ಸಿನಿಮಾ

ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು

(ನ್ಯೂಸ್ ಕಡಬ) newskadaba.com, ಜು. 30.  ಬರೋಬ್ಬರಿ 48 ಸೋಷಿಯಲ್ ಮೀಡಿಯಾ ಅಕೌಂಟ್‌ನಿಂದ ತಮಗೆ ಅಶ್ಲೀಲ ಮೆಸೇಜ್ ಬಂದಿರುವುದಾಗಿ ನಟಿ ರಮ್ಯಾ ದೂರು ನೀಡಿದ್ದು, ಅಶ್ಲೀಲ ಮೆಸೇಜ್ ಕಳುಹಿಸಿದವರಿಗೆ ಶಿಕ್ಷೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಟ ದರ್ಶನ್‌ಗೆ ಸಿಕ್ಕಿರೋ ಜಾಮೀನು ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ್ದ ಅಭಿಪ್ರಾಯವನ್ನು ನಟಿ ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸುಪ್ರೀಂ ಕೋರ್ಟ್‌ನಿಂದ ಸಾಮಾನ್ಯರಿಗೆ ನ್ಯಾಯ ಸಿಗುತ್ತೆ ಅಂತ ನಂಬಿದ್ದು ನಿಜವಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂದು ಪೋಸ್ಟ್ ಮಾಡಿದ್ದರು. […]

ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು Read More »

ಕರ್ನಾಟಕ, ಸಿನಿಮಾ

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

(ನ್ಯೂಸ್‌ ಕಡಬ)newskadaba.com ಜು.26: ‘ಡೆವಿಲ್’ ಸಿನಿಮಾ ಶೂಟಿಂಗ್ ಸಲುವಾಗಿ ಥೈಲ್ಯಾಂಡ್‌ಗೆ ತೆರಳಿದ್ದ ನಟ ದರ್ಶನ್ ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ರಾತ್ರಿ 11:45ರ ವಿಮಾನದಲ್ಲಿ ದೇವನಹಳ್ಳಿಯ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ‘ಡೆವಿಲ್’ ಸಿನಿಮಾ ಶೂಟಿಂಗ್‌ಗೆಂದು ನಟ ದರ್ಶನ್, ಪತ್ನಿ ಹಾಗೂ ಮಗನೊಂದಿಗೆ ಥೈಲ್ಯಾಂಡ್‌ಗೆ ತೆರಳಿದ್ದರು. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್ Read More »

ಸಿನಿಮಾ

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ

(ನ್ಯೂಸ್‌ ಕಡಬ)newskadaba.com ಜು.25: ಇತ್ತೀಚೆಗಷ್ಟೆ ನಿಧನರಾದ ಅಭಿನಯ ಸರಸ್ವತಿ ಬಿ ಸರೋಜಾ ದೇವಿ ಅವರ 11ನೇ ದಿನ ವೈಕುಂಠ ಸಮಾರಾಧನೆ ಕಾರ್ಯಕ್ರಮ ಇಂದು (ಜುಲೈ 25) ಬೆಂಗಳೂರಿನಲ್ಲಿ ನಡೆಯಿತು. ಚಿತ್ರರಂಗ ಹಾಗೂ ರಾಜಕೀಯ ರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಅವರು, ಮಲ್ಲೇಶ್ವರದ 11ನೇ ರಸ್ತೆಗೆ ಬಿ ಸರೋಜಾ ದೇವಿ ಅವರ ಹೆಸರು ಇಡುತ್ತೇವೆ’ ಎಂದು ಘೋಷಿಸಿದರು. ಪಂಚಭಾಷಾ ತಾರೆ ಬಿ ಸರೋಜಾದೇವಿಯವರು 87ನೇ

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ Read More »

ಸಿನಿಮಾ

ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ; ಗುರುವಾರ ಜಾಮೀನು ಭವಿಷ್ಯ

(ನ್ಯೂಸ್‌ ಕಡಬ) newskadaba.com ಜು. 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಗುರುವಾರ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.   ನಟ ದರ್ಶನ್ ಪರ ಇಂದು ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲಿಲ್ಲ. ಅವರು ಗೈರಾದ ಕಾರಣ ನಟನ ಪರ ಸಿದ್ಧಾರ್ಥ್ ದವೆ ವಾದ ಮಂಡಿಸಲಿದ್ದಾರೆ. ಹೀಗಾಗಿ, ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ.   ಕಪಿಲ್ ಸಿಬಲ್ ಗೈರು ಹಿನ್ನೆಲೆ ವಾದ ಮಂಡನೆಗೆ ಕಾಲಾವಕಾಶ ಕೋರಲಾಗಿದೆ.

ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ; ಗುರುವಾರ ಜಾಮೀನು ಭವಿಷ್ಯ Read More »

ಸಿನಿಮಾ

ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com ಜು. 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಗುರುವಾರ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌; ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ

(ನ್ಯೂಸ್‌ ಕಡಬ) newskadaba.com ಜು.20: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹು ನಿರೀಕ್ಷಿತ ಚಿತ್ರ ʻದಿ ಡೆವಿಲ್‌ʼ ಸಿನಿಮಾ ಮೋಷನ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಅತ್ತ ಥಾಯ್ಲೆಂಡ್‌ನಲ್ಲಿ ಶೂಟಿಂಗ್‌ ಕಂಪ್ಲೀಟ್‌ ಮಾಡಲು ದರ್ಶನ್‌ ಬೀಡು ಬಿಟ್ಟಿರುವ ಹೊತ್ತಿನಲ್ಲೇ ಚಿತ್ರತಂಡ ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡಿದೆ. ಇದರ ವಿಡಿಯೋ ತುಣುಕನ್ನು ನಟ ದರ್ಶನ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ತೆರೆ ಎಳೆದಿದ್ದಾರೆ.   ಫೇಸ್‌ಬುಕ್‌ ಖಾತೆಯಲ್ಲಿ ಮೋಷನ್‌ ಪೋಸ್ಟರ್‌ನ 1:05 ನಿಮಿಷದ

ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌; ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ Read More »

ಸಿನಿಮಾ

ಖ್ಯಾತ ಖಳನಾಯಕ ಫಿಶ್ ವೆಂಕಟ್ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com ಜು.19: ತೆಲುಗು ಸಿನಿಮಾಗಳಲ್ಲಿ ಖಳನಾಯಕ, ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದ ನಟ ಫಿಶ್ ವೆಂಕಟ್ ಶುಕ್ರವಾರ (ಜುಲೈ 18) ನಿಧನರಾಗಿದ್ದಾರೆ. ನಟ ಫಿಶ್ ವೆಂಕಟ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಫಿಶ್ ವೆಂಕಟ್ ಕೆಲವು ತಿಂಗಳುಗಳಿಂದ ನಟನ ಆರೋಗ್ಯ ಹದಗೆಟ್ಟಿತ್ತು. ಇದೇ ಕಾರಣದಿಂದ ಫಿಶ್ ವೆಂಕಟ್ ಸಿನಿಮಾಗಳಲ್ಲಿ ನಟಿಸಲು ಸಾಧ್ಯವಾಗಲಿಲ್ಲ. ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಫಿಶ್ ವೆಂಕಟ್, ಕಾಯಿಲೆ ಉಲ್ಬಣಗೊಂಡು ಎರಡೂ ಮೂತ್ರಪಿಂಡಗಳು ಹಾಳಾದ ಕಾರಣ ಕಳೆದ ಕೆಲವು ಕಾಲದಿಂದ ಡಯಾಲಿಸಿಸ್ ಚಿಕಿತ್ಸೆಗೆ

ಖ್ಯಾತ ಖಳನಾಯಕ ಫಿಶ್ ವೆಂಕಟ್ ಇನ್ನಿಲ್ಲ Read More »

ಸಿನಿಮಾ

ದರ್ಶನ್‌ ಜಾಮೀನು ರದ್ದು ಕೋರಿದ್ದ ಮೇಲ್ಮನವಿ ಜು.22ಕ್ಕೆ ಸುಪ್ರೀಂನಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com,ಜು .17. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್‌ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಲ್ಲಿಸಿರುವ ಮೇಲನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ಜು.22ಕ್ಕೆ ಮುಂದೂಡಿದೆ. ಮುಂದುವರೆದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಪಾರ್ದ್ರಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠವು ಚಿತ್ರನಟ ದರ್ಶನ್‌ ಹಾಗೂ ಇತರೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಕಾರಣಗಳನ್ನು ಮಾತ್ರ ಹೇಳಿ. ನಾವು ಬೇರೆ ಯಾವುದನ್ನೂ ಕೇಳುತ್ತಿಲ್ಲ ಎಂದು ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ದರ್ಶನ್‌ ಹಾಗೂ ಆರೋಪಿಗಳ ಬಂಧನ

ದರ್ಶನ್‌ ಜಾಮೀನು ರದ್ದು ಕೋರಿದ್ದ ಮೇಲ್ಮನವಿ ಜು.22ಕ್ಕೆ ಸುಪ್ರೀಂನಲ್ಲಿ ವಿಚಾರಣೆ Read More »

ಕರ್ನಾಟಕ, ಸಿನಿಮಾ

ರಾಜ್ ಬಿ ಶೆಟ್ಟಿ ನಿರ್ಮಾಣದ ʼಸು ಫ್ರಮ್ ಸೋʼ ಚಿತ್ರ ಜು.25ಕ್ಕೆ ರಿಲೀಸ್‌

(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಖ್ಯಾತ ನಟ ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ಹಾಗೂ ರಾಜ್ ಬಿ ಶೆಟ್ಟಿ ಅವರು ನಿರ್ಮಾಣ ಮಾಡಿರುವ ಹಾಗೂ ಜೆಪಿ ತುಮಿನಾಡು ನಿರ್ದೇಶನದ ʼಸು ಫ್ರಮ್ ಸೋʼ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ʼಡ್ಯಾಂಕ್ಸ್ ಅಂಥಮ್; ಹಾಡಿಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಕಾಮಿಡಿ ಹಾರಾರ್ ಕಥಾಹಂದರ ಹೊಂದಿರುವ ಈ

ರಾಜ್ ಬಿ ಶೆಟ್ಟಿ ನಿರ್ಮಾಣದ ʼಸು ಫ್ರಮ್ ಸೋʼ ಚಿತ್ರ ಜು.25ಕ್ಕೆ ರಿಲೀಸ್‌ Read More »

ಕರ್ನಾಟಕ, ಸಿನಿಮಾ

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com, ಜು.16. ಸಿನಿಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ. ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ Read More »

ಸಿನಿಮಾ
Scroll to Top