ಕ್ರೈಮ್ ನ್ಯೂಸ್

ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ – ಇಬ್ಬರು ಅರೆಸ್ಟ್

(ನ್ಯೂಸ್‌ ಕಡಬ) newskadaba.com ಅ. 14. ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಆರೋಪದಡಿ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಬಂಧಿತರನ್ನು ಉದ್ಯಾವರ ಜಮಾಲುದ್ದೀನ್ ಫೈಝಲ್ (39) ಮತ್ತು ಹೊಸಬೆಟ್ಟುವಿನ ರಾಫಿಲ್ (45) ಎಂದು ಗುರುತಿಸಲಾಗಿದೆ. ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಾರಿನಲ್ಲಿ ಬಂದ ಆರೋಪಿಗಳು ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಲು ಯತ್ನಿಸಿದ್ಧರು ಎನ್ನಲಾಗಿದೆ. ನಂತರ ವಿದ್ಯಾರ್ಥಿನಿಯರು ಹೇಗೋ ತಪ್ಪಿಸಿ ಮನೆಗೆ ತಲುಪಿದ್ದರು. […]

ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ – ಇಬ್ಬರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ದುರಂತ ಸಾವು- ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ

(ನ್ಯೂಸ್‌ ಕಡಬ) newskadaba.com,  ಅ .13: ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ 7 ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಕಂಪನಿ ಮತ್ತು ತಮಿಳುನಾಡು ಆಹಾರ

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ದುರಂತ ಸಾವು- ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಕಾರ್ಪೊರೇಟ್ ಸಫೈರೋ ಫಾರೆಕ್ಸ್ ಕಾರ್ಡ್ ಅನ್ನು ಬಿಸಿನೆಸ್ ಪ್ರಯಾಣಿಕರಿಗಾಗಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.11 ಬೆಂಗಳೂರು : ಐಸಿಐಸಿಐ ಬ್ಯಾಂಕ್ ಮತ್ತು ವೀಸಾ ಸಂಸ್ಥೆಗಳು ಜಂಟಿಯಾಗಿ ಭಾರತದ ಉದ್ಯಮಿ ಗಳು ಮತ್ತು ಕಾರ್ಪೊರೇಟ್ ಮಂದಿಗೆ ವಿದೇಶ ಪ್ರವಾಸ ಸಂದರ್ಭದಲ್ಲಿ ಅನುಕೂಲ ಒದಗಿಸುವ ಪ್ರೀಪೇಯ್ಡ್ ಫಾರೆಕ್ಸ್ ಕಾರ್ಡ್ ಆಗಿರುವ ಕಾರ್ಪೊರೇಟ್ ಸಫೈರೋ ಫಾರೆಕ್ಸ್ ಕಾರ್ಡ್ ಅನ್ನು ಬಿಡುಗಡೆ ಮಾಡಿವೆ. ಬಿಸಿನೆಸ್ ಪ್ರಯಾಣಿಕರಿಗಾಗಿ ರೂಪಿಸಲಾದ ಮೊದಲ ಬಗೆಯ ಕಾರ್ಡ್ ಆಗಿದ್ದು, ವೀಸಾ ಇನ್ಫಿನಿಟ್ ಸೌಲಭ್ಯಗಳು ದೊರೆಯಲಿದೆ ಮತ್ತು ಪ್ರೀಪೇಯ್ಡ್ ಫಾರೆಕ್ಸ್ ಕಾರ್ಡ್‌ ನ ಅನುಕೂಲತೆ ಲಭ್ಯವಾಗಲಿದೆ. ಆಗಾಗ ಪ್ರಯಾಣ ಮಾಡುವ ಉದ್ಯಮ

