ಕ್ರೈಮ್ ನ್ಯೂಸ್

ಬೈಕ್ ಗಳ ನಡುವೆ ಢಿಕ್ಕಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಂಪ್ ವೆಲ್ ಬಳಿ ಭಾನುವಾರದಂದು ರಾತ್ರಿ ಸಂಭವಿಸಿದೆ. ಮೃತರನ್ನು ಮೆಫಿನ್ ಥಾಮ್ಸ್ (25) ಎಂದು ಗುರುತಿಸಲಾಗಿದೆ. ಬೈಕೊಂದು ಇನ್ನೊಂದು ಬೈಕ್ ಗೆ ಹಿಂಬದಿನಿಂದ ಢಿಕ್ಕಿ ಹೊಡೆದಿದ್ದು, ಈ ವೇಳೆ ಮೆಫಿನ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೈಕ್ ಗಳ ನಡುವೆ ಢಿಕ್ಕಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳಂಜ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ ಕಳೆದ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಮುಡಿಪು ನಿವಾಸಿ ಮುಡಿಪು ರಫೀಕ್ (36) ಎಂದು ಕರೆಯಲ್ಪಡುವ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಪೊಲೀಸರು ರಫೀಕ್ ನನ್ನು ಬೆಂಗಳೂರಿನ ಹೊಸಕೋಟೆಯಲ್ಲಿ ಬಂಧಿಸಿ, ಅನಂತರ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. ರಫೀಕ್ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ, ಬರ್ಕೆ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಅನಾರೋಗ್ಯದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆಯೇ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಜಿಪ ನಡು ನಿವಾಸಿ ಎಸ್.ಎಮ್ ನೌಫಾಲ್ ಬಂಧಿತ ಆರೋಪಿ. ಈತನ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಎನ್ ಡಿಪಿಎಸ್ ಕಾಯ್ದೆಯನ್ವಯ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಆದರೆ ಈತನಿಗೆ ಅನಾರೋಗ್ಯವಿದ್ದ ಕಾರಣ ಚಿಕಿತ್ಸೆಗಾಗಿ ಪೊಲೀಸ್ ಭದ್ರತೆಯೊಂದಿಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಪಿ ನೌಫಾಲ್, ಆಗಸ್ಟ್ 16ರಂದು ಪೊಲೀಸ್

ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ – ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಡ್ರಿಂಕ್ಸ್ ಬಿಲ್ ನ ಮೊತ್ತ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಫೋಲ್ಡಿಂಗ್ ಬ್ಲೇಡ್ ನಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೈಸೂರು ಮೂಲದ ಆರೋಪಿ ಮೊಹಮ್ಮದ್ ಹನೀಫ್ ಅಲಿಯಾಸ್ ಚಾಕು(30) ಎಂದು ಗುರುತಿಸಲಾಗಿದೆ. ಆಗಸ್ಟ್ 18ರಂದು ರಾತ್ರಿ ನಗರದ ಸರ್ವಿಸ್ ಬಸ್ ನಿಲ್ದಾಣದ ಗೂಡಂಗಡಿ ಎದುರು ಈರಪ್ಪ ಕುರಿ ಎಂಬಾತ ಆರೋಪಿ ಹನೀಫ್ ನೊಂದಿಗೆ ಡ್ರಿಂಕ್ಸ್ ಮಾಡಿರುವ ಬಿಲ್ ಮೊತ್ತ ಕೊಡುವಂತೆ ಕೇಳಿದ್ದು, ಆಗ ಆರೋಪಿ

ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ – ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಪತಿ

(ನ್ಯೂಸ್ ಕಡಬ) newskadaba.com ನೀಲೇಶ್ವರಂ, ಆ. 18. ಮಹಿಳೆಯೋರ್ವರಿಗೆ ದೈಹಿಕವಾಗಿ ಹಲ್ಲೆ ನಡೆಸಿ ನಗ್ನ ವೀಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಆರೋಪದಡಿ ಮಹಿಳೆಯೊಬ್ಬರು ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಕುರಿತು ನೀಲೇಶ್ವರಂ ನಿಂದ ವರದಿಯಾಗಿದೆ. ಮಹಿಳೆಯ ದೂರಿನ ಪ್ರಕಾರ, ವ್ಯಕ್ತಿಯು ಕೆಲವು ವ್ಯಕ್ತಿಗಳಿಂದ ಹಣ ಪಡೆದು ಮಹಿಳೆಯನ್ನು ನಗ್ನವಾಗಿ ಕಾಣಿಸಿಕೊಳ್ಳಲು ಮತ್ತು ವೀಡಿಯೊ ಕರೆ ಮಾಡಲು ಒತ್ತಾಯಿಸಿದ್ದಾನೆ. ಅಲ್ಲದೇ ಇದೇ ಕಾರಣಕ್ಕೆ ಮಹಿಳೆಗೆ ಬೆದರಿಕೆ ಮತ್ತು ಹಲ್ಲೆ ನಡೆಸಿದ ಆರೋಪವೂ ಕೇಳಿಬಂದಿತ್ತು. ಈ ಕುರಿತು ನೀಲೇಶ್ವರಂ

ಮಹಿಳೆಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 20. ಬೈಕ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಇಂದು ಮುಂಜಾನೆ ಕಣ್ಣೂರು ಬಳಿ ನಡೆದಿದೆ. ಮೃತ ಯುವಕರನ್ನು ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕದ ಮನಾಫ್ (24) ಮತ್ತು ಸ್ನೇಹಿತ ಲತೀಫ್ (23) ಎಂದು ಗುರುತಿಸಲಾಗಿದೆ. ಇವರು ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಂಗಳೂರಿನಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಮಿನಿ ಲಾರಿ ನಡುವೆ ಕಣ್ಣೂರು

ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ – ಬಿಕಾಂ ವಿದ್ಯಾರ್ಥಿ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪದವಿ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಗರದ ಜೆಪ್ಪು ಮಜಿಲ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಂಗಳೂರು ತಲಪಾಡಿಯ ಗುಡ್ಡೆ ಹೌಸ್ ನಿವಾಸಿ ಅಬ್ದುಲ್ ರವೂಫ್(29), ಕೇರಳದ ತಲಶ್ಶೇರಿ ಪಾನೂರು ನಿವಾಸಿ ಉಬೈದ್ ಕುನ್ಮಾಲ್(21) ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಡಿಗೆರೆ ಮಾವಿನಕೆರೆ ನಿವಾಸಿ ಮುಹಮ್ಮದ್ ಇರ್ಷಾದ್(21) ಎಂದು

ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ – ಬಿಕಾಂ ವಿದ್ಯಾರ್ಥಿ ಸಹಿತ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂಜೆಕ್ಷನ್ ಅಡ್ಡ ಪರಿಣಾಮ- ಚಿಕಿತ್ಸೆ ಫಲಿಸದೇ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 20. ಜ್ವರಕ್ಕೆಂದು ವೈದ್ಯರು ನೀಡಿದ ಇಂಜೆಕ್ಷನ್ ನಿಂದ ಅಡ್ಡ ಪರಿಣಾಮ ಉಂಟಾಗಿ ಕುಂದಾಪುರ ಮೂಲದ ಯುವಕನೊಬ್ಬ ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ. ಮೃತ ಯುವಕನನ್ನು ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ಬೆದ್ರಳ್ಳಿಯ ದಿ. ಚಂದ್ರಶೆಟ್ಟಿ ಎಂಬವರ ಮಗ ಅಮರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದ ಅಮರ್ ಶೆಟ್ಟಿ, ಆಗಸ್ಟ್ 13ರಂದು ಕೆ.ಪಿ. ಅಗ್ರಹಾರದ ಸಂಬಂಧಿಕರ ಮನೆಗೆ ಹೋಗಿದ್ದ ಸಂದರ್ಭ ಮೈಬಿಸಿ ಇರುವುದನ್ನು

ಇಂಜೆಕ್ಷನ್ ಅಡ್ಡ ಪರಿಣಾಮ- ಚಿಕಿತ್ಸೆ ಫಲಿಸದೇ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಾನುವಾರು ಕಳ್ಳತನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.‌ 20. ದನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಜ್ಪೆ ಠಾಣಾ ವ್ಯಾಪ್ತಿಯ ಬಡಗ ಎಡಪದವು ದಡ್ಡಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮಲಾರ್, ಪಾವೂರು ಗ್ರಾಮದ ಬದ್ರಿಯಾ ನಗರದ ನಿವಾಸಿ ಇರ್ಫಾನ್ (30) ಮತ್ತು ಬಂಟ್ವಾಳದ ಸಿದ್ದಕಟ್ಟೆ ಗ್ರಾಮದ ಸಂಗಬೆಟ್ಟು ಗ್ರಾಮದ ಮೊಹಮ್ಮದ್ ಆರಿಫ್ ಅಲಿಯಾಸ್ ಪುಚ್ಚೇರಿ ಆರಿಫ್ (32) ಎಂದು ಗುರುತಿಸಲಾಗಿದೆ. ಆ. 14ರಂದು ರಾತ್ರಿ ಬಡಗ ಎಡಪದವು ಎಂಬಲ್ಲಿ ಮೂರು ಹಸುಗಳನ್ನು ಕಳವು ಮಾಡಿರುವ ಬಗ್ಗೆ

ಜಾನುವಾರು ಕಳ್ಳತನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top