ಸಿನಿಮಾ

ಕನ್ನಡ ಚಿತ್ರರಂಗದ ‘ಸಾಹಸ ಸಿಂಹ’ನ ಸಾರಥಿ ಇನ್ನಿಲ್ಲ: ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

(ನ್ಯೂಸ್‌ ಕಡಬ) newskadaba.com,  ಫೆ.14: ಕನ್ನಡ ಚಿತ್ರರಂಗದ ಹಿರಿಯ ಮತ್ತು ಪ್ರತಿಭಾವಂತ ನಿರ್ದೇಶಕ ಜೋ ಸೈಮನ್ ಅವರ ಅಗಲಿಕೆ ಸ್ಯಾಂಡಲ್‌ವುಡ್‌ಗೆ ತುಂಬಲಾರದ ನಷ್ಟ. ಜೋ ಸೈಮನ್ ಅವರು ಕೇವಲ ನಿರ್ದೇಶಕರಾಗಿ ಮಾತ್ರವಲ್ಲದೆ, ನಟರಾಗಿ, ಗೀತರಚನೆಕಾರರಾಗಿ ಮತ್ತು ಸಾಹಸ ನಿರ್ದೇಶಕರಾಗಿಯೂ ಗುರುತಿಸಿಕೊಂಡವರು. ಸುಮಾರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ವಿಧಿಯಾಟವೆಂಬಂತೆ, ಚಿತ್ರರಂಗದ ಕುರಿತು ನಡೆದ ಸಭೆಯೊಂದರಲ್ಲೇ (ಫಿಲಂ ಚೇಂಬರ್) ಅವರಿಗೆ ಹೃದಯಾಘಾತ ಸಂಭವಿಸಿತು. 80ನೇ ವಯಸ್ಸಿನಲ್ಲಿ ಅವರು ಕೆಲಸದ ನಡುವೆಯೇ ಇಹಲೋಕ ತ್ಯಜಿಸಿದ್ದು ಅವರ […]

ಕನ್ನಡ ಚಿತ್ರರಂಗದ ‘ಸಾಹಸ ಸಿಂಹ’ನ ಸಾರಥಿ ಇನ್ನಿಲ್ಲ: ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮೊದಲ ಸಿನಿಮಾದ ಶೂಟಿಂಗ್ ಮುಗಿಸಿದ ಮಹಾಕುಂಭಮೇಳದ ಸುಂದರಿ

(ನ್ಯೂಸ್‌ ಕಡಬ) newskadaba.com,ಫೆ.06: ಮಹಾಕುಂಭಮೇಳದ ವೇಳೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಮೊನಾಲಿನಾ ಭೋಸ್ಲೆ ಅವರು ತಮ್ಮ ಮೊದಲ ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಕಳೆದ ವರ್ಷ ಮಹಾಕುಂಭಮೇಳದಲ್ಲಿ ಮೊನಾಲಿಸಾ ಭೋಸ್ಲೆ ಅವರು ಮಣಿ ಸರಗಳನ್ನು ಮಾರುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡರು. ಅದಾದ ಬಳಿಕ ಕೆಲವೇ ದಿನಗಳಲ್ಲಿ ಅವರಿಗೆ ಹಿಂದಿ ಚಿತ್ರರಂಗದಿಂದ ಅವಕಾಶಗಳು ಬಂದಿತ್ತು. ಅವರಿಗೆ ನಾಯಕ ನಟಿಯಾಗುವ ಅವಕಾಶ ಸಿಕ್ಕಿತು. ಇದೀಗ ಅವರು ಶೂಟಿಂಗ್ ಮುಗಿಸಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಮೊನಾಲಿಸಾ

ಮೊದಲ ಸಿನಿಮಾದ ಶೂಟಿಂಗ್ ಮುಗಿಸಿದ ಮಹಾಕುಂಭಮೇಳದ ಸುಂದರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

“ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಮ್ಯಾಕ್ಸ್ ಮಂಜು”