ಬೆಂಗಳೂರು: ಕಾರ್ಪೊರೇಟ್ ಸಫೈರೋ ಫಾರೆಕ್ಸ್ ಕಾರ್ಡ್ ಅನ್ನು ಬಿಸಿನೆಸ್ ಪ್ರಯಾಣಿಕರಿಗಾಗಿ ಬಿಡುಗಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: ದಸರಾದಲ್ಲಿ ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ-ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ.10 ಮೈಸೂರು: ದಸರಾ ಹಬ್ಬದ ಸಂದರ್ಭದಲ್ಲಿ ಬಲೂನ್‌ಗಳನ್ನು ಮಾರಾಟ ಮಾಡಲು ಕಲಬುರಗಿಯಿಂದ ಮೈಸೂರಿಗೆ ಬಂದಿದ್ದ ಬಡ ವಲಸೆ ಕುಟುಂಬವೊಂದರ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಕಲಬುರಗಿಯ ಸೂಕ್ಷ್ಮ ಅಲೆಮಾರಿ ಸಮುದಾಯಕ್ಕೆ ಸೇರಿದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಡೇರೆ ಹಾಕಿ ತಂಗಿದ್ದವು. ಚಾಮುಂಡಿ ಬೆಟ್ಟ, ವಸ್ತು ಪ್ರದರ್ಶನ, ಬನ್ನಿ ಮಂಟಪ, ದೇವರಾಜ ಮಾರುಕಟ್ಟೆ ಸೇರಿದಂತೆ ಹಲವು ಸ್ಥಳಗಳಲ್ಲಿ

ಮೈಸೂರು: ದಸರಾದಲ್ಲಿ ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ-ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿಕನ್ ಬೇಕೆಂದು ಒತ್ತಾಯಿಸಿದ 7 ವರ್ಷದ ಮಗನಿಗೆ ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಮುಂಬೈ: ಚಿಕನ್ ಬೇಕೆಂದ ಮಕ್ಕಳಿಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಚಿನ್ಮಯ್ ಧುಮ್ಡೆ (7) ಎಂದು ಗುರುತಿಸಲಾಗಿದೆ. ಬಾಲಕನು ತನ್ನ ಅಮ್ಮ ಪಲ್ಲವಿ ಧುಮ್ಡೆ (40) ಬಳಿ ಚಿಕನ್ ಬೇಕೆಂದು ಕೇಳಿದ್ದ. ಇದರಿಂದ ಕೋಪಗೊಂಡ ಆಕೆ ಆತನನ್ನು ಲಟ್ಟಣಿಗೆಯಿಂದ ಹೊಡೆದು ಕೊಂದಿದ್ದಾಳೆ. ಜೊತೆಗೆ ತನ್ನ 10 ವರ್ಷದ ಮಗಳ ಮೇಲೂ ಆಕೆ ಹಲ್ಲೆ ನಡೆಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಕಿರುಚಾಟ ಕೇಳಿ ಅಕ್ಕಪಕ್ಕದ

ಚಿಕನ್ ಬೇಕೆಂದು ಒತ್ತಾಯಿಸಿದ 7 ವರ್ಷದ ಮಗನಿಗೆ ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com,  ಸೆ.24 ಶಿಮ್ಲಾ : ಮದುವೆಗೆ ಸಿದ್ಧವಾಗಿದ್ದ ಮದುಮಗಳನ್ನು ಬರ್ಬರವಾಗಿ ಕೊಲೆಮಾಡಿ, ಆಕೆಯ ದೇಹವನ್ನು ಸುಟ್ಟ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮೃತಳನ್ನು ಅಂಶಿಕಾ ಠಾಕೂರ್ ಎಂದು ಗುರುತಿಸಲಾಗಿದ್ದು, ಈಕೆ ಬೈರಿಯನ್ ನಿವಾಸಿಯಾಗಿದ್ದು, ದಿವಂಗತ ವಿಪಿನ್ ಠಾಕೂರ್ ಅವರ ಪುತ್ರಿ. ಸೆಪ್ಟೆಂಬರ್ 24 ರ ಬುಧವಾರದಂದು ಭಿಂಡ್ಲಾ ಗ್ರಾಮದ ಯುವಕನೊಂದಿಗೆ ವಿವಾಹ ನಡೆಯಬೇಕಿತ್ತು. ಅಂಶಿಕಾಳ ದೇಹ ಸುಟ್ಟು ಕರಕಲಾಗಿದ್ದಲ್ಲದೆ, ಆಕೆಯ ಮುಖ ಮತ್ತು ಕುತ್ತಿಗೆಯ ಮೇಲೆ ಆಳವಾದ ಗಾಯಗಳು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗಳ ಮುಂದೆಯೇ ಹೆಂಡತಿಗೆ 11 ಬಾರಿ ಇರಿದು ಕೊಂದ ಗಂಡ..!

