ಕ್ರೈಮ್ ನ್ಯೂಸ್

ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಮನೆಯ ಕೋಣೆಯಲ್ಲಿ ಮಲಗಿದ್ದ ಯುವತಿಗೆ ಕೋಣೆಯ ಕಿಟಕಿ ಬಾಗಿಲು ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ತಾಲೂಕಿನ ಕಲ್ಲಡ್ಕ ಸಮೀಫದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ವಿಶ್ವನಾಥ ಎಂದು ಗುರುತಿಸಲಾಗಿದೆ. ದೂರುದಾರರ ಪ್ರಕಾರ, ಮನೆಯ ಕೋಣೆಯ ಕಿಟಕಿಯ ಪರದೆಯನ್ನು ಸರಿಸಿ ಬಳಿಕ ಕಿಟಕಿ ಮೂಲಕ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ವಿಶ್ವನಾಥ ಇಣುಕಿ ನೋಡುತ್ತಿದ್ದ. ಈತ […]

ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 22. ಮಹಿಳಾ ಪೊಲೀಸ್‌ ಪೇದೆಯೊಬ್ಬರ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೆಶದಲ್ಲಿ ನಡೆದಿದೆ. ಹತ್ಯೆಗೊಳಗಾದವನನ್ನು ಅನೀಶ್‌ ಖಾನ್‌ ಎಂದು ಗುರುತಿಸಲಾಗಿದೆ. ಅಲ್ಲದೇ ಎನ್‌ಕೌಂಟರ್‌ನಲ್ಲಿ ಅನೀಸ್‌ನ ಇಬ್ಬರು ಸಹಚರರಾದ ಆಜಾದ್ ಮತ್ತು ವಿಷಂಭರ್ ದಯಾಲ್ ಕೂಡ ಗಾಯಗೊಂಡಿದ್ದಾರೆ. ಈ ಮೂವರು ಮಹಿಳಾ ಪೇದೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಸೊರಾನ್‌ನ ಭದ್ರಿ ಗ್ರಾಮದಲ್ಲಿ ನೆಲೆಸಿರುವ ಹೆಡ್

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ – ಚಾಲಕ, ಕ್ಲೀನರ್ ಪಾರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದಿದ್ದು, ಚಾಲಕ ಮತ್ತು ಕ್ಲೀನರ್ ಇಬ್ಬರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ ಮುಂಜಾನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಗಾಯಳುಗಳನ್ನು ಆರಿಫ್ ಮತ್ತು ರಿಯಾಜ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಇದ್ದಿಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚರಂಡಿಗೆ ಬಿದ್ದಿದ್ದು, ಚಾಲಕ ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ.

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ – ಚಾಲಕ, ಕ್ಲೀನರ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 22. ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಗರದ ತಿಮ್ಮಾಪುರಪೇಟೆ ಬಡಾವಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಭರತನಗರ ನಿವಾಸಿ ರಮೇಶ(19) ಎಂದು ಗುರುತಿಸಲಾಗಿದೆ. ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಮೇಶ ಸ್ನೇಹಿತನ ಮನೆಗೆ ಬಂದಿದ್ದು, ಮಹಡಿ ಮೇಲೆ ಮಲಗಿದ್ದರು. ನಿದ್ದೆಯ ಮಂಪರಿನಲ್ಲಿ ಆಯತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಹೇಳಲಾಗಿದೆ. ಸ್ಥಳಕ್ಕೆ ನೇತಾಜಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22. ಯಕ್ಷಗಾನ ಯುವ ವೇಷಧಾರಿ ಹೆರಂಜಾಲು ರಾಜೇಂದ್ರ ಗಾಣಿಗ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರದಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿದ್ದ ರಾಜೇಂದ್ರ ಗಾಣಿಗ ಅವರು, ಮಾರಣಕಟ್ಟೆ, ಹಾಲಾಡಿ, ಸೌಕೂರು ಹಾಗೂ ನೀಲಾವರ ಮೇಳಗಳಲ್ಲಿ ಹಾಗೂ ಸುಮಾರು ಹತ್ತು ವರ್ಷಗಳ ಕಾಲ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಕಲಾ ಸೇವೆ ಮಾಡಿದ್ದರು. ಅವಿವಾಹಿತರಾಗಿದ್ದ ರಾಜೇಂದ್ರ ಗಾಣಿಗ ತಾಯಿ ಹಾಗೂ ಅಪಾರ ಸಂಖ್ಯೆಯ

