ಕ್ರೈಮ್ ನ್ಯೂಸ್

ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ !

(ನ್ಯೂಸ್ ಕಡಬ)newskadaba.com ಚೆನ್ನೈ, ಜು.18. ತಾನು ಸತ್ತರೆ ಮಗನ ಕಾಲೇಜು ಶುಲ್ಕವನ್ನು ಸರ್ಕಾರ ಭರಿಸುತ್ತದೆ ಎಂದು ಮಹಿಳೆಯೊಬ್ಬರು ಚಲಿಸುತ್ತಿರುವ ಬಸ್ಸಿನ ಮುಂದೆ ಹಾರಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾಪತಿ(45) ಎಂದು ಗುರುತಿಸಲಾಗಿದೆ. ಮಹಿಳೆಯು ಕಳೆದ 15 ವರ್ಷದಿಂದ ಗಂಡನಿಂದ ದೂರವಾಗಿ ಕಷ್ಟಪಟ್ಟು ಮಗನನ್ನು ಸಾಕಿ ಬೆಳೆಸಿದ್ದು, ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ಕಳೆದ ಕೆಲ ಸಮಯದಿಂದ ಸ್ವಚ್ಛತೆಯ ಕೆಲಸವನ್ನು ಮಾಡುತ್ತಿದ್ದರು. ಮಗನ ಕಾಲೇಜು ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣ ಪಾಪತಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. […]

ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಪರೀಕ್ಷೆ ವೇಳೆ ಮೊಬೈಲ್ ಫೋನ್ ಬಳಸಿ ಸಿಕ್ಕಿ ಬಿದ್ದ 19 ವರ್ಷದ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಹಾರಿ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರಿನ ಗಿರಿನಗರ ಸಮೀಪದ ಪಿಇಎಸ್ ಕಾಲೇಜಿನಲ್ಲಿ ಬಿಟೆಕ್ ವಿದ್ಯಾರ್ಥಿಯಾಗಿರುವ ಆದಿತ್ಯ ಪ್ರಭು ಎಂಬಾತ ಸೋಮವಾರ ಮಧ್ಯಾಹ್ನ 1.20 ರ ಸುಮಾರಿಗೆ ಎರಡನೇ ಸೆಮಿಸ್ಟರ್ ಪರೀಕ್ಷೆಯ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಇನ್ವಿಜಿಲೇಟರ್ ಆತನನ್ನು ಪರೀಕ್ಷಾ ನಿಯಂತ್ರಕರಿಗೆ ಹಸ್ತಾಂತರಿಸಿದ್ದಾರೆ. ವಿದ್ಯಾರ್ಥಿಯ ಪೋಷಕರನ್ನು ಬರುವಂತೆ

ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಗುಜರಾತ್‌, ಜು.18. 20 ವರ್ಷದ ಯುವಕನೊರ್ವ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಯುವಕನೋರ್ವ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಮಾಹಿತಿಯ ಪ್ರಕಾರ, ಪರ್ವ ಸೋನಿ ಅವರು ಅರವಳ್ಳಿಯ ಮೊಡಸದಲ್ಲಿರುವ ಗೋವರ್ಧನ್ ಸೊಸೈಟಿಯಲ್ಲಿರುವ ಶ್ರೈನ್ ಅಪಾರ್ಟ್‌ಮೆಂಟ್‌ ನಲ್ಲಿ ವಾಸಿಸುತ್ತಿದ್ದರು. ಕ್ರಿಕೆಟ್ ಮೈದಾನದಲ್ಲಿ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.  

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮೈಸೂರು, ಜು.18. ನಿಂತಿದ್ದ ಟ್ರ್ಯಾಕ್ಟರ್ ಗೆ ಬೆಳ್ಳಂ ಬೆಳಗ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಮುಂಜಾನೆ 4.30 ರ ಸುಮಾರಿಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತರನ್ನು ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ

ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ➤ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)newskadaba.com ಕಾಪು, ಜು.18. ಕಟಪಾಡಿಯಲ್ಲಿ ಇಬ್ಬರು ಕಾರ್ಮಿಕರ ನಡುವಿನ ಗಲಾಟೆಯಾಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಕಾಪುವಿನಲ್ಲಿ ವರದಿಯಾಗಿದೆ. ಮೃತ ಕಾರ್ಮಿಕನನ್ನು ಒರಿಸ್ಸಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಇವರು ಕಟಪಾಡಿ ಶಿರ್ವ ರಸ್ತೆ ಬಳಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು ಎನ್ನಲಾಗಿದೆ. ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರೂ ಹೊಡೆದಾಟ ನಡೆಸಿದ್ದು, ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನು

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ➤ ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲ್ವೇ ಪ್ಲಾಟ್‌ ಫಾರ್ಮ್‌ನಲ್ಲಿ ಮಲಗಿದ್ದ ಬಾಲಕನ ಮೇಲೆ ದರ್ಪ ಮೆರೆದ ಪೊಲೀಸ್ ಅಧಿಕಾರಿ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಜು.18. ರೈಲು ನಿಲ್ದಾಣವೊಂದರ ಪ್ಲಾಟ್‌ ಫಾರ್ಮ್‌ ನಲ್ಲಿ ಮಲಗಿದ್ದ ಬಾಲಕನನ್ನು ರೈಲ್ವೆ ಪೊಲೀಸ್ ಪೇದೆಯೊಬ್ಬ ಕಾಲಿನಿಂದ ಒದ್ದು ಎಬ್ಬಿಸಿದ ಅಮಾನವೀಯ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸ್‌ ಅಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಉತ್ತರಪ್ರದೇಶ ಬಲ್ಲಿಯಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಾಲಕನೋರ್ವ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ನಲ್ಲಿ ಮಲಗಿದ್ದು, ಈತನನ್ನು ಬೂಟುಗಾಲಿನಿಂದ ಒದ್ದು ರೈಲ್ವೆ ರಕ್ಷಣಾ ಪಡೆ ಪೊಲೀಸ್ ಪೇದೆ ಎಬ್ಬಿಸಿದ್ದಾನೆ. ವೀಡಿಯೋ

ರೈಲ್ವೇ ಪ್ಲಾಟ್‌ ಫಾರ್ಮ್‌ನಲ್ಲಿ ಮಲಗಿದ್ದ ಬಾಲಕನ ಮೇಲೆ ದರ್ಪ ಮೆರೆದ ಪೊಲೀಸ್ ಅಧಿಕಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪಘಾತ- ಮೂವರು ಮೃತ್ಯು- ಮಾನವೀಯತೆ ಮೆರೆದ ಪುತ್ತೂರಿನ ಯುವಕರು

(ನ್ಯೂಸ್ ಕಡಬ) newsksdaba.com ಪಿರಿಯಾಪಟ್ಟಣ, ಜು. 18. ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ಮುದಾಸೀರ್, ಮುಜಾಯಿದ್ ಹಾಗೂ ಅಹ್ಮದ್​​​ ಪಾಷಾ ಎಂದು ಗುರುತಿಸಲಾಗಿದೆ. ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಪುತ್ತೂರು ಮೂಲದ ಯುವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತ- ಮೂವರು ಮೃತ್ಯು- ಮಾನವೀಯತೆ ಮೆರೆದ ಪುತ್ತೂರಿನ ಯುವಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ವಂಚನೆ ನಡೆಸಿದ ವ್ಯಕ್ತಿಯೊಬ್ಬ 1.16 ಲಕ್ಷ ರೂಪಾಯಿ ದೋಚಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೂರುದಾರ ವ್ಯಕ್ತಕ ಜುಲೈ 15 ರಂದು ಬಿಗ್‌ಬಾಸ್ಕೆಟ್ ಅಪ್ಲಿಕೇಶನ್‌ನಲ್ಲಿ ಅಡುಗೆಗೆ ಬೇಕಾದ ಉಪಕರಣಗಳನ್ನು ನೋಡಿ, ನಂತರ ಬಿಗ್‌ಬಾಸ್ಕೆಟ್ ಫೇಸ್‌ಬುಕ್ ಖಾತೆದಾರರೊಂದಿಗೆ ಮೆಸೇಜ್ ಮಾಡಿದ್ದರು. ಅಪರಿಚಿತರು ದೂರುದಾರ ವ್ಯಕ್ತಿಗೆ ಕಡಿಮೆ ಬೆಲೆಗೆ ಅಡುಗೆ ಸಲಕರಣೆಗಳನ್ನು ಪೂರೈಸುವುದಾಗಿ ಭರವಸೆ ನೀಡಿದ್ದರು. ನಂತರ ಬಿಗ್‌ಬಾಸ್ಕೆಟ್ ಹೆಸರಿನ ಫೇಸ್‌ಬುಕ್ ಲಿಂಕ್ ಅನ್ನು

ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 17. ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲಿನಲ್ಲಿ ರವಿವಾರದಂದು ರಾತ್ರಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಮತ್ತು ಅವರ ಮನೆಯವರು ಸಂಬಂಧಿಯೊಬ್ಬರು ನಿಧನರಾದ ಹಿನ್ನೆಲೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು. ರವಿವಾರದಂದು ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಗಮನಿಸಿದ ಕಳ್ಲರು ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿ ಕಳ್ಳರು ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್

COTPA ಅಡಿಯಲ್ಲಿ 71,340 ದಂಡ ವಸೂಲಿ – ದ.ಕ. ಜಿಲ್ಲೆಯಲ್ಲಿ 707 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ತಂಬಾಕು ವಿರೋಧಿ ಕಾನೂನಿನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮಂಗಳೂರಿನಲ್ಲಿ ಜೂನ್‌ ನಿಂದ ಇಲ್ಲಿಯವರೆಗೆ ಒಟ್ಟು 707 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ತಿಳಿಸಿದ್ದಾರೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ನಿಯಂತ್ರಣ) ಕಾಯ್ದೆ (COTPA)ಯಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಇದುವರೆಗೆ 71,340 ರೂ. ದಂಡವನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶವು

COTPA ಅಡಿಯಲ್ಲಿ 71,340 ದಂಡ ವಸೂಲಿ – ದ.ಕ. ಜಿಲ್ಲೆಯಲ್ಲಿ 707 ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top