ಕ್ರೈಮ್ ನ್ಯೂಸ್

ಡಾಕ್ಟರ್ ಎಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಭೂಪ..!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 23. ಅಪರಿಚಿತ ವ್ಯಕ್ತಿಯೋರ್ವ ತಾನು ಡಾಕ್ಟರ್ ಎಂಬುವುದಾಗಿ ನಂಬಿಸಿ ಮಹಿಳೆಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ದೂರಿನ ಪ್ರಕಾರ, ಸಂತ್ರಸ್ತ ಮಹಿಳೆ ಕಂಪೆನಿಯೊಂದರಲ್ಲಿ ಬಿಸಿನೆಟಸ್ ಪಾರ್ಟ್ನರ್ ಆಗಿ ಕೆಲಸ ಮಾಡಿಕೊಂಡಿದ್ದು, ಬಿಸಿನೆಸ್ ಮುಂದುವರೆಸುವ ಬಗ್ಗೆ ಇಂಟರ್ನೆಟ್ ಕನೆಕ್ಷನ್ ಮಾಡಿಕೊಂಡಿದ್ದರು. ಕಳೆದ ಜನವರಿ 24ರಂದು ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುವುದಾಗಿ ಪರಿಚಯ ಮಾಡಿಕೊಂಡು ವಾಟ್ಸಾಪ್ ಮೂಲಕ ಚಾಟ್ ಮಾಡಿದ್ದು, ನಂತರ ಆತನು ಲಂಡನ್ ನಿಂದ ಭಾರತಕ್ಕೆ ಬರುವುದಾಗಿ […]

ಡಾಕ್ಟರ್ ಎಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಭೂಪ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ- 30ಕ್ಕೂ ಅಧಿಕವಾಹನಗಳು ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 30 ರಿಂದ 40 ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ನಾಯಂಡಹಳ್ಳಿ ಸಮೀಪದ ನಡೆದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವುದಾಗಿ ಶಂಕಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ- 30ಕ್ಕೂ ಅಧಿಕವಾಹನಗಳು ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳದಲ್ಲಿ ಸಿಪಿಎಂ ನಾಯಕನ ಬರ್ಬರ ಹತ್ಯೆ!

(ನ್ಯೂಸ್ ಕಡಬ) newskadaba.com ಕೋಝಿಕ್ಕೋಡ್, ಫೆ. 23. ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸಿಪಿಎಂ ನಾಯಕರೊಬ್ಬರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪೆರುವತ್ತೂರ್‌ ನ ಚೆರಿಯಾಪುರಂ ದೇವಾಲಯದ ಆವರಣದಲ್ಲಿ ಗುರುವಾರದಂದು ರಾತ್ರಿ ನಡೆದಿದೆ. ಕೊಲೆಯಾದವರನ್ನು ಕೊಯಿಲಾಂಡಿ ಸಿಪಿಎಂ ಕೇಂದ್ರೀಯ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಪಿ.ವಿ.ಸತ್ಯನಾಥನ್ (62) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಗುರುವಾರದಂದು ರಾತ್ರಿ 10 ಗಂಟೆಗೆ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸತ್ಯನಾಥನ್ ಮೇಲೆ ಈ ದಾಳಿ ನಡೆದಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಕೇರಳದಲ್ಲಿ ಸಿಪಿಎಂ ನಾಯಕನ ಬರ್ಬರ ಹತ್ಯೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಟಾಕ್ ಟ್ರೇಡಿಂಗ್ ಹೂಡಿಕೆ ನೆಪದಲ್ಲಿ 18.53 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಫೇಸ್ ಬುಕ್‌ ನಲ್ಲಿ ಕಾಣಿಸಿಕೊಂಡ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿದ ವ್ಯಕ್ತಿಯೋರ್ವರು 18.53 ಲಕ್ಷ ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ವಿಜಯ ಕುಮಾರ್ ಎಂಬವರು ಫೇಸ್‌ ಬುಕ್‌ ನಲ್ಲಿ ಸ್ಟಾಕ್ ಟ್ರೇಡಿಂಗ್ ಬಗೆಗಿನ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ ಮೂಲಕ ವಾಟ್ಸಾಪ್ ಗ್ರೂಪ್‌ನಲ್ಲಿ ಸೇರ್ಪಡೆಯಾಗಿದ್ದರು ಎಂದೆನ್ನಲಾಗಿದೆ. ಗ್ರೂಪ್‌ ನಲ್ಲಿ ಚೀಫ್ ಅಡ್ಮಿನ್ ಅಗಿದ್ದ ಅಮಿತ್ ಶಾ ಎಂಬಾತ ಪ್ರತಿ ದಿನ ಆನ್‌ ಲೈನ್ ವೀಡಿಯೋ ಕ್ಲಾಸ್ ಮೂಲಕ

