ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರೈಮ್ ನ್ಯೂಸ್ – News Kadaba https://newskadaba.com 24x7 Regional News Thu, 03 Sep 2026 04:39:44 +0000 en-US hourly 1 https://wordpress.org/?v=7.0.7 ಮನೆ ಸಮೀಪದ ಸ್ಮೋಕ್ ಹೌಸ್ ನಲ್ಲಿ ಭಾರೀ ಬೆಂಕಿ ಒಣಗಿಸಲು ಇಟ್ಟಿದ್ದ ರಬ್ಬರ್ ಸುಟ್ಟು ಭಸ್ಮ https://newskadaba.com/125359/ Thu, 03 Sep 2026 04:39:44 +0000 https://newskadaba.com/?p=125359 (ನ್ಯೂಸ್ ಕಡಬ) newskadaba.com ಸೆ. 03. ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ರಬ್ಬರ್ ಸ್ಮೋಕ್ ಹೌಸ್ ಕಟ್ಟಡವು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸುಮಾರು 5-6 ಲಕ್ಷ ರೂಪಾಯಿ ನಷ್ಟ ಉಂಟಾದ ಘಟನೆ ಧರ್ಮಸ್ಥಳ ಗ್ರಾಮದ ಪೊಸೊಳಿಕೆ ಎಂಬಲ್ಲಿ ಸಂಭವಿಸಿದೆ.

 

ಸ್ಥಳೀಯ ನಿವಾಸಿ ಪಿ.ಕೆ. ಜೋಬ್ ಅವರಿಗೆ ಸೇರಿದ ಈ ಎರಡು ಸ್ಮೋಕ್ ಹೌಸ್ ಗಳಲ್ಲಿ ಬುಧವಾರ ಮುಂಜಾನೆ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನ ನಡೆಸಿದರೂ, ಎರಡೂ ಕಟ್ಟಡಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.

 

ಆಕಸ್ಮಿಕವಾಗಿ ಸಂಭವಿಸಿದ ಬೆಂಕಿಯಿಂದ ಎರಡೂ ಕಟ್ಟಡಗಳಿಗೆ ವ್ಯಾಪಕ ಹಾನಿಯಾಗಿದ್ದು, ಒಣಗಿಸಲು ಇರಿಸಲಾಗಿದ್ದ ರಬ್ಬರ್ ಶೀಟ್‌ಗಳು ಹಾಗೂ ಕಟ್ಟಡಗಳಲ್ಲಿ ಸಂಗ್ರಹಿಸಿಟ್ಟಿದ್ದ ಮರದ ದಿಮ್ಮಿಗಳು ಸಂಪೂರ್ಣ ಸುಟ್ಟುಹೋಗಿವೆ. ಘಟನೆಯಿಂದ ಸುಮಾರು 5-6 ಲಕ್ಷ ರೂಪಾಯಿವರೆಗೆ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ..

]]>
ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ https://newskadaba.com/125186/ Sun, 30 Aug 2026 05:45:43 +0000 https://newskadaba.com/?p=125186 (ನ್ಯೂಸ್ ಕಡಬ) newskadaba.com ಆ. 30. ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಲೆಟ್ಟಿ ಗ್ರಾಮದ ಕುದ್ಕುಳಿಯ ನಿವಾಸಿ ಗಿರೀಶ್ ಎಂಬವರ ಮೃತದೇಹವು ಇಂದು(ಭಾನುವಾರದಂದು) ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ.

 

ಮನೆಯಿಂದ ಹುಲ್ಲು ತರಲೆಂದು ಹೋಗಿದ್ದ ಗಿರೀಶ್ ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟದ ವೇಳೆ ಬಪಯಸ್ವಿನಿ ನದಿ ತಟದಲ್ಲಿಅವರ ಕೊಡೆ ಮತ್ತು ಕತ್ತಿ ಪತ್ತೆಯಾಗಿದ್ದು, ಬಳಿಕ ಪೊಲೀಸ್ ದೂರು ನೀಡಲಾಗಿತ್ತು.

