ಕ್ರೈಮ್ ನ್ಯೂಸ್

ಲಾಂಗ್ ಹಿಡಿದು ಉಪನ್ಯಾಸಕನನ್ನೇ ಬೆದರಿಸಿದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 25. ಸರಿಯಾಗಿ ತರಗತಿಗೆ ಹಾಜರಾಗುತ್ತಿಲ್ಲ ಎಂದು ಪೋಷಕರಿಗೆ ಮಾಹಿತಿ ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಲಾಂಗ್‌ ಹಿಡಿದು ಉಪನ್ಯಾಸಕರನ್ನೇ ಬೆದರಿಸಿದ ಘಟನೆ ನಾಗಮಂಗಲದಿಂದ ಬೆಳಕಿಗೆ ಬಂದಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ತರಗತಿಗೆ ಸರಿಯಾಗಿ ಹಾಜರಾಗುತ್ತಿಲ್ಲ ಎಂದು ಉಪನ್ಯಾಸಕರೊಬ್ಬರು ತಿಳುವಳಿಕೆ ಹೇಳುವಂತೆ ಪೋಷಕರಿಗೆ ಮಾಹಿತಿ ನೀಡಿದ್ದರು. ಇದರಿಂದ ಸಿಟ್ಟಾದ ವಿದ್ಯಾರ್ಥಿ ಲಾಂಗ್ ತೋರಿಸಿ ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದು, ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ವಿದ್ಯಾರ್ಥಿಯಿಂದ […]

ಲಾಂಗ್ ಹಿಡಿದು ಉಪನ್ಯಾಸಕನನ್ನೇ ಬೆದರಿಸಿದ ವಿದ್ಯಾರ್ಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದೇಶಿ ಹಾಗೂ ಇ-ಸಿಗರೇಟ್ ಮಾರಾಟ – ಅಂಗಡಿಗಳ ಲೈಸೆನ್ಸ್ ರದ್ದುಪಡಿಸುವಂತೆ ಪೊಲೀಸರಿಂದ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 25. ನಿಷೇಧಿತ ಇ-ಸಿಗರೇಟ್ ಮಾರಾಟ ಹಾಗೂ ವಿದೇಶಿ ಸಿಗರೇಟ್‌ಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ನಗರದ ಮೂರು ಅಂಗಡಿಗಳ ಟ್ರೇಡ್‌ ಲೈಸನ್ಸ್‌ ನ್ನು ರದ್ದುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಮಹಾನಗರ ಪಾಲಿಕೆಗೆ ಪೊಲೀಸರು ಪತ್ರ ಬರೆದಿದ್ದಾರೆ. ಆ. 21ರಂದು ನಗರದ ಲಾಲ್‌ಬಾಗ್‌ನ ಸಾಯಿಬೀನ್ ಕಾಂಪ್ಲೆಕ್ಸ್‌ನ ಮೂರು ಅಂಗಡಿಗಳಿಗೆ ದಾಳಿ ನಡೆಸಿದ್ದ ಪೊಲೀಸರು ಒಟ್ಟು 2.70 ಲಕ್ಷ ರೂ. ಮೌಲ್ಯದ ಇ-ಸಿಗರೇಟ್‌ ಮತ್ತು ವಿದೇಶಿ ಸಿಗರೇಟ್‌ಗಳನ್ನು ವಶಕ್ಕೆ ಪಡೆದು ಮೂವರ

ವಿದೇಶಿ ಹಾಗೂ ಇ-ಸಿಗರೇಟ್ ಮಾರಾಟ – ಅಂಗಡಿಗಳ ಲೈಸೆನ್ಸ್ ರದ್ದುಪಡಿಸುವಂತೆ ಪೊಲೀಸರಿಂದ ಪತ್ರ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಧನದ ವೇಳೆ ಕೀಟನಾಶಕ ಸೇವಿಸಿದ ಆರೋಪಿ- ಅಸ್ವಸ್ಥ

