ಕ್ರೈಮ್ ನ್ಯೂಸ್

ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕ ನೀರುಪಾಲು- ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 24. ಪ್ರವಾಸಕ್ಕೆಂದು ಸ್ನೇಹಿತನೊಂದಿಗೆ ಕೊಲ್ಲೂರು ಜಲಪಾತಕ್ಕೆ ಆಗಮಿಸಿದ್ದ ಯುವಕನೋರ್ವ ಕಾಲು ಜಾರಿಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಕೊಲ್ಲೂರು ಸನೀಪದ ಅರಶಿನ ಗುಂಡಿ ಜಲಪಾತದಲ್ಲಿ ರವಿವಾರದಂದು ನಡೆದಿದೆ. ನೀರುಪಾಲಾದ ಯುವಕನನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್.ನಗರ ಸುಣ್ಣದಹಳ್ಳಿ ನಿವಾಸಿ ಶರತ್ ಕುಮಾರ್ (23) ಎಂದು ಗುರುತಿಸಲಾಗಿದೆ. ಶರತ್ ಆತನ ಸ್ನೇಹಿತ ಗುರುರಾಜ ಎಂಬಾತನೊಂದಿಗೆ ಭದ್ರಾವತಿಯಿಂದ ಕೊಲ್ಲೂರಿಗೆ ಆಗಮಿಸಿದ್ದರು. ಈ ವೇಳೆ ಕೊಲ್ಲೂರು ಗ್ರಾಮದ ಅರಶಿನ ಗುಂಡಿ ಜಲಪಾತ (ಫಾಲ್ಸ್) […]

ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕ ನೀರುಪಾಲು- ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್ ಸ್ಕಿಡ್ ಆಗಿ ದಂಪತಿಗಳಿಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಸ್ಕೂಟರ್ ಸ್ಕಿಡ್ ಆಗಿ ಬಿದ್ದು ದಂಪತಿ ಗಾಯಗೊಂಡ ಘಟನೆ ಬಲ್ನಾಡ್ ಗ್ರಾಮ ಆನಂದಸಾಗರ ಎಂಬಲ್ಲಿ ನಡೆದ ಕುರಿತು ವರದಿಯಾಗಿದೆ. ಬಲ್ನಾಡ್ ಗ್ರಾಮದ ಸುಂಕದ ಮೂಲೆ ನಿವಾಸಿ ಪುರಂದರ ಮತ್ತು ಪತ್ನಿ ಮಲ್ಲಿಕಾ.ಬಿ ಗಾಯಗೊಂಡವರು ಎಂದು ಗುರುತಿಸಲಾಗಿದೆ. ಸ್ಕಿಡ್ ಆಗಿ ಮಗುಚಿ ಬಿದ್ದಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಸ್ಕೂಟರ್ ಸ್ಕಿಡ್ ಆಗಿ ದಂಪತಿಗಳಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ರಾತ್ರಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಎಂದು ಗುರುತಿಸಲಾಗಿದೆ. ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ. ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ವ್ಯಕ್ತಿಯನ್ನು ಸ್ಥಳೀಯ ನಿವಾಸಿ ರಮೇಶ್ ಪೂಜಾರಿ(60) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಮತ್ತು ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೀಜಿಂಗ್, ಜು. 24. ಜಿಮ್‌ನಲ್ಲಿ ವರ್ಕ್ಔಟ್ ಮಾಡುತ್ತಿದ್ದವರ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದು ಹತ್ತು ಮಂದಿ ಮೃತಪಟ್ಟಿದ್ದು, ಓರ್ವ ಅವಶೇಷಗಳಡಿ ಸಿಲುಕಿರುವ ಘಟನೆ ಚೀನಾದಿಂದ ವರದಿಯಾಗಿದೆ. ಚೀನಾದ ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ಜಿಮ್ ಸೆಂಟರ್ ನಲ್ಲಿ ಈ ಘಟನೆ ಸಂಭವಿಸಿದೆ. ಮೇಲ್ಚಾವಣಿ ಕುಸಿತದ ವೇಳೆ ಹದಿನಾಲ್ಕು ಮಂದಿ ಅವಶೇಷಗಳಡಿ ಸಿಲುಕಿದ್ದು,  ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಾದರೂ ಆ ವೇಳೆಗಾಗಲೇ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಆರು ಮಂದಿ ಆಸ್ಪತ್ರೆಯಲ್ಲಿ

ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.  ಮಂಗಳೂರಿನ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ(32) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮಂಗಳೂರಿನ ಬ್ಯಾಚುರಲ್ ಆಫ್ ಹಾಸ್ಪಿಟಲ್ ಆಡ್ಮಿನಿಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಹೋಗಿ ವಾಪಸ್ಸಾಗುವ ವೇಳೆ ಆರೋಪಿಗಳು ಹಿಂಬಾಲಿಸಿ ಬಂದಿದ್ದು, ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಪೆಟ್ರೋಲ್ ತುಂಬಿಸಿ ಹಣ ಕೊಡದೇ ಕಾರು ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೇ ಪರಾರಿಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 20ರಂದು ರಾತ್ರಿ ಕಾವೂರಿನ ಪೆಟ್ರೋಲ್ ಪಂಪ್‌ ವೊಂದರಲ್ಲಿ ನೀಲಿ ಬಣ್ಣದ ಕಾರಿಗೆ ಫುಲ್‌ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತನೋರ್ವ 4,100.60 ರೂ. ಬಿಲ್ ಪಾವತಿಸದೇ ವೇಗವಾಗಿ ಕಾವೂರು ಜಂಕ್ಷನ್ ಕಡೆಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪೆಟ್ರೋಲ್ ಪಂಪ್ ಸಿಬ್ಬಂದಿ ಕಾರನ್ನು ಬೆನ್ನಟ್ಟಿ ನೋಡಿದಾಗ ಕಾರಿನ ಎದುರು ಮತ್ತು ಹಿಂಬದಿ ನೋಂದಣಿ ಸಂಖ್ಯೆ ಇರಲಿಲ್ಲ.

ಪೆಟ್ರೋಲ್ ತುಂಬಿಸಿ ಹಣ ಕೊಡದೇ ಕಾರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಬಾರ್ ನಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜು. 23. ಊಟ ಮಾಡಲು ಬಾರೊಂದದಕ್ಕೆ ತೆರಳಿದ್ದ ಮೂವರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದಲ್ಲಿರುವ ಬಾರೊಂದರಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬಂಟ್ವಾಳ ತಾಲೂಕು ಕೇಪುಗ್ರಾಮದ ಬಡಕೋಡಿ ನಿವಾಸಿ ವಿಶ್ವನಾಥ ರವರ ಪುತ್ರ ಸುರೇಶ್ ಎಂದು ಗುರುತಿಸಲಾಗಿದೆ. ನಿಶಾಂತ್ ಶೆಟ್ಟಿ, ರಾಕೇಶ್‌, ಚೇತು ಯಾನೆ ಚೇತನ್‌ ಪ್ರಕರಣದ ಆರೋಪಿಗಳಾಗಿದ್ದಾರೆ. ಘಟನೆಯ ಕುರಿತಂತೆ ಸುರೇಶ್, ನಾನು ಗಣೇಶ್ ಮತ್ತು ವಿಟ್ಲದ ಸುರೇಶ್ ಅವರೊಂದಿಗೆ ಜು. 21 ರಂದು

ಬಾರ್ ನಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಗಾಳಿಮಳೆಗೆ ಬಿದ್ದ ಬೃಹತ್ ಮರ- ಮನೆಗೆ ಭಾಗಶಃ ಹಾನಿ – ಮಕ್ಕಳಿಬ್ಬರು ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 22. ಭಾರೀ ಗಾಳಿಮಳೆಗೆ ಬೃಹತ್ ಗಾತ್ರದ ಮರವೊಂದು ಗಾಳಿಗೆ ಉರುಳಿ ಬಿದ್ದು ಎರಡು ಮನೆಗಳು ಧ್ವಂಸಗೊಂಡ ಘಟನೆ ಇಲ್ಲಿನ ಹಳೆಗೇಟು ಸಮೀಪದ ಕಜೆಕ್ಕಾರು ಅಂಬೇಡ್ಕರ್ ಕಾಲನಿಯಲ್ಲಿ ಶನಿವಾರದಂದು ಸಂಜೆ ನಡೆದಿದೆ. ಘಟನೆಯ ಸಂದರ್ಭ ಮನೆಯೊಳಗಿದ್ದ ಮಕ್ಕಳಿಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಭಾರೀ ಗಾಳಿ ಬೀಸಿದ್ದು, ಇದರಿಂದಾಗಿ ಭಾರೀ ಗಾತ್ರದ ಹಲಸಿನ ಮರ ಹಾಗೂ ತೆಂಗಿನ ಮರಗಳು ಅಕ್ಕಪಕ್ಕದಲ್ಲಿರುವ ಸುಂದರಿ ಮತ್ತು ಸೇಸಮ್ಮ ಅವರ ಮನೆಯ ಮೇಲೆ

ಭಾರೀ ಗಾಳಿಮಳೆಗೆ ಬಿದ್ದ ಬೃಹತ್ ಮರ- ಮನೆಗೆ ಭಾಗಶಃ ಹಾನಿ – ಮಕ್ಕಳಿಬ್ಬರು ಅದೃಷ್ಟವಶಾತ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಜು. 22. ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಸಮೀಪದ ಒಂತಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಕೃಷ್ಣ ಪೂಜಾರಿ (57) ಎಂದು ಗುರುತಿಸಲಾಗಿದೆ. ಸ್ಕೂಟರ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ  ಕುರಿತು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top