 

ಸುಳ್ಯ ಪೋಲಿಸ್ ಇಲಾಖೆಯವರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯವರು ಕಳೆದ ಎರಡು ದಿನಗಳಿಂದ ಹುಡುಕಾಟದಲ್ಲಿ ನಿರತರಾಗಿದ್ದರು. ಸದ್ಯ ಆದಿತ್ಯವಾರ ಬೆಳಗ್ಗೆ ಹುಡುಕಾಟ ನಡೆಸುವ ಸಂದರ್ಭದಲ್ಲಿ ವಿಶ್ವನಾಥ ಶೆಟ್ಟಿಯವರ ಮೃತದೇಹವು ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿರುವುದಾಗಿ ಎಂದು ತಿಳಿದು ಬಂದಿದೆ.

]]>
ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಮೃತ್ಯು!! https://newskadaba.com/125159/ Fri, 28 Aug 2026 11:10:16 +0000 https://newskadaba.com/?p=125159 (ನ್ಯೂಸ್ ಕಡಬ) newskadaba.com ಆ. 28. ಖಾಸಗಿ ತರಬೇತಿ ವಿಮಾನ ಅಪಘಾತ ಸಂಭವಿಸಿದ ಪರಿಣಾಮ ಉಡುಪಿ ಮೂಲದ ತರಬೇತಿ ಪೈಲಟ್ ಓರ್ವ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

 

ಮೃತ ಯುವಕನನ್ನು ಅಭಿಷೇಕ್ ಪೂಜಾರಿ(22) ಎಂದು ಗುರುತಿಸಲಾಗಿದೆ. ಅಭಿಷೇಕ್ ಪೂಜಾರಿಯವರು ಮೂಲತಃ ಉಡುಪಿ ಜಿಲ್ಲೆಯ ಕಣಜಾರು ಗ್ರಾಮದ ಕಾಡೆಬರ್ಕೆ ನಿವಾಸಿ. ವರದಿಯ ಪ್ರಕಾರ, ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು. ಅಭಿಷೇಕ್ ಅವರ ತಂದೆ ಪ್ರಭಾಕರ್ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ತಮ್ಮ ಕುಟುಂಬದೊಂದಿಗೆ ಆಗಾಗ ಕಣಜಾರು ಗ್ರಾಮದ ಕಾಡೆಬರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಭೇಟಿ ನೀಡುತ್ತಿದ್ದರು.

 

ಅಪಘಾತದ ಮಾಹಿತಿ ತಿಳಿದ ಕುಟುಂಬಸ್ಥರು ಕಾನ್ಪುರಕ್ಕೆ ತೆರಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.

 

]]>
ಕಡಬ: ಪಟ್ಟಣ ಪಂಚಾಯತ್ ಅಧ್ಯಕ್ಷರ ಮನೆಯಿಂದಲೇ ಹಣ ಕಳ್ಳತನ- ದೂರು ದಾಖಲು https://newskadaba.com/125155/ Fri, 28 Aug 2026 09:55:47 +0000 https://newskadaba.com/?p=125155 (ನ್ಯೂಸ್ ಕಡಬ) newskadaba.com ಆ. 28. ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡಗದ್ದೆಯ ಮನೆಯೊಂದರಿಂದ 84,800 ರೂ. ನಗದು ಕಳ್ಳತನವಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಸಂಬಂಧ ಕಡಬ ಗ್ರಾಮ ನಿವಾಸಿ ತಮನ್ನಾ ಜಬೀನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

 

