ಕ್ರೈಮ್ ನ್ಯೂಸ್

SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಆ.10. SSLC ವಿದ್ಯಾರ್ಥಿನಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ವಿದ್ಯಾರ್ಥಿನಿ ಫಿಲಿಶ್(15) ಎಂದು ಗುರುತಿಸಲಾಗಿದೆ. ಪಟ್ಟಣದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಫಿಲಿಸಾ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಶಾಲಾ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಫಿಲಿಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಫಿಲಿಶ್ ಬೆಂಗಳೂರಿನ ನಿವಾಸಿಯಾಗಿದ್ದು, ಹೆತ್ತವರ ನಿಧನದ ಬಳಿಕ ಐದು ವರ್ಷಗಳ ಹಿಂದೆ ಅನಾಥಾಲಯಕ್ಕೆ ಇವರು ಸೇರ್ಪಡೆಗೊಂಡಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್ […]

SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ಗಳ ಕಳವು..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.10. ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ ಗಳನ್ನು ಕಳವು ನಡೆಸಿರುವ ಘಟನೆ ನೂತನ ಮಂದಿರದ ವಠಾರದಿಂದ ಇಂದು ಸಂಭವಿಸಿದ್ದು, ಗುತ್ತಿಗೆದಾರ ತೊಕ್ಕೊಟ್ಟು ನಿವಾಸಿ ಸುಂದರ ಗಟ್ಟಿ ಎಂಬವರು ಬಾಡಿಗೆಗೆ ತಂದಿದ್ದ 2.5 ಲಕ್ಷ ರೂ.ಗಳ 119 ತಗಡು ಶೀಟುಗಳನ್ನು ಕಳವು ನಡೆಸಲಾಗಿದೆ. ನಸುಕಿನ 2 ಗಂಟೆಯಿಂದ 3 ಗಂಟೆಯೊಳಗೆ ಕೃತ್ಯ ನಡೆದಿರುವುದಾಗಿ ತಿಳಿದುಬಂದಿದೆ. ಸ್ಥಳೀಯ ಸಿಸಿಟಿವಿ ಆಧಾರದಲ್ಲಿ ಪಿಕಪ್‌ ವಾಹನವನ್ನು ಬಳಸಿಕೊಂಡು ಕೃತ್ಯ ಎಸಗಿರುವುದಾಗಿಯೂ ಗೊತ್ತಾಗಿದೆ. ಕೊಲ್ಯ ಶ್ರೀ ಶಾರದ ಉತ್ಸವ ಸಮಿತಿಯವರ

ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ಗಳ ಕಳವು..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಯ ಮಾನಹಾನಿಯಾಗುವಂತೆ ವರ್ತಿಸಿದ ಆರೋಪಿಗೆ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಯುವತಿಯ ಮಾನ ಹಾನಿಯಾಗುವಂತೆ ವರ್ತಿಸಿದ್ದ ಆರೋಪಿಗೆ 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ, 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಆದೇಶಿಸಿದ್ದಾರೆ ಎನ್ನಲಾಗಿದೆ. ಉಡುಪಿಯ ಬೈಕಾಡಿ ಗ್ರಾಮದ ಗೋಪಾಲ ಹಾಗೂ ಪುತ್ತೂರು ಗ್ರಾಮದ ಬಾಲಕೃಷ್ಣ ಇವರುಗಳ ಪೈಕಿ ಆರೋಪಿ ಬಾಲಕೃಷ್ಣ ಮಣಿಪಾಲದ ದೂರದರ್ಶನ ಕಛೇರಿಯಲ್ಲಿ ನೌಕರನಾಗಿದ್ದು, ಅದೇ ಕಛೇರಿಯಲ್ಲಿರುವ ಪುರುಷ ಸಿಬ್ಬಂದಿಯೊಂದಿಗೆ, ಮಹಿಳಾ ಸಹೋದ್ಯೋಗಿ ಸಲುಗೆಯಿಂದ ಒಟ್ಟಿಗೆ ಇರುವ

ಯುವತಿಯ ಮಾನಹಾನಿಯಾಗುವಂತೆ ವರ್ತಿಸಿದ ಆರೋಪಿಗೆ ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ, ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು ಎಂದು ತಿಳಿದುಬಂದಿದೆ.

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಣ್ಯ ಉಳಿಸಬೇಕೆಂದು ತೋಟಗಳನ್ನು ನಾಶ ಮಾಡಿದ ಅರಣ್ಯಾಧಿಕಾರಿಗಳು

(ನ್ಯೂಸ್ ಕಡಬ)newskadaba.com ಕಾರವಾರ, ಆ.09. ರಾಜ್ಯದಲ್ಲಿಯೇ ಅತಿ ಹೆಚ್ಚು ಅರಣ್ಯ ಪ್ರದೇಶವಿರುವ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜನರಿಗೆ ಪರಿಹಾರ ನೀಡಿ ಸ್ಥಳಾಂತರ ಮಾಡುವ ಕಾರ್ಯ ಒಂದೆಡೆ ನಡೆಯುತ್ತಲೇ ಇದೆ. ಇನ್ನೊಂದೆಡೆ ಸ್ಥಳಾಂತರ ಮಾಡಿದ ಕುಟುಂಬಗಳು ಬೆಳೆದ ತೋಟಗಾರಿಕಾ ಬೆಳೆಗಳನ್ನು ಅರಣ್ಯ ಇಲಾಖೆಯವರೇ ನಾಶ ಮಾಡುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎಂಬಂತೆ ಸ್ಥಳಾಂತರಗೊಂಡ ಕುಟುಂಬಗಳು ತಿಂಗಳುಗಟ್ಟಲೆ, ವರ್ಷಗಟ್ಟಲೆ ಜೋಪಾನ ಮಾಡಿರುವ ಅಡಕೆ ಹಾಗೂ ಇತ್ಯಾದಿ

