ಕ್ರೈಮ್ ನ್ಯೂಸ್

ಮೀನುಗಾರಿಕೆಯ ವೇಳೆ ಬೋಟಿನಲ್ಲಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಫೆ. 13. ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಬೋಟಿನಲ್ಲಿದ್ದ ಮೀನುಗಾರರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಲ್ಪೆ ಸಮೀಪ ನಡೆದಿದೆ. ಮೃತರನ್ನು ಬೋಟಿನ ಕಲಾಸಿ ಮ್ಯಾಥೀವ್(52) ಎಂದು ಗುರುತಿಲಾಗಿದೆ. ಇವರು ಯಮುನಾ ಮಾಲಕತ್ವದ ಶ್ರೀಮಹಾಲಕ್ಷ್ಮೀ ಬೋಟಿನಲ್ಲಿ ಇತರ ಮೀನುಗಾರರೊಂದಿಗೆ ಫೆ. 10ರಂದು ಮೀನುಗಾರಿಕೆಗಾಗಿ ತೆರಳಿದ್ದು, 27 ನಾಟಿಕಲ್ ದೂರದ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಮ್ಯಾಥೀವ್ ಅವರು ಬೋಟಿನಲ್ಲಿಯೇ ಕುಸಿದು ಬಿದ್ದರು ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಅವರು ಮಲ್ಪೆ ಬಂದರಿಗೆ ಬಂದು ಉಡುಪಿ […]

ಮೀನುಗಾರಿಕೆಯ ವೇಳೆ ಬೋಟಿನಲ್ಲಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ಟಿಪ್ಪರ್ ಲಾರಿಯ 5 ಟಯರ್ ಹಾಗೂ ಬ್ಯಾಟರಿ ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಫೆ. 13. ನಿಲ್ಲಿಸಿದ್ದ ಟಿಪ್ಪರ್ ಲಾರಿಯ ಟಯರ್ ಹಾಗೂ ಬ್ಯಾಟರಿಯನ್ನು ಕಳವು ಮಾಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಶಾಶ್ವತ್ ಎಂಬವರು ತನ್ನ ಮನೆಯ ಮನೆಯ ಬಳಿ ನಿಲ್ಲಿಸಿದ್ದ ಟಿಪ್ಪರ್ ಲಾರಿಯನ್ನು ಕಳವು ಮಾಡಿಕೊಂಡು ಹೋಗಿರುವ ಕಳ್ಳರು, ಪಾಂಗಾಳದ ಸೇತುವೆ ಬಳಿ ನಿಲ್ಲಿಸಿ ಅದರ ಡಿಸ್ಕ್ ಸಮೇತ 5 ಟಯರ್ ಮತ್ತು ಬ್ಯಾಟರಿಯನ್ನು ಕಳವು ಮಾಡಿರುವುದಾಗಿ ದೂರಲಾಗಿದೆ. ಕಳವಾದ ಸೊತ್ತಿನ ಮೌಲ್ಯ 98,000ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ

ನಿಲ್ಲಿಸಿದ್ದ ಟಿಪ್ಪರ್ ಲಾರಿಯ 5 ಟಯರ್ ಹಾಗೂ ಬ್ಯಾಟರಿ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 13. ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮಹಮ್ಮದ್ ಸಮೀವುಲ್ಲಾ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಇಬ್ರಾಹಿಂ ಎದು ಗುರುತಿಸಲಾಗಿದೆ. ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಮೂರ್ತಿ, ಸಿಬ್ಬಂದಿಗಳಾದ ಹೆಚ್.ಸಿ ಕೃಷ್ಣ ಮತ್ತು ಪಿ.ಸಿ ಯೋಗೇಶ್ ಹಾಗೂ ಪುನೀತ್ ರವರು ಮಾಹಿತಿ ಸಂಗ್ರಹಿಸಿ ಬೆಂಗಳೂರಿನಿಂದ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತ್ಯು.!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 12. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಘಟನೆ ಸೋಮವಾರದಂದು ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್ ಎಂಬವರ ಪುತ್ರಿ ತ್ರಿಶಾ(16) ಎಂದು ಗುರುತಿಸಲಾಗಿದೆ. ಈಕೆ ಫೆ. 07ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ಎನ್ನಲಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಲಾರಿ ಮತ್ತು ರಿಕ್ಷಾ ನಡುವೆ ಅಪಘಾತ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 12. ಲಾರಿ ಮತ್ತು ರಿಕ್ಷಾದ ನಡುವೆ ನಡೆದ ಅಪಘಾತ ಸಂಭವಿಸಿ, ರಿಕ್ಷಾ ಚಾಲಕನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಲ್ಲಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಚೇತನ್ ಎಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಆದರೆ ಚಾಲಕ ಚೇತನ್ ಅವರ ಕಾಲಿಗೆ ಸ್ವಲ್ಪ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಟ್ವಾಳ: ಲಾರಿ ಮತ್ತು ರಿಕ್ಷಾ ನಡುವೆ ಅಪಘಾತ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಭೂಕುಸಿತ- 54 ಮಂದಿ ಮೃತ್ಯು, 63 ಮಂದಿ ನಾಪತ್ತೆ..!