ದೂರುದಾರರ ಪ್ರಕಾರ, ಪಿರ್ಯಾದುದಾರರು ತಮ್ಮ ಗಂಡ, ಮಕ್ಕಳು ಹಾಗೂ ಕುಟುಂಬ ಸದಸ್ಯರೊಂದಿಗೆ ಅಡ್ಡಗದ್ದೆಯಲ್ಲಿರುವ ಮನೆಯಲ್ಲಿ ವಾಸವಾಗಿದ್ದು, ತಮ್ಮ ರೂಮ್‌ನಲ್ಲಿದ್ದ ಮರದ ಬಾಕ್ಸ್‌ನಲ್ಲಿ ಹಣವನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಆಗಸ್ಟ್ 18ರಂದು ಕಾರ್ಯಕ್ರಮವೊಂದರ ನಿಮಿತ್ತ ಗಂಡ ಹಾಗೂ ಮಕ್ಕಳೊಂದಿಗೆ ಉಡುಪಿಗೆ ತೆರಳಿದ್ದ ಅವರು, ಅದೇ ದಿನ ಮನೆಗೆ ವಾಪಸ್ ಮರಳಿದ್ದರು. ಬಳಿಕ ಆಗಸ್ಟ್ 24ರಂದು ಮರದ ಬಾಕ್ಸ್‌ನಲ್ಲಿದ್ದ ಹಣವನ್ನು ತೆಗೆಯಲು ಹೋದಾಗ, ಬಾಕ್ಸ್ ಒಡೆದ ಸ್ಥಿತಿಯಲ್ಲಿ ಕಂಡುಬಂದಿದೆ.

 

ಪರಿಶೀಲನೆ ನಡೆಸಿದಾಗ ಬಾಕ್ಸ್‌ನಲ್ಲಿಟ್ಟಿದ್ದ ₹84,800 ನಗದು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಅ.ಕ್ರ. 101/2026, ಕಲಂ 305 BNS-2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

]]>
ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ https://newskadaba.com/125127/ Thu, 27 Aug 2026 07:12:09 +0000 https://newskadaba.com/?p=125127 (ನ್ಯೂಸ್ ಕಡಬ) newskadaba.com ಆ. 27. ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ.

ಮೂಲಗಳ ಪ್ರಕಾರ, ಗುಜರಾತ್‌ ಅಹಮದಾಬಾದ್‌ನ ಪ್ರವಾಸಿಗರ ಗುಂಪೊಂದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ದೇವರಕೊಲ್ಲಿ ಅಬ್ಬಿ ಜಲಪಾತದ ಬಳಿ ರಸ್ತೆಬದಿಯಲ್ಲಿ ತಮ್ಮ ಟಿಟಿ ವಾಹನವನ್ನು ನಿಲ್ಲಿಸಿದ್ದಾಗ ಈ ಅಪಘಾತ ಸಂಭವಿಸಿದೆನ್ನಲಾಗಿದೆ.

ಸುಳ್ಯದ ಕಡೆಗೆ ಚಲಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಉರುಳಿಬಿದ್ದಿದೆ. ಟಿಟಿಯೊಳಗಿದ್ದ ಏಳು ಪ್ರವಾಸಿಗರ ಪೈಕಿ ಓರ್ವ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ತಕ್ಷಣವೇ ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗಳ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಕ್ರೇನ್ ಮೂಲಕ ಉರುಳಿಬಿದ್ದ ಲಾರಿಯನ್ನು ಮೇಲಕ್ಕೆತ್ತಿ ಹೆದ್ದಾರಿಯನ್ನು ತೆರವುಗೊಳಿಸಲಾಯಿತು.

 

]]>
ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರು ಮೃತ್ಯು!! https://newskadaba.com/124560/ Mon, 03 Aug 2026 06:09:30 +0000 https://newskadaba.com/?p=124560 (ನ್ಯೂಸ್ ಕಡಬ) newskadaba.com ಆ. 03. ಇಟ್ಟಿಗೆಗೂಡು ಕುಸಿದು ಬಿಸಿ ಇಟ್ಟಿಗೆ ಮತ್ತು ಉರಿಯುತ್ತಿದ್ದ ಬೆಂಕಿಯ ಬೂದಿಯ ಅಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬೂದನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

 

ಮೃತಪಟ್ಟ ಕಾರ್ಮಿಕರನ್ನು ಬೂದಹಳ್ಳಿ ಗ್ರಾಮದ ರಾಜೇಶ್ (32), ನಾರಾಯಣ(53) ಮತ್ತು ನಾಗರಾಜ್ (62) ದುರಂತದಲ್ಲಿ ಎಂದು ಗುರುತಿಸಲಾಗಿದೆ.

