ಕ್ರೈಮ್ ನ್ಯೂಸ್

ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಮೃತ್ಯು -ಸಾರ್ವಜನಿಕರ ಆಕ್ರೋಶ

(ನ್ಯೂಸ್‌ ಕಡಬ) newskadaba.com ಸೆ. 09. ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೋರ್ವರು ದುರ್ಮರಣಕ್ಕೀಡಾದ ಘಟನೆ ಕೂಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಾಧವಿ ಎಂದು ಗುರುತಿಸಲಾಗಿದೆ. ಅವರು ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿನ ಬೃಹತ್ ಗುಂಡಿಗೆ ಬಿದ್ದಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಮೀನು ತುಂಬಿದ ಟ್ರಕ್ ಅವರ ಮೇಲೆ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶವನ್ನುಂಟು ಮಾಡಿದ್ದು, ಅವರು ಮೂಲ್ಕಿಯಿಂದ ಪಂಪ್‌ವೆಲ್‌ ಗೆ […]

ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಮೃತ್ಯು -ಸಾರ್ವಜನಿಕರ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ರೈತ ನೇಣಿಗೆ ಶರಣು

(ನ್ಯೂಸ್‌ ಕಡಬ) newskadaba.com ಸೆ.06 ದಾವಣಗೆರೆ: ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್‌, ಫೈನಾನ್ಸ್‌ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ ನೊಂದ ವ್ಯಕ್ತಿಯೊಬ್ಬ ಡೆತ್‌ನೋಟ್‌ ಬರೆದಿಟ್ಟು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಶಿರಮಗೊಂಡನಹಳ್ಳಿಯ ಚಿತ್ರಲಿಂಗ (31) ಮೃತ. ಈತ ಖಾಸಗಿ ಫೈನಾನ್ಸ್‌ನಲ್ಲಿ ಸಾಲ ಮಾಡಿಕೊಂಡಿದ್ದು, 2 ತಿಂಗಳ ಸಾಲದ ಕಂತು ಕಟ್ಟುವಂತೆ ಸಾಲ ವಸೂಲಾತಿ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿದ್ದರು.

ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ರೈತ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

(ನ್ಯೂಸ್‌ ಕಡಬ) newskadaba.com ಸೆ.06 ಲಖನೌ : ಉತ್ತರ ಪ್ರದೇಶದ ಗೋರಖ್‌ಪುರದ ಶಾಹ್‌ಪುರದಲ್ಲಿ ಬುಧವಾರ ಸಂಜೆ ವಿಚ್ಛೇದನ (Divorce) ವಿವಾದದ ಹಿನ್ನೆಲೆಯಲ್ಲಿ ಗಂಡನೊಬ್ಬ ತನ್ನ ಹೆಂಡತಿಯನ್ನು ಗುಂಡಿಟ್ಟು ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಿಶ್ವಕರ್ಮಾ ಚೌಹಾಣ್ ಎಂದು ಗುರುತಿಸಲಾಗಿದ್ದು, ಘಟನೆಯ ತಕ್ಷಣವೇ ಆತನನ್ನು ಸ್ಥಳದಲ್ಲಿಯೇ ಬಂಧಿಸಲಾಗಿದೆ. ಮೃತ ಮಮತಾ ಚೌಹಾಣ್ (35) ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ 13 ವರ್ಷದ ಮಗಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ವಿಚ್ಛೇದನಕ್ಕೆ ಮುನ್ನ ಮಗುವಿನ ಆರೈಕೆಗಾಗಿ ಹಣ ಮತ್ತು

ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು- ಟ್ರಕ್‌ ನಡುವೆ ಭೀಕರ ಅಪಘಾತ; ಐವರು ಉದ್ಯಮಿಗಳು ಸ್ಥಳದಲ್ಲಿಯೇ ಸಾವು

(ನ್ಯೂಸ್‌ ಕಡಬ) newskadaba.com,  ಸೆ.04 ಪಾಟನಾ: ಬಿಹಾರದ ಪಾರ್ಸಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಯಾ ಮೋರ್ ಬಳಿಯ ಪಾಟ್ನಾ-ಗಯಾ-ದೋಭಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 83 ರಲ್ಲಿ ಗುರುವಾರ ನಡೆದ ಭೀಕರ ಅಪಘಾತದಲ್ಲಿ ಐವರು ಉದ್ಯಮಿಗಳು ದಾರುಣವಾಗಿ ಅಂತ್ಯ ಕಂಡಿದ್ದಾರೆ. ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಉದ್ಯಮಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಅಪಘಾತವು ಬೆಳಗಿನ ಜಾವ 12.45 ರ ಸುಮಾರಿಗೆ ಸಂಭವಿಸಿದ್ದು, ಡಿಕ್ಕಿ ಎಷ್ಟು ತೀವ್ರವಾಗಿತ್ತೆಂದರೆ ಕಾರಿನ ಮುಂಭಾಗವು ಟ್ರಕ್‌ಗೆ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರು- ಟ್ರಕ್‌ ನಡುವೆ ಭೀಕರ ಅಪಘಾತ; ಐವರು ಉದ್ಯಮಿಗಳು ಸ್ಥಳದಲ್ಲಿಯೇ ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಜೀವ ದಹನವಾಗಿರುವ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ನಡೆದಿದೆ. ದುರ್ಘಟನೆಯಲ್ಲಿ ನೇಪಾಳ ಮೂಲದ ಪುಷ್ಕರ ಕುಮಾರ್, ಜ್ಯೋತಿ ಕುಮಾರಿ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ದುರ್ದೈವಿ. ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. 30 ಫ್ಲಾಟ್‌ಗಳನ್ನು ಹೊಂದಿರುವ ಅಪಾರ್ಟ್‌ಮೆಂಟ್‌ನ ರೂಮ್ ವೊಂದರಲ್ಲಿ ದಂಪತಿಗಳು ಮಗುವಿನೊಂದಿಗೆ ವಾಸವಿದ್ದರು. ಅಪಾರ್ಟ್

