ಕ್ರೈಮ್ ನ್ಯೂಸ್

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ – ಅತ್ಯಾಚಾರ ಶಂಕೆ..!

(ನ್ಯೂಸ್ ಕಡಬ)newskadaba.com ಅಸ್ಸಾಂ, ಆ. 07. ಯುವತಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಅತ್ಯಾಚಾರದಿಂದ ಮನನೊಂದು ಯುವತಿಯರು ಸಾವಿಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. 19 ವರ್ಷ ಹಾಗೂ 17 ವರ್ಷದ ಯುವತಿಯರ ಮೃತದೇಹಗಳು ಏಕಕಾಲಕ್ಕೆ ಪತ್ತೆಯಾಗಿದ್ದು, ಪ್ರತ್ಯೇಕ ಸ್ಥಳದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಂತಿದ್ದ ಶವಗಳನ್ನು ಸ್ಥಳೀಯರು ಗಮನಿಸಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿಯರು ಅತ್ಯಾಚಾರಕ್ಕೊಳಗಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿರುವ […]

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ – ಅತ್ಯಾಚಾರ ಶಂಕೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೈರ್ ಸ್ಫೋಟಗೊಂಡು ಕಾರು ಪಲ್ಟಿ- ಕಾನ್ಸ್ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 07. ಟೈರ್ ಸ್ಫೋಟಗೊಂಡ ಪರಿಣಾಮ ಕಾರೊಂದು ಪಲ್ಟಿಯಾಗಿ ಹೆಡ್‌ ಕಾನ್‌ಸ್ಟೇಬಲ್‌ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರದಂದು ವರದಿಯಾಗಿದೆ. ಮೃತರನ್ನು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಮೋಮಿನಪುರದ ಮುಈಝುದ್ದೀನ್ (52) ಎಂದು ಗುರುತಿಸಲಾಗಿದೆ. ಘಟನೆಯಿಂದ ಅವರ ಸಹೋದರ ನಜುಮುದ್ದಿನ್ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಟೈರ್ ಸ್ಫೋಟಗೊಂಡು ಕಾರು ಪಲ್ಟಿ- ಕಾನ್ಸ್ಟೇಬಲ್ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಫಿ ತೋಟದಲ್ಲಿ ಗಾಂಜಾ ಬೆಳೆ- ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಸಿದ್ದಾಪುರ, ಆ. 07.  ವ್ಯಕ್ತಿಯೋರ್ವ ತನ್ನ ಮನೆಯ ಹಿಂಭಾಗದ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಸಿದ್ದಾಪುರ ಸಮೀಪದ ಗುಡ್ಲೂರು ಚನ್ನಮಗಿ ನಿವಾಸಿ ಕೆ.ಆರ. ಕಿರಣ್ ಅಲಿಯಾಸ್ ಐರಿ ಕಿರಣ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಮನೆಯ ಹಿಂಭಾಗದಲ್ಲಿನ ಕಾಫಿ ತೋಟದಲ್ಲಿ ಅಕ್ರಮವಾಘಿ ಗಾಂಜಾ  ಬೆಳೆಸಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಮಡಿಕೇರಿ ಪೊಲೀಸರು ದಾಳಿ ನಡೆಸಿ, ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಕಾಫಿ ತೋಟದಲ್ಲಿ ಗಾಂಜಾ ಬೆಳೆ- ಆರೋಪಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ನವವಿವಾಹಿತೆ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಲಕ್ನೋ, ಆ.07. ಅತ್ತೆ-ಮಾವ ತವರು ಮನೆಗೆ ಹೋಗಲು ಬಿಡಲಿಲ್ಲವೆಂದು ಬೇಸರಗೊಂಡು ನವ ವಿವಾಹಿತೆಯೊಬ್ಬಳು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ . ಮೃತ ನಿಶಾ ಅವರ ಪತಿ ನೌಕಾಪಡೆಯ ಉದ್ಯೋಗಿಯಾಗಿದ್ದರು. ಅವರು ಕರ್ತವ್ಯಕ್ಕೆ ಸೇರಲು ಹೋದ ನಂತರ ನಿಶಾ ತವರು ಮನೆಗೆ ಹೋಗಲು ಬಯಸಿದ್ದಳು. ಆದರೆ ಅತ್ತೆ ಮಾವ ನಿರಾಕಸಿದರು ಎಂದು ವರದಿ ತಿಳಿಸಿದೆ.

