ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಹತ್ಯೆ ಪ್ರಕರಣ        ಆರೋಪಿ ಅರೆಸ್ಟ್     

(ನ್ಯೂಸ್ ಕಡಬ)newskadaba.com ಮಂಗಳೂರು, ಆ.08.  14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 51 ವರ್ಷದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕತ್ತು ಹಿಸುಕಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ನಂತರ ಬಾಲಕಿಯ ಚಿಕ್ಕಪ್ಪ ರವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 67/2024 ಕಲಂ 103 (1) ಬಿ.ಎನ್.ಎಸ್.ಯಂತೆ ಪ್ರಕರಣ ದಾಖಲಾಗಿರುತ್ತದೆ ಎನ್ನಲಾಗಿದೆ. ಆರೋಪಿಯನ್ನು ಫಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದ್ದು, ಮೂಲತಃ ಬೆಳಗಾವಿ ಜಿಲ್ಲೆಯ ಹಂಚಿನಾಳ್, […]

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಹತ್ಯೆ ಪ್ರಕರಣ        ಆರೋಪಿ ಅರೆಸ್ಟ್      Read More »

ಕರಾವಳಿ, ಕ್ರೈಮ್ ನ್ಯೂಸ್

7 ತಿಂಗಳ ಗರ್ಭಿಣಿ ಅಪಘಾತದಲ್ಲಿ ಮೃತ್ಯು                ರಸ್ತೆಯಲ್ಲೇ ಕಣ್ಣೀರಿಟ್ಟ ಪತಿ        

(ನ್ಯೂಸ್ ಕಡಬ)newskadaba.com ನೆಲಮಂಗಲ, ಆ.07.  ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ. ಸಿಂಚನ(30) ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನೆಲಮಂಗಲ ತಾಲೂಕಿನ ತೋಟನಹಳ್ಳಿ ಗ್ರಾಮದ ಮಂಜುನಾಥ್, ಸಿಂಚನ ದಂಪತಿ  ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಮನೆಗೆ ಸ್ಕೂಟರ್‌ನಲ್ಲಿ ವಾಪಸ್ ತೆರಳುವಾಗ ಹಿಂಬದಿಯಿಂದ ಲಾರಿ ಗುದ್ದಿದೆ.ಸಿಂಚನ ರಸ್ತೆಗೆ ಬಿದ್ದಿದ್ದು ಅವರ ಮೇಲೆ ಲಾರಿ ಚಕ್ರ ಹರಿದಿದೆ. ಪರಿಣಾಮ ಸಿಂಚನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

7 ತಿಂಗಳ ಗರ್ಭಿಣಿ ಅಪಘಾತದಲ್ಲಿ ಮೃತ್ಯು                ರಸ್ತೆಯಲ್ಲೇ ಕಣ್ಣೀರಿಟ್ಟ ಪತಿ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07.  ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 19 ವರ್ಷದ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಅತುಲ್ಯ ಜಿ ಎಂದು ಗುರುತಿಸಲಾಗಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಅತುಲ್ಯ ಚಿಕ್ಕಬಾಣಾವರದ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.

ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ವಂಚನೆ            ಆರೋಪಿ ಅರೆಸ್ಟ್             

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.07.  ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಮಾಜಿ ಸಂಚಾಲಕ ಕಲ್ಯಾಣಿ ಶರತ್ ಎಸ್ ವಿ ಎಂದು ಗುರುತಿಸಲಾಗಿದೆ.ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ವಂಚನೆ            ಆರೋಪಿ ಅರೆಸ್ಟ್              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ವಂಚನೆ   ದೂರು ದಾಖಲು               