(ನ್ಯೂಸ್ ಕಡಬ) newskadaba.com ಫಿಲಿಪೈನ್ಸ್‌, ಫೆ. 12.  ದಕ್ಷಿಣ ಫಿಲಿಪೈನ್ಸ್ ನ ಚಿನ್ನದ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದಲ್ಲಿ ಭಾರಿ ಭೂಕುಸಿತ ಉಂಟಾದ ಪರಿಣಾಮ  54 ಮಂದಿ ಮೃತಪಟ್ಟು, 63 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವಾರದಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಭಾರೀ ಭೂಕುಸಿತ ಸಂಭವಿಸಿದೆನ್ನಲಾಗಿದೆ. ಘಟನೆಯಿಂದ ಸುಮಾರು 50 ಗಂಟೆಗಳ ಕಾಲ ಅವಶೇಷಗಳಡಿ ಹೂತುಹೋಗಿದ್ದ ಮೂರು ವರ್ಷದ ಬಾಲಕಿಯೋರ್ವಳನ್ನು ರಕ್ಷಣಾ ಪಡೆ ಜೀವಂತವಾಗಿ ಹೊರತೆಗೆದಿದ್ದು ಕಾರ್ಯಾಚರಣೆ ಮುಂದುವರೆದಿದೆ.

ಭೂಕುಸಿತ- 54 ಮಂದಿ ಮೃತ್ಯು, 63 ಮಂದಿ ನಾಪತ್ತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 12. ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ಮೃತದೇಹವೊಂದು ಇಂದು ಮಧ್ಯಾಹ್ನದ ವೇಳೆ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರು ಬಿಳಿ ಅಂಗಿ ಕಪ್ಪು ಪ್ಯಾಂಟ್ ಧರಿಸಿದ್ದು, ಇಂದು ಬೆಳಗ್ಗೆ ಸಮುದ್ರ ತೀರದ ರುದ್ರಪಾದೆಯಿಂದ ವ್ಯಕ್ತಿಯೋರ್ವರು ಸಮುದ್ರಕ್ಕೆ ಹಾರಿರುವುದನ್ನು ದೇವಸ್ಥಾನದ ಅರ್ಚಕರೊಬ್ಬರು ಕಂಡಿದ್ದರು ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ವ್ಯಕ್ತಿಯ ಗುರುತು ಪತ್ತೆ ಹಚ್ಚುವಿಕೆಗೆ ಕ್ರಮಕೈಗೊಂಡಿದ್ದಾರೆ.

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್‌ ಸಮೀಪದ ಅರ್ಕುಳ ದ್ವಾರದ ಬಳಿ ಸಂಭವಿಸಿದೆ. ಮೃತ ಸವಾರನನ್ನು ಸ್ಥಳೀಯ ನಿವಾಸಿ ಚರಣ್‌ ರಾಜ್‌ ಎಂದು ಗುರುತಿಸಲಾಗಿದೆ. ಇವರು ಒಳರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಸಂದರ್ಭ ಬಸ್‌ ಢಿಕ್ಕಿಯಾಗಿದೆ ಎನ್ನಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದ, ಇದಕ್ಕೆ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ತಿಂಗಳಾಡಿ ಮೂಲದ ವಸಂತ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಸಂತರವರು ಪಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜ 13: ದೂರದರ್ಶನದಲ್ಲಿ ಲೈವ್ ಟೆಲಿಕಾಸ್ಟ್ ಮೂಲಕ  ಕೃಷಿಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಕೃಷಿ ತಜ್ಞರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಕೃಷಿ ತಜ್ಞರನ್ನು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಯೋಜನಾ ನಿರ್ದೇಶಕರಾಗಿದ್ದ ಡಾ. ಅನಿ ದಾಸ್ (59) ಎಂದು ಗುರುತಿಸಲಾಗಿದೆ. ಇವರು ಕೃಷಿಗೆ ಸಂಬಂಧಿಸಿದ ಮಾಹಿತಿ ನೀಡಲು ದೂರದರ್ಶನದಲ್ಲಿ ನಡೆಯುತ್ತಿದ್ದ ಚರ್ಚಾ ಕಾರ್ಯಕ್ರಮಗಳಲ್ಲಿ ಆಗಾಗ ಭಾಗಿಯಾಗುತ್ತಿದ್ದು ಶುಕ್ರವಾರ ಕೂಡ ಎಂದಿನಂತೆ ನಡೆದ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಹೃದಯ

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top