ಕ್ರೈಮ್ ನ್ಯೂಸ್

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಸೆ. 24. ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ (ಪಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದ ಬಜ್ಪೆ ಪೊಲೀಸರು ಎರಡು ಟಿಪ್ಪರ್ ಲಾರಿಗಳ‌ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಶನಿವಾರದಂದು ಬೆಳಗ್ಗೆ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ‌ […]

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆವೈಸಿ ಹೆಸರಿನಲ್ಲಿ 1.93 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಕೆವೈಸಿ ಮಾಡದಿದ್ದಲ್ಲಿ ಕ್ರೆಡಿಟ್ ಕಾರ್ಡ್ ಬ್ಲಾಕ್ ಆಗುತ್ತದೆ ಎಂದು ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ 1,93,210 ರೂ. ಹಣವನ್ನು ಬ್ಯಾಂಕ್ ಖಾತೆಯಿಂದ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಕೆವೈಸಿ ಅಪ್‌ಡೇಟ್ ಮಾಡುವ ಕುರಿತಂತೆ ಸಂದೇಶ ಬಂದಿದೆ. ಬಳಿಕ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಪ್‌ ಡೇಟ್ ಮಾಡದಿದ್ದರೆ ಕ್ರೆಡಿಟ್ ಕಾರ್ಡ್ ಬ್ಲಾಕ್ ಆಗುತ್ತದೆ ಎಂದು ತಿಳಿಸಿದ್ದ ಎನ್ನಲಾಗಿದೆ. ಇದನ್ನು ನಂಬಿದ ದೂರುದಾರರು

ಕೆವೈಸಿ ಹೆಸರಿನಲ್ಲಿ 1.93 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ: ಐದರ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ (5) ಎಂದು ಗುರುತಿಸಲಾಗಿದೆ. ಮಹಮ್ಮದ್ ಆದಿಲ್ ಶನಿವಾರದಂದು ಮಧ್ಯಾಹ್ನ ನಡೆದುಕೊಂಡು ಹೋಗುತ್ತಿದ್ದ ವೇಳೆ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ

ಕಾರು ಢಿಕ್ಕಿ: ಐದರ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಾಸ್ಟೆಲ್ ನಿಂದ 4 ಮೊಬೈಲ್ ಫೋನ್ ಕಳವು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ನಗರದ ಬಂದರ್‌ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಡಿಕಲ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್‌ನಿಂದ ವಿದ್ಯಾರ್ಥಿಗಳ ನಾಲ್ಕು ಮೊಬೈಲ್ ಫೋನ್‌ಗಳು ಕಳವಾಗಿರುವ ಕುರಿತು ಹಾಸ್ಟೆಲ್ ವಾರ್ಡನ್ ಸಂಗಮೇಶ್ ಎಂ. ಮಠ ಅವರು ಬಂದರು ಠಾಣೆಗೆ ನಿಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಸೆ. 21ರಂದು ಬೆಳಗ್ಗೆ 8 ಗಂಟೆಗೆ ವಿದ್ಯಾರ್ಥಿ ನಿಲಯದಲ್ಲಿದ್ದ ವಿದ್ಯಾರ್ಥಿಗಳ ಪೈಕಿ ಒಟ್ಟು 4 ವಿದ್ಯಾರ್ಥಿಗಳ ಮೊಬೈಲ್ ಪೋನ್‌ಗಳು ನಾಪತ್ತೆಯಾಗಿರುವ ಬಗ್ಗೆ ವಿದ್ಯಾರ್ಥಿಗಳು ತಿಳಿಸಿದ್ದಾರೆ. ವಿದ್ಯಾರ್ಥಿ

ಮಂಗಳೂರು: ಹಾಸ್ಟೆಲ್ ನಿಂದ 4 ಮೊಬೈಲ್ ಫೋನ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಎಕ್ಸ್‌ ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮವಾಗಿ ಸುಮಾರು 30 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟಿರುವುದಾಗಿ ಸ್ಟೇಷನ್ ಮಾಸ್ಟರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ಪೋರ್ಟ್ ನಲ್ಲಿ 30 ಐಫೋನ್ ಹಾಗೂ 28 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಅಬುಧಾಬಿಯಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನಿಂದ 30 ಐಫೋನ್, 28 ಲ್ಯಾಪ್ ಟಾಪ್ ಮತ್ತು ಕ್ರೆಡಿಟ್ ಕಾರ್ಡ್ ನಲ್ಲಿ ಇರಿಸಲಾಗಿದ್ದ 55 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಕುರಿತು ಸೆ. 17ರಂದು ವರದಿಯಾಗಿದೆ. ಆರೋಪಿಯ ವಿರುದ್ಧ ಕಸ್ಟಮ್ಸ್ ಆಕ್ಟ್, 1962 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಯಾಣಿಕರು ನೀಡಿದ ಮಾಹಿತಿಯ ಆಧಾರದ ಮೇಲೆ ಬ್ಯಾಗೇಜ್ ಬೆಲ್ಟ್ ನಿಂದ ಲಗೇಜ್ ನ್ನು

ಏರ್ಪೋರ್ಟ್ ನಲ್ಲಿ 30 ಐಫೋನ್ ಹಾಗೂ 28 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ- ರಿಕ್ಷಾ ಚಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 23. ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ತಾಲೂಕಿನ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ. ಮೃತರನ್ನು ಕೆಂಪುಗುಡ್ಡೆ ನಿವಾಸಿ ವಿನಾಯಕ ಪೈ ಎಂದು ಗುರುತಿಸಲಾಗಿದೆ. ವಿನಾಯಕ ಪೈ ಅವರು ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಿಗ್ಗಿನ ಉಪಹಾರ ತರಲೆಂದು ವಗ್ಗದ ಹೊಟೇಲ್ ಒಂದಕ್ಕೆ ಹೋಗುತ್ತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರ

ಕಾರು ಢಿಕ್ಕಿ- ರಿಕ್ಷಾ ಚಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಗಣೇಶೋತ್ಸವದ ಲಕ್ಕಿ‌ ಡ್ರಾ ಕೂಪನ್ ನಲ್ಲಿ ಬಿಯರ್ ಬಾಟ್ಲಿ ಆರೋಪಿಯ ಬೆಂಡೆತ್ತಿದ ಪೊಲೀಸರು

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 23. ಇಲ್ಲಿನ ಹಳೆಗೇಟು ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿದ್ದು, ಪ್ರಕರಣದ ಆರೋಪಿಯನ್ನ ಪತ್ತೆಹಚ್ಚಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಗಣೇಶ ಚತುರ್ಥಿ ಪ್ರಯುಕ್ತ ಹಳೆಗೇಟು ಎಂಬಲ್ಲಿ ನಡೆಯುವ ಗಣೇಶ ಹಬ್ಬದ ಹೆಸರಿನಲ್ಲಿ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಪ್ರಥಮ ಬಹುಮಾನ ಬ್ಲ್ಯಾಕ್ ಆಂಡ್ ವೈಟ್ ಮದ್ಯ ಹಾಗೂ ದ್ವಿತೀಯ ಬಹುಮಾನವಾಗಿ ಒಂದು ಕೇಸ್ ಬಿಯರ್ ಇಡಲಾಗಿತ್ತು. ಈ ಲಕ್ಕಿ ಕೂಪನ್ ಗೆ ಸುಳ್ಯ

ಸುಳ್ಯ: ಗಣೇಶೋತ್ಸವದ ಲಕ್ಕಿ‌ ಡ್ರಾ ಕೂಪನ್ ನಲ್ಲಿ ಬಿಯರ್ ಬಾಟ್ಲಿ ಆರೋಪಿಯ ಬೆಂಡೆತ್ತಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಟೆಂಪೋ ಟ್ರಾವೆಲರ್ ಕಳವು ಪ್ರಕರಣ- ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಪಾರ್ಕ್ ಮಾಡಲಾಗಿದ್ದ ಟೆಂಪೋ ಟ್ರಾವೆಲರ್ ವಾಹನವನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೊಪಿಗಳನ್ನು ಹೊರ ರಾಜ್ಯದವರಾದ ಅರೀಫ್ ಉಲ್ಲಾಖಾನ್, ಅಮಿತ್ ಬಾಹುಬಲಿ ಪಂಚೋಡಿ ಯಾನೆ ಬೇಬಿ ಹಾಗೂ ಸುರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 15 ಲಕ್ಷ ರೂ. ಮೌಲ್ಯದ ಟೆಂಪೋ ಟ್ರಾವೆಲ್ಲೆರ್‌ ನ್ನು ವಶಪಡಿಸಿಕೊಳ್ಳಲಾಗಿದೆ. ಸೆ. 14ರಂದು ರಾತ್ರಿ 8:30ಕ್ಕೆ ನಗರದ ಕುಂಟಿಕಾನ

ಮಂಗಳೂರು: ಟೆಂಪೋ ಟ್ರಾವೆಲರ್ ಕಳವು ಪ್ರಕರಣ- ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್ ನಲ್ಲಿ 12 ಕೋ.ರೂ. ಮೌಲ್ಯದ ಮಾದಕ ವಸ್ತು ಸಾಗಾಟ – ಬಿಎಸ್‌ಎಫ್‌ನಿಂದ ಭರ್ಜರಿ ಬೇಟೆ

(ನ್ಯೂಸ್ ಕಡಬ) newskadaba.com ಕೋಲ್ಕತಾ, ಸೆ. 22. ಪಶ್ಚಿಮಬಂಗಾಳದ ದಕ್ಷಿಣ ದಿನಜ್‌ಪುರ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್‌ಎಫ್ ಅಧಿಕಾರಿಗಳು ಟ್ರಕ್ ನಲ್ಲಿದ್ದ 12 ಕೋ. ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಕುರಿತು ವರದಿಯಾಗಿದೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಗಡಿ ಭದ್ರತಾ ಪಡೆಯ ಬೆಟಾಲಿಯನ್‌ಗಳು ಹಾಗೂ ಕಸ್ಟಮ್ ಅಧಿಕಾರಿಗಳು ಜಂಟಿಯಾಗಿ, ನಿಲ್ಲಿಸಿದ್ದ ಟ್ರಕ್‌ ನಲ್ಲಿ ಕಾರ್ಯಾಚರಣೆ ನಡೆಸಿದವು. ಕಾರ್ಯಾಚರಣೆಯ ವೇಳೆ ಟ್ರಕ್ ಚಾಲಕನ ಕ್ಯಾಬಿನ್‌ನಲ್ಲಿ ಪ್ಲಾಸ್ಟಿಕ್ ನ ಕಪ್ಪು ಕೈ ಚೀಲವೊಂದು ಪತ್ತೆಯಾಗಿದ್ದು, ಈ

ಟ್ರಕ್ ನಲ್ಲಿ 12 ಕೋ.ರೂ. ಮೌಲ್ಯದ ಮಾದಕ ವಸ್ತು ಸಾಗಾಟ – ಬಿಎಸ್‌ಎಫ್‌ನಿಂದ ಭರ್ಜರಿ ಬೇಟೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top