(ನ್ಯೂಸ್ ಕಡಬ)newskadaba.com ಬೆಂಗಳೂರು , ಆ.07.  ತಮಿಳಿನ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ, ಸಿನಿಮಾದ ಕ್ಯಾಸ್ಟಿಂಗ್ ನಿರ್ದೇಶಕನ ಸೋಗಿನಲ್ಲಿ ಸ್ಯಾಂಡಲ್‌ವುಡ್ ನಟಿಯೊಬ್ಬರಿಗೆ ಸೈಬರ್ ವಂಚಕರು 1.7 ಲಕ್ಷ ರೂ. ವಂಚಿಸಿದ್ದಾರೆ ಎಂದು ತಿಳಿದುಬಂದಿದೆ. ಸ್ಯಾಂಡಲ್‌ವುಡ್ ನಟಿ ನಂದಿತ ಕೆ.ಶೆಟ್ಟಿ (21) ವಂಚನೆಗೊಳಗಾದವರು ಎನ್ನಲಾಗಿದೆ. ಈ ಸಂಬಂಧ ಕೋಣನಕುಂಟೆ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ವಂಚಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ವಂಚನೆ   ದೂರು ದಾಖಲು                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಿಲಕ್‌ ಪೂಜಾರಿ (34) ಎಂದು ಗುರುತಿಸಲಾಗಿದೆ. ತಿಲಕ್‌ ಪೂಜಾರಿ ಅವಿವಾಹಿತರಾಗಿದ್ದು, ಎಲ್ ಎಲ್ ಬಿ ಪದವಿ ಪಡೆದಿದ್ದರು. ಕೆಲವು ಸಮಯಗಳಿಂದ ಚಾಲಕ ವೃತ್ತಿ ನಿರ್ವಹಿಸುತ್ತಿದ್ದರು. ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು ಎನ್ನಲಾಗಿದೆ. ಇದರಿಂದ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ

(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಬಾಲಕಿಯು ಕೈ ನೋವಿಗೆ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆಯಷ್ಟೇ ಚಿಕ್ಕಪ್ಪನ ಮನೆಗೆ ಬಂದಿದ್ದಳು. ಇನ್ನು ಬಾಲಕಿಯ ತಾಯಿ ಮಗಳೊಂದಿಗೆ ಮಾತನಾಡಲು ಹನುಮಂತ ಅವರ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಅವರು ಬಾಲಕಿಗೆ ಕರೆ ನೀಡಿದಲು ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.06.  ಆಟೋ ಚಾಲಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆಗೈದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮೃತಪಟ್ಟವರನ್ನು ಮಹಮ್ಮದ್(48) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ ಎಂದು ವರದಿ ತಿಳಿಸಿದೆ.

ಪುತ್ತೂರು: ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ಬಸ್ ಹರಿದು ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಆ.06. ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದ ದಾರುಣ ಘಟನೆ ನಡೆದಿದೆ ಎನ್ನಲಾಗಿದೆ. ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ ವೇಳೆ ಶಾಲಾ ಬಸ್ ಹರಿದು ಗ್ರಾಮದ 5 ವರ್ಷದ ಬಾಲಕ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಅಪಘಾತದ ಬಳಿಕ ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.    

ಶಾಲಾ ಬಸ್ ಹರಿದು ಬಾಲಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.06. ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ಅಪರಚಿತ ವ್ಯಕ್ತಿಯೋರ್ವ ನುಗ್ಗಿದ ಘಟನೆ ವರದಿಯಾಗಿದೆ. ಕಾವಲುಗಾರ ನನ್ನು ಕಂಡು ಈತ ಪರಾರಿಯಾಗಿದ್ದಾನೆ. ನ್ಯಾಯಾಲಯ ಕಟ್ಟಡದೊಳಗೆ ನುಗ್ಗಿದ ಈತ ಜಿಲ್ಲಾ ನ್ಯಾಯಾಧೀಶ ರವರ ಕಚೇರಿ ತನಕ ತೆರಳಿದ್ದು , ಈತನ ಬಳಿ ಕಬ್ಬಿಣದ ರಾಡ್ ಕಂಡು ಬಂದಿದೆ. ಈತ ಕಳವಿಗಾಗಿ ಬಂದಿದ್ದನೇ ಅಥವಾ ಕಡತಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಒಳನುಗ್ಗಿದ್ದನೇ ಎಂಬ ಬಗ್ಗೆ ಸ್ಪಷ್ಟ ಗೊಂಡಿಲ್ಲ. ವಿದ್ಯಾನಗರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ಆರಂಭಿಸಿದ್ದಾರೆ.  

ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top