ಕ್ರೈಮ್ ನ್ಯೂಸ್

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಆ.05. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಸತೀಶ್‌ ಗುಪ್ತ ಯಾನೆ ಮಹೋರಿ (33)ಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ವೃತ್ತ ನಿರೀಕ್ಷಕ ರವಿ ಬಿ.ಎಸ್‌.ಅವರ ಮಾರ್ಗದರ್ಶನದಲ್ಲಿ ಮಂಗಳೂರು ಗ್ರಾಮಾಂತರ ವಾಮಂಜೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.  

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಭೂಕುಸಿತ- 4 ಬಲಿ, 16 ಜನ ನಾಪತ್ತೆ; ಕೇದಾರನಾಥ ಯಾತ್ರೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕೇದಾರನಾಥ, ಆ. 05. ಭಾರೀ ಮಳೆಯಿಂದಾಗಿ ಉತ್ತರಾಖಂಡ್‌ನ ಕೇದಾರನಾಥ ದೇವಸ್ಥಾನದ ಯಾತ್ರೆಯ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ 4 ಜನರು ಮೃತಪಟ್ಟು 16 ಜನ ನಾಪತ್ತೆಯಾದ ಕುರಿತು ವರದಿಯಾಗಿದೆ. ಇನ್ನು ಭೂಕುಸಿತದಿಂದಾಗಿ ಗೌರಿಕುಂಡ್‌ ಪ್ರದೇಶದಲ್ಲಿನ ಹಲವು ಅಂಗಡಿಗಳು ಕೊಚ್ಚಿ ಹೋಗಿವೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಪಡೆಗಳು ರಕ್ಷಣಾ ಕಾರ್ಯ ನಡೆಸುತ್ತಿದೆಯಾದರೂ ಭಾರೀ ಮಳೆ ಹಾಗೂ ಗುಡ್ಡಗಳಿಂದ ಬೀಳುವ ಬಂಡೆಗಳು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ ಎನ್ನಲಾಗಿದೆ. ನೇಪಾಳದ ಕೆಲವರು ಸೇರಿದಂತೆ ನಾಪತ್ತೆಯಾಗಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ

ಭೂಕುಸಿತ- 4 ಬಲಿ, 16 ಜನ ನಾಪತ್ತೆ; ಕೇದಾರನಾಥ ಯಾತ್ರೆ ಸ್ಥಗಿತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ 7 ತಿಂಗಳ ಗರ್ಭಿಣಿಯ ಕೊಂದ ಪಾಪಿಗಳು..!

(ನ್ಯೂಸ್ ಕಡಬ)newskadaba.com ಬಿಹಾರ, ಆ.05. ವರದಕ್ಷಿಣೆಯಾಗಿ ಮದುವೆ ಸಮಯದಲ್ಲಿ ಫ್ರಿಡ್ಜ್ ಗಿಫ್ಟ್ ಕೊಟ್ಟಿಲ್ಲವೆಂದು 7 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಅಂಗೂರಿ ಬೇಗಂ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ 2012ರಲ್ಲಿ ಮೊಮಿನತ್ ಅಲಾಂ ಎಂಬಾತನನ್ನು ಮದುವೆಯಾಗಿದ್ದು, ನಾಲ್ವರು ಮಕ್ಕಳಿದ್ದರು ಎನ್ನಲಾಗಿದೆ. ಅಂಗೂರಿ ಮತ್ತೆ ಗರ್ಭಿಣಿಯಾಗಿದ್ದು, ಸದ್ಯ ಈಕೆಯನ್ನು ಬಾಮೈದರೇ ಕೊಲೆ ಮಾಡಿದ್ದಾರೆ. ಕೊಲೆ ನಡೆದ ಬೆನ್ನಲ್ಲೇ ಅಂಗೂರಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಂಗೂರಿ ಮೃತದೇಹವನ್ನು

ಕ್ಷುಲ್ಲಕ ಕಾರಣಕ್ಕೆ 7 ತಿಂಗಳ ಗರ್ಭಿಣಿಯ ಕೊಂದ ಪಾಪಿಗಳು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಡಿನ ಕಾಳಗ- ಮೂವರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಕುಲ್ಗಾಮ್‌, ಆ. 05. ಜಮ್ಮು ಮತ್ತು ಕಾಶ್ಮೀರ ಕುಲ್ಗಾಮ್‌ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್‌ ಕೌಂಟರ್‌ನಲ್ಲಿ ಮೂವರು ಸೇನಾ ಯೋಧರು ಹುತಾತ್ಮರಾಗಿರುವ ಕುರಿತು ವರದಿಯಾಗಿದೆ. ಭಯೋತ್ಪಾದಕರು ಕುಲ್ಗಾಮ್‌ ನ ಹಾಲನ್ ಅರಣ್ಯ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ, ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ಗುಂಡಿನ ಕಾಳಗದಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದು, ನಂತರ ಮೃತಪಟ್ಟಿರುವುದಾಗಿ ಸೇನೆ ಹೇಳಿದೆ. ಈ ನಡುವೆ ಉಗ್ರರ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಶ್ರೀನಗರ ಮೂಲದ