ಶನಿವಾರ ಬೆಳಗ್ಗೆ 6 ಗಂಟೆಗೆ ರಾಜೇಶ್, ನಾರಾಯಣ ಹಾಗೂ ನಾಗರಾಜು ಕೆಲಸಕ್ಕೆ ತೆರಳಿದ್ದರು. ಇಟ್ಟಿಗೆ ಬೇಯಿಸಲು ಹಾಕಿದ್ದ ಬೆಂಕಿ ಮತ್ತು ಕಾವು ಸಂಪೂರ್ಣವಾಗಿ ಆರುವ ಮೊದಲೇ, ಯಾವುದೇ ಸೂಕ್ತ ಸುರಕ್ಷತಾ ಕ್ರಮಗಳನ್ನು ವಹಿಸದೆ ಇಟ್ಟಿಗೆ ಗೂಡು ತೆರೆಯುವ ಕೆಲಸದಲ್ಲಿ ಕಾರ್ಮಿಕರನ್ನು ತೊಡಗಿಸಲಾಗಿತ್ತು ಎನ್ನಲಾಗಿದೆ. ಬೆಳಿಗ್ಗೆ ಸುಮಾರು 11:30ರ ವೇಳೆಗೆ ಇಟ್ಟಿಗೆ ಗೂಡು ಏಕಾಏಕಿ ಕುಸಿದುಬಿದ್ದು, ಕಾಂಗಾಯಿಸುತ್ತಿದ್ದ ಇಟ್ಟಿಗೆಗಳು ಹಾಗೂ ಬೆಂಕಿಯ ಬೂದಿ ಕಾರ್ಮಿಕರ ಮೇಲೆ ಬಿದ್ದಿದೆ. ತೀವ್ರ ಸುಟ್ಟಗಾಯಗಳಿಂದ ರಾಜೇಶ್ ಮತ್ತು ನಾರಾಯಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಾಗರಾಜು ಅವರನ್ನು ತಕ್ಷಣವೇ ಟಿ. ನರಸೀಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಧ್ಯಾಹ್ನ 3:30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ನಾಗರಾಜು ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ.

]]>
ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ https://newskadaba.com/124528/ Sun, 02 Aug 2026 04:03:55 +0000 https://newskadaba.com/?p=124528 (ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ.

ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ.

ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದು, ಹೊರ ತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಪಕ್ಕದ ಶೆಡ್‌ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

]]>
ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು https://newskadaba.com/124520/ Sun, 02 Aug 2026 00:34:50 +0000 https://newskadaba.com/?p=124520 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 02. ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಶನಿವಾರದಂದು ಸಂಜೆ ಸಂಭವಿಸಿದೆ.

ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ತೆರಳಿದ್ದ ಇವರು ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ಆರಂಭಿಸಿದ್ದರು.

ಈ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ್ ರೈನ್‌ ಕೋಟ್ ದಾರಿಯ ಮಧ್ಯೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರ ಸಮೀಪದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳು ಕಂಡುಬಂದಿದ್ದವು. ಇದರಿಂದ ಕಾಡಾನೆ ದಾಳಿ ನಡೆಸಿರಬಹುದೆಂಬ ಅನುಮಾನ ವ್ಯಕ್ತವಾಗಿತ್ತು.

