ಕ್ರೈಮ್ ನ್ಯೂಸ್

ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಚೆನ್ನೈ, ಆ. 19.  ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್‌ ಪಾಲ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರಾಕೇಶ್‌ ಪಾಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಚೆನ್ನೈಗೆ ಬಂದಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಮೃತ್ಯು Read More »

ಕ್ರೈಮ್ ನ್ಯೂಸ್

ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 17. ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೋರ್ವನ ಕಾಲು ನಜ್ಜುಗುಜ್ಜಾಗಿರುವ ಘಟನೆ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರನ್ನು ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬವರ ಮಗ ಎರಡನೇ ತರಗತಿ ವಿದ್ಯಾರ್ಥಿ ಹೃತ್ವಿಕ್(8) ಎಂದು ಗುರುತಿಸಲಾಗಿದೆ. ಬಾಲಕ ಶನಿವಾರದಂದು ಬೆಳಗಿನ ಶಾಲೆಗೆ ತೆರಳಲೆಂದು ವಾಹನಕ್ಕಾಗಿ ಕಾಯುತ್ತಾ ನಿಂತಿದ್ದಾಗ  ಶಾಲಾ ವಾಹನದ ಚಾಲಕ‌ ವಾಹನವನ್ನು ರಿವರ್ಸ್ ತೆಗೆಯುತಿದ್ದ. ಈ ವೇಳೆ ರಸ್ತೆ ಕಿರಿದಾದ ಕಾರಣ ವಾಹನದ ಹಿಂಬದಿ ಚಕ್ರವು ವಿದ್ಯಾರ್ಥಿಯ ಬಲಗಾಲಿನ ಮೇಲೆ ಹರಿದಿದೆ.

ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹ್ಯಾಂಡ್ ಬ್ರೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ..!        ಮಗು ಸೇರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ರಾಜಧಾನಿ ಬೆಂಗಳೂರಿನಲ್ಲಿ ವರಮಹಾಲಕ್ಷ್ಮಿ ಹಬ್ಬ ಕಳೆದು ಮರುದಿನ ಇಂದು ಬೆಳ್ಳಂಬೆಳಗ್ಗೆ ಭೀಕರ ದುರಂತ  ಘಟನೆ ನಡೆದಿದ್ದು, ಟಿಪ್ಪರ್ ಹರಿದು ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿ ದುರ್ಘಟನೆ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಹರಿದ ಪರಿಣಾಮ ಮಗು ಹಾಗೂ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.                

ಹ್ಯಾಂಡ್ ಬ್ರೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ..!        ಮಗು ಸೇರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ್ಯು..!                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ರಕ್ಷಿತಾರಣ್ಯದಲ್ಲಿ ಅಸ್ಥಿಪಂಜರ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಸಂಪೂರ್ಣ ಕೊಳೆತುಹೋದ ಮೃತದೇಹದ ಅಸ್ಥಪಂಜರವೊಂದು ಪತ್ತೆಯಾಗಿರುವ ಕುರಿತು ಕಡಬ ತಾಲೂಕಿನ ಕೊಂಬಾರು ಗ್ರಾಮದ ಬೊಟ್ಟಡ್ಕ ಬಳಿಯ ಕೊಂಬಾರು ರಕ್ಷಿತಾರಣ್ಯದ ಪ್ರದೇಶದ ಉಡೆಂಜಿಪಲ್ಲ ತೋಡು ಪ್ರದೇಶದಿಂದ ವರದಿಯಾಗಿದೆ. ಸ್ಥಳೀಯರ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಪೊಲೀಸರಿಗೆ ತಲೆ ಬುರುಡೆ, ಎದೆ ಮೂಳೆಗಳು ಹಾಗೂ ಕಾಲಿನ ಮೂಳೆಗಳು ಮಾತ್ರ ಕಂಡುಬಂದಿದ್ದು, ಮಾಂಸಖಂಡಗಳು ಮತ್ತು ಚರ್ಮ ಇಲ್ಲದೇ ಇದ್ದು, ಮೃತದೇಹವು ಪುರುಷನದ್ದೋ ಅಥವಾ ಮಹಿಳೆಯದ್ದೋ ಎನ್ನುವುದು ತಿಳಿದುಬಂದಿಲ್ಲ. ಸುಮಾರು 4ರಿಂದ 6 ತಿಂಗಳ ಹಿಂದೆ

ಕಡಬ ರಕ್ಷಿತಾರಣ್ಯದಲ್ಲಿ ಅಸ್ಥಿಪಂಜರ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಶಿವರುದ್ರಯ್ಯ (49) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ, ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                            