(ನ್ಯೂಸ್‌ ಕಡಬ) newskadaba.com,ಜ,23 : ಉಗ್ರಂ’, ‘ಮ್ಯಾಕ್ಸ್’ ಮುಂತಾದ ಸಿನಿಮಾಗಳಲ್ಲಿ ಅಬ್ಬರಿಸಿರುವ ಮಂಜು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ಉಗ್ರಂ ಮಂಜು ಅವರ ವಿವಾಹ ಮಹೋತ್ಸವ ಜರುಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಗ್ರಂ ಮಂಜು – ಸಂಧ್ಯಾ ಅವರ ಕಲ್ಯಾಣ ನೆರವೇರಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ಮದುವೆ ಜರುಗಿದ್ದು, ಕುಟುಂಬಸ್ಥರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ಸಂಧ್ಯಾ ಕೊರಳಿಗೆ ಉಗ್ರಂ ಮಂಜು ಮಾಂಗಲ್ಯಧಾರಣೆ ಮಾಡಿದ್ದಾರೆ…..

“ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಮ್ಯಾಕ್ಸ್ ಮಂಜು” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಉಳ್ಳಾಲ : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ

(ನ್ಯೂಸ್‌ ಕಡಬ) newskadaba.com,ಜ.17 : ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ ಯಾರು ಬಂದರು ಕೊರಗಜ್ಜನ ಕ್ಷೇತ್ರಕ್ಕೆ ಬಂದೇ ಬರ್ತಾರೆ. ಯಾರೇ ಬಂದರೂ ಕೊರಗಜ್ಜ ಅವರ ಬಯಕೆಗಳನ್ನು ಈಡೇರಿಸುತ್ತಾರೆ. ನನ್ನ ಮಗ,ಮಗಳು,ಅಳಿಯ ಎಲ್ಲರೂ ಇಲ್ಲಿಗೆ ಬಂದಿದ್ದಾರೆ. ನನಗೂ ಇಲ್ಲಿ ಬರಲು ಬಹಳ ಆಶೆ ಇತ್ತು ಅದು ಇಂದು ನೆರವೇರಿದೆ. ಪುತ್ರ ಅಹಾನ್ ಶೆಟ್ಟಿ ನಟನೆಯ ಬಹು

ಉಳ್ಳಾಲ : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ಸಿನಿಮಾ

ರಿಯಾಲಿಟಿ ಶೋ “ಬಿಗ್ ಬಾಸ್” ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್‌

(ನ್ಯೂಸ್‌ ಕಡಬ) newskadaba.com,: ರಣಹದ್ದು ಬಗ್ಗೆ ತಪ್ಪಾದ ಮಾಹಿತಿ ಹರಡಿದ ಆರೋಪದಡಿ ಬಿಗ್ ಬಾಸ್ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಿದ್ದ ಹಿನ್ನೆಲೆ, ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್ ಜಾರಿ ಮಾಡಲಾಗಿದೆ. ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ‘ಹೊಂಚು ಹಾಕಿ ಸಂಚು ಮಾಡಿ ಲಬಕ್ ಅಂತ ಹಿಡಿಯುವುದು’ ಎಂದು ಮಾಹಿತಿ ಹರಡಲಾಗಿದೆ. ಹದ್ದು& ರಣಹದ್ದಿಗೂ ಇರುವ ವ್ಯತ್ಯಾಸದ ಬಗ್ಗೆ ಸ್ಪಷ್ಟಿಕರಣ ನೀಡುವಂತೆ, ಪ್ರೋಗ್ರಾಂ ಹೆಡ್‌ಗೆ ನೋಟಿಸ್‌

ರಿಯಾಲಿಟಿ ಶೋ “ಬಿಗ್ ಬಾಸ್” ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್‌ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಸ್ಟಾರ್ ನಟಿಯೊಂದಿಗೆ ಎರಡನೇ ಮದುವೆಗೆ ಸಜ್ಜಾದ ನಟ ಧನುಶ್

