ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಅಕ್ರಮ ಗೋಸಾಗಾಟ – ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 19. ಅಕ್ರಮ ಗೋಸಾಗಾಟ ಮಾಡುತ್ತಿದ್ದ ಸಂದರ್ಭ ತಪಾಸಣಾ ನಿರತ ಪೊಲೀಸರು ವಾಹನ ಹಾಗೂ ಗೋವುಗಳನ್ನು ವಶಕ್ಕೆ ಪಡೆದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುಬ್ರಹ್ಮಣ್ಯದ ಕುಲ್ಕುಂದ – ಬಿಸಿಲೆ ಘಾಟ್ ರಸ್ತೆಯಲ್ಲಿ ಗುರುವಾರದಂದು ಸಂಜೆ ಸುಬ್ರಹ್ಮಣ್ಯ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಸುಬ್ರಹ್ಮಣ್ಯ ಭಾಗದಿಂದ ಬಂದ ಗೂಡ್ಸ್‌ ವಾಹನವೊಂದನ್ನು ನಿಲ್ಲಿಸಲು ಸೂಚಿಸಿದ್ದು. ಈ ವೇಳೆ ವಾಹನದ ಚಾಲಕ ಹಾಗೂ ಇನ್ನೊರ್ವ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿದ್ದಾರೆ. ವಾಹನವನ್ನು […]

ಸುಬ್ರಹ್ಮಣ್ಯ: ಅಕ್ರಮ ಗೋಸಾಗಾಟ – ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ದೇವಸ್ಥಾನದಿಂದ‌ ಚಿನ್ನ, ಬೆಳ್ಳಿ ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಆ. 19. ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿನ ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದಿಂದ ಒಡವೆ ಹಾಗೂ ಸಿಸಿ ಕ್ಯಾಮೆರಾ ಕದ್ದೊಯ್ದ ಘಟನೆ ಶುಕ್ರವಾರದಂದು ಬೆಳಕಿಗೆ ಬಂದಿದೆ. ದೇವಸ್ಥಾನದ ಅರ್ಚಕ ರವಿಪ್ರಸಾದ್‌ ಭಟ್‌ ಅವರು ಶುಕ್ರವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆಯಲು ಮುಂದಾದಾಗ ದೇವಸ್ಥಾನದ ಮುಖ್ಯ ಬಾಗಿಲಿನ ಚಿಲಕವನ್ನು ಹಾನಿ ಮಾಡಿರುವುದು ಕಂಡು ಬಂದಿತ್ತು. ಬಾಗಿಲು ಸರಿಸಿ ಪರಿಶೀಲಿಸಿದಾಗ ದೇವರ ಮೂರ್ತಿಗೆ ಹಾಕಲಾಗಿದ್ದ 35,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣ

ಕಡಬ: ದೇವಸ್ಥಾನದಿಂದ‌ ಚಿನ್ನ, ಬೆಳ್ಳಿ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ರಶರ್ ಯಂತ್ರದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು – ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 18. ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ರೂ. ಮೌಲ್ಯದ ಸ್ವತ್ತು ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರ ಸಹಿತ ಸ್ವತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ವಗ್ಗ ನಿವಾಸಿ ಸತೀಶ್ ಮತ್ತು ಬೆಳ್ತಂಗಡಿ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಿ.ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ವಿನಯ ಶೆಟ್ಟಿ ಎಂಬವರಿಗೆ ಸೇರಿದ ಕ್ರಶರ್ ನಿಂದ ಕ್ರಶರ್

ಕ್ರಶರ್ ಯಂತ್ರದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು – ಆರೋಪಿಗಳಿಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಬಿಹಾರ, ಆ. 18. ಪತ್ರಕರ್ತನೋರ್ವನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಇಂದು ನಡೆದಿದೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ‘ದೈನಿಕ್​ ಜಾಗರಣ್​’ ಎಂಬ ಹಿಂದಿ ಸುದ್ದಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಇವರು, ರಾಣಿಗಂಜ್ ಜಿಲ್ಲೆಯ ನಿವಾಸಿಯಾಗಿದ್ದು, ಅರಾರಿಯಾದಲ್ಲಿ ವಾಸವಿದ್ದರು. ಇಂದು ಮುಂಜಾನೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ವಿಮಲ್​ ಅವರನ್ನು ಮನೆಯಿಂದ ಹೊರಗೆ ಕರೆದಿದ್ದು, ಅವರು ಹೊರಗೆ ಹೋಗದಿದ್ದಾಗ ಮನೆಯೊಳಗೆ ನುಗ್ಗಿ

