ಕ್ರೈಮ್ ನ್ಯೂಸ್

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ. 01. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಮರ್ಧಾಳ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪತ್ನಿ ಅವ್ವಮ್ಮ ಎಂದು ಗುರುತಿಸಲಾಗಿದೆ. ಅವರು ಇಂದು ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ […]

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರು ಬೆಂಕಿಗಾಹುತಿ- ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಚಲಿಸುತ್ತಿದ್ದ ಇಲೆಕ್ಟ್ರಿಕ್​ ಕಾರಿನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಶನಿವಾರದಂದು ಜೆ.ಪಿ ನಗರ ಸಮೀಪ ವರದಿಯಾಗಿದೆ. ಜೆ.ಪಿ ನಗರದ ಬಳಿ ಚಾಲಕ ಮತ್ತು ಆತನ ಸ್ನೇಹಿತ ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಇಂಜಿನ್​ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ ಚಾಲಕ ಹಾಗೂ ಆತನ ಸ್ನೇಹಿತ ಕಾರಿನಿಂದ ಇಳಿದಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ

ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರು ಬೆಂಕಿಗಾಹುತಿ- ಸುಟ್ಟು ಕರಕಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಕೃಷಿ ಉತ್ಪನ್ನಗಳ ವ್ಯಾಪಾರಿಯೊಬ್ಬರಿಗೆ ವ್ಯಕ್ತಯೋರ್ವ 75 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ. ವಂಚನೆಗೊಳಗಾದವರನ್ನು ಅಬ್ದುಲ್ ರಹಿಮಾನ್ ಬಾವಾ ಎನ್ನಲಾಗಿದೆ. ಇವರು ಮಹಾರಾಷ್ಟ್ರದ ಸೋಲಾಪುರದ ಸಿದ್ದೇಶ್ವರ ಟ್ರೇಡರ್ಸ್ ನ ಕುಂಡಲಿಕ್ ಜುಂಬಾರ್ ಖಂಡಾಗಲೆ ಎಂಬವರು ತನ್ನ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. 2021ರ ಜನವರಿಯಲ್ಲಿ ದೂರುದಾರರಿಗೆ ಮಂಗಳೂರು ಮತ್ತು ಚೆನ್ನೈನಲ್ಲಿ ವ್ಯವಹಾರ ಹೊಂದಿರುವ

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿ ಗುರುತಿಸಿಕೊಂಡಿರುವ ನಟ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟಿರುವ ಘಟನೆ ಶನಿವಾರದಂದು ತಡರಾತ್ರಿ ಕೋಣನಕುಂಟೆ ಕ್ರಾಸ್​ ಬಳಿ ನಡೆದಿದೆ. ಮೃತ ಮಹಿಳೆಯನ್ನು ಪ್ರೇಮಾ​ ಎಸ್​( 48) ಎಂದು ಗುರುತಿಸಲಾಗಿದೆ. ಪ್ರೇಮಾ ದಂಪತಿಯು ಫುಟ್​ ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಪ್ರೇಮಾ ಮೃತಪಟ್ಟರೆ, ಅವರ ಪತಿ ಕೃಷ್ಣ ಬಿ.

ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಚಾಲಕನಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿ ಆಟೋ ಚಾಲಕನಿಗೆ ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿ ಮಹಮ್ಮದ್‌ ಸುಹೈಲ್‌ (25) ಎಂದು ಗುರುತಿಸಲಾಗಿದೆ. ಸೆ. 27 ರಂದು ರಾತ್ರಿ ಕಂಬಳಬೆಟ್ಟುವಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭ ಸುಹೈಲ್ ಹಾಗೂ ಆರೋಪಿ ಹಾರೀಸ್‌ ರವರಿಗೆ ಮಾತುಕತೆಯಾಗಿತ್ತು. ಇದರ ಮುಂದುವರಿದ ಭಾಗವಾಗಿ ಗುರುವಾರ ಬೆಳಗ್ಗೆ ಸುಹೈಲ್ ತನ್ನ ಅಟೋರಿಕ್ಷಾದಲ್ಲಿ ಪ್ರಯಾಣಿಕರನ್ನು

ಆಟೋ ಚಾಲಕನಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣದಡಿ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ಇತ್ತೀಚೆಗೆ ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕೂರುವಂತೆ ಹೇಳಿದ್ದು, ಈ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದೂ ಬೆದರಿಸಿರುವುದಾಗಿ ಆರೋಪಿಸಲಾಗಿದೆ. ಇದರಿಂದ ಭಯಗೊಂಡ

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ. ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ -ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 26. ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಸೇಡಿಯಾಪು ಎಂಬಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಆಟೋ ಚಾಲಕ ರಾಧಾಕೃಷ್ಣ ಸಫಲ್ಯ, ಪ್ರಯಾಣಿಕರಾದ ಬಾಬು ನಾಯ್ಕ ಹಾಗೂ ಶ್ವೇತಾ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ -ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶೇಷ ಪೊಲೀಸ್ ಅಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಜಮ್ಮು, ಸೆ. 26. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರ ಮೃತದೇಹವು ಕಾಂಕೋಟೆ ಗ್ರಾಮದ ಬಳಿಯ ಮುಖ್ಯ ರಸ್ತೆಯಿಂದ 10 ಅಡಿ ಕೆಳಗೆ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರನ್ನು ಎಸ್‍ಪಿಒ ಖಾಲಿಕ್ ಹುಸೇನ್ ಎಂದು ಗುರುತಿಸಲಾಗಿದೆ. ಪೂಂಚ್ ಜಿಲ್ಲಾ ಪೊಲೀಸ್ ಲೈನ್ಸ್‍ನಲ್ಲಿ ನಿಯೋಜಿಸಲಾಗಿದ್ದ ಹುಸೇನ್ ಅವರ ತಲೆಗೆ ಗಾಯಗಳಾಗಿದ್ದು, ಪ್ರಾಥಮಿಕ ತನಿಖೆಯಿಂದ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ವಿಶೇಷ ಪೊಲೀಸ್ ಅಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 26. ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ಚಾಲಕ ಮೃತಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ. ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫ (43) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದ ಬಸ್ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top