ಚೀನಾದಲ್ಲಿ ಪ್ರಾರಂಭವಾದ ಮಾರಕ ಕೊರೋನಾ ವೈರಸ್ ಇದೀಗ 60 ದೇಶಗಳಿಗೂ ವ್ಯಾಪಿಸಿದ್ದು, ಜಾಗತಿಕವಾಗಿ ಮೃತಪಟ್ಟವರ ಸಂಖ್ಯೆ ಸೋಮವಾರ 3,000 ಗಡಿ ದಾಟಿದೆ. ಇದಲ್ಲದೆ ಜಾಗತಿಕವಾಗಿ ಸುಮಾರು 87 ಸಾವಿರ ಮಂದಿಗೆ ಸೋಂಕು ತಗುಲಿದ್ದು, ಇವರೆಲ್ಲರೂ ನಿಗಾದಲ್ಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಹೊಸ ವರದಿಯಲ್ಲಿ ತಿಳಿಸಿದೆ. ಚೀನಾವೊಂದರಲ್ಲೇ 2,912 ಮಂದಿ ಈವರೆಗೆ ಕೊರೊನಾ ವೈರಸ್‌ಗೆ ಬಲಿಯಾಗಿದ್ದು, 79,824 ಸೋಂಕಿತರಿದ್ದಾರೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ

3 ಸಾವಿರ ಗಡಿ ದಾಟಿದ ಕೊರೋನಾ ಸಾವಿನ ಸಂಖ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೋನಾ ಭೀತಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ಮಂಗಳೂರು, ಮಾ.4: ಡೆಡ್ಲಿ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದ್ದು, ಮೂರು ಪ್ರಕರಣಗಳು ದೃಢಪಟ್ಟಿವೆ. ಈ ನಡುವೆ ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ವೈರಸ್ ಬರದಂತೆ ತಡೆಗಟ್ಟಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಯಂತ್ರಗಳನ್ನು ಅಳವಡಿಸಲಾಗಿದೆ. ಕರಾವಳಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕುವೈತ್, ಯುಎಇ, ಸೌದಿ, ಓಮನ್, ಬಹರೈನ್‌ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅಲ್ಲಿ ಸೋಂಕು ಹಬ್ಬಿರುವ ಕಾರಣ ವಿಮಾನ ನಿಲ್ದಾಣದಲ್ಲಿ

ಕೊರೋನಾ ಭೀತಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಣಜಿ ಟ್ರೋಫಿ ಸೆಮಿಫೈನಲ್ ➤ ಕರ್ನಾಟಕ ತಂಡವನ್ನು ಮಣಿಸಿದ ಬಂಗಾಳ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಮಾ.03. ಕೋಲ್ಕತ್ತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಬಂಗಾಳ ತಂಡದ ವಿರುದ್ದ ಕರ್ನಾಟಕವು 174 ರನ್ ಗಳ ಅಂತರದ ಹೀನಾಯ ಸೋಲನ್ನು ಅನುಭವಿಸಿತು. 325 ರನ್‌ಗಳನ್ನು ಪಡೆದು ಬೀಗಿದ್ದ ಬಂಗಾಳವನ್ನು ಮಣಿಸಲು ಹರಸಾಹಸಪಟ್ಟ ಕರ್ನಾಟಕ ತಂಡವು 55.3 ಓವರ್‌ಗಳಲ್ಲಿ 177 ರನ್‌ಗಳಿಗೆ ತೃಪ್ತಿಪಡುತ್ತಾ ತನ್ನೆಲ್ಲಾ ವಿಕೆಟುಗಳನ್ನು ಕಳೆದುಕೊಂಡಿತು. ಕರ್ನಾಟಕ ತಂಡದ ಭರವಸೆಯಾಗಿದ್ದ ದೇವದತ್ ಪಡಿಕ್ಕಲ್ ಹಾಗೂ ಮನೀಶ್ ಪಾಂಡೆಯವರು ಔಟ್ ಆಗುವುದರೊಂದಿಗೆ ಕರ್ನಾಟಕ ತಂಡದ ಬಲ ಕುಸಿದು

ರಣಜಿ ಟ್ರೋಫಿ ಸೆಮಿಫೈನಲ್ ➤ ಕರ್ನಾಟಕ ತಂಡವನ್ನು ಮಣಿಸಿದ ಬಂಗಾಳ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿ ಕೇಳಿಬಂತು ಪಾಕ್ ಪರ ಘೋಷಣೆ | ಆರೋಪಿ ಪೊಲೀಸ್ ವಶಕ್ಕೆ

ಉಡುಪಿಯಲ್ಲಿ ಕೇಳಿಬಂತು ಪಾಕ್ ಪರ ಘೋಷಣೆ | ಆರೋಪಿ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top