ಕ್ರೈಮ್ ನ್ಯೂಸ್

ಬ್ರಿಡ್ಜ್ ಕಾಮಗಾರಿಗೆ ತಂದಿಡಲಾಗಿದ್ದ ರಾಡ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಬ್ರಿಡ್ಜ್ ಕೆಲಸಕ್ಕೆಂದು ತಂದಿಡಲಾಗಿದ್ದ ರಾಡ್, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳನ್ನು ಕಳವುಗೈದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬ್ರಿಡ್ಜ್ ಕೆಲಸಕ್ಕೆಂದು ತಂದಿಡಲಾಗಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳು ಸೋಮವಾರದಂದು ಕಾಣೆಯಾಗಿದ್ದವು. ಅವುಗಳನ್ನು ಹುಡುಕಾಡಿದಾಗ ಮಾಣಿ ಗ್ರಾಮದ ಪಟ್ಲಕೋಡಿ ಎಂಬಲ್ಲಿ ಈಚರ್ ವಾಹನದಲ್ಲಿ ವ್ಯಕ್ತಿಯೋರ್ವ ತುಂಬಿಸಿಕೊಂಡಿರುವುದು ಕಂಡು ಬಂದಿದೆ. ನಂದ ಕುಮಾರ್ ರನ್ನು ನೋಡಿದ ಆರೋಪಿ ವಾಹನವನ್ನು ಅಲ್ಲೇ ಬಿಟ್ಟು […]

ಬ್ರಿಡ್ಜ್ ಕಾಮಗಾರಿಗೆ ತಂದಿಡಲಾಗಿದ್ದ ರಾಡ್ ಕಳವು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನೆರೆಮನೆ ನಿವಾಸಿಗಳ ನಡುವೆ ಜಗಳ – ನಾಲ್ವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿರುವ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಬಳಬೆಟ್ಟು ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಝೈನುಲ್ ಆಬಿದ್ ಎಂಬವರ ಪತ್ನಿ ವಿಟ್ಲ ಪೊಲೀಸರಿಗೆ ನೀಡಿರುವ ದೂರಿನಂತೆ, ಅದೇ ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ನಾಲ್ವರ ವಿರುದ್ದ ದೂರ ದಾಖಲಾಗಿದೆ. ದೂರಿನ ಪ್ರಕಾರ, ದೂರುದಾರ ಮಹಿಳೆ ತನ್ನ ತವರು ಮನೆಗೆ ಹೋಗಲೆಂದು ಹೊರಡುತ್ತಿದ್ದ ಸಂದರ್ಭ ನೆರೆಮನೆಯ ಮಹಿಳೆಯೋರ್ವರು ತನ್ನ ಮಗಳಿಗೆ ಬೈಯುತ್ತಿದ್ದರು. ಈ

ನೆರೆಮನೆ ನಿವಾಸಿಗಳ ನಡುವೆ ಜಗಳ – ನಾಲ್ವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್‌‌ಗೆ ಪಿಕಪ್ ವಾಹನ ಢಿಕ್ಕಿ – ಇಬ್ಬರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮುಲ್ಕಿ, ಆ. 08. ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿ ನಡೆದಿದೆ. ಕಣ್ಣೂರಿನಿಂದ ಮಲ್ಪೆ ಕಡೆಗೆ ಮೀನು ಲೋಡ್ ಮಾಡಿಕೊಂಡು ಬರುತ್ತಿದ್ದ ಪಿಕಪ್, ಮುಲ್ಕಿ ಬಸ್ಸು ನಿಲ್ದಾಣದ ಜಂಕ್ಷನ್ ತಲುಪುತ್ತಿದ್ದಂತೆ ಕಿನ್ನಿಗೋಳಿ ಕಡೆಗೆ ಹೋಗಲು ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಪಿಕಪ್ ಮುಂಭಾಗ ಜಖಂಗೊಂಡಿದ್ದು, ಅದರಲ್ಲಿದ್ದ