ಅನುಮಾನದ ಮೇರೆಗೆ ಸ್ಥಳೀಯರು ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಮೀಪದ ಕಣಿಯೊಂದರಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಗಿದೆ. ಕಾಡಾನೆ ದಾಳಿಯಿಂದಲೇ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

]]>
ಕೊಕ್ಕಡ: ಆಟೋರಿಕ್ಷಾ ಮೇಲೆ ಬಿದ್ದ ಮರ!! https://newskadaba.com/124516/ Sat, 01 Aug 2026 11:14:05 +0000 https://newskadaba.com/?p=124516 (ನ್ಯೂಸ್ ಕಡಬ) newskadaba.com ಕಡಬ, ಆ. 01. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶುಕ್ರವಾರದಿಂದ ಭಾರೀ ಗಾಳಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅನಾಹುತಗಳು ನಡೆಯುತ್ತಿರುವ ಕುರಿತು ಕೇಳಿಬರುತ್ತಿದೆ. ಅದೇರೀತಿ ಆಟೋ ರಿಕ್ಷಾದ ಮೇಲೆ ಮರವೊಂದು ಬಿದ್ದ ಪರಿಣಾಮ ರಿಕ್ಷಾ ನಜ್ಜುಗುಜ್ಜಾದ ಘಟನೆ ಕಡಬ ತಾಲೂಕಿನ ಕೊಕ್ಕಡ ಎಂಬಲ್ಲಿ ನಡೆದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

]]>
ಸುಳ್ಯ ತಾಲೂಕಿನಾದ್ಯಂತ ವಿಪರೀತ ಮಳೆ ಬಾಳುಗೋಡು ಸೇತುವೆ ಮುಳುಗಡೆ https://newskadaba.com/124469/ Fri, 31 Jul 2026 14:30:06 +0000 https://newskadaba.com/?p=124469 (ನ್ಯೂಸ್ ಕಡಬ) newskadaba.com ಜು. 31. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಇಂದು ಮಧ್ಯಾಹ್ನದ ನಂತರ ಭಾರೀ ಗಾಳಿ ಮಳೆಯಾಗಿದ್ದು, ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ.

ಸುಬ್ರಹ್ಮಣ್ಯ, ಬಾಳುಗೋಡು, ಹರಿಹರ, ಬಲ್ಪ, ಗುತ್ತಿಗಾರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಗ್ರಾಮೀಣ ಪ್ರದೇಶದ ಹೊಳೆಗಳು, ತೋಡುಗಳು ಭರ್ತಿಯಾಗಿ ತುಂಬಿ ಹರಿಯುತ್ತಿವೆ.

ಶುಕ್ರವಾರ ಮಧ್ಯಾಹ್ನದ ನಂತರ ಮಳೆಯು ಸುದೀರ್ಘ ಗಂಟೆಗಳ ಕಾಲ ಸುರಿದ ಕಾರಣ ತಗ್ಗು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಹಠಾತ್ತನೆ ಏರಿಕೆಯಾಗಿದೆ.

ಪ್ರಮುಖವಾಗಿ ಬಾಳುಗೋಡಿನಲ್ಲಿ ಈ ವರ್ಷದ ಮಳೆಗಾಲದ ಋತುವಿನಲ್ಲಿ ಮೊದಲ ಬಾರಿಗೆ ಗ್ರಾಮೀಣ ಸಂಪರ್ಕ ಸೇತುವೆಯೊಂದು ಹಳ್ಳದ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ಅಲ್ಲದೆ, ರಸ್ತೆಯ ಮೇಲೆಯೇ ಮಳೆ ನೀರು ರಭಸವಾಗಿ ಹರಿದಿದ್ದರಿಂದ ವಾಹನ ಸಂಚಾರಕ್ಕೂ ಕೆಲಕಾಲ ಅಡಚಣೆ ಉಂಟಾಯಿತು. ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ತೀವ್ರವಾಗಿ ಕ್ಷೀಣಿಸಿದ್ದರಿಂದ ನದಿ, ಹಳ್ಳ ಹಾಗೂ ಬಾವಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿತ್ತು. ಆದರೆ ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ಬತ್ತಿದ್ದ ತೋಡುಗಳಿಗೆ ಮತ್ತೆ ಜೀವ ಬಂದಂತಾಗಿದೆ.

]]>