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿಯ ಕಡೇಪಾಲ ಬಳಿ ಬುಧವಾರ ಬೆಳಿಗ್ಗೆ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿ ಶೋಭಾ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಟ್ಯಾಂಕರ್ ಮಡಿಕೇರಿಯಿಂದ ಸುಳ್ಯದ ಕಡೆಗೆ ಚಲಿಸುತ್ತಿತ್ತು, ಆದರೆ ಕಾರು ಮಡಿಕೇರಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿತ್ತು. ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಟ್ಯಾಂಕರ್ ನಡುವೆ ಭೀಕರ ಅಪಘಾತ ಮಹಿಳೆ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸೆ. 03. ಕಾರು ಮತ್ತು ಟ್ಯಾಂಕರ್ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆನ್ನಲಾಗಿದೆ. ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಕೊಡಗು

ಕಾರು- ಟ್ಯಾಂಕರ್ ನಡುವೆ ಭೀಕರ ಅಪಘಾತ ಮಹಿಳೆ ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

6.50 ಲಕ್ಷ ರೂ ಮೌಲ್ಯದ ದೇವರ ವಿಗ್ರಹ ವಶ; ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.02: ದೇವಳಗಳನ್ನೇ ಟಾರ್ಗೆಡ್ ಮಾಡಿ ಕಳವು ಮಾಡುತ್ತಿದ್ದ ಹೊರ ರಾಜ್ಯದ ಮೂವರು ಖದೀಮರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿ 6.50 ಲಕ್ಷ ರೂ. ಮೌಲ್ಯದ 22 ವಿವಿಧ ದೇವರ ವಿಗ್ರಹಗಳನ್ನು ವಶಪಡಿಸಿಕೊಂಡಿದ್ದಾರೆ. ಕನ್ನಮಂಗಲದ ಖಾಜಿಸೊನ್ನೇನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಮೊಹಮದ್‌ ರಬ್ಬಿ (22),ಮೊಹಮದ್‌ ಯೂಸೂಫ್‌ (20) ಮತ್ತು ಮೊಹಮದ್‌ ಬಾಬು (20) ಬಂಧಿತ ಆರೋಪಿಗಳು.ಈ ಮೂವರು ನಗರದಲ್ಲಿ ವಾಸವಾಗಿದ್ದುಕೊಂಡು ಇಬ್ಬರು ಕಾರು ವಾಷಿಂಗ್‌ ಕೆಲಸ ಹಾಗೂ ಮತ್ತೊಬ್ಬ ಚಿಂದಿ ಆಯುವ

6.50 ಲಕ್ಷ ರೂ ಮೌಲ್ಯದ ದೇವರ ವಿಗ್ರಹ ವಶ; ಮೂವರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ‘ಸೌಜನ್ಯರ ಕುಟುಂಬದ ಜೊತೆ ನಾವಿದ್ದೇವೆ’- ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com,  ಸೆ.02: ಸೌಜನ್ಯರ ಕೊಲೆ ವಿಚಾರವಾಗಿ ಅವರ ಕುಟುಂಬ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರೆ, ಅಲ್ಲಿನ ಸಂಪೂರ್ಣ ವೆಚ್ಚವನ್ನು ಬಿಜೆಪಿ ಭರಿಸಲಿದೆ ಎಂದು ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೌಜನ್ಯ ಅವರ ತಾಯಿ ಮತ್ತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಇಂದು ಬೆಳಿಗ್ಗೆ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರ ಜೊತೆ ಮಾತನಾಡಿದ್ದೆ. ಅಲ್ಲದೇ ಇಲ್ಲಿಗೆ ಬರುವ ಅಪೇಕ್ಷೆ ವ್ಯಕ್ತಪಡಿಸಿದ್ದೆ. ಸಮಾವೇಶ ಮುಗಿದ

ಬೆಳ್ತಂಗಡಿ: ‘ಸೌಜನ್ಯರ ಕುಟುಂಬದ ಜೊತೆ ನಾವಿದ್ದೇವೆ’- ವಿಜಯೇಂದ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು

(ನ್ಯೂಸ್‌ ಕಡಬ)com, ಸೆ.02 ಕೋಲಾರ : ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಒಬ್ಬರು ಸಾವನ್ನಪ್ಪಿದ್ದಾರೆ. ನಗರದ ನಿವಾಸಿ ಸುರೇಶ್ ಕುಮಾರ್ (42) ಮೃತ ದುರ್ದೈವಿ. ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‌ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಮಾಡೆಲಿಂಗ್ ಜೊತೆ ಕನ್ನಡದ ಹಲವು ನಟ ನಟಿಯರಿಗೆ

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top