ಬಸ್‌‌ಗೆ ಪಿಕಪ್ ವಾಹನ ಢಿಕ್ಕಿ – ಇಬ್ಬರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿಗೆ ಚೂರಿಯಿರಿತ- ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 08. ತವರು ಮನೆಯಲ್ಲಿದ್ದ ಪತ್ನಿಗೆ ಆಕೆಯ ಪತಿ ಚೂರಿಯಿಂದ ಇರಿತಗೊಳಿಸಿರುವ ಘಟನೆ ಪುತ್ತೂರು ತಾಲೂಕಿನ ನೆಲ್ಲಿಕಟ್ಟೆ ಸಮೀಪದ ಬ್ರಹ್ಮನಗರ ಎಂಬಲ್ಲಿ ನಡೆದಿದೆ. ಇವರಿಗೆ 6 ವರ್ಷದ ಹಿಂದೆ ಮದುವೆಯಾಗಿತ್ತು. ಆದರೆ ಮದುವೆಯಾಗಿ 2-3 ವರ್ಷಗಳಿಂದ ಆಕೆಯ ಪತಿ ಪ್ರಶಾಂತ್ ಮಾನಸಿಕ ಕಿರುಕುಳ ನೀಡುತ್ತಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಸಲಾಗಿದ್ದರೂ ಪತಿ ತೊಂದರೆ ನೀಡುವುದನ್ನು ಮುಂದುವರಿಸಿದ್ದಾನೆ ಎನ್ನಲಾಗಿದೆ. ಇನ್ನು ಆ. 06 ರಂದು ರಾತ್ರಿ ಮಹಿಳೆ ತನ್ನ ತವರು ಮನೆಯಲ್ಲಿ

ಪತ್ನಿಗೆ ಚೂರಿಯಿರಿತ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮುಸುಕುಧಾರಿಗಳಿಂದ ಬಾಲಕನಿಗೆ ಇಂಜೆಕ್ಷನ್ – ಪೋಷಕರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಮುದ್ದೇಬಿಹಾಳ, ಆ. 08. ಶಾಲೆಗೆ ತೆರಳುತ್ತಿದ್ದ 12 ವರ್ಷದ ಬಾಲಕನಿಗೆ ಮುಸುಕುಧಾರಿಗಳಿಬ್ಬರು ಇಂಜೆಕ್ಷನ್ ಚುಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂಜೆಕ್ಷನ್ ಚುಚ್ಚಿರುವ ಕುರಿತು ಶಾಲೆ ಬಿಟ್ಟು ಮನೆಗೆ ಮರಳಿದ ಬಾಲಕ ತಕ್ಷಣ ಮನೆಯವರಿಗೆ ತಿಳಿಸಿದ್ದಾನೆ. ತಕ್ಷಣ ಅವನನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಖಾಸಗಿ ಆಸ್ಪತ್ರೆಯವರು ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ತಿಳಿಸಿದ್ದಾರೆ. ಇನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಎಂಎಲ್ಸಿ ಪ್ರಕರಣದಡಿ ಹೆಸರು ನೋಂದಾಯಿಸಿಕೊಂಡ ವೈದ್ಯರು ಪರಿಶೀಲಿಸಿ, ಬಾಲಕ ಹೇಳುವ ಜಾಗದಲ್ಲಿ ಚುಚ್ಚಿದ ಗುರುತು ಇದೆ.

ಮುಸುಕುಧಾರಿಗಳಿಂದ ಬಾಲಕನಿಗೆ ಇಂಜೆಕ್ಷನ್ – ಪೋಷಕರಲ್ಲಿ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ಲಾರಿಗಳ ಬ್ಯಾಟರಿ ಕಳವು – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 08. ರಸ್ತೆ ಬದಿ ನಿಲುಗಡೆಗೊಳಿಸಿದ್ದ ಲಾರಿ ಸೇರಿದಂತೆ ಹಲವು ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುತ್ತಿದ್ದ ಇಬ್ಬರನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಾಯಮ್ಮರ ಮೂಲೆಯ ಎನ್. ಎ. ಮಿರ್ಷಾದ್ ಅಲಿ ಮತ್ತು ಮುಹಮ್ಮದ್ ಜಶೀರ್ ಟಿ. ಎ. ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ವಿದ್ಯಾನಗರ ಪರಿಸರದಲ್ಲಿ ನಿಲ್ಲಿಸಲಾಗಿದ್ದ ಲಾರಿಗಳಿಂದ ಬ್ಯಾಟರಿ ಕಳವುಗೈದ ಬಗ್ಗೆ ಪೊಲೀಸರಿಗೆ ಬಂದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಂಡದಲ್ಲಿ ಇನ್ನಷ್ಟು

