ಬ್ರೇಕಿಂಗ್ ನ್ಯೂಸ್

ಕಡಬ: ರೈಲು ಢಿಕ್ಕಿಯಾಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.31. ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಕೋಡಿಂಬಾಳ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ವಿನೀತ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಕೋಡಿಂಬಾಳ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ಬಳಿ ರೈಲು ಢಿಕ್ಕಿ ಹೊಡೆದು ಹಳಿಗೆ ಬಿದ್ದ ಸ್ಥಿತಿಯಲ್ಲಿ ವಿನೀತ್ ನ ಮೃತದೇಹವು ಕಂಡುಬಂದಿದೆ. ಪಕ್ಕದಲ್ಲೇ ಮದ್ಯದ ಬಾಟಲ್ ಕಂಡುಬಂದಿದ್ದು, ಪ್ಲಾಟ್ ಫಾರಂ ನಲ್ಲಿ ಕುಳಿತಿದ್ದ ವೇಳೆ […]

ಕಡಬ: ರೈಲು ಢಿಕ್ಕಿಯಾಗಿ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಜೀಪ್ – ಕಂಟೇನರ್ ನಡುವೆ ಢಿಕ್ಕಿ ➤ ಜೀಪ್ ಚಾಲಕ ಮೃತ್ಯು, ಇಬ್ಬರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಜೀಪು ಹಾಗೂ ಕಂಟೇನರ್ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಜೀಪು ಚಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಚಾಲಕನನ್ನು ನೆಲ್ಯಾಡಿ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಜೀಪು ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ

ಉಪ್ಪಿನಂಗಡಿ: ಜೀಪ್ – ಕಂಟೇನರ್ ನಡುವೆ ಢಿಕ್ಕಿ ➤ ಜೀಪ್ ಚಾಲಕ ಮೃತ್ಯು, ಇಬ್ಬರ ಸ್ಥಿತಿ ಚಿಂತಾಜನಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಜೀಪ್ ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ ➤ ಏಳು ಮಂದಿ ಗಂಭೀರ, ಮೂವರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಜೀಪು ಹಾಗೂ ಕಂಟೇನರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ನೆಲ್ಯಾಡಿ – ಉಪ್ಪಿನಂಗಡಿ ನಡುವೆ ಬಾಡಿಗೆ ನಡೆಸುತ್ತಿದ್ದ ಜೀಪು ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ

ಉಪ್ಪಿನಂಗಡಿ: ಜೀಪ್ ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ ➤ ಏಳು ಮಂದಿ ಗಂಭೀರ, ಮೂವರ ಸ್ಥಿತಿ ಚಿಂತಾಜನಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಸ್ ಢಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಮೃತ್ಯು

ಮಂಗಳೂರು, ಡಿ.28: ಚಾಲಕ ನಿಯಂತ್ರಣ ತಪ್ಪಿದ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾ.ಹೆ.ಯಲ್ಲಿ ಕೆತ್ತಿಕಲ್‌ನಲ್ಲಿ ಇಂದು ನಡೆದಿದೆ. ಮೃತಪಟ್ಟ ಚಾಲಕನ ಮಾಹಿತಿ ತಿಳಿದು ಬಂದಿಲ್ಲ. ಶ್ರೀರಾಮ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಇದಾಗಿದ್ದು, ಮೂಡಬಿದಿರೆ ಕಡೆಯಿಂದ ಮಂಗಳೂರು ಪ್ರಯಾಣಿಸುತ್ತಿತ್ತು ಎಂದು ತಿಳಿದುಬಂದಿದೆ. ಅತಿವೇಗದಿಂದ ಬರುತ್ತಿದ್ದ ಬಸ್ ಕೆತ್ತಿಕಲ್ ಬಳಿಯ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಬಸ್ ಢಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
download

ಕಡಬ: ದ್ವಿಚಕ್ರ – ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಕಡಬದ ಹಳೇ ಸ್ಟೇಷನ್ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ನೂಜಿಬಾಳ್ತಿಲ ಗ್ರಾಮದ ಪಳೆಯಮಜಲು ನಿವಾಸಿ ಜೂಲಿ ತೋಮಸ್ ಎಂದು ಗುರುತಿಸಲಾಗಿದೆ. ಮೃತರು ತನ್ನ ಪತಿ ಹಾಗೂ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಕಡಬ ಕಡೆಗೆ ಬರುತ್ತಿದ್ದ ವೇಳೆ ಹಳೇಸ್ಟೇಷನ್ ಸಮೀಪ ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್

