ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.23: ಎರಡು ದಿನಗಳ ಹಿಂದೆ ತಾಲೂಕಿನ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ. ಎ.20 ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕ್ ನ್ನು ಚಲಾಯಿಸಿಕೊಂಡು ಬಂದು […]

ಬೆಳ್ತಂಗಡಿ : ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಮಧ್ಯಾಹ್ನ 12ಕ್ಕೆ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.23: ​ ಈ ಬಾರಿ ರಾಜ್ಯದಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 8,65,988 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರ ಶೈಕ್ಷಣಿಕ ಬದುಕಿನ ಪ್ರಮುಖ ಹಂತವಾದ ಈ ಫಲಿತಾಂಶ ಇಂದು ನಿರ್ಧಾರವಾಗಲಿದೆ. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಅಂಕಪಟ್ಟಿಯನ್ನು ಪರಿಶೀಲಿಸಬಹುದು. ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಬಗ್ಗೆ ಸರ್ಕಾರ ಹಿಂದೆ ಚಿಂತನೆ ನಡೆಸಿತ್ತು. ಆದರೆ ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ, ಈ ಬಾರಿ ಹಿಂದಿಗೂ ಅಂಕಗಳನ್ನು

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಮಧ್ಯಾಹ್ನ 12ಕ್ಕೆ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.23: ​ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕರುನಾಡು ಬಿಸಿಲ ಧಗೆಗೆ ಬಳಲಿ ಬೆಂಡಾಗಿದ್ದು, ರಣಬೇಸಿಗೆಗೆ ಜನ ಹೈರಾಣಾಗಿದ್ದಾರೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ ಶಿವಾಜಿ ಪಾತ್ರಕ್ಕೆ ರಿತೇಶ್ ದೇಶ್‌ಮುಖ್ ಸೂಕ್ತವಲ್ಲ- ಟ್ರೋಲ್‌ ಆದ ನಟ ರಿತೇಶ್‌

(ನ್ಯೂಸ್‌ ಕಡಬ) newskadaba.com,  ಎ.22: ಬಾಲಿವುಡ್ ನಟ ರಿತೇಶ್ ದೇಶ್‌ಮುಖ್ ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ ‘ರಾಜ ಶಿವಾಜಿ’ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಟ್ರೇಲರ್ ರಿಲೀಸ್ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಏಪ್ರಿಲ್ 20ರಂದು ಅದ್ದೂರಿಯಾಗಿ ಟ್ರೇಲರ್ ಲಾಂಚ್ ಆಗಿದ್ದರೂ, ಛತ್ರಪತಿ ಶಿವಾಜಿ ಮಹಾರಾಜರ ಪಾತ್ರಕ್ಕೆ ರಿತೇಶ್ ಆಯ್ಕೆಯಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರೇಕ್ಷಕರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾ ವೇದಿಕೆಗಳಲ್ಲಿ ಈ

ರಾಜ ಶಿವಾಜಿ ಪಾತ್ರಕ್ಕೆ ರಿತೇಶ್ ದೇಶ್‌ಮುಖ್ ಸೂಕ್ತವಲ್ಲ- ಟ್ರೋಲ್‌ ಆದ ನಟ ರಿತೇಶ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಎ.22: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ರಾಜ್ಯಾದ್ಯಂತ ಇಂದಿನಿಂದ (ಏಪ್ರಿಲ್ 22) ಆರಂಭವಾಗುತ್ತಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯುತ್ತಿದೆ. ವರ್ಷ ದಾಖಲೆಯ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 3,30,479 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 1,86,099 ಹುಡುಗಿಯರು ಮತ್ತು 1,44,380 ಹುಡುಗರು ಸೇರಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲೇ 163 ಕೇಂದ್ರಗಳಲ್ಲಿ

ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಜಾತ್ರಾ ಮಹೋತ್ಸವದ ವೇಳೆ ಸಾರ್ವಜನಿಕ ಶಾಂತಿ ಭಂಗ – ಇಬ್ಬರು ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,  ಎ.22: ನಗರದ ಪೇಟೆಯಲ್ಲಿರುವ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪುತ್ತೂರು ನರಿಮೊಗರು ನಿವಾಸಿ ಹರ್ಷ ಗೋಪಾಲ್ ಹಾಗೂ ಕಬಕ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಏಪ್ರಿಲ್ 20 ರಂದು ರಾತ್ರಿ ವೇಳೆ ದೇವಸ್ಥಾನದ ಜಾತ್ರಾ ಸ್ಥಳದಲ್ಲಿ ಪುತ್ತೂರು ನಗರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ದೇವಸ್ಥಾನದ

ಪುತ್ತೂರು : ಜಾತ್ರಾ ಮಹೋತ್ಸವದ ವೇಳೆ ಸಾರ್ವಜನಿಕ ಶಾಂತಿ ಭಂಗ – ಇಬ್ಬರು ಅರೆಸ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“SSLC ಫಲಿತಾಂಶ 2026: ಅಂಕಪಟ್ಟಿ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!”