(ನ್ಯೂಸ್‌ ಕಡಬ) newskadaba.com,  ಜ.16 : ಬರೋಬ್ಬರಿ 20 ವರ್ಷಗಳ ಬಳಿಕ ವಿಚ್ಛೇದನ ಪಡೆದ ದಕ್ಷಿಣ ಭಾರತದ ಸ್ಟಾರ್ ನಟರಲ್ಲಿ ಒಬ್ಬರಾದ ಧನುಶ್ ಅವರು ಇದೀಗ ಸ್ಟಾರ್ ನಟಿಯೊಬ್ಬರ ಮದುವೆಯಾಗಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಧನುಶ್ ಅವರು ರಜನೀಕಾಂತ್ ಪುತ್ರಿ ಐಶ್ವರ್ಯ ಜೊತೆಗೆ 2004 ರಲ್ಲಿ ಮದುವೆಯಾಗಿದ್ದರು. ಇವಬ್ಬರಿಗೂ ಇಬ್ಬರು ಗಂಡು ಮಕ್ಕಳಿದ್ದಾರೆ. ತಾವು ಬೇರೆ ಆಗುತ್ತಿರುವುದಾಗಿ 2022 ರಲ್ಲಿ ಧನುಶ್ ಹಾಗೂ ಐಶ್ವರ್ಯಾ ಘೋಷಿಸಿದರು. 2024ರಲ್ಲಿ ಇವರಿಬ್ಬರಿಗೆ ನ್ಯಾಯಾಲಯವು ವಿಚ್ಛೇದನ ನೀಡಿತು. ಇದೀಗ ಧನುಶ್ ಬಹುಭಾಷಾ ನಟಿ

ಸ್ಟಾರ್ ನಟಿಯೊಂದಿಗೆ ಎರಡನೇ ಮದುವೆಗೆ ಸಜ್ಜಾದ ನಟ ಧನುಶ್ Read More »

ಸಿನಿಮಾ

ದಳಪತಿ ವಿಜಯ್ ಫ್ಯಾನ್ಸ್‌ಗೆ ಶಾಕ್; ‘ಜನ ನಾಯಗನ್’ ಸಿನಿಮಾ ರಿಲೀಸ್ ಮುಂದಕ್ಕೆ

(ನ್ಯೂಸ್‌ ಕಡಬ) newskadaba.com,ಜ.07: ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಕೊನೆಯ ಚಿತ್ರ ‘ಜನ ನಾಯಗನ್’ಗಾಗಿ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದರು. ಆದರೆ ಇದೀಗ ಸಿನಿಮಾ ರಿಲೀಸ್ ತಾತ್ಕಲಿಕವಾಗಿ ಮುಂದಕ್ಕೆ ಹೋಗಿದೆ ಎನ್ನಲಾಗುತ್ತಿದೆ. ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಮಾಡಿಸಲು ‘ಕೆವಿಎನ್’ ಸಂಸ್ಥೆ ಡಿಸೆಂಬರ್ 18ರಂದೇ ಸಿನಿಮಾ ಸಲ್ಲಿಸಿತ್ತು. ಸಿನಿಮಾ ನೋಡಿದ ಮಂಡಳಿ 27 ಕಡೆ ಬದಲವಾಣೆ/ಕಟ್‌ಗೆ ಸೂಚನೆ ನೀಡಿತ್ತು. ಇದನ್ನು ಸಿನಿಮಾ ಪಾಲಿಸಿತ್ತು. ಬಳಿಕ ಸಿನಿಮಾವನ್ನ ಮರು ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಮಂಡಳಿ ಒಪ್ಪದೆ,

ದಳಪತಿ ವಿಜಯ್ ಫ್ಯಾನ್ಸ್‌ಗೆ ಶಾಕ್; ‘ಜನ ನಾಯಗನ್’ ಸಿನಿಮಾ ರಿಲೀಸ್ ಮುಂದಕ್ಕೆ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಸಲ್ಮಾನ್ ಖಾನ್ ಅಭಿನಯದ ಬ್ಯಾಟಲ್ ಆಫ್ ಗಲ್ವಾನ್ ಟೀಸರ್ಗೆ ಚೀನಾ ವಿರೋಧ