ಕಡಬ: ದ್ವಿಚಕ್ರ – ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಲ್ಲೆಸೆತದಿಂದ ನೆಟ್ಟಿಗರಿಗೆ ಆಹಾರವಾದ ಮಂಗಳೂರಿನ ಪಂಪ್ ವೆಲ್ ಸರ್ಕಲ್ ➤ ಟ್ರೋಲ್ ಆಗುತ್ತಿದೆ ಸಂಸದರ ಟ್ವೀಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಪೌರತ್ವ ವಿರೋಧಿಸಿ ತುಳುನಾಡಿನಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ ಎರಡು ಜೀವಗಳು ಬಲಿಯಾಗಿದ್ದು ಆಯಿತು. ಕರ್ಫ್ಯೂ ಹಾಕಿ ಜನಜೀವನ ಅಸ್ತವ್ಯಸ್ತ ಆಗಿದ್ದೂ ಆಯಿತು. ಇದೀಗ ಕಲ್ಲೆಸೆತವನ್ನು ಟ್ರೋಲ್ ಮಾಡುತ್ತಾ ಸಂಸದ ನಳಿನ್ ಕುಮಾರ್ ಕಟೀಲ್ ರ ನಕಲಿ ಟ್ವೀಟೊಂದು ನೆಟ್ಟಿಗರಿಗೆ ಆಹಾರವಾಗುತ್ತಿದೆ. ಮಂಗಳೂರಿನ ಮುಖ್ಯದ್ವಾರವಾದ ಪಂಪ್ ವೆಲ್ ನಲ್ಲಿ ಕಳೆದ 9 ವರ್ಷಗಳಿಂದ ನಿರ್ಮಿಸುತ್ತಿರುವ ಫ್ಲೈಓವರ್ ಕಾಮಗಾರಿಯ ಉದ್ಘಾಟನೆಗೆ ಹಲವು ಸಲ ದಿನಾಂಕ ನಿಗದಿಯಾಗಿ ಕೊನೆಯ ಹಂತದಲ್ಲಿ ಕಾಮಗಾರಿ ಪೂರ್ತಿಯಾಗದೆ

ಕಲ್ಲೆಸೆತದಿಂದ ನೆಟ್ಟಿಗರಿಗೆ ಆಹಾರವಾದ ಮಂಗಳೂರಿನ ಪಂಪ್ ವೆಲ್ ಸರ್ಕಲ್ ➤ ಟ್ರೋಲ್ ಆಗುತ್ತಿದೆ ಸಂಸದರ ಟ್ವೀಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಯುವಕನಿಗೆ ಚೂರಿ ಇರಿತ ➤ ಮತ್ತೆ ಬೆಚ್ಚಿಬಿದ್ದ ತುಳುನಾಡು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಶನಿವಾರ ರಾತ್ರಿ ಮಂಗಳೂರಿನಲ್ಲಿ ನಡೆದಿದ್ದು, ಪೌರತ್ವದ ಕಿಚ್ಚಿನಿಂದ ತಲ್ಲಣಗೊಂಡಿದ್ದ ಮಂಗಳೂರು ಇದೀಗ ಮತ್ತೆ ಬೆಚ್ಚಿ ಬಿದ್ದಿದೆ. ನಗರದ ಹೊರವಲಯದ ತೊಕ್ಕೊಟ್ಟು ಎಂಬಲ್ಲಿನ ಅಂಬಿಕಾ ರೋಡ್ ಸಮೀಪ ತಂಡವೊಂದು ನಿಖಿಲ್ ಕೋಟ್ಯಾನ್ ಎಂಬವರಿಗೆ ಚೂರಿಯಿಂದ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿರುವ ನಿಖಿಲ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ತನಿಖೆ ಕೈಗೊಂಡಿದ್ದಾರೆ.

ಮಂಗಳೂರು: ಯುವಕನಿಗೆ ಚೂರಿ ಇರಿತ ➤ ಮತ್ತೆ ಬೆಚ್ಚಿಬಿದ್ದ ತುಳುನಾಡು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕಾರಿನ ಮೇಲೆ ಉರುಳಿ ಬಿದ್ದ ಲಾರಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.20. ಲಾರಿಯೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಕಬ್ಬಿಣದ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಉದನೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಂಡ್ಯ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು

ನೆಲ್ಯಾಡಿ: ಕಾರಿನ ಮೇಲೆ ಉರುಳಿ ಬಿದ್ದ ಲಾರಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top