ಕ್ರೈಮ್ ನ್ಯೂಸ್

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ

(ನ್ಯೂಸ್‌ ಕಡಬ) newskadaba.com,  ಸೆ.02 ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಗೌಂಡ್ ನಲ್ಲಿ ನಿಷೇದಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ.ಇವರು ತಚ್ಛಣಿ ಗೌಂಡ್ ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಬಂಧಿತರಿಂದ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸಹಿತ […]

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಂಡನಿಗೆ ಆರೆಸ್ಟ್ ವಾರಂಟ್‌ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.02  ಬ್ರಹ್ಮಾವರ:  ಉಡುಪಿ ಜಿಲ್ಲೆಯಲ್ಲಿ  ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆರೂರು ಗ್ರಾಮದ ಅಡ್ಜಿಲ್‌ ಎಂಬಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಲು ವಾರಂಟ್‌ ಹಿಡಿದು ಬಂದಿರುವುದನ್ನು ಕಂಡು ಹೆದರಿದ ಅವರ ಪತ್ನಿ ಸುಶ್ಮಿತಾ (35) ಎಂಬವರು ತನ್ನ ಒಂದೂವರೆ ವರ್ಷದ ಮಗು ಶ್ರೇಷ್ಠ ಎಂಬಾಕೆಯನ್ನು ನೇಣು ಬಿಗಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡ ಘಟನೆ ಸೋಮವಾರ(ಸೆ.01)  ನಡೆದಿದೆ. ಸುಶ್ಮಿತಾ ಅವರ ಪತಿ ಸುಭಾಶ್‌

ಗಂಡನಿಗೆ ಆರೆಸ್ಟ್ ವಾರಂಟ್‌ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

(ನ್ಯೂಸ್‌ ಕಡಬ) newskadaba.com,  ಸೆ.02: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಹಿನ್ನೆಲೆ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಜಾಮೀನು

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಸೆ. 01. ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ ಹೊಟ್ಟೆಗೆ ಇರಿದು ಗಾಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ಗಾಯಾಳು ಆಟೋ ಚಾಲಕನಿಂದ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಚಪ್ಪಲಿಯ ಒಳಗಿದ್ದ ವಿಷಕಾರಿ ಹಾವು ಕಚ್ಚಿ ವ್ಯಕ್ತಿ ದುರಂತ ಸಾವು..!

(ನ್ಯೂಸ್‌ ಕಡಬ) newskadaba.com ಸೆ. 01. ಕ್ರೋಕ್ಸ್ ಚಪ್ಪಲಿಯಲ್ಲಿ ಅಡಗಿದ್ದ ವಿಷಕಾರಿ ಹಾವು ಕಚ್ಚಿ ಟೆಕ್ಕಿಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ನಡೆದಿದೆ. ಮಂಜು ಪ್ರಕಾಶ್ (41) ಮೃತ ದುರ್ವೈವಿ. ಅಪಘಾತದಲ್ಲಿ ಕಾಲಿನ ಸ್ಪರ್ಶ ಶಕ್ತಿ ಕಳೆದುಕೊಂಡಿದ್ದರಿಂದ ಹಾವು ಕಚ್ಚಿದ್ದನ್ನು ಗಮನಿಸಲಾಗದೆ ಮಂಜು ಪ್ರಕಾಶ್ ಅವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಚಪ್ಪಲಿಯ ಒಳಗಿದ್ದ ವಿಷಕಾರಿ ಹಾವು ಕಚ್ಚಿ ವ್ಯಕ್ತಿ ದುರಂತ ಸಾವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರವಿವಾರದಂದು ವರದಿಯಾಗಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮ ದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯೊಂದರಲ್ಲಿ ತೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿಶ್ವನಾಥ (16) ಎಂಬವರು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆಸಿದ್ದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಸಾದ ಕ್ಕಾಗಿ ಆರಂಭವಾದ ಜಗಳ ದೇವಾಲಯದ ಸೇವಕನ ಕೊಲೆಯಲ್ಲಿ ಅಂತ್ಯ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ: ಪ್ರಸಾದದ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ದೆಹಲಿಯ ಕಲ್ಕಾಜಿ ದೇಗುಲದಲ್ಲಿ ನಡೆದಿದೆ. ಘಟನೆಯಲ್ಲಿ 35 ವರ್ಷದ ದೇವಸ್ಥಾನದ ಸೇವಕರೊಬ್ಬರನ್ನು ಗುಂಪೊಂದು ಥಳಿಸಿ ಕೊಲೆ ಮಾಡಿದೆ ಮೃತರನ್ನು ಉತ್ತರ ಪ್ರದೇಶದ ಹಾರ್ದೋಯ್ ಮೂಲದ ಯೋಗೇಂದ್ರ ಸಿಂಗ್ (35) ಎಂದು ಗುರುತಿಸಲಾಗಿದೆ. ಅವರು ಕಳೆದ 15 ವರ್ಷಗಳಿಂದ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪೊಲೀಸರ ಪ್ರಕಾರ, ಆಗಸ್ಟ್ 29ರ ಸಂಜೆ, ಒಂದು ಗುಂಪಿನ ಪುರುಷರು ತಮ್ಮ ದರ್ಶನ ಮುಗಿಸಿದ ನಂತರ

