ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ -ಘಟನೆ ನಡೆದು 18 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು
(ನ್ಯೂಸ್ ಕಡಬ) newskadaba.com ಕಡಬ, ಸೆ. 25. ರಾತ್ರಿ ವೇಳೆಗೆ ಬೈಕ್ ನಲ್ಲಿ ಆಗಮಿಸಿ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಪೈಕಿ ಓರ್ವನನ್ನು ಘಟನೆ ನಡೆದು 24 ಗಂಟೆಗಳ ಒಳಗಾಗಿ ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಕೈಕಂಬ ನಡ್ತೋಟ ನಿವಾಸಿ ಸಚಿನ್ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ. ಆರೋಪಿಗಳು ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ […]