ಕ್ಷುಲ್ಲಕ ಕಾರಣಕ್ಕೆ ನವವಿವಾಹಿತೆ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.07. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ . ಈ ಬಗ್ಗೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ –  ಇಬ್ಬರು‌ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಹಾವೇರಿ, ಆ.07. ವೇಗವಾಗಿ ಚಲಿಸುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ನೀರಲಗಿ ಗ್ರಾಮದ ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಶೇರವಾಡ (55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊನ್ನಾಪುರ ಗ್ರಾಮದ ಬಸನಗೌಡ ಶಿವನಗೌಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿಗ್ಗಾವಿ ಪಟ್ಟಣಕ್ಕೆ ತೆರಳಲು ನೀರಲಗಿ ಬಳಿ ಹೆದ್ದಾರಿ ಬದಿ ನಿಂತಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಚಿದಾನಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು  ಸರಿಯಾದ

ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ –  ಇಬ್ಬರು‌ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

’ಪಬ್ ಜಿ’ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಲಬುರಗಿ, ಆ.07. ಇಲ್ಲೊಬ್ಬ ವಿದ್ಯಾರ್ಥಿ ಆನ್ಲೈ್ನ್‍ ಗೇಮ್ಗೆಳಲ್ಲಿ ಲೀನನಾಗಿ ಹಣ ಕಟ್ಟಿ ಪಬ್ಜಿ್ ಆಟವಾಡುತ್ತಿದ್ದ. ಕೊನೆಗೆ ಈತ ಸಾಲ ತೀರಿಸಲಾಗದೇ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೂಲತಃ ಬೆಟ್ಟಿಂಗ್‍ ಆಟವಲ್ಲ. ಈ ಆಟದಲ್ಲಿ ಕೆಲ ವಿಶಿಷ್ಟ ವರ್ಚ್ಯುವಲ್ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ. ಇದರಿಂದ ಆಟಗಾರ ಬಹಳ ಶಕ್ತಿಶಾಲಿ ಎಂಬ ಸಂದೇಶ ಇತರ ಆಟಗಾರರಿಗೆ ಸಿಗುತ್ತದೆ. ಅಂತಹ ವಸ್ತುಗಳನ್ನು ಖರೀದಿಸಲು ಈ ಯುವಕ ಸಾಲವನ್ನು ಮಾಡಿದ್ದು, ಮೃತ ಯುವಕನನ್ನು ಪ್ರವೀಣ್ ಪಾಟೀಲ್(20) ಎಂದು ಗುರುತಿಸಲಾಗಿದೆ. ಈತ ನೇಣು

’ಪಬ್ ಜಿ’ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ..!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 07. ವಂದೇ ಭಾರತ್ ರೈಲಿಗೆ ಯಾರೊ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಕೋಚ್‌ನ ಗಾಜು ಪುಡಿಯಾಗಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ರೈಲು ಗೋರಖ್‌ ಪುರದಿಂದ ಲಖನೌಗೆ ತೆರಳುತ್ತಿದ್ದ ವೇಳೆ ಬಾರಾಬಂಕಿಯ ಸಫೇದಾಬಾದ್ ರೈಲು ನಿಲ್ದಾಣದ ಬಳಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆ ಬೆಂಗಾವಲು ತಂಡ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಆರ್‌ಎಫ್‌ಪಿ ಇನ್ಸ್‌ಪೆಕ್ಟರ್‌ ಘಟನಾ ಸ್ಥಳಕ್ಕೆ

ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಮನೆಯ ಕೋಣೆಯಲ್ಲಿ ಕಿಟಕಿಯ ಬಳಿ ಕುಳಿತು ಓದುತ್ತಿರುವಾಗ ವೇಳೆ ಆರೋಪಿಯೋರ್ವ ಮನೆಯ ಹೊರಗೆ ನಿಂತು ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ ಘಟನೆ ವರದಿಯಾಗಿದೆ. ಆರೋಪಿಯು ಕೆಲವು ಸಮಯಗಳಿಂದ ದೂರದಾರರನ್ನು ಪ್ರೀತಿಸುವುದಾಗಿ ಹೇಳುತ್ತಾ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಕಿಟಕಿಯ ಮೂಲಕ ಮೈಗೆ ಕೈಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ; 24 ಮಂದಿ ಅರೆಸ್ಟ್- 9 ಲಕ್ಷ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಉಡುಪಿ, ಆ. 07.  ಜೂಜು ಕೇಂದ್ರದ ಮೇಲೆ ದಾಳಿ ನಡೆಸಿದ ಪೊಲೀಸರು  24 ಮಂದಿಯನ್ನು ಬಂಧಿಸಿ 9 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಕೋಟದಿಂದ ವರದಿಯಾಗಿದೆ. ಶನಿವಾರದಂದು ಸಂಜೆ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಗುಡ್ಡೆಯಂಗಡಿ ಕ್ರಾಸ್ ಬಳಿಯ ವಿನಾಯಕ ಸಭಾಂಗಣದಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೋಟ ಪಿಎಸ್ಐ ಶಂಬುಲಿಂಗಯ್ಯ ಮತ್ತಿತರರ ತಂಡ ದಾಳಿ ನಡೆಸಿ 24 ಮಂದಿಯನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 9,77,260

ಜೂಜಾಟದ ಅಡ್ಡೆ ಮೇಲೆ ಪೊಲೀಸ್ ದಾಳಿ; 24 ಮಂದಿ ಅರೆಸ್ಟ್- 9 ಲಕ್ಷ ರೂ. ಮೌಲ್ಯದ ಸೊತ್ತು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top