ಸ್ಟಾಕ್ ಟ್ರೇಡಿಂಗ್ ಹೂಡಿಕೆ ನೆಪದಲ್ಲಿ 18.53 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಫೆ. 23. ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಿಂದ ವರದಿಯಾಗಿದೆ. ಬಂಧಿತನನ್ನು ಪ್ರತಾಪ್ ಎಂದು ಗುರುತಿಸಲಾಗಿದೆ. ಈತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ. ಮೌಲ್ಯದ 4 ಗೋಣಿ ಸುಲಿದ ಅಡಿಕೆ, ಸುಮಾರು 2 ಲಕ್ಷ ರೂ. ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೆ. 13ರಂದು ಮಿತ್ತಕೊಳಪಿಲದ

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ನಾಪತ್ತೆಯಾಗಿದ್ದ ಯುವಕನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್ ಎಂದು ಗುರುತಿಸಲಾಗಿದೆ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಸೋಮವಾರದದು ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ ಪ್ರಯುಕ್ತ ಕಲಶಾಭಿಶೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದನು. ಬಳಿಕ ರಾತ್ರಿ ವೇಳೆ ಮನೆಯಿಂದ ಹೊರಹೋಗಿದ್ದ ಗೌತಮ್ ಮತ್ತೆ ವಾಪಸಾಗದ ಹಿನ್ನೆಲೆ ಮರುದಿನ ಮನೆಯವರು ಉಳ್ಳಾಲ

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 22. ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕಾಡುಹಂದಿ ದಾಳಿ ಮಾಡಿದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಗುರುವಾರ ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಸಂದರ್ಭ, ಪೊದೆಯಲ್ಲಿದ್ದ ಕಾಡುಹಂದಿ ಪದ್ಮಾವತಿ

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 22. ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್‌ ನಲ್ಲಿ ನಡೆದಿದೆ. ಮೃತಪಟ್ಟವ ಯುವಕನನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ಗುರುತಿಸಲಾಗಿದೆ. ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರದಂದು ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ ನಲ್ಲಿ ಸ್ನಾನಕೆಂದು ಬಂದಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗನ ಕಾಯಿಲೆ ಸಂಖ್ಯೆ ಹೆಚ್ಚಳ- ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಕಾರವಾರ,  ಫೆ. 22. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಏರಿಕೆಯ ಪ್ರಮಾಣ ಹೆಚ್ಚುತ್ತಲೇ ಇದ್ದು, ಇದೀಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮೊದಲ ಮೃತ್ಯು ಪ್ರಕರಣ ದಾಖಲಾಗಿದೆ. ಮಂಗನ ಕಾಯಿಲೆಯಿಂದಾಗಿ ಸಿದ್ದಾಪುರದ ಜಿಡ್ಡಿ ಗ್ರಾಮದ 65 ವರ್ಷದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಜಿಲೆಯಲ್ಲಿ ಇದುವರೆಗೆ 43 ಮಂಗನ ಕಾಯಿಲೆ ಪ್ರಕರಣಗಳು ದಾಖಲಾಗಿದ್ದು, ಎಲ್ಲಾ ಪ್ರಕರಣಗಳು ಸಿದ್ಧಾಪುರ ತಾಲೂಕಿನದ್ದು ಎಂಬುದು ಆಘಾತಕಾರಿ ಸಂಗತಿಯಾಗಿದೆ. ಜನವರಿ ಕೊನೆಯ ವಾರ ಹಾಗೂ ಫೆಬ್ರವರಿ ಮೊದಲ ವಾರದ ಮಧ್ಯೆ ಸುಮಾರು

ಮಂಗನ ಕಾಯಿಲೆ ಸಂಖ್ಯೆ ಹೆಚ್ಚಳ- ಮಹಿಳೆ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ (47) ಎಂದು ಗುರುತಿಸಲಾಗಿದೆ. ಮೊಹಮ್ಮದ್ ಅಬ್ದುಲ್ ಫಯಾನ್ ಎಂಬಾತ ಕಳ್ಳತನ, ಕೊಲೆ ಯತ್ನ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಸೇರಿದಂತೆ 23 ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top