ನಿಲ್ಲಿಸಿದ್ದ ಲಾರಿಗಳ ಬ್ಯಾಟರಿ ಕಳವು – ಇಬ್ಬರು ಆರೋಪಿಗಳ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಕೊಲೇಟ್‌ನಲ್ಲಿ ಗಾಂಜಾ ಪತ್ತೆ – ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 08. ಎರಡು ಅಂಗಡಿಗಳಿಂದ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಬಾಂಗ್‌ ಚಾಕೊಲೇಟ್‌ಗಳಲ್ಲಿ ಗಾಂಜಾ ಅಂಶ ಇರುವುದು ದೃಢಪಟ್ಟಿದ್ದು, ಅದನ್ನು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಾದ ಮನೋಹರ ಶೇಟ್ ಹಾಗೂ ಬೆಚನ್‌ ಸೋನ ಎಂಬವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜು. 19ರಂದು ಕಾಋಯಾಚರಣೆ ನಡೆಸಿದ್ದ ಮಂಗಳೂರು ನಗರದ ಉತ್ತರ ಠಾಣೆಯ ಪೊಲೀಸರು, ನಗರದ ಕಾರ್‌ಸ್ಟ್ರೀಟ್‌ನಲ್ಲಿ ಅಂಗಡಿ ನಡೆಸುತ್ತಿದ್ದ ಮನೋಹರ್‌ ಶೇಟ್‌ ಮಾರಾಟ ಮಾಡುತ್ತಿದ್ದ 48,000 ರೂ. ಮೌಲ್ಯದ ತಲಾ 40 ಬಾಂಗ್‌ ಚಾಕೊಲೆಟ್‌

ಚಾಕೊಲೇಟ್‌ನಲ್ಲಿ ಗಾಂಜಾ ಪತ್ತೆ – ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಪೆರುವಾಯಿ ಗ್ರಾಮದ ಕಿನಿಯರಪಾಲು ನಿವಾಸಿ ಸುಧೀರ್ ಕುಮಾರ್ (34) ಎಂದು ಗುರುತಿಸಲಾಗಿದೆ. ಈತನ ವಿರುದ್ದ ಮರಳು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಹೊರಡಿಸಲಾಗಿತ್ತು. ಆದರೆ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ. 08. ಪಾದಚಾರಿಗೆ ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಉಳುವಾರು ನಿವಾಸಿ ತೀರ್ಥರಾಮ ಎಂದು ಗುರುತಿಸಲಾಗಿದೆ. ತೀರ್ಥರಾಮ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓಮ್ನಿ ಕಾರು ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟಿರುತ್ತಾರೆ

ಸುಳ್ಯ: ಕಾರು ಢಿಕ್ಕಿ- ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಫ್ಲೈವುಡ್ ಫ್ಯಾಕ್ಟರಿಯ ಸ್ಲಾಬ್ ಕುಸಿತ- ಮೇಲ್ವಿಚಾರಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 07. ಫ್ಲೈವುಡ್ ಫ್ಯಾಕ್ಟರಿಯ ಸ್ಲಾಬ್ ಕುಸಿದು ಬಿದ್ದ ಪರಿಣಾಮ ಮೇಲ್ವಿಚಾರಕ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಅನಂತಪುರದಲ್ಲಿ ಸೋಮವಾರದಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಪಯ್ಯನ್ನೂರ್ ಕೇಲೊತ್ ನ ರೌಪ್ (60) ಎಮದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಈ ಫ್ಯಾಕ್ಟರಿಯ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಅದರಂತೆ ನಿರ್ಮಿಸಲಾದ ಸ್ಲಾಬ್ ಕುಸಿದು ಬಿದ್ದು ಈ ದುರ್ಘಟನೆ ನಡೆದಿದೆ. ಸ್ಲಾಬ್ ಅಡಿಗೆ ಬಿದ್ದ ರೌಫ್ ರವರನ್ನು ಹೊರತೆಗೆದು ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಅವರು

ಫ್ಲೈವುಡ್ ಫ್ಯಾಕ್ಟರಿಯ ಸ್ಲಾಬ್ ಕುಸಿತ- ಮೇಲ್ವಿಚಾರಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top