(ನ್ಯೂಸ್‌ ಕಡಬ) newskadaba.com,  ಸೆ.23  ಬೆಂಗಳೂರು: ಶೀಲ ಶಂಕಿಸಿ ತನ್ನ 2ನೇ ಪತ್ನಿಗೆ 11ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬ ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ. ಕೆಬ್ಬೆಹಳ್ಳದ ನಿವಾಸಿ ರೇಖಾ (32) ಕೊಲೆಯಾದ ದುರ್ದೈವಿ. ಹತ್ಯೆ ಬಳಿಕ ಮೃತಳ ಪ್ರಿಯಕರ ಲೋಹಿತಾಶ್ವ ಅಲಿಯಾಸ್ ಲೋಕೇಶ್ ಪರಾರಿಯಾಗಿದ್ದಾನೆ. ಆರೋಪಿ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ರೇಖಾ ಮೇಲೆ ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದಾನೆ. ಆಕೆ

ಮಗಳ ಮುಂದೆಯೇ ಹೆಂಡತಿಗೆ 11 ಬಾರಿ ಇರಿದು ಕೊಂದ ಗಂಡ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ

(ನ್ಯೂಸ್‌ ಕಡಬ) newskadaba.com,  ಸೆ.22  ಬಳ್ಳಾರಿ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ನಡೆದಿದ್ದು, ಎರಡು ತಿಂಗಳ ಹೆಣ್ಣು ಮಗುವನ್ನು ಪಾಪಿ ತಾಯಿಯೊಬ್ಬಳು ಕಾಲುವೆಗೆ ಎಸೆದು ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್‌ನಲ್ಲಿ 2 ತಿಂಗಳ ಹಸುಗೂಸನ್ನು ಹೆಣ್ಣು ಮಗು ಎನ್ನುವ ಕಾರಣಕ್ಕೆ ಕಾಲುವೆಗೆ ಎಸೆದು ಆ ಮಗುವಿನ ಹೆತ್ತ ತಾಯಿಯೇ ಕೊಂದಿದ್ದಾಳೆ. ಹಸುಗೂಸನ್ನು ಕಾಲುವೆಗೆ ಎಸೆದ ತಾಯಿ ಪ್ರಿಯಾಂಕಾ ದೇವಿ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈಕೆಯ ಪತಿ ಸೂರಜ್ ಕುಮಾರ್ ಖಾಸಗಿ

ಬಳ್ಳಾರಿ: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ. 19 ವಾಷಿಂಗ್ಟನ್‌ :  ಅಮೆರಿಕನ್‌ ಪೊಲೀಸರ ಗುಂಡೇಟಿಗೆ  ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವ ಶಾಕಿಂಗ್‌ ಘಟನೆ ವರದಿಯಾಗಿದೆ. ಮೃತನನ್ನು 30 ವರ್ಷದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ವಿವರಗಳ ಪ್ರಕಾರ, ಸೆಪ್ಟೆಂಬರ್ 3 ರಂದು ತಮ್ಮ ರೂಮ್‌ಮೇಟ್ ಜೊತೆ ನಡೆದ ಜಗಳದಲ್ಲಿ ನಿಜಾಮುದ್ದೀನ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನ ಕುಟುಂಬ ಈ ಘಟನೆಯನ್ನು ಜನಾಂಗೀಯ ತಾರತಮ್ಯ ಎಂದು ಆರೋಪಿಸಿದ್ದು, ಆದ್ದರಿಂದ ಘಟನೆಯ ಬಗ್ಗೆ ಸಂಪೂರ್ಣ ತನಿಖೆ

ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: 1.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.15  ಬಳ್ಳಾರಿ: ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಆಸ್ಪತ್ರೆಯಿಂದ ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಒಂದು ವಾರದೊಳಗೆ ಬಳ್ಳಾರಿಯಲ್ಲಿ ದಾಖಲಾಗಿರುವ 2ನೇ ಪ್ರಕರಣ ಇದಾಗಿದೆ. ನವಜಾತ ಶಿಶು ಅಪಹರಣ ಪ್ರಕರಣದಲ್ಲಿ ಈಗಾಗಲೇ ಶಿಕ್ಷೆಗೊಳಗಾಗಿದ್ದ 65 ವರ್ಷದ ವ್ಯಕ್ತಿ ಮತ್ತು ಇತರ ಮೂವರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಶಮಿನ್ ಇಸ್ಮಾಯಿಲ್ (25), ಇಸ್ಮಾಯಿಲ್ ಯಾಕೋಬ್ ಸಬ್ (65), ಬಾಷಾ ಸಾಬ್ (55) ಮತ್ತು ಬಸವರಾಜ

ಬಳ್ಳಾರಿ: 1.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top