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಣಂತಿಯ ಆರೋಗ್ಯ ತಪಾಸಣೆಗೆ ಬಂದಿದ್ದ ಸಿಬ್ಬಂದಿಯ ಮೇಲೆ ಸಾಕುನಾಯಿ ದಾಳಿ – ಮಾಲೀಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕೊಡಗು, ಆ. 18. ಬಾಣಂತಿಯನ್ನು ವಿಚಾರಿಸಲು ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಾಯಿಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಪಾರಾಣೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಹೆರಿಗೆಯಾಗಿದ್ದ ತಾಯಿ ಮತ್ತು ಮಗುವಿನ ಆರೋಗ್ಯ ತಪಾಸಣೆಗೆ ಪಾರಾಣೆ ಕಮ್ಯುನಿಟಿ ಹೆಲ್ತ್ ಆಫೀಸರ್ ಕೆ‌.ಕೆ ಭವ್ಯ ಅವರು ತೆರಳಿದ್ದರು. ಬಾಣಂತಿಯ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದ ಸಂದರ್ಭ ಭವ್ಯ ಅವರ ಮೇಲೆ ಏಕಾಏಕಿ ನಾಯಿ ದಾಳಿ ನಡೆಸಿದ್ದು, ಭವ್ಯ ಅವರ ದೇಹದ ಹಲವು

ಬಾಣಂತಿಯ ಆರೋಗ್ಯ ತಪಾಸಣೆಗೆ ಬಂದಿದ್ದ ಸಿಬ್ಬಂದಿಯ ಮೇಲೆ ಸಾಕುನಾಯಿ ದಾಳಿ – ಮಾಲೀಕನ ವಿರುದ್ದ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬುದ್ದಿವಾದ ಹೇಳಿದ ತಾಯಿ- ಮಗ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಆ. 18. ರಾತ್ರಿ ವೇಳೆ ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉಜ್ವಲ್ (18) ಎಂದು ಗುರುತಿಸಲಾಗಿದೆ. ಈತ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಾಗಿ, ಬಳಿಕ ಮನೆಯಲ್ಲೇ ಉಳಿದಿದ್ದು, ಹೆಚ್ಚಾಗಿ ಮೊಬೈಲ್‍ ನಲ್ಲೇ ಕಾಲ ಕಳೆಯುತ್ತಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಅವನ ತಾಯಿ ಹಲವಾರು ಬಾರಿ ಬುದ್ಧಿ ಹೇಳಿದ್ದರು. ಅಲ್ಲದೇ ಬುಧವಾರದಂದು

ಬುದ್ದಿವಾದ ಹೇಳಿದ ತಾಯಿ- ಮಗ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 18. ರಾತ್ರೋರಾತ್ರಿ ಟಾಟಾ ಏಸ್ ವಾಹನದಲ್ಲಿ ಬಂದ ಖದೀಮರು ರಸ್ತೆ ಬದಿಯಲ್ಲಿಟ್ಟಿದ್ದ ಬರೋಬ್ಬರಿ 1,500 ಎಳನೀರನ್ನು ಕದ್ದೊಯ್ದಿರುವ ಘಟನೆ ಜಯನಗರ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಕಳ್ಳರು ಕೃತ್ಯಕ್ಕೆ ಬಳಸಿದ್ದ ವಾಹನದ ನಂಬರ್ ಪ್ಲೇಟ್‌ಗೆ ಮಸಿ ಬಳಿದಿದ್ದರು ಎನ್ನಲಾಗಿದೆ. ಈ ಬಗ್ಗೆ ಜಯನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತ- ಯುವನಟ ವಿಧಿವಶ

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 18. ಹೃದಯಾಘಾತದಿಂದಾಗಿ 24 ವರ್ಷ ಯುವ ನಟನೋರ್ವ ನಿಧನರಾದ ಘಟನೆ ಮಂಡ್ಯದಿಂದ ವರದಿಯಾಗಿದೆ. ಮೃತ ನಟನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾದ ಇವರು, ಪ್ರಸ್ತುತ ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು.