(ನ್ಯೂಸ್ ಕಡಬ) newskadaba.com ಮುಲ್ಕಿ, ಆ. 25. ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯದ ವಾರಂಟ್ ಆದೇಶದಂತೆ ಬಂಧಿಸಲು ಹೋದ ಸಂದರ್ಭ ಆರೋಪಿಯೋರ್ವ ಕೀಟನಾಶಕ ಸೇವಿಸಿದ್ದು, ಪೊಲೀಸರು ಠಾಣೆಗೆ ಕರೆದೊಯ್ಯುವ ಸಂದರ್ಭದಲ್ಲಿ ಅಸ್ವಸ್ಥನಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಆರೋಪಿ ಕರುಣಾಕರ್ ಎಂಬಾತ ಬಜಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ 2017 ರಲ್ಲಿ ನಡೆದ ಅಪರಾಧ ಪ್ರಕರಣದ ಆರೋಪಿಯಾಗಿದ್ದು, ಈತನ ಮೇಲೆ ವಾರಂಟ್ ಕಾರ್ಯಗತಗೊಳಿಸುವಂತೆ ನ್ಯಾಯಲಯ ಆದೇಶಿಸಿತ್ತು. ಕರುಣಾಕರ ಶೆಟ್ಟಿ ಉಡುಪಿಯ ಶಿವಳ್ಳಿಯ ಬಾರ್ ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಖಚಿತ ಮಾಹಿತಿಯ ಮೇರೆಗೆ

ಬಂಧನದ ವೇಳೆ ಕೀಟನಾಶಕ ಸೇವಿಸಿದ ಆರೋಪಿ- ಅಸ್ವಸ್ಥ Read More »

ಕರಾವಳಿ, ಕ್ರೈಮ್ ನ್ಯೂಸ್

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 25. ಲೋನ್ ಆ್ಯಪ್ ಮೂಲಕ ಸಾಲ ಪಡೆದ ಯುವತಿಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟು, ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿರೋರ್ವಳು ಗೂಗಲ್ ಪ್ಲೇ ಸ್ಟೋರ್‌ನ ‘ಕ್ವಿಕ್ ಮನಿ’ ಎಂಬ ಲೋನ್ ಆ್ಯಪ್ ಮೂಲಕ 10,000 ರೂ. ಸಾಲಕ್ಕೆ ಅರ್ಜಿ ಹಾಕಿದ್ದಳು. ತಕ್ಷಣ ಆಕೆಯ ಖಾತೆಗೆ 7,500 ರೂ. ಜಮೆಯಾಗಿತ್ತು. ಕೆಲವು ದಿನಗಳ ಬಳಿಕ ಸಾಲ ಮರುಪಾವತಿ ಮಾಡಿದ್ದಳು.

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗ ಹೆಸರಲ್ಲಿ 1.13 ಲಕ್ಷ ರೂ. ಹಣ ಪಡೆದು ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 24. ಪಾರ್ಟ್ ಟೈಂ ಜಾಬ್ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಸುಮಾರು 1,13,30 ರೂ. ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಮಹಿಳೆಯೊರ್ವರ ಮೊಬೈಲ್ ಗೆ ಆಗಸ್ಟ್ 19 ರಂದು ಯಾರೋ ಅಪರಿಚಿತ ವ್ಯಕ್ತಿಗಳು 8874836643 ಸಂಖ್ಯೆಯ ಮೊಬೈಲ್ ನಂಬರ್ ನಿಂದ ವಾಟ್ಸ್‌ ಆಪ್‌ ಮೆಸೆಜ್‌ ಮಾಡಿ, ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ನಂಬಿಸಿ, ಬಳಿಕ Telegram ನಲ್ಲಿ ಲಿಂಕ್‌ನ್ನು ಕಳುಹಿಸಿ ಆಗಸ್ಟ್ 20 ರಿಂದ ಆಗಸ್ಟ್ 21 ರ ಮದ್ಯಾವಧಿಯಲ್ಲಿ