(ನ್ಯೂಸ್‌ ಕಡಬ) newskadaba.com,  ಎ.22:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEAB) 2026ರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲು ಸಿದ್ಧತೆ ನಡೆಸಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಮತ್ತು ಅಂಕಪಟ್ಟಿ ಡೌನ್‌ಲೋಡ್ ಮಾಡುವ ವಿಧಾನ ಇಲ್ಲಿದೆ: ಎಸ್ಸೆಸ್ಸೆಲ್ಸಿ ಫಲಿತಾಂಶ 2026: ಪ್ರಮುಖ ವಿವರಗಳು ರಾಜ್ಯದಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆದ 10ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಕ್ಕಾಗಿ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಹೈಕೋರ್ಟ್‌ನ ಇತ್ತೀಚಿನ ತೀರ್ಪಿನ ಅನ್ವಯ, ತೃತೀಯ ಭಾಷೆ

“SSLC ಫಲಿತಾಂಶ 2026: ಅಂಕಪಟ್ಟಿ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 13 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.22: ಪೂರಂ ಉತ್ಸವದ ಸಿದ್ಧತೆಗಳ ಸಮಯದಲ್ಲಿ ತಿರುವಂಬಾಡಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹದಿಮೂರು ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ 27 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದ ಸಮಯದಲ್ಲಿ ಸುಮಾರು 40 ಜನ ಆ ಸ್ಥಳದಲ್ಲಿದ್ದರು ಎಂಬ ಪ್ರಾಥಮಿಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಹಬ್ಬಕ್ಕಾಗಿ ಪಟಾಕಿ ತಯಾರಿಸಲಾಗುತ್ತಿದ್ದ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.ಘಟನೆಯ ಬಳಿಕ ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 13 ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಭಾರೀ ಗಾಳಿ, ಮಳೆ – ಬೃಹತ್ ಮರದ ಕೊಂಬೆ ಮುರಿದು ಬಿದ್ದು ಮನೆ, ವಾಹನಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com,  ಎ.22: ನಗರದಲ್ಲಿ ಬೆಳಗಿನ ಜಾವ ಭಾರೀ ಗಾಳಿಯೊಂದಿಗೆ ಸುರಿದ ಮಳೆಗೆ ಬೃಹತ್‌ ಮರದ ಕೊಂಬೆ ಮುರಿದು ಬಿದ್ದು ಮನೆ, ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ. ನಗರದ ಚಮ್ಮಾರ ಗಲ್ಲಿ, ಬಸವನಗುಡಿ ಬಳಿಯ ಅಶ್ವಥ ಕಟ್ಟೆಯಲ್ಲಿ ಬೆಳಗಿನ ಜಾವ ಸುಮಾರು 3:30ಕ್ಕೆ ಈ ಘಟನೆ ಸಂಭವಿಸಿದೆ. ಅಶ್ವಥ ಕಟ್ಟೆ ಯಲ್ಲಿದ್ದ ಬೃಹತ್ ಅಶ್ವಥ ಮರದ ಕೊಂಬೆ ಏಕಾಏಕಿ ಮುರಿದು ಬಿದ್ದಿದೆ. ಮುರಿದ ಕೊಂಬೆ, ಹತ್ತಿರದಲ್ಲಿದ್ದ ಎರಡು ಮನೆಗಳ ಮೇಲೆ ಬಿದ್ದು, ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಮಂಗಳೂರು : ಭಾರೀ ಗಾಳಿ, ಮಳೆ – ಬೃಹತ್ ಮರದ ಕೊಂಬೆ ಮುರಿದು ಬಿದ್ದು ಮನೆ, ವಾಹನಗಳಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಭಾರೀ ಮಳೆಗೆ ತಡೆಗೋಡೆ ಕುಸಿತ – 5 ಕಾರುಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com,  ಎ.22: ಬುಧವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ನಗರದ ಅತ್ತಾವರ ಸಮೀಪದ ಅಯ್ಯಪ್ಪ ಮಂದಿರದ ಮುಂಭಾಗ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಐದು ಕಾರುಗಳು ಜಖಂಗೊಂಡ ಘಟನೆ ನಡೆದಿದೆ. ಅಕಸ್ಮಿಕವಾಗಿ ತಡೆಗೋಡೆ ಕುಸಿದುಬಿದ್ದ ಕಾರಣ ಅಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಭಾರೀ ಮಳೆಗೆ ತಡೆಗೋಡೆ ಕುಸಿತ – 5 ಕಾರುಗಳಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top