ಗುಂಡಿನ ಕಾಳಗ- ಮೂವರು ಯೋಧರು ಹುತಾತ್ಮ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ –  ಆ.08 ರಂದು ದಲಿತ್ ಸಂಘಟನೆಯಿಂದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.05. ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ನೇತೃತ್ವದಲ್ಲಿ ವಿವಿಧ ರಾಜಕೀಯ ಪಕ್ಷದ ಎಸ್ ಸಿ, ಎಸ್ ಟಿ ಘಟಕ ಮತ್ತು ಕಾರ್ಮಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ವಿಟ್ಲದಲ್ಲಿ ಆ.08 ರಂದು ಪ್ರತಿಭಟನೆ ನಡೆಯಲಿದೆ ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದರು. ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ವಿಟ್ಲ ಜೈನ ಬಸದಿಯಿಂದ ಮೆರವಣಿಗೆ ಹೊರಟು ವಿಟ್ಲ ನಾಡಕಚೇರಿ

ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ –  ಆ.08 ರಂದು ದಲಿತ್ ಸಂಘಟನೆಯಿಂದ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರಳುಗಾರಿಕೆ- 10 ಲೋಡ್ ಮರಳು ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 05. ಅಕ್ರಮವಾಗಿ ಮರಳು ದಾಸ್ತಾನಿರಿಸಲಾಗಿದ್ದ ಸ್ಥಳಕ್ಕೆ ದಾಳಿ ನಡೆಸಿದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡವು 10 ಲೋಡ್ ಮರಳು ವಶಕ್ಕೆ ಪಡೆದುಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಡಿ ಸಮೀಪ ನಡೆದಿದೆ. ಅಕ್ರಮ ಮರಳು ದಾಸ್ತಾನು ಇರಿಸಿದ ಆರೋಪದಡಿಯಲ್ಲಿ ಕೋಡಿ ನಿವಾಸಿಗಳಾದ ಉಮ್ಮರ್, ನೌಫಾಲ್, ಹನೀಫ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ತಡರಾತ್ರಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಅಕ್ರಮ ಮರಳುಗಾರಿಕೆ- 10 ಲೋಡ್ ಮರಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಾನ್ಸ್‌ ಫಾರ್ಮರ್‌ ಸ್ಫೋಟ – ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ಭಸ್ಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 05. ಟ್ರಾನ್ಸ್‌ ಫಾರ್ಮರ್‌ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಪಕ್ಕದಲ್ಲೇ ನಿಲ್ಲಿಸಿದ್ದ ಮರ್ಸಿಡಿಸ್ ಬೆಂಜ್ ಸಹಿತ ಎರಡು ಕಾರುಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಗರದ ಬಾಣಸವಾಡಿಯ ಸ್ಪೆನ್ಸರ್ ರಸ್ತೆಯಲ್ಲಿ ನಡೆದಿದೆ. ಘಟನೆಯ ಸಂದರ್ಭ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಟ್ರಾನ್ಸ್‌ ಫಾರ್ಮರ್‌ ಸ್ಫೋಟ – ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ಭಸ್ಮ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ – ಸೌಜನ್ಯ ತಾಯಿಯಿಂದ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.05. ಅಪರಿಚಿತ ವ್ಯಕ್ತಿಗಳಿಂದ ಮಾನಹಾನಿಗೆ ಯತ್ನ ಮತ್ತು ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳದ ಸೌಜನ್ಯ ತಾಯಿ ಕುಸುಮಾವತಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ. ಸೌಜನ್ಯಾಗೆ 11 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದ್ದು, ಈ ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೇನೆ ಎಂದು

ಬೆಳ್ತಂಗಡಿ: ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ – ಸೌಜನ್ಯ ತಾಯಿಯಿಂದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವಸ್ತು ಮಾರಾಟ ಯತ್ನ – 2 ಕೆ.ಜಿ ಗಾಂಜಾ ಸಹಿತ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ದ್ವಿಚಕ್ರ ವಾಹನದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವು ಪಡೆದ ನಗರ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತನನ್ನು ಕೋಡಿಕಲ್ ಮುಸ್ತಫಾ ಕಂಪೌಂಡ್ ನಿವಾಸಿ ಮೊಹಮ್ಮದ್ ಅಝೀಝ್ ಯಾನೆ ಅಜೀಜ್ (40)  ಎಂದು ಗುರುತಿಸಲಾಗಿದೆ. ಈತನಿಂದ  50 ಸಾವಿರ ಮೌಲ್ಯದ ಎರಡು ಕಿಲೋ ಗಾಂಜಾ, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು ಒಟ್ಟು 1.05 ಲಕ್ಷ

ಮಾದಕ ವಸ್ತು ಮಾರಾಟ ಯತ್ನ – 2 ಕೆ.ಜಿ ಗಾಂಜಾ ಸಹಿತ ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಜೈಲಿನಿಂದ ಹೊರಬಂದ ಕುಖ್ಯಾತ ರೌಡಿಶೀಟರ್ ನ ಬರ್ಬರ ಹತ್ಯೆ

 (ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಕುಖ್ಯಾತ ರೌಡಿಶೀಟರ್ ಓರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದ ರೌಡಿಶೀಟರ್ ನನ್ನು ಸಿದ್ದಾಪುರ ಮಹೇಶ್​ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್​​​ ಗಳಾದ​​​ ನಾಗ, ಡಬಲ್ ಮೀಟರ್​ ಮೋಹನ್​​ ಹಾಗು ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ನಾಗ ಮತ್ತು ಸಿದ್ದಾಪುರ ಮಹೇಶ್ ಮಧ್ಯೆ ಮೊದಲಿನಿಂದಲೂ ದ್ವೇಷವಿದ್ದು, 2020 ರಲ್ಲಿ ಜಯನಗರದಲ್ಲಿ ನಡೆದಿದ್ದ

ಜೈಲಿನಿಂದ ಹೊರಬಂದ ಕುಖ್ಯಾತ ರೌಡಿಶೀಟರ್ ನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top