ಕ್ರೈಮ್ ನ್ಯೂಸ್

ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಬಾತ್‌ರೂಮ್‌ ಗೆ ಹೋಗಿದ್ದಾಗ ಗೀಸರ್‌ನ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಶೋಭಾ ಮತ್ತು 16 ವರ್ಷದ ದಿಲೀಪ್ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ್ದ ಬಾಲಕ ಮೊದಲು ವಿಷಕಾರಿ ಅನಿಲವನ್ನು ಸೇವಿಸಿ ಕುಸಿದು ಬಿದ್ದಿದ್ದಾನೆ. ಎಷ್ಟೋ ಹೊತ್ತಾದರೂ ಹೊರಗೆ ಬಾರದೇ ಇದ್ದುದರಿಂದ ತಾಯಿ ನೋಡಲು ಹೋಗಿದ್ದಾರೆ. ನಂತರ ಆಕೆಯೂ ವಿಷಕಾರಿ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಗಾಳಿಯಾಡಲು ಸ್ಥಳಾವಕಾಶವಿಲ್ಲದ ಕಾರಣ […]

ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರ ಉರುಳಿ ಬಿದ್ದು ರಿಕ್ಷಾ ಜಖಂ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.23. ಮಾವಿನ ಮರವೊಂದು ಧರೆಗುರುಳಿದ  ಪರಿಣಾಮ ರಿಕ್ಷಾ ಸಂಪೂರ್ಣ ಹಾನಿಗೊಳಗಾಗಿದ್ದರೂ ಚಾಲಕ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಭಾರೀ ಮಳೆಗೆ ಮರವೊಂದು ಉರುಳಿ ಬಿದ್ದ ಘಟನೆ ಕಾರ್ಕಳ ವಿಸ್ತೃತ ಬಸ್ ನಿಲ್ದಾಣದ ಪರಿಸರದಲ್ಲಿ ಸಂಭವಿಸಿದೆ. ಸಂಜೆ 4ರ ವೇಳೆಗೆ ಈ ಘಟನೆಯಲ್ಲಿ ರಿಕ್ಷಾವೊಂದು ಹಾನಿಗೊಳಗಾಗಿದೆ ಎಂದು ವರದಿಯಾಗಿದೆ.

ಮರ ಉರುಳಿ ಬಿದ್ದು ರಿಕ್ಷಾ ಜಖಂ ಚಾಲಕ ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿರೂರು ಗುಡ್ಡ ಕುಸಿತ ಪ್ರಕರಣ..!    ಓರ್ವ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಶಿರೂರು, ಜು.23. ಅಂಕೋಲಾ ಶಿರೂರು ಗುಡ್ಡ ಕುಸಿತದ ಪ್ರಕರಣದಲ್ಲಿ ಮುಂಜಾನೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದ್ದು ಹೀಗಾಗಿ ಒಟ್ಟು ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾದಂತಾಗಿದೆ ಎಂದು ವರದಿ ತಿಳಿಸಿದೆ. ಶಿರೂರು ಪ್ರಕರಣದಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ 5 ಮಂದಿ, ಒಬ್ಬ ಮಹಿಳೆ ಹಾಗೂ ಮೂವರು ಟ್ಯಾಂಕರ್ ಚಾಲಕರು ಹಾಗೂ ಟಿಂಬರ್ ಲಾರಿ ಚಾಲಕ ನಾಪತ್ತೆ ಆಗಿರುವ ಬಗ್ಗೆ ದೂರುಗಳು ಬಂದಿತ್ತು ಎನ್ನಲಾಗಿದೆ. ಗಂಗಾವಳಿ ನದಿ

ಶಿರೂರು ಗುಡ್ಡ ಕುಸಿತ ಪ್ರಕರಣ..!    ಓರ್ವ ಮಹಿಳೆಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ

(ನ್ಯೂಸ್ ಕಡಬ)newskadaba.com  ಮುಂಬೈ, ಜು.23. ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ ಎನ್ನಲಾಗಿದೆ. ನೌಕೆಯ ಕಿರಿಯ ನಾವಿಕ ನಾಪತ್ತೆಯಾಗಿ, ನೌಕೆಯು ಒಂದು ಕಡೆ ವಾಲಿರುವ ಘಟನೆ ಮುಂಬೈನ ನೌಕಾಪಡೆಯ ಡಾಕ್‌ ಯಾರ್ಡ್‌ ನಲ್ಲಿ ನಡೆದಿದೆ. ಅವಘಡದಲ್ಲಿ ಸಾಕಷ್ಟು ಹಾನಿಯುಂಟಾಗಿದ್ದು, ಹಡಗನ್ನು ಸರಿಪಡಿಸುವ ಕಾರ್ಯಾಚರಣೆ ನಡೆಯುತ್ತಿದೆ. ಜೊತೆಗೆ ನಾಪತ್ತೆಯಾಗಿರುವ ಸಿಬ್ಬಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಐಎನ್‌ಎಸ್ ಬ್ರಹ್ಮಪುತ್ರ ಯುದ್ಧನೌಕೆಯ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ..!       ನಾವಿಕನೋರ್ವ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಜು.23. ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಮೃತರನ್ನು ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಗುರುತಿಸಲಾಗಿದೆ. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್  ವಿದ್ಯಾರ್ಥಿಗಳು ಗಂಭೀರ !

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.22. ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಘಟನೆ ವರದಿಯಾಗಿದೆ. ಖಾಸಗಿ ಬಸ್ಸು ಶಿವಮೊಗ್ಗದಿಂದ ಬೈಂದೂರಿಗೆ ಬರುತ್ತಿತ್ತು. ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಚರಂಡಿಗೆ ಇಳಿದು ಓರೆಯಾಗಿ ಮರಕ್ಕೆ ತಾಗಿ ನಿಂತಿದೆ. ಬಸ್ಸಿನಲ್ಲಿ ಕೊಲ್ಲೂರು ಮೂಕಾಂಬಿಕ ಹೈಸ್ಕೂಲ್ ನ 6 ವಿದ್ಯಾರ್ಥಿಗಳು ಹಾಗೂ ಪಿಯುಸಿಯ 11 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್  ವಿದ್ಯಾರ್ಥಿಗಳು ಗಂಭೀರ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

*ವಾಲ್ಮೀಕಿ ನಿಗಮ ಹಗರಣ ನಾಗೇಂದ್ರ ಗೆ ಆ. 3ರವರೆಗೆ ನ್ಯಾಯಾಂಗ ಬಂಧನ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3 ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ನಾಗೇಂದ್ರ ಅವರ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಅವರನ್ನು ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇನ್ನು ಹಗರಣ ಸಂಬಂಧಪಟ್ಟಂತೆ ಸತ್ಯನಾರಾಯಣ ವರ್ಮನನ್ನು

*ವಾಲ್ಮೀಕಿ ನಿಗಮ ಹಗರಣ ನಾಗೇಂದ್ರ ಗೆ ಆ. 3ರವರೆಗೆ ನ್ಯಾಯಾಂಗ ಬಂಧನ….! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ವಿಘ್ನೇಶ್ (26) ಎಂದು ಗುರುತಿಸಲಾಗಿದೆ. ಗಾಯಗೊಂಡಾತನನ್ನು ಶ್ರೀ ನಿಧಿ (25) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 1.30 ರ ಸುಮಾರಿಗೆ ವಿಘ್ನೇಶ್ ಮತ್ತು ಶ್ರೀ ನಿಧಿ ರೆಸ್ಟೋರೆಂಟ್‌ ನಲ್ಲಿ ಊಟ ಮುಗಿಸಿ ಮನೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….! Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು     

(ನ್ಯೂಸ್ ಕಡಬ)newskadaba.com ಕೇರಳ, ಜು.22. ನಿಫಾ ಸೋಂಕು ತಗುಲಿದ್ದ 14 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದ್ದು, ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಬಾಲಕ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಡಿಸಿತ್ತು. ಬಾಲಕನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತ್ಯಕ್ರಿಯೆಯ ಕುರಿತು ನಿರ್ಧಾರ

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ಮನೆಯೊಂದರ ಮುಖ್ಯ ಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ ನಿಂದ ಒಡೆಯಲು ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾತ್ರಿ 1.45 ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿ ಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ.  ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.      

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top