ಹೃದಯಾಘಾತ- ಯುವನಟ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ಯೂಶನ್ ಮುಗಿಸಿ ಹಿಂತಿರುಗುತ್ತಿದ್ದ ಬಾಲಕನಿಗೆ ಗೂಡ್ಸ್ ಢಿಕ್ಕಿ- ಮತ್ತೋರ್ವ ಬಾಲಕ ಮೃತ್ಯು; ಸಾವಿನ ಸಂಖ್ಯೆ ಮೂರಕ್ಕೇರಿಕೆ

(ನ್ಯೂಸ್ ಕಡಬ) newskadaba.com ರಾಮನಗರ, ಆ. 18. ಟ್ಯೂಶನ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಮೃತಪಟ್ಟ ಘಟನೆ ರಾಮನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸುಚಿತ್ (10) ಎಂದು ಗುರುತಿಸಲಾಗಿದೆ. ಆಗಸ್ಟ್ ಒಂಬತ್ತರಂದು ಟ್ಯೂಶನ್ ಮುಗಿಸಿಕೊಂಡು ಹಿಂರುಗುತ್ತಿದ್ದ ಐವರು ವಿದ್ಯಾರ್ಥಿಗಳಿಗೆ ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ಬಳಿ ಗೂಡ್ಸ್ ವಾಹನ ಢಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಮೃತಪಟ್ಡಿದ್ದರು. ಇದೀಗ ಮತ್ತೋರ್ವ ಬಾಲಕ ಮೃತಪಟ್ಡಿದ್ದು, ಸಾವಿನ ಸಂಖ್ಯೆ

ಟ್ಯೂಶನ್ ಮುಗಿಸಿ ಹಿಂತಿರುಗುತ್ತಿದ್ದ ಬಾಲಕನಿಗೆ ಗೂಡ್ಸ್ ಢಿಕ್ಕಿ- ಮತ್ತೋರ್ವ ಬಾಲಕ ಮೃತ್ಯು; ಸಾವಿನ ಸಂಖ್ಯೆ ಮೂರಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾರ್ಡ್ ವೇರ್ ಮಳಿಗೆಯಲ್ಲಿ ಕಳ್ಳರ ಕೈಚಳಕ – ನಗದು ಸಹಿತ 15 ಲಕ್ಷ ರೂಗಳ ಸೊತ್ತು ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 18. ಇಲ್ಲಿನ ಜಗದಾಂಭ ಏಜೆನ್ಸಿ ಹೆಸರಿನ ಇಲೆಕ್ಟ್ರಿಕಲ್ ಮತ್ತು ಹಾರ್ಡ್‍ವೇರ್ ಮಳಿಗೆಗೆ ನುಗ್ಗಿದ ಕಳ್ಳರು ಎರಡು ಲಕ್ಷ ರೂ. ನಗದು ಸಹಿತ ಸುಮಾರು 15.7 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಕಳವು ಮಾಡಿದ ಘಟನೆ ನೆಲ್ಯಾಡಿಯಲ್ಲಿ ಗುರುವಾರದಂದು ಬೆಳಕಿಗೆ ಬಂದಿದೆ. ಪ್ರಕಾಶ್ ಕೆ.ಜೆ. ಮಾಲಿಕತ್ವದ ಕಟ್ಟಡದಲ್ಲಿ ರಾಜಸ್ಥಾನದ ನಿವಾಸಿ ಕರಣ್ ಪಾಲ್ ಎಂಬವರ ಸಹೋದರ ನಡೆಸುತ್ತಿದ್ದ ಎಲೆಕ್ಟ್ರಿಕಲ್ ಮತ್ತು ಹಾರ್ಡ್‍ವೇರ್ ಅಂಗಡಿಯ ಶಟರ್ ಅನ್ನು ಕತ್ತರಿಸಿ, ಒಳನುಗ್ಗಿರುವ ಕಳ್ಳರು ಕ್ಯಾಶ್

ಹಾರ್ಡ್ ವೇರ್ ಮಳಿಗೆಯಲ್ಲಿ ಕಳ್ಳರ ಕೈಚಳಕ – ನಗದು ಸಹಿತ 15 ಲಕ್ಷ ರೂಗಳ ಸೊತ್ತು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top