ಅರಣ್ಯ ಉಳಿಸಬೇಕೆಂದು ತೋಟಗಳನ್ನು ನಾಶ ಮಾಡಿದ ಅರಣ್ಯಾಧಿಕಾರಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ವಿದ್ಯುತ್ ಸ್ಪರ್ಶಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಲಕ್ನೋ, ಆ.09. ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ಶಾಕ್ ತಗುಲಿ 15 ವರ್ಷದ ಬಾಲಕ ಮೃತಪಟ್ಟಿದ್ದು, ಬಾಲಕನನ್ನು ರಕ್ಷಿಸಲು ಯತ್ನಿಸಿದಾಗ ಆತನ ತಾಯಿಗೂ ವಿದ್ಯುತ್ ಸ್ಪರ್ಶವಾಗಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಮಹೇಶ್ ಪಾಂಡೆ ಮಾತನಾಡಿ ” ವಿದ್ಯುತ್ ಸ್ಪರ್ಶದಿಂದ ತಾಯಿ-ಮಗ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ. ರೋಹಿತ್ ಜೈಸ್ವಾಲ್ (15) ಬಾಲಕ ರಾತ್ರಿ ತನ್ನ ತಾಯಿ ರಾಮ್ ಸಹೇಲಿಯೊಂದಿಗೆ ತಮ್ಮ ಮನೆಯೊಳಗೆ ಮಲಗಿದ್ದರು. ರಾತ್ರಿ ಎಚ್ಚರಗೊಂಡು ಮೊಬೈಲ್ ಚಾರ್ಜ್

ವಿದ್ಯುತ್ ಸ್ಪರ್ಶಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಅಪ್ತಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ)newskadaba.com ಜೈಪುರ, ಆ.09. ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳಿಗೆ ಕಡಿವಾಣ ಬೀಳುತ್ತಿಲ್ಲ. ಇದೀಗ ಮತ್ತೊಂದು ಘನ ಘೋರ ಘಟನೆ ವರದಿಯಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕರು ವಿಚಾರ ಬಾಯ್ಬಿಟ್ಟರೆ ಇಡೀ ಕುಟುಂಬವನ್ನೇ ಹತ್ಯೆ ಮಾಡೋದಾಗಿ ಬೆದರಿಸಿದ್ದಾರೆ. ಹೀಗಾಗಿ ರೇಪ್ ವಿಚಾರ ರಹಸ್ಯವಾಗಿಟ್ಟ ಬಾಲಕಿ ಗರ್ಭಿಣಿಯಾಗಿದ್ದಾಳೆ. ತೀವ್ರ ಹೊಟ್ಟೆ ನೋವಿನ ಕಾರಣ ಪೋಷಕರು ಆಸ್ಪತ್ರೆ ದಾಖಲಿಸಿದ ಬೆನ್ನಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ. ಮಗುವಿಗೆ ಜನ್ಮ

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಅಪ್ತಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಆ.09. ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಪ್ರಸಿದ್ದಿ ಪಡೆದಿದ್ದ ಮಹಿಳೆ ದುರಾದೃಷ್ಟವಶಾತ್ ತೆಂಗಿನ ಮರದಿಂದಲೇ ಬಿದ್ದು ಮೃತಪಟ್ಟ ಘಟನೆ ಸವಣೂರು ಬಳಿ ನಡೆದಿದೆ. ಮೃತರನ್ನು ಪ್ರಮೋದ್ ಬೊಳ್ಳಾಜೆ ಪತ್ನಿ ಸುಚಿತ್ರಾ (30) ಎಂದು ಗುರುತಿಸಲಾಗಿದೆ. ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಯಿ ಕೀಳುತ್ತಿರುವಾಗ ಈ ಘಟನೆ ನಡೆದಿದ್ದು, ಮಹಿಳೆಯಾಗಿ ಸುಚಿತ್ರ ರವರು ತೆಂಗಿನಕಾಯಿ ಕೀಳುವ ಕಾಯಕದಲ್ಲಿ ತೊಡಕಿಸಿಕೊಂಡಿದ್ದರಿಂದ ಅವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ

ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು – ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.09. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ 1.5 ತಿಂಗಳು ಹೆಣ್ಣು ಮಗು ಅಂಶಿಕಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಗುವಿನಲ್ಲಿ ಕಫ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅಂಶಿಕಾಳನ್ನು ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಘು ಮತ್ತು ಮುರುಳಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ರಘು ಮತ್ತು ಮುರುಳಿ ಬೈಕ್ ನಲ್ಲಿ ಕಾರೊಂದನ್ನು ಹಿಂಬಾಲಿಸಿಕೊಂಡು ಬಂದಿದ್ದು, ವೈಟ್ ಫಿಲ್ಡ್ ನ ಸಿದ್ದಾಪುರ ಬಳಿ ಕಾರನ್ನು ಅಡ್ಡಗಟ್ಟಿ ಕಾರಿನ ಬಳಿ ಬಂದು ಚಾಲಕನಿಗೆ ಕಾರಿನಿಂದ ಕೆಳಗೆ ಇಳಿಯಲು ಹೇಳಿದ್ದರು. ಚಾಲಕ ಕೆಳಗೆ ಇಳಿಯದಿದ್ದಾಗ ಕಲ್ಲಿನಿಂದ ಕಾರಿನ ಗಾಜನ್ನು ಒಡೆಯಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top