ಪ್ರಸಾದ ಕ್ಕಾಗಿ ಆರಂಭವಾದ ಜಗಳ ದೇವಾಲಯದ ಸೇವಕನ ಕೊಲೆಯಲ್ಲಿ ಅಂತ್ಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮೂಡಬಿದಿರೆ: ಮಂಕುಬೂದಿ ಎರಚಿ ಮಹಿಳೆಯೊಬ್ಬರಿಂದ ನಗ-ನಗದು ಎಗರಿಸಿಕೊಂಡು ವಂಚಿಸಿದ ಯುವಕನ ವರ್ತಿನೆಯಿಂದ ನೊಂದ ಮಹಿಳೆ ಬದುಕಿಗೆ ಅಂತ್ಯ‌ಹೇಳಿದ ಘಟನೆ ಮೂಡುಬಿದಿರೆ ತೋಡಾರಿನಲ್ಲಿ ನಡೆದಿದೆ.‌ ಮಂಗಳೂರು ಉಳ್ಳಾಲದ ಕಲ್ಲಾಪು ಮೂಲದ ಮಹಿಳೆ ಶಫ್ರೀನಾ ಬಾನು(31) ಘಟನೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡವರು. ಕಳೆದ 14 ವರ್ಷಗಳ ಹಿಂದೆ ಮೂಡುಬಿದಿರೆ ಬೆಳುವಾಯಿ ನವಾಝ್ ರೊಂದಿಗೆ‌ ದಾಂಪತ್ಯ‌ ಜೀವನಕ್ಕೆ ಕಾಲಿರಿಸಿದ ಶಫ್ರೀನಾ ಬಾನು ತೋಡಾರು ಗ್ರಾಮದ ಏರ್ ಇಂಡಿಯಾ ನಾಮಾಂಕಿತದ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲಾಟ್

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವರದಕ್ಷಿಣೆಗಾಗಿ ಸೊಸೆಗೆ ಆಸಿಡ್ ಕುಡಿಸಿ ಕೊಂದ ಅತ್ತೆ-ಮಾವ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಅಮ್ರೋಹ : ದೇಶದ ಹಲವೆಡೆ ಇನ್ನೂ ವರದಕ್ಷಿಣೆಯೆಂಬ ಪೆಂಡಭೂತ ಮಾಯವಾದಂತಿಲ್ಲ. ಅದೆಷ್ಟೋ ಹೆಣ್ಮಕ್ಕಳು ಇದರಿಂದ ನರಳಿದ್ದಾರೆ, ಪ್ರಾಣತೆತ್ತಿದ್ದಾರೆ. ಹೆಣ್ಣಿಗೆ ಹೆಣ್ಣೇ ಶತ್ರು ಎಂಬಂತೆ ಅತ್ತೆಯಾದವಳು ಕೂಡ ಅರ್ಥ ಮಾಡಿಕೊಳ್ಳದೆ ಸೊಸೆಯನ್ನು ವರದಕ್ಷಿಣೆಗಾಗಿ ಹಿಂಸಿಸಿದ ಅದೆಷ್ಟೋ ಪ್ರಕರಣಗಳಿವೆ. ಇದೀಗ ವರದಕ್ಷಿಣೆಯ ಕ್ರೌರ್ಯಕ್ಕೆ ಮಹಿಳೆಯೊಬ್ಬಳು ಬಲಿಯಾಗಿದ್ದಾಳೆ. ಅತ್ತೆ-ಮಾವ ಇಬ್ಬರೂ ಸೇರಿ ಬಲವಂತವಾಗಿ ಸೊಸೆಗೆ ಆಸಿಡ್ ಕುಡಿಸಿದ ಪರಿಣಾಮ 23 ವರ್ಷದ ಮಹಿಳೆ ದುರಂತವಾಗಿ ಸಾವಿಗೀಡಾಗಿದ್ದಾಳೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ  ಅಮ್ರೋಹ

ವರದಕ್ಷಿಣೆಗಾಗಿ ಸೊಸೆಗೆ ಆಸಿಡ್ ಕುಡಿಸಿ ಕೊಂದ ಅತ್ತೆ-ಮಾವ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top