(ನ್ಯೂಸ್‌ ಕಡಬ) newskadaba.com,ಡಿ.31: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬರುವ ಯುದ್ಧ ಆಧಾರಿತ ಸಿನಿಮಾ ಬ್ಯಾಟಲ್ ಆಫ್ ಗಲ್ವಾನ್ ಟೀಸರ್‌ಗೆ ಚೀನಾ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಿನಿಮಾದಲ್ಲಿ ಚಿತ್ರೀಕರಿಸಿರುವ ದೃಶ್ಯಗಳು ಜೂನ್ 2020 ರ ಘರ್ಷಣೆಯ ಘಟನೆಗಳು ಸತ್ಯಗಳಿಗೆ ಹೊಂದಿಕೆಯಾಗುವುದಿಲ್ಲ. ಗಲ್ವಾನ್ ಕಣಿವೆ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್‌ನ ಚೀನಾ ಭಾಗದಲ್ಲಿದೆ. ಘರ್ಷಣೆಗೆ ಭಾರತೀಯ ಸೈನಿಕರು ಎಲ್‌ಎಸಿ ದಾಟಿ, ಪ್ರಚೋದಿಸಿದ್ದೇ ಕಾರಣ ಎಂದು ಚೀನಾ ದೂಷಿಸಿದೆ. ಚೀನಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಅದು ಕಲಾವಿದನ

ಸಲ್ಮಾನ್ ಖಾನ್ ಅಭಿನಯದ ಬ್ಯಾಟಲ್ ಆಫ್ ಗಲ್ವಾನ್ ಟೀಸರ್ಗೆ ಚೀನಾ ವಿರೋಧ Read More »

ಸಿನಿಮಾ

ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ನಿಶ್ಚಿತಾರ್ಥ

(ನ್ಯೂಸ್‌ ಕಡಬ) newskadaba.com,ಡಿ.29: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ, ಏಳು ವರ್ಷಗಳ ದೀರ್ಘಕಾಲದ ಗೆಳತಿ ಅವಿವಾ ಬೇಗ್(Aviva Baig) ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ರೈಹಾನ್ ತನ್ನ ಗೆಳತಿ ಅವಿವಾ ಬೇಗ್ ಗೆ ಪ್ರಪೋಸ್ ಮಾಡಿದ್ದಾಗಿ ಹೇಳಲಾಗಿದ್ದು, ನಿಶ್ಚಿತಾರ್ಥಕ್ಕೆ ಎರಡೂ ಕುಟುಂಬಗಳ ಒಪ್ಪಿಗೆ ಸಿಕ್ಕಿದೆ ಎಂದು ವರದಿಯಾಗಿದೆ. ಅವಿವಾ ಬೇಗ್ ಮತ್ತು ಅವರ ಕುಟುಂಬ ದೆಹಲಿಯಲ್ಲಿ ನೆಲೆಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ನಿಶ್ಚಿತಾರ್ಥ Read More »

ಸಿನಿಮಾ

ಕಿರುತೆರೆ ನಟಿ ನಂದಿನಿ ಸಿಎಂ ದುರಂತ ಅಂತ್ಯ

(ನ್ಯೂಸ್‌ ಕಡಬ) newskadaba.com,ಡಿ.29:  ಕನ್ನಡ ಹಾಗೂ ತಮಿಳು ಧಾರಾವಾಹಿಗಳಲ್ಲಿ ಅಭಿನಯಿಸಿ ಹೆಸರು ಮಾಡಿದ್ದ ನಟಿ ನಂದಿನಿ ಸಿಎಂ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿ ಅವರು ಮೃತಪಟ್ಟಿರುವುದು ದೃಢಪಟ್ಟಿದ್ದು, ಸಾವಿನ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರ ಅಕಾಲಿಕ ನಿಧನ ಕಿರುತೆರೆ ವಲಯದಲ್ಲಿ ಆಘಾತ ಮೂಡಿಸಿದೆ. ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು. ತಮಿಳಿನ ‘ಗೌರಿ’

ಕಿರುತೆರೆ ನಟಿ ನಂದಿನಿ ಸಿಎಂ ದುರಂತ ಅಂತ್ಯ Read More »

ಸಿನಿಮಾ
Scroll to Top