ಕ್ರೈಮ್ ನ್ಯೂಸ್

‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಫೆ. 16. ʼಕರಿಮಣಿ ಮಾಲಿಕ ನೀನಲ್ಲʼ ಎಂಬ ಹಾಡಿಗೆ ಪತ್ನಿ ಮಾಡಿದ ರೀಲ್ಸ್ನಿಂದ ನೊಂದ ಪತಿಯೊಬ್ಬ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಎಂದು ಗುರುತಿಸಲಾಗಿದೆ. ಮೃತ ಕುಮಾರ್ ಪತ್ನಿ ರೂಪಾ ಎಂಬಾಕೆ, ಸೋದರ ಮಾವ ಹಾಗೂ ಸಹೋದರನ ಜೊತೆ ಸೇರಿ ಕರಿಮಣಿ ಮಾಲಿಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ […]

‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 16. ಎರಡು ವಾರಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧಾರ್ಮಿಕ ವಿದ್ವಾಂಸ ಸೈಯದ್ ಸಾದಾತ್ ಅಲಿ ತಂಙಳ್ ಕರ್ವೇಲುರವರು ಶುಕ್ರವಾರದಂದು ಬೆಳ್ಳಂಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಫೆ. 05ರಂದು ಸಾದಾತ್ ಅಲಿ ತಂಙಳ್ ಸಂಚರಿಸುತ್ತಿದ್ದ ಆಟೋ ರಿಕ್ಷಾವು ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿತ್ತು. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸಾದಾತ್ ಅಲಿ ತಂಙಳ್ ರಿಗೆ ಗಂಭೀರ ಗಾಯಗಳಾಗಿತ್ತು.

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ – 128ಗ್ರಾಂ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು 128 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಬುದಾಭಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವನ ಹ್ಯಾಂಡ್ ಬ್ಯಾಗ್ ನ್ನು ಸ್ಕ್ಯಾನ್ ಮಾಡಿದಾಗ ಅಧಿಕಾರಿಗಳು ಅನುಮಾನಗೊಂಡಿದ್ದು, ಆತನನ್ನು ವಿಚಾರಿಸಿ, ತಪಾಸಣೆಗೆ ಒಳಪಡಿಸಿದಾಗ 8,06,400 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 128ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೊಬೈಲ್ ನ ಬ್ಯಾಕ್ ಕವರ್ ನಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ

ಮಂಗಳೂರು: ಅಕ್ರಮ ಚಿನ್ನ ಸಾಗಾಟ – 128ಗ್ರಾಂ ಚಿನ್ನ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 15. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮತ್ಯೆ ಮಾಡಿಕೊಡ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದನು ಎನ್ನಲಾಗಿದೆ. ಬುಧವಾರ ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದು, ಮರಳಿ ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 15. ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುರ ಎಂಬಲ್ಲಿ ನಡೆದಿದೆ. ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದ್ದು, ಕೂಡಲೇ ರೈಲನ್ನು ನಿಲ್ಲಿಸಿದ ಲೋಕೋ ಪೈಲಟ್‌ ಗಾಯಾಳುವನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ಕರೆ ತಂದು ಆಸ್ಪತ್ರೆಗೆ ಸಾಗಿಸುವ ವೇಳೆ ಗಾಯಾಳು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 15. ಯುವಕನೋರ್ವ ರಿಕ್ಷಾದಲ್ಲಿ ಬರುತ್ತಿದ್ದ ಸಂದರ್ಭ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಅಜ್ಜಾವರ ಗ್ರಾಮದ ಕಾಟಿಪಳ್ಳ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಅಜಿತ್‌ ಎಂಬಾತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಎನ್ನಲಾಗಿದೆ.

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೈಶಾಚಿಕ ಕೃತ್ಯ- 2 ವರ್ಷದ ಮಗುವಿನ ಮೇಲೆ ಅತ್ಯಾಚಾರ..!

(ನ್ಯೂಸ್ ಕಡಬ) newskadaba.com ಕೊಡಗು, ಫೆ. 15. 2 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಬೀಭತ್ಸ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಎಸ್ಟೇಟ್ ನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಕಾಮುಕ ಮಣಿ ಎಂಬಾತ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಪೈಶಾಚಿಕ ಕೃತ್ಯ- 2 ವರ್ಷದ ಮಗುವಿನ ಮೇಲೆ ಅತ್ಯಾಚಾರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಡಾಂಬರು ಸಾಗಾಟದ ಟ್ಯಾಂಕರ್ ಬೆಂಕಿಗಾಹುತಿ- ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 14. ಚಲಿಸುತ್ತಿದ್ದ ಡಾಂಬರು ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರದಂದು ರಾತ್ರಿ 11.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಡಾಂಬರು ಸಾಗಿಸುತ್ತಿದ್ದ ಲಾರಿ ಉದನೆ ತಲುಪುತ್ತಿದ್ದಂತೆಯೇ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವು ಸಿಗುತ್ತಿದ್ದಂತೆ ಚಾಲಕ ಲಾರಿ ನಿಲ್ಲಿಸಿ ಕೆಳಗಿಳಿದಿದ್ದು, ತಕ್ಷಣವೇ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ಕಾರ್ಮಿಕರು

ನೆಲ್ಯಾಡಿ: ಡಾಂಬರು ಸಾಗಾಟದ ಟ್ಯಾಂಕರ್ ಬೆಂಕಿಗಾಹುತಿ- ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 14. ಟೆಲಿಗ್ರಾಮ್ ಮೂಲಕ ಡಾಟಾ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಂಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂ. ವಂಚನೆಯಾದ ಘಟನೆ ನಡೆದಿರುವ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಡಾಟ ರೇಡ್‌ ಎಂಬ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋರ್ವ ತಾನು ಕೆಲಸ ನಿರ್ವಹಿಸುವ ವೇಳೆ 900 ರೂ. ಅನ್ನು ಅವರ ಖಾತೆಗೆ ವರ್ಗಾಯಿಸಿರುತ್ತಾರೆ. ಬಳಿಕ ಫೆಬ್ರವರಿ

ಆನ್ ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಭೂಮಾಪಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 14. ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿರುವ ಕುರಿತು ಬೆಳ್ತಂಗಡಿಯಿಂದ ವರದಿಯಾಗಿದೆ. ಮೃತಪಟ್ಟವರನ್ನು ವಿಶ್ವನಾಥ ರಾವ್ (45) ಎಂದು ಗರುತಿಸಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್ ಅವರು, ಉಜಿರೆಯಲ್ಲಿ ವಾಸವಾಗಿದ್ದು, ಪರವಾನಗಿ ಹೊಂದಿದ ಭೂಮಾಪಕರಾಗಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರಕ್ತದೊತ್ತಡ ಏರುಪೇರಾದ ಹಿನ್ನೆಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಂಟ್ವಾಳದಲ್ಲಿ ಹೃದಯಾಘಾತವಾಗಿದ್ದು, ಅವರನ್ನು

ಹೃದಯಾಘಾತ- ಭೂಮಾಪಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top