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 17.  ಸ್ಕೂಟಿಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ನಗರದ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳ್ಳಾಲ ಎಎಸ್‌ಐ ಪತ್ನಿ, ಶಿಕ್ಷಕಿ ಶಾಹಿದಾ (47) ಎಂದು ಗುರುತಿಸಲಾಗಿದೆ. ಶಾಹಿದಾ ತನ್ನ ಸ್ಕೂಟಿಯಲ್ಲಿ ಶಾಲೆಯ ಕಡೆಗೆ ಹೋಗುತ್ತಿದ್ದಳು. ಈ ವೇಳೆ ಆಕೆಗೆ ಕಾರೊಂದು ಢಿಕ್ಕಿ ಹೊಡೆದಿದ್ದು, ತಕ್ಷಣ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                             Read More »

ಕರಾವಳಿ, ಕ್ರೈಮ್ ನ್ಯೂಸ್

ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ- ಮಹಿಳೆಯನ್ನು ರಕ್ಷಿಸಿದ ಟ್ಯಾಕ್ಸಿ ಚಾಲಕ

(ನ್ಯೂಸ್ ಕಡಬ) newskadaba.com ಮುಂಬೈ, ಆ. 17. ಸೇತುವೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರನ್ನು ಕ್ಯಾಬ್‌ ಚಾಲಕ ಮತ್ತು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಣೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ.   ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನುಮುಂಬೈನ ಈಶಾನ್ಯ ಭಾಗದಲ್ಲಿರುವ ಮುಲುಂಡ್‌ ಪ್ರದೇಶದ ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದೆ. ಸೇತುವೆ ಮೇಲೆ ಹತ್ತಿದ ಮಹಿಳೆ ರೀಮಾ, ಏಕಾಏಕಿ ನೀರಿಗೆ ಹಾರಲು ಯತ್ನಿಸಿದ್ದು ಇದನ್ನು ಗಮನಿಸಿದ ಟ್ಯಾಕ್ಸಿ ಚಾಲಕ ಆಕೆ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ

ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ- ಮಹಿಳೆಯನ್ನು ರಕ್ಷಿಸಿದ ಟ್ಯಾಕ್ಸಿ ಚಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಖಾಸಗಿ ಬಸ್ – ಲಾರಿ ನಡುವೆ ಢಿಕ್ಕಿ – ಲಾರಿ ಚಾಲಕ ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.17. ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಸಂಸ್ಥೆಯ ಖಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದಿದೆ.

ಉಪ್ಪಿನಂಗಡಿ: ಖಾಸಗಿ ಬಸ್ – ಲಾರಿ ನಡುವೆ ಢಿಕ್ಕಿ – ಲಾರಿ ಚಾಲಕ ಮೃತ್ಯು, ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು…!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 16. ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕರೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಣಿಪಾಲದಿಂದ ವರದಿಯಾಗಿದೆ.   ಮೃತಪಟ್ಟವರನ್ನು ಚಿಕ್ಕಮಗಳೂರಿನ ಆನಂದ(37) ಎಂದು ಗುರುತಿಸಲಾಗಿದೆ. ಆನಂದರವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದು, ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಬಳಿಕ ರಾತ್ರಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಚಾಲಕ ಆನಂದರವರು ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯೇ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಇವರು, ಒಳಗಡೆ

ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!  

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ನಗರದ ಹೊರವಲಯದ ಮಾಗಡಿಯಲ್ಲಿ ಅರಣ್ಯ ಪ್ರದೇಶದಲ್ಲಿ ನಡೆದ 32 ವರ್ಷದ ಬ್ಯೂಟಿಷಿಯನ್ ಲಲಿತಾ ಅಲಿಯಾಸ್ ದಿವ್ಯಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಕಾರಣ ತಿಳಿದು ಬಂದಿದೆ. ಆರೋಪಿಗಳನ್ನು ಶಶಾಂಕ್, ಕಿರಣ್, ರೋಹಿತ್ ಮತ್ತು ಭರತ್ ಎಂದು ಗುರುತಿಸಲಾಗಿದೆ. ಎಲ್ಲರೂ 25 ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಆರೋಪಿಗಳೆಲ್ಲರೂ ಮಾಗಡಿ ತಾಲೂಕಿನ ಕುರುಪಾಳ್ಯ ಮತ್ತು ಇತರ ಭಾಗಗಳ ನಿವಾಸಿಗಳಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿ ಪ್ರಕಟಣೆ ತಿಳಿಸಿದೆ.

ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!   Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top