ಉದ್ಯೋಗ ಹೆಸರಲ್ಲಿ 1.13 ಲಕ್ಷ ರೂ. ಹಣ ಪಡೆದು ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ – ತೀವ್ರ ರಕ್ತಸ್ರಾವದಿಂದ ಪತ್ನಿ ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಆ. 24. ಪತಿಯೊಬ್ಬ ಯೂಟ್ಯೂಬ್‌ ನೋಡಿ ಹೆರಿಗೆ ಮಾಡಿಸಲು ಹೋದ ಕಾರಣ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪೋಚಂಪಲ್ಲಿ ಸಮೀಪದ ಪುಲಿಯಂಪಟ್ಟಿ ನಿವಾಸಿ (27) ಲೋಗನಾಯಕಿ ಎಂದು ಗುರುತಿಸಲಾಗಿದೆ. ಗರ್ಭಿಣಿಯಾಗಿದ್ದ ಲೋಗನಾಯಕಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭ ಪತಿ ಮಾದೇಶ್ ಯೂಟ್ಯೂಬ್‌ ನೋಡಿಕೊಂಡು ಹೆರಿಗೆ ಮಾಡಿಸಲು ಪ್ರಯತ್ನಿಸಿದ್ದು, ಈ ವೇಳೆ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕರುಳು ಬಳ್ಳಿಯನ್ನು

ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ – ತೀವ್ರ ರಕ್ತಸ್ರಾವದಿಂದ ಪತ್ನಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಹಾಡಹಗಲೇ ಯುವಕನೊಬ್ಬನ ಚೂರಿಯಿರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಯು ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ. ಈತ ಜೆಸಿಬಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ

ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 24. ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿಯ ಕಪಿಲಾ ನದಿ ತೀರದಲ್ಲಿ ಅಕ್ರಮವಾಗಿ ಕಡವೆ ಭೇಟೆಯಾಡಿದ ಮೂವರನ್ನು ಬಂದೂಕು ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ವರದಿಯಾಗಿದೆ. ಡಿಆರ್.ಎಫ್‌ಒ ಸಿ.ಎನ್. ಲೋಕೇಶ್ ಅಶೋಕ್, ರಾವುತಪ್ಪ, ಅರಣ್ಯ ಪಾಲಕರಾದ ವಿನಯಚಂದ್ರ ಹಾಗೂ ಕಿಶೋರ್ ಗಸ್ತು ನಿರತರಾಗಿ ಖಚಿತ ಮಾಹಿತಿ ಮೇರೆಗೆ ಕಾದು ಕುಳಿತಿದ್ದರು. ಇದೇ ವೇಳೆ ಬೇಟೆಯಾಡಿದ ಶಬ್ದ ಕೇಳಿದ ಬೆನ್ನಲ್ಲೇ ಕಾಡಿನಲ್ಲಿ ಸುತ್ತುವರಿದು

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 23. ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಜನೀಶ್ (18) ಎಂದು ಗುರುತಿಸಲಾಗಿದೆ. ರಜನೀಶ ಕಳೆದ ಹಲವು ಸಮಯದಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, 3 ವಾರದ ಹಿಂದೆ ಉಡುಪಿಯ ಸರಕಾರಿ ಆಸ್ವತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಮನೆಗೆ ಮರಳಿದ್ದರು. ಇದಾದ 10 ದಿನಗಳ ನಂತರ ಶಸ್ತ್ರ ಚಿಕಿತ್ಸೆಯ ಹೊಲಿಗೆ ತೆಗೆಯಿಸಿ, ವಾಂತಿ ಹಾಗೂ ಜ್ವರಕ್ಕೆ

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಕಳವು- ಆರೋಪಿ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಪೊಲೀಸರು ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಆರೋಪಿ ತಾನು ಕಳವು ಮಾಡಿದ್ದ ಸ್ಕೂಟರ್ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದನು. ಈ ಸಂದರ್ಭ ನಗರದ ಪಂಪ್ ವೆಲ್ ಬ್ರಿಡ್ಜ್ ಬಳಿ ಆತನನ್ನು ದಸ್ತಗಿರಿ ಮಾಡಿ ಆತನ

ದ್ವಿಚಕ್ರ ವಾಹನ ಕಳವು- ಆರೋಪಿ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top