ಕ್ರೈಮ್ ನ್ಯೂಸ್

ನ್ಯುಮೋನಿಯಾ ಜ್ವರಕ್ಕೆ ತುತ್ತಾಗಿ ಬಾಲಕಿ ನಿಧನ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಫೆ. 22. ನ್ಯುಮೋನಿಯಾಕ್ಕೆ ಜ್ವರದಿಂದಾಗಿ ಒಂದನೇ ತರಗತಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಅಶ್ರಿಜಾ ಎಂದು ಗುರುತಿಸಲಾಗಿದೆ. ಬಾಲಕಿ ನ್ಯುಮೋನಿಯಾ ಜ್ವರಕ್ಕೆ ಒಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಪಲಿಸದೇ ಮೃತಪಟ್ಟಿದ್ದಾಳೆ. ಇನ್ನು ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ.

ನ್ಯುಮೋನಿಯಾ ಜ್ವರಕ್ಕೆ ತುತ್ತಾಗಿ ಬಾಲಕಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕೈಯಲ್ಲೇ ಸಿಡಿದ ಪಟಾಕಿ- ವ್ಯಕ್ತಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 21. ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಕನಕಮಜಲಿನಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಗಬ್ಬಲಡ್ಕದ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಏಕಾಹ ಭಜನೆ ನಡೆಯುತ್ತಿದ್ದ ವೇಳೆ ಚಂದ್ರಶೇಖರ ಅವರು ಪಟಾಕಿಯನ್ನು ಸಿಡಿಸುವ ವೇಳೆ ಪಟಾಕಿ ಕೈಯಲ್ಲೇ ಸ್ಫೋಟಗೊಂಡ ಪರಿಣಾಮ ಕೈ ಬೆರಳುಗಳಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಅವರನ್ನು ಸ್ಥಳೀಯರು ಸೇರಿ ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ

ಕೈಯಲ್ಲೇ ಸಿಡಿದ ಪಟಾಕಿ- ವ್ಯಕ್ತಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಇಲ್ಲಿನ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆಯಲಾದ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪುತ್ತೂರು: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ದರ್ಬೆ ಬೈಪಾಸ್ ವೃತ್ತದ ಬಳಿ ನಡೆದಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ನೆಲ್ಲಿಕಟ್ಟೆ ಚಿಕ್ಕಪುತ್ತೂರು ನಿವಾಸಿ ದಿವಾಕರ ಮಡಿವಾಳ ಎಂದು ಗುರುತಿಸಲಾಗಿದೆ. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದಿವಾಕರ ಅವರು ಗಂಭೀರ ಗಾಯಗೊಂಡಿದ್ದರು. ಈ ಸಂದರ್ಭ ಅದೇ ದಾರಿಯಾಗಿ ಹೋಗುತ್ತಿದ್ದ ಅರುಣ್ ಕುಮಾರ್ ಪುತ್ತಿಲರವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಗೆ ಕಿರುಕುಳ – ಹೋಟೆಲ್ ಮಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 21. ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದೆ.   ಆರೋಪಿಯನ್ನು ಸಜೀಪ ನಡು ಗ್ರಾಮದ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿರುವ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿಗೆ ಕಿರುಕುಳ – ಹೋಟೆಲ್ ಮಾಲಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 20. ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಸೋಮವಾರದಂದು ತಡರಾತ್ರಿ ನಡೆದಿದೆ. ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ ಎಂಬವರು ಠಾಣೆಯ ಸಿಬ್ಬಂದಿಗಳೊಂದಿಗೆ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್, ಮನೋಜ್, ಆಶಿಕ್ ಹಾಗೂ ಸನತ್ ಕುಮಾರ್

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 20. ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಡಾಕೆರೆ ಎಂಬಲ್ಲಿ ಸೋಮವಾರದಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಬಡಾಕೆರೆಯ ವಿಜಯ ಪೂಜಾರಿ(60) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ನಿರ್ಮಾಣ ಹಂತದಲ್ಲಿದ್ದ 35 ಅಡಿ ಆಳದ ನೀರಿಲ್ಲದ ಬಾವಿಗೆ ಅಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸಾಮಾಜಿಕ ಕಾರ್ಯಕರ್ತ ಸುರೇಶ್ ಖಾರ್ವಿ

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 20. ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ ಎಂಬವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಂದಾಜು 35ರಿಂದ 45ವರ್ಷ ಪ್ರಾಯದ ಮೂವರು ಬುರ್ಖಧಾರಿ ಮಹಿಳೆಯರು, 15,800 ಗ್ರಾಂ. ತೂಕದ ಒಂದು ಚಿನ್ನದ ಚೈನ್ ಮತ್ತು 10.150 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಖರೀದಿಸಿ, ಇದಕ್ಕೆ

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಕೇರಳದ ಯುವಕ ಸೌದಿಯಲ್ಲಿ ನಿಧನ

(ನ್ಯೂಸ್ ಕಡಬ) newskadaba.com ರಿಯಾದ್, ಫೆ. 20. ಸ್ನೇಹಿತರೊಂದಿಗೆ ಫುಟ್ಬಾಲ್ ಆಟವಾಡಿ ವಿಶ್ರಾಂತಿ ತೆಗೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕೇರಳ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮಕ್ಕಾದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಮಕ್ಕಾದಲ್ಲಿ ಗೃಹ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕೇರಳ ಮಲಪ್ಪುರಂ ಮೂಲದ ನೌಫಲ್ ಎಂದು ಗುರುತಿಸಲಾಗಿದೆ. ಮೃತ ನೌಫಲ್ ನವಾರಿಯಾದ ಮನೆಯೊಂದರಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಸ್ನೇಹಿತರೊಂದಿಗೆ ಫುಟ್ ಬಾಲ್ ಆಡಿದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಹೃದಯಾಘಾತ- ಕೇರಳದ ಯುವಕ ಸೌದಿಯಲ್ಲಿ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಚಿರತೆ ದಾಳಿ- ಜೋಡಿಕರುಗಳು ಬಲಿ

(ನ್ಯೂಸ್ ಕಡಬ) newskadaba.com ಗುಂಡ್ಲುಪೇಟೆ, ಫೆ. 19. ಚಿರತೆ ದಾಳಿಗೆ ಜೋಡಿಕರುಗಳು ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕೊಡಸೋಗೆ ಗ್ರಾಮದಲ್ಲಿ ನಡೆದಿದೆ. ಕೊಡಸೋಗೆ ಗ್ರಾಮದ ನಾಗೇಶ್ ಎಂಬವರು ತನ್ನ ಜಮೀನಿನಲ್ಲಿ ಕರುಗಳನ್ನು ಮೇಯಲು ಬಿಟ್ಟಿದ್ದ ವೇಳೆ ದಾಳಿ ನಡೆಸಿದ ಚಿರತೆಯು ಎರಡು ಕರುಗಳನ್ನ ಬಲಿ ಪಡೆದಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಪರಿಸರದಲ್ಲಿ ಚಿರತೆ ಕಾಟ ಮಿತಿಮೀರಿದ್ದು, ಅರಣ್ಯ ಇಲಾಖೆಯ ನಿರ್ಲಕ್ಸ್ಯಕ್ಕೆ ಆಕ್ರೋಶಗೊಂಡಿರುವ ರೈತರು ಚಿರತೆಯನ್ನ ಸೆರೆಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.

ಚಿರತೆ ದಾಳಿ- ಜೋಡಿಕರುಗಳು ಬಲಿ Read More »

ಕ್ರೈಮ್ ನ್ಯೂಸ್
Scroll to Top