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ (ಲಿ.) ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆ ಒಟ್ಟು 88 ಲಕ್ಷ ರೂ. ಪಾವತಿಸುವಂತೆ ನ್ಯಾಯಾಲಯ ತೀರ್ಪು ನೀಡಿತ್ತು. ಅದರಂತೆ ಹಣ ಪಾವತಿಗೆ ವಿಫಲರಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆ, ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 21. ಇಲ್ಲಿನ ನೆಕ್ಕಿಲಾಡಿಯಲ್ಲಿ ಕಾರ್ಯಾಚರಿಸುತ್ತಿದ್ದ ರೈಟ್ ಚಾಯ್ಸ್ ಪೆಟ್ರೋಲ್ ಪಂಪ್‌ನಲ್ಲಿ ಸೆ.16ರ ಮಧ್ಯರಾತ್ರಿಯ ವೇಳೆ ಕಳ್ಳತನವಾಗಿರುವ ಕುರಿತು ಸಿಸಿಟಿವಿ ದೃಶ್ಯದ ಮೂಲಕ ಬೆಳಕಿಗೆ ಬಂದಿದೆ. ಕಳ್ಳನೋರ್ವ ಗ್ಲಾಸ್ ಡೋರ್‌ನ ಲಾಕ್ ಪುಡಿಗೈದು ಒಳಬಂದು ಕ್ಯಾಶ್ ಡ್ರಾವರ್‌ನಲ್ಲಿದ್ದ 30 ಸಾವಿರ ರೂ. ನಗದನ್ನು ಕಳವು ಮಾಡಿದ್ದು, ರೈನ್‌ಕೋಟ್, ಹೆಲ್ಮೆಟ್ ಧರಿಸಿ ಬಂದ ಕಳ್ಳ ಟಾರ್ಚ್ ಹಿಡಿದು ಕ್ಯಾಬಿನ್ ಜಾಲಾಡುವ ದೃಶ್ಯ ಸೆರೆಯಾಗಿದೆ. ಈ ಕುರಿತು ಪೆಟ್ರೋಲ್‌ ಬಂಕ್‌ ಮಾಲಕ ನವಾಝ್ ಎಂಬವರು

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರದ ದಿಮ್ಮಿ ಸಾಗಾಟ – ಲಾರಿ, ಮರದ ದಿಮ್ಮಿ ಸಹಿತ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 21. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಮರದ ದಿಮ್ಮಿಗಳನ್ನು ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಆರೋಪಿಯನ್ನು ಲಾರಿ ಸಹಿತ ವಶಕ್ಕೆ ತೆಗೆದುಕೊಂಡ ಘಟನೆ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಸಕಲೇಶಪುರದ ಆನಂಗಿ ಮನೆ ನಿವಾಸಿ ರಜಾಕ್‌ ಬಿನ್‌ ಅಬ್ಬಾಸ್‌ ಎಂದು ಗುರುತಿಸಲಾಗಿದೆ. ಆರೋಪಿ ಸಹಿತ ಲಾರಿಯಲ್ಲಿ ಸಾಗಿಸುತ್ತಿದ್ದ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂದೀಪ್‌ ಸಿ.ಕೆ., ರಾವುತ್ತಪ್ಪ ಬಿರಾದಾರ್‌, ರಾಜೇಶ್‌ ಮತ್ತು

ಅಕ್ರಮ ಮರದ ದಿಮ್ಮಿ ಸಾಗಾಟ – ಲಾರಿ, ಮರದ ದಿಮ್ಮಿ ಸಹಿತ ಚಾಲಕ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಜಾಲ್‌ ಫೈಜಲ್‌ ನಗರದ ತಲ್ಲತ್‌ (39) ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ. ಆರೋಪಿ ತಲ್ಲತ್‌ 2004ರಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜೀವ ಬೆದರಿಕೆ,

ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕೌನ್‌ ಬನೇಗಾ ಕರೋಡ್‌ ಪತಿಯಲ್ಲಿ 25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ಮಹಿಳೆಗೆ 12.93 ಲಕ್ಷ ರೂ. ವಂಚಿಸಿದ ಕುರಿತು ಪುತ್ತೂರಿನಿಂದ ವರದಿಯಾಗಿದೆ. ಪುತ್ತೂರು ನಿವಾಸಿ ಝೀನತ್‌ ಬಾನು ಎಂಬವರಿಗೆ 2022ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೋರ್ವ ವಾಟ್ಸಾಪ್ ಮೂಲಕ ಕರೆ ಮಾಡಿ ತಾನು ಕೌನ್‌ ಬನೇಗಾ ಕರೋಡ್‌ ಪತಿ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನೀವು 25 ಲಕ್ಷ ರೂ. ಲಾಟರಿ ಗೆದ್ದಿರುವುದಾಗಿ ತಿಳಿಸಿದ್ದಾನೆ. ಅನಂತರ ಆ

ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top