ಕ್ರೈಮ್ ನ್ಯೂಸ್

ಪುತ್ತೂರು: ಅಂಗಡಿಯೊಂದರ ಮುಂದೆ ಅವಿವಾಹಿತ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 11. ಅವಿವಾಹಿತ ಕಾರ್ಮಿಕರೋರ್ವರು ಸ್ಥಳೀಯ ಅಂಗಡಿಯೊಂದರ ಹೊರಗಡೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಡಗನ್ನೂರು ಗ್ರಾಮದ ಪೆರಿಗೇರಿ ನಿವಾಸಿ ಪೆರಿಗೇರಿ ದಿ.ಅಪ್ಪಯ್ಯ ನಾಯ್ಕ ಅವರ ಪುತ್ರ ಜಾನು ನಾಯ್ಕ (45) ಎಂದು ಗುರುತಿಸಲಾಗಿದೆ. ಅವರು ಮನೆಯ ಸಮೀಪದಲ್ಲಿನ ದುರ್ಗಾಸ್ಟೋರ್ ಎಂಬ ಅಂಗಡಿಯ ಎದುರು ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪುತ್ತೂರು: ಅಂಗಡಿಯೊಂದರ ಮುಂದೆ ಅವಿವಾಹಿತ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ. 11.  ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿ, ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಸುಳ್ಯ ಕಳಂಜ ಗ್ರಾಮದ ನಿವಾಸಿ ರಾಜೇಶ ಎಂದು ಗುರುತಿಸಲಾಗಿದೆ. ಈತನ ವಿರುದ್ದ 2019 ರಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಾರ್ಯಾಚರನೆಯಲ್ಲಿ ಬೆಳ್ಳಾರೆ ಠಾಣಾ ಪಿಎಸ್ಐ ಅಶೋಕ್ ಸಿ

ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಚನಾ ಸೇಠ್ ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು..!

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜ. 10. ಬೆಂಗಳೂರು ಸ್ಟಾರ್ಟ್‌ ಅಪ್‌ ಸಿಇಒ ಸುಚನಾ ಸೇಠ್ ತನ್ನ ಮಗುವನ್ನೇ ಕೊಂದಿರುವ ಪ್ರಕರಣಕ್ಕೆ ಸಂಬಂಧಿಸಿ, ಒಂದೊಂದೇ ಸತ್ಯಾಂಶ ಹೊರಬೀಳುತ್ತಿದ್ದು, ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡು, ಹತ್ಯೆ ನಡೆಸಿರುವ ಭೀಕರತೆಯನ್ನು ವೈದ್ಯಾಧಿಕಾರಿ ಬಿಚ್ಚಿಟ್ಟಿದ್ದಾರೆ. ಮೃತ ಮಗುವಿನ ಮರಣೋತ್ತರ ಪರೀಕ್ಷೆಯನ್ನು ನಡೆಸಿರುವ ಹಿರಿಯೂರು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ್, ಡಾ.ರಂಗೇಗೌಡ ಮಾತನಾಡಿ, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ಬದಲಾಗಿ ತಲೆ

ಸುಚನಾ ಸೇಠ್ ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಲವು ಪ್ರಕರಣಗಳ ಆರೋಪಿ ನಕಲಿ ನ್ಯಾಯಾಧೀಶನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 10. ನ್ಯಾಯಾಧೀಶನಂತೆ ನಟಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲೆತ್ನಿಸಿದ ಹಲವು ಪ್ರಕರಣಗಳ ಆರೋಪಿಯೋರ್ವನ್ನು ಪೊಲೀಸರು ಬಂಧಿಸಿದ ಕುರಿತು ಕಾಸರಗೋಡಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ತಿರುವನಂತಪುರ ತೇನ್ನಲ ನಿವಾಸಿ ಶಮ್ನಾದ್ (42) ಎಂದು ಗುರುತಿಸಲಾಗಿದೆ. ಆರೋಪಿಯು ಜ. 08ರಂದು ನೀಲೇಶ್ವರ ಪೊಲೀಸ್ ಠಾಣೆಗೆ ಕರೆಮಾಡಿ ಪತ್ತನಂತಿಟ್ಟದ ನ್ಯಾಯಾಧೀಶರ ಕಾರು ದಾರಿಯಲ್ಲಿ ಕೈಕೊಟ್ಟಿದ್ದು, ರಸ್ತೆಯಲ್ಲೇ ಉಳಿದುಕೊಂಡಿದ್ದಾರೆ. ರಾತ್ರಿ ಉಳಿದುಕೊಳ್ಳಲು ಅವರಿಗೆ ವಸತಿ ಸೌಕರ್ಯ ಏರ್ಪಡಿಸುವಂತೆ ಫೋನಿನಲ್ಲಿ ತಿಳಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ವಿಚಾರಿಸಿದಾಗ

ಹಲವು ಪ್ರಕರಣಗಳ ಆರೋಪಿ ನಕಲಿ ನ್ಯಾಯಾಧೀಶನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೋಯ್ಡಾ, ಜ. 10. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಯುವಕರು ಮೃತಪಡುತ್ತಿರುವ ವರದಿಗಳು ಹೆಚ್ಚೆಚ್ಚು ಕೇಳಿ ಬರುತ್ತಿದೆ. ಅದೇ ರೀತಿ ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ಹೃದಯಾಘಾತವಾಗಿ ಕುಸಿದುಬಿದ್ದು, ಮೃತಪಟ್ಟ ಘಟನೆ ನೋಯ್ಡಾದ ಥಾನಾ ಎಕ್ಸ್ ಪ್ರೆಸ್ ವೇ ಪ್ರದೇಶದ ಸೆಕ್ಟರ್ -135 ರಲ್ಲಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಕ್ರಿಕೆಟ್ ಆಡುತ್ತಿದ್ದ ವೇಳೆ ರನ್‌ ತೆಗೆಯಲೆಂದು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣವೇ

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ರೌಡಿ ಶೀಟರ್ ಆಕಾಶಭವನ ಶರಣ್ ಎಂಬಾತನ ಮೇಲೆ ನಗರದ ಜಪ್ಪು ಕುಡ್ಪಾಡಿ ಬಳಿ ಇದೀಗ ಪೊಲೀಸರಿಂದ ಶೂಟೌಟ್ ನಡೆದಿರುವ ಕುರಿತು ವರದಿಯಾಗಿದೆ. ನಗರದ ಮೇರಿಹಿಲ್ ಬಳಿ ಅಪರಾಧ ಪತ್ತೆದಳದ (ಸಿಸಿಬಿ) ಪೊಲೀಸರ ಮೇಲೆ ರೌಡಿಶೀಟರ್ ಆಕಾಶಭವನ ಶರಣ್, ಕಾರು ಹಾಯಿಸಿ ಕೊಲೆಗೆ ಯತ್ನಿಸಿದ್ದ ಆರೋಪವಿದ್ದು, ಕೃತ್ಯ ಎಸಗಿದ ಬಳಿಕ ಆತ ತಲೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಇದೀಗ ಜಪ್ಪು ಕುಡ್ಪಾಡಿ ಬಳಿ ಪೊಲೀಸರಿಂದ ಶೂಟೌಟ್ ನಡೆದಿದೆ ಎಂದು ತಿಳಿದು ಬಂದಿದೆ.

ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಶೂಟೌಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಎದೆಹಾಲು ಗಂಟಲಲ್ಲಿ ಸಿಲುಕಿ 3 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂಬಳೆ, ಜ. 10. ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳು ಮಗುವೊಂದು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ. ಮೃತ ಮಗುವನ್ನು ಮೂಲತಃ ಈಶ್ವರಮಂಗಲ ನಿವಾಸಿ, ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್ ಹಾಗೂ ಖದೀಜಾ ದಂಪತಿಯ ಪುತ್ರಿ, ಮೂರು ತಿಂಗಳ ಅಯಿಶಾ ಮೆಹ್ರಾ ಎಂದು ಗುರುತಿಸಲಾಗಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ರಾತ್ರಿ ಎಷ್ಟೇ ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾ ಗ ಕುಂಬಳೆಯ ಖಾಸಗಿ ಆಸ್ಪತ್ರೆ ಗೆ ಕರೆದುಕೊಂಡು ಹೋಗಿದ್ದು ,

ಎದೆಹಾಲು ಗಂಟಲಲ್ಲಿ ಸಿಲುಕಿ 3 ತಿಂಗಳ ಮಗು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಮರಳು ಸಾಗಾಟ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 10. ಮರಳು ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ನರಿಂಗಾನ ಗ್ರಾಮದ ಕೆದಂಬಾಡಿ ಜಂಕ್ಷನ್ ನಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ.   ಬಂಧಿತ ಆರೋಪಿಯನ್ನು ಬಂಟ್ವಾಳ ನರಿಂಗಾನ ನಿವಾಸಿ, ಸಿದ್ಧೀಕ್ ಕೆ.ಎಂ.ಎಂದು ಗುರುತಿಸಲಾಗಿದೆ. ಸಿದ್ಧೀಕ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ:126/2017 ಕಲಂ:379 r/w 34 ಐಪಿಸಿ ಪ್ರಕರಣ ದಾಖಲಾಗಿತ್ತು. ಸಿದ್ಧೀಕ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ನ್ಯಾಯಾಲಯವು ರೂ. 11.000/- ದಂಡವನ್ನು

ಮರಳು ಸಾಗಾಟ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜ. 02. ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೋರ್‌ವೆಲ್ ಲಾರಿಯಿಂದ ಕೊಳವೆ ಬಾವಿ ಕೊರೆಯುವ ಸುಮಾರು 25 ಕೆ.ಜಿ. ತೂಕದ 5 ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವುಗೈದಿರುವ ಘಟನೆ ನಡೆದಿದೆ. ಕಡಬ ತಾಲೂಕು ವ್ಯಾಪ್ತಿಯಲ್ಲಿ ಪುತ್ತೂರಿನ ಯಮುನಾ ಬೋರ್‌ವೆಲ್ಸ್‌ ನವರಿಗೆ ಕರ್ನಾಟಕ ಸರಕಾರದ ಜಲಜೀವನ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಟೆಂಡರ್ ಆಗಿದ್ದು, ಅದರಂತೆ ಬಿಳಿನೆಲೆ ಗ್ರಾ.ಪಂಚಾಯತ್ ಗೆ ಸಂಬಂಧಿಸಿದ ಕೊಳವೆ ಬಾವಿ ಕೊರೆಯಲೆಂದು ಡಿ.

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಹೊಸವರ್ಷಾಚರಣೆಯ ವೇಳೆ ಗಲಾಟೆ- ಓರ್ವನ ಮೂಗು ಕತ್ತರಿಸಿದ ಸ್ನೇಹಿತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 02 . ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭ ಯುವಕರ ನಡುವೆ ಗಲಾಟೆಯಾಗಿ ಓರ್ವ ತನ್ನ ಗೆಳೆಯನ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್‌ (28) ಎಂದು ಗುರುತಿಸಲಾಗಿದೆ. ಮೂಡಿಗೆರೆ ನಿವಾಸಿ ರಾಕೇಶ್ ಎಂಬ ಯುವಕ ಪ್ರಸ್ತುತ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಆದರೆ ಹೊಸ ವರ್ಷಾಚರಣೆ ಸಂದರ್ಭ ಮದ್ಯ

ಹೊಸವರ್ಷಾಚರಣೆಯ ವೇಳೆ ಗಲಾಟೆ- ಓರ್ವನ ಮೂಗು ಕತ್ತರಿಸಿದ